ರಾಜಕೀಯ

ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧ; ಕೆ.ಎನ್.ರಾಜಣ್ಣ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಮುಗಿದ ನಂತರ ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ವಿಚಾರ ತಿಳಿಯುತ್ತಿದ್ದಂತೆ ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ. ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧನಿದ್ದೇನೆ ಎಂದು ಸಚಿವ ಕೆ.ಎನ್.ರಾಜಣ್ಣ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಿದರೆ, ನಾನು ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಹೇಳಿದರು. ಅಧ್ಯಕ್ಷರ ಬದಲಾವಣೆ ಸನ್ನಿವೇಶ ಎದುರಾದರೆ ನಾನು ಅಧ್ಯಕ್ಷನಾಗಲು ಸಿದ್ಧನಿದ್ದೇನೆ. ಅಧ್ಯಕ್ಷ ಸ್ಥಾನ ಸಿಕ್ಕರೆ ಮಂತ್ರಿ ಸ್ಥಾನ ಬಿಡಲು ನಾನು ತಯಾರಿದ್ದೇನೆ. ನಾನು […]

ನನ್ನನ್ನು ಕೆಪಿಸಿಸಿ ಅಧ್ಯಕ್ಷನನ್ನಾಗಿ ಮಾಡಲಿ ನಾನು ಸಚಿವ ಸ್ಥಾನ ಬಿಡೋಕೆ ಸಿದ್ಧ; ಕೆ.ಎನ್.ರಾಜಣ್ಣ Read More »

ಧರ್ಮ, ಸೇನೆ ಸಂವಿಧಾನದ ವಿಚಾರಗಳನ್ನು ಪ್ರಚಾರಕ್ಕೆ ಬಳಸಬೇಡಿ/ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದ ಆಯೋಗ

ಸಮಗ್ರ ನ್ಯೂಸ್: ಜಾತಿ, ಧರ್ಮ, ಭಾಷೆ, ಸೇನೆ ಹಾಗೂ ಸಂವಿಧಾನ ರದ್ದು ವಿಚಾರವನ್ನು ಚುನಾವಣಾ ಪ್ರಚಾರಕ್ಕೆ ಬಳಸಬಾರದು ಎಂದು ಕೇಂದ್ರ ಚುನಾವಣಾ ಆಯೋಗವು ಬಿಜೆಪಿ ಮತ್ತು ಕಾಂಗ್ರೆಸ್‍ಗೆ ತೀಕ್ಷ್ಣ ಎಚ್ಚರಿಕೆ ನೀಡಿದ್ದು, ಚುನಾವಣೆಗಾಗಿ ಭಾರತದ ಸಾಮಾಜಿಕ, ಸಾಂಸ್ಕøತಿಕ ಪರಿಸರವನ್ನು ಬಲಿ ಕೊಡಲಾಗದು ಎಂದು ಸ್ಪಷ್ಟಪಡಿಸಿದೆ. ಇದೇ ವೇಳೆ, ಸ್ಟಾರ್ ಪ್ರಚಾರಕರಾದ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಳೆದ ತಿಂಗಳು ನೀಡಲಾಗಿದ್ದ ದೂರುಗಳಿಗೆ ಅವರ ಪರವಾಗಿ

ಧರ್ಮ, ಸೇನೆ ಸಂವಿಧಾನದ ವಿಚಾರಗಳನ್ನು ಪ್ರಚಾರಕ್ಕೆ ಬಳಸಬೇಡಿ/ ರಾಜಕೀಯ ಪಕ್ಷಗಳಿಗೆ ತಾಕೀತು ಮಾಡಿದ ಆಯೋಗ Read More »

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ

ಸಮಗ್ರ ನ್ಯೂಸ್: ಪೋಲಿಸ್ ಠಾಣೆಗೆ ನುಗ್ಗಿ ಗೂಂಡಾಗಿರಿ ಮಾಡಿದ ಪ್ರಕರಣ ಹಾಗೂ ಅನುಮತಿ ಇಲ್ಲದೆ ಬಿಜೆಪಿಯಿಂದ ಪ್ರತಿಭಟನಾ ಸಭೆ ನಡೆಸಿದ ಬಗ್ಗೆ ಬೆಳ್ತಂಗಡಿ ಶಾಸಕ ಹರೀಶ್ ವಿರುದ್ಧ ಈಗ ಪ್ರತ್ಯೇಕವಾಗಿ ಎರಡು ಪ್ರಕರಣ ದಾಖಲಾಗಿರುವ ಹಿನ್ನಲೆಯಲ್ಲಿ ಶಾಸಕ ಹರೀಶ್ ಪೂಂಜಾಗೆ ಬಂಧನ ಭೀತಿ ಎದುರಾಗಿದೆ. ಎರಡೂ ಪ್ರಕರಣಗಳು ಜಾಮೀನು ರಹಿತ ಪ್ರಕರಣವಾಗಿದ್ದು ಇದೀಗ ಹರೀಶ್ ಪೂಂಜ ಅವರ ಬಂಧನಕ್ಕಾಗಿ ಸರ್ಕಲ್ ಇನ್ಸ್ಪೆಕ್ಟರ್ ಸುಬ್ಬಪೂರ್ ಮಠ್‌ ಮತ್ತು ಪಿಎಸ್ಐ ಚಂದ್ರಶೇಖರ್ ಪೂಂಜ ಮನೆಗೆ ಆಗಮಿಸಿದ್ದು, ಮನೆಯಲ್ಲಿ ಖಾಕಿ ಪಡೆ

ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾಗೆ ಬಂಧನ ಭೀತಿ| ಮನೆ ಸುತ್ತುವರಿದ ಖಾಕಿ ಪಡೆ Read More »

ಚುನಾವಣೆ ಪ್ರಚಾರ| ರಾಹುಲ್ ಗಾಂಧಿ ಮದುವೆಯ ಬಗ್ಗೆ ಪ್ರಸ್ತಾಪಿಸಿದ ಜನತೆ

ಸಮಗ್ರ ನ್ಯೂಸ್: ಚುನಾವಣೆ ಪ್ರಚಾರವಾಗಿ ಇಂದು ಕಾಂಗ್ರೆಸ್ ಅಭ್ಯರ್ಥಿ ರಾಹುಲ್ ಗಾಂಧಿ ಉತ್ತರ ಪ್ರದೇಶದ ರಾಯ್ ಬರೇಲಿ ಕ್ಷೇತ್ರದಲ್ಲಿ ನಡೆದ ರ್ಯಾಲಿಯಲ್ಲಿ ಭಾಷಣ ಮಾಡಿದರು. ಇತರೆ ಪಕ್ಷದ ನಾಯಕರ ಮೇಲೆ ವಾಗ್ದಾಳಿ ನಡೆಸಿದರು. ಆದರೆ ಅಲ್ಲಿ ಸೇರಿದ್ದ ಜನಸಮೂಹವು ರಾಹುಲ್ ಗಾಂಧಿಯ ಮದುವೆಯ ಬಗ್ಗೆ ಪ್ರಸ್ತಾಪಿಸಿದ್ದು, ನೀವು ಯಾವಾಗ ಮದುವೆಯಾಗುತ್ತೀರಿ? ಎಂದು ಕೇಳಿದರು. ಇದಕ್ಕೆ ಉತ್ತರ ನೀಡಿದ ರಾಹುಲ್ ಗಾಂಧಿ ಅಬ್ ಜಲ್ದಿ ಹೈ ಕರ್ನಿ ಪಡೆಗಿ (ನೀವಿಷ್ಟು ಕೇಳಿದ ಮೇಲೆ ನಾನು ಶೀಘ್ರದಲ್ಲೇ ಮದುವೆಯಾಗಬೇಕಾಗಿದೆ) ಎಂದು

ಚುನಾವಣೆ ಪ್ರಚಾರ| ರಾಹುಲ್ ಗಾಂಧಿ ಮದುವೆಯ ಬಗ್ಗೆ ಪ್ರಸ್ತಾಪಿಸಿದ ಜನತೆ Read More »

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್

ಸಮಗ್ರ ನ್ಯೂಸ್: ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜಿಲ್ಲೆಯ ಹೊಳೆ ನರಸೀಪುರ ಜೆಡಿಎಸ್ ಶಾಸಕ ಎಚ್ ಡಿ ರೇವಣ್ಣ ಅವರಿಗೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಷರತ್ತು ಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಈ ಕುರಿತಂತೆ ಆದೇಶ ಹೊರಡಿಸಿದ್ದು, ಎಚ್ ಡಿ ರೇವಣ್ಣ ಅವರು 5 ಲಕ್ಷ ಬಾಂಡ್ ನೀಡಬೇಕು, ಸಾಕ್ಷಾಧಾರವನ್ನು ನಾಶಪಡಿಸಬಾರದು, ಎಸ್‌ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತು ಬದ್ಧ ಜಾಮೀನು ನೀಡಲಾಗಿದೆ.

ಮಾಜಿ ಸಚಿವ ಎಚ್.ಡಿ ರೇವಣ್ಣಗೆ ಬಿಗ್ ರಿಲೀಪ್| ಷರತ್ತು ಬದ್ದ ಜಾಮೀನು ಮಂಜೂರು ಮಾಡಿದ ಕೋರ್ಟ್ Read More »

ನನ್ನ ಜನ್ಮದಿನದಂದು ಯಾರು ನನ್ನ ಭೇಟಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್

ಸಮಗ್ರ ನ್ಯೂಸ್: ಮೇ 15ರಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಜನ್ಮದಿನ. ಆದರೆ ಅವರು ಜನ್ಮದಿನದಂದು ನಾನು ಅಲಭ್ಯ, ಇದ್ದ ಕಡೆಯಿಂದಲೇ ಹರಸಿ. ನನ್ನ ಭೇಟಿಗೆ ಬರಬೇಡಿ ಎಂದು ಡಿ.ಕೆ ಶಿವಕುಮಾರ್​ ಮನವಿ ಮಾಡಿದ್ದಾರೆ. ಈ ಕುರಿತಾಗಿ ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ತಮ್ಮ ಜನ್ಮದಿನವಾದ ಮೇ 15ರಂದು ಖಾಸಗಿ ಕಾರ್ಯಕ್ರಮ ನಿಮಿತ್ತ ಉತ್ತರ ಭಾರತ ಪ್ರವಾಸ ಕೈಗೊಳ್ಳುತ್ತಿದ್ದೇನೆ. ನಾನು ಯಾರಿಗೂ ಕೂಡ ಸಿಗುವುದಿಲ್ಲ. ಪಕ್ಷದ ನಾಯಕರು, ಕಾರ್ಯಕರ್ತರು, ಅಭಿಮಾನಿಗಳು, ಬಂಧುಗಳು ನನ್ನ ಭೇಟಿಗೆ ಪ್ರಯತ್ನಿಸುವುದು ಬೇಡ.

ನನ್ನ ಜನ್ಮದಿನದಂದು ಯಾರು ನನ್ನ ಭೇಟಿಗೆ ಬರಬೇಡಿ: ಡಿಸಿಎಂ ಡಿ.ಕೆ ಶಿವಕುಮಾರ್ Read More »

ಕಾಂಗ್ರೆಸ್‍ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್ ಪಿತ್ರೋಡಾ

ಸಮಗ್ರ ನ್ಯೂಸ್: ಕಾಂಗ್ರೆಸ್‍ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಯಾಮ್ ಪಿತ್ರೋಡಾ ಅವರು ವಿವಾದಿತ ಹೇಳಿಕೆಗಳ ಸರಮಾಲೆ ಬೆನ್ನಲ್ಲೇ ಬುಧವಾರ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. ಈ ಕುರಿತು ಪಕ್ಷದ ಸಂವಹನ ಉಸ್ತುವಾರಿ ಜೈರಾಮ್ ರಮೇಶ್ ಈ ಬಗ್ಗೆ ಟ್ವೀಟರ್‍ನಲ್ಲಿ ಘೋಷಣೆ ಮಾಡಿದ್ದಾರೆ. ತಮ್ಮ ಸ್ವಂತ ಇಚ್ಛೆಯಿಂದ ಸ್ಯಾಮ್ ಪಿತ್ರೋಡಾ ಅವರು ಇಂಡಿಯನ್ ಓವರ್‍ಸೀಸ್ ಕಾಂಗ್ರೆಸ್‍ನ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಯಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ ಅಧ್ಯಕ್ಷರು ಅವರ ನಿರ್ಧಾರವನ್ನು ಒಪ್ಪಿಕೊಂಡಿದ್ದಾರೆ ಎಂದು ಜೈರಾಂ ಹೇಳಿದ್ದಾರೆ. ತಂದೆ ಮೃತನಾದ ಬಳಿಕ ಆತನ

ಕಾಂಗ್ರೆಸ್‍ನ ಸಾಗರೋತ್ತರ ಘಟಕದ ಮುಖ್ಯಸ್ಥ ಸ್ಥಾನಕ್ಕೆ ರಾಜೀನಾಮೆ ನೀಡಿದ ಸ್ಯಾಮ್ ಪಿತ್ರೋಡಾ Read More »

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ!

ಸಮಗ್ರ ನ್ಯೂಸ್: ಚಕ್ರವರ್ತಿ ಸೂಲಿಬೆಲೆಯ ಸಾರಥ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ. ನಮೋಬ್ರಿಗೇಡ್ 2.O ಇಷ್ಟು ದಿನ ಮೋದಿ ಪ್ರಧಾನಿಯಾಗಲು ಏನೇನು ಪ್ರಯತ್ನ ಮಾಡಬಹುದೋ, ಆ ಕೆಲಸಗಳನ್ನು ಮಾಡುತ್ತಿದ್ದರು. ಆದರೆ ರಾಜಕೀಯಕ್ಕಾಗಿ ಅಷ್ಟೇ ಬ್ರಿಗೇಡ್ ನಡೆಸಲು ಇಷ್ಟವಿಲ್ಲವೆಂದು, ಚುನಾವಣೆ ಮುಗಿದ ಬಳಿಕವೇ, ನಮೋ ಬ್ರಿಗೇಡ್ ಮುಕ್ತಾಯ ಮಾಡಲು ನಿರ್ಧರಿಸಲಾಗಿದೆ ಎಂದು ಚಕ್ರವರ್ತಿ ಸೂಲಿಬೆಲೆ ಹೇಳಿದ್ದಾರೆ. ಜೂನ್ 25ಕ್ಕೆ ನಮೋ ಬ್ರಿಗೇಡ್ ಲಾಂಚ್ ಆಗಿತ್ತು. ಬಳಿಕ ರಾಜ್ಯದ ಹಲವು ಜಿಲ್ಲೆಗಳಿಗೆ ನಾನೇ ಹೋಗಿ ಬೈಠಕ್‌ಗಳನ್ನು ಮಾಡಿದ್ದೇನೆ.

ಚಕ್ರವರ್ತಿ ಸೂಲಿಬೆಲೆ ಸಾರಥ್ಯದ ನಮೋ ಬ್ರಿಗೇಡ್ ಮುಕ್ತಾಯ! Read More »

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ

ಸಮಗ್ರ ನ್ಯೂಸ್: ಯಾದಗಿರಿಯ ಸುರಪುರ ಉಪಚುನಾವಣೆ ಮತದಾನದ ವೇಳೆ ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ ಶುರುವಾಗಿದೆ. ಪರಸ್ಪರ ಎರಡು ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಬಾದ್ಯಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮತದಾನದ ವೇಳೆ ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ಆ ಸಂಧರ್ಭದಲ್ಲಿ ಓರ್ವನ ತಲೆಗೆ ಗಂಭೀರ ಗಾಯವಾಗಿದೆ.ಇದರಿಂದ ಗ್ರಾಮದಲ್ಲಿ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ‌ ದೌಡಾಯಿಸಿ ಪೊಲೀಸರು

ಸುರಪುರ ಉಪಚುನಾವಣೆ ಮತದಾನದ ವೇಳೆ ಹೈಡ್ರಾಮಾ! ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ಮಧ್ಯೆ ಗಲಾಟೆ Read More »

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ

ಸಮಗ್ರ ನ್ಯೂಸ್: ಎಐಸಿಸಿ ವಕ್ತಾರೆ, ರಾಜಸ್ಥಾನದ ನಾಯಕಿ ರಾಧಿಕಾ ಖೇರಾ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರ್ಪಡೆಯಾಗಿದ್ದಾರೆ. ಬಿಜೆಪಿ ಕೇಂದ್ರ ಕಚೇರಿಯಲ್ಲಿ ಅವರು ಪಕ್ಷದ ಹಿರಿಯ ನಾಯಕರ ಸಮ್ಮುಖದಲ್ಲಿ ಸೇರ್ಪಡೆಯಾಗಿದ್ದಾರೆ. ರಾಮನ ಭಕ್ತಿ ಎಂಬ ಕಾರಣಕ್ಕೆ, ರಾಮಲಲಾನ ದರುಶನ ಪಡೆದಿದ್ದಕ್ಕೆ ಕೌಶಲ್ಯ ಮಾತೆಯ ಭೂಮಿಯಲ್ಲಿ ನನ್ನೊಂದಿಗೆ ಅನುಚಿತವಾಗಿ ವರ್ತಿಸಿದ ರೀತಿ ಕರಾಳವಾಗಿದೆ. ಬಿಜೆಪಿ ಸರ್ಕಾರದ ರಕ್ಷಣೆ ಸಿಗದಿದ್ದರೆ ನಾನು ಇಲ್ಲಿಗೆ ಬರಲು ಸಾಧ್ಯವಾಗುತ್ತಿರಲಿಲ್ಲ. ಇಂದಿನ ಕಾಂಗ್ರೆಸ್ ಮಹಾತ್ಮ ಗಾಂಧಿಯವರ ಕಾಂಗ್ರೆಸ್ ಆಗಿ ಉಳಿದಿಲ್ಲ.

ಎಐಸಿಸಿ ವಕ್ತಾರೆ ರಾಧಿಕಾ ಖೇರಾ ಬಿಜೆಪಿ ಸೇರ್ಪಡೆ Read More »