ಎನ್.ಮಹೇಶ್ ಬಿಜೆಪಿಗೆ ಸೇರ್ತಾರಂತೆ!
ಚಾಮರಾಜನಗರ: ಬಿಎಸ್ಪಿ ಪಕ್ಷದಿಂದ ಅಮಾನತುಗೊಂಡಿರುವ ಕೊಳ್ಳೇಗಾಲ ಶಾಸಕ ಎನ್.ಮಹೇಶ್ ಅವರು ಬಿಜೆಪಿ ಸೇರುವುದು ಖಚಿತವಾಗಿದೆ. ಕಳೆದ ಹಲವು ದಿನಗಳಿಂದ ಬಿಜೆಪಿ ಸೇರುವ ಬಗ್ಗೆ ಕೆಲ ದಿನಗಳ ಹಿಂದಷ್ಟೇ ಸೂಚನೆ ನೀಡಿದ್ದ ಎನ್.ಮಹೇಶ್ ಇಂದು ಅಧಿಕೃತ ಹೇಳಿಕೆ ನೀಡಿದ್ದಾರೆ. ಗುಂಡ್ಲುಪೇಟೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ಬಿಜೆಪಿ ಸೇರುವ ಬಗ್ಗೆ ಬಹಿರಂಗವಾಗಿ ಹೇಳಿದರು. ಬಿಜೆಪಿಗೆ ಬರುವಂತೆ ಯಡಿಯೂರಪ್ಪ ಆಹ್ವಾನಿಸಿದ್ದಾರೆ. ಶೀಘ್ರದಲ್ಲೇ ಬಿಜೆಪಿ ಸೇರುವ ದಿನಾಂಕ ನಿಗದಿಯಾಗುತ್ತದೆ ಎಂದು ಸ್ಪಷ್ಟಪಡಿಸಿದರು.
ಎನ್.ಮಹೇಶ್ ಬಿಜೆಪಿಗೆ ಸೇರ್ತಾರಂತೆ! Read More »










