ರಾಜ್ಯ ರಾಜಧಾನಿಯಲ್ಲಿ ಕಾಂಗ್ರೆಸ್ ಗೆ ಮರ್ಮಾಘಾತ| ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲು| ‘ಕೈ’ ಹಿಡಿಯದ ಗ್ಯಾರಂಟಿ
ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ರಾಜ್ಯ ರಾಜಧಾನಿ ಬೆಂಗಳೂರಿನ ಎಲ್ಲಾ 4 ಕ್ಷೇತ್ರಗಳು ಬಿಜೆಪಿ ಪಾಲಾಗಿದೆ. ಇದು ರಾಜ್ಯದಲ್ಲಿರುವ ಕಾಂಗ್ರೆಸ್‌ಗೆ ದೊಡ್ಡ ಹಿನ್ನೆಡೆಯಾಗಿದ್ದು, ಕಾಂಗ್ರೆಸ್ ನೀಡಿದ್ದ ಗ್ಯಾರೆಂಟಿಗಳು ಲೋಕಸಭೆ ಚುನಾವಣೆಯಲ್ಲಿ ಕೈ ಹಿಡಿಯಲಿಲ್ಲ ಎನ್ನುವುದು ಫಲಿತಾಂಶದಿಂದ ಸ್ಪಷ್ಟವಾಗಿ ತಿಳಿದು ಬರುತ್ತದೆ. ಬೆಂಗಳೂರು ಗ್ರಾಮಾಂತರದಲ್ಲಿ ಹಾಲಿ ಸಂಸದ, ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ ಸುರೇಶ್ ವಿರುದ್ಧ ಎನ್‌ಡಿಎ ಅಭ್ಯರ್ಥಿ ಡಾ.ಮಂಜುನಾಥ್ 2,68.094 ಮತಗಳ ಅಂತರದಿಂದ ಭರ್ಜರಿ ಗೆಲುವನ್ನು ಸಾಧಿಸಿದ್ದಾರೆ. ಬೆಂಗಳೂರು ದಕ್ಷಿಣದಲ್ಲಿ ಎನ್‌ಡಿಎ ಅಭ್ಯರ್ಥಿ ತೇಜಸ್ವಿ ಸೂರ್ಯ, […]









