ರಾಜಕೀಯ

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು

ಸಮಗ್ರ ನ್ಯೂಸ್: ನರೇಂದ್ರ ಮೋದಿ ಹಾಗೂ ಬಿಜೆಪಿ ವಿರುದ್ಧ ಆಧಾರ ರಹಿತ ಆರೋಪ ಮಾಡಿರುವ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಸಚಿವರ ವಿರುದ್ಧ ಬಿಜೆಪಿ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ದೂರು ಸಲ್ಲಿಸಿದೆ. ವಿಧಾನ ಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಬಿಜೆಪಿ ರಾಜ್ಯ ವಕ್ತಾರ ಅಶೋಕ್ ಗೌಡ, ರಾಜ್ಯ ಕಾನೂನು ಆಯೋಗದ ಪ್ರತಿನಿಧಿ ವಸಂತ್ ಕುಮಾರ್ ನೇತೃತ್ವದ ಬಿಜೆಪಿ ನಿಯೋಗ ಮುಖ್ಯ ಚುನಾವಣಾ ಆಯುಕ್ತರ ಕಚೇರಿಗೆ ಭೇಟಿ ನೀಡಿ ದೂರು ಸಲ್ಲಿಸಿದೆ. ಚುನಾವಣಾ ಸಚಿವರ ಸಮಿತಿಗೆ ಒಟ್ಟು ನಾಲ್ಕು […]

ಮೋದಿ ವಿರುದ್ಧ ಆಧಾರ ರಹಿತ ಆರೋಪ/ ಸಿದ್ಧರಾಮಯ್ಯ ವಿರುದ್ಧ ದೂರು Read More »

ಲೋಕಸಭಾ ಚುನಾವಣೆ/ ಮಾಧವಿ ಲತಾ ಮತ್ತು ಸೀತಾ ಸೊರೇನ್ ಗೆ ವೈ ಪ್ಲಸ್ ಭದ್ರತೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳಾದ ಹೈದರಾಬಾದ್‌ನ ಕೊಂಪೆಲ್ಲಾ ಮಾಧವಿ ಲತಾ ಹಾಗೂ ಜೆಎಂಎಂ ಪಕ್ಷ ತೊರೆದು ಬಿಜೆಪಿ ಸೇರ್ಪಡೆಯಾಗಿದ್ದ ಸೀತಾ ಸೊರೆನ್ ಅವರಿಗೆ ಕೇಂದ್ರ ಸರ್ಕಾರವು ವೈ ಪ್ಲಸ್ ಭದ್ರತೆಯನ್ನು ಒದಗಿಸಿದೆ. ಕೊಂಪೆಲ್ಲಾ ಮಾಧವಿ ಲತಾ ಅವರನ್ನು ಅಸಾದುದ್ದೀನ್ ಓವೈಸಿ ಎದುರು ಕಣಕ್ಕಿಳಿಸಲಾಗಿದ್ದು, ಅವರಿಗೆ ಬೆದರಿಕೆ ಇದೆ ಎಂದು ಕೇಂದ್ರ ಗುಪ್ತಚರ ಸಂಸ್ಥೆಗಳ ಗ್ರಹಿಕೆಯ ಹಿನ್ನೆಲೆಯಲ್ಲಿ ಈ ಭದ್ರತೆಯನ್ನು ಒದಗಿಸಲಾಗುತ್ತಿದೆ. ಕೇಂದ್ರ ಮೀಸಲು ಪೊಲೀಸ್ ಪಡೆಯು ವೈ ಪ್ಲಸ್ ಭದ್ರತೆಯನ್ನು ಒದಗಿಸಿದ್ದು, ವಿಐಪಿ ಭದ್ರತೆಯ

ಲೋಕಸಭಾ ಚುನಾವಣೆ/ ಮಾಧವಿ ಲತಾ ಮತ್ತು ಸೀತಾ ಸೊರೇನ್ ಗೆ ವೈ ಪ್ಲಸ್ ಭದ್ರತೆ Read More »

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ

ಸಮಗ್ರ ನ್ಯೂಸ್: ಮತ್ತೆ ದೇವೆಗೌಡರ ವಿರುದ್ದ ಕೆ.ಎನ್ ರಾಜಣ್ಣ ನಾಲಿಗೆ ಹರಿ ಬಿಟ್ಟಿದ್ದಾರೆ. ಕಳೆದ ವರ್ಷ “ದೇವೇಗೌಡರಿಗೆ ನಾಲ್ಕು ಜನ ಹೊತ್ತೊಯ್ಯುವ ಕಾಲ ಹತ್ತಿರ ಬಂದಿದೆ” ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಕೆ.ಎನ್‌.ರಾಜಣ್ಣ ಅವರು ಇದೀಗ ಮತ್ತೊಮ್ಮೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರ ಸಾವಿನ ವಿಚಾರ ಎತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಎಸ್.ಪಿ ಮುದ್ದೆಹನುಮೇಗೌಡ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ನಡೆದ ರೋಡ್ ಶೋದಲ್ಲಿ ದೇವೇಗೌಡರಿಗೆ‌ ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ ಎಂದು ಕೆ‌.ಎನ್‌. ರಾಜಣ್ಣ

ಸಾಯುವ ವಯಸ್ಸಲ್ಲಿ ಹೊಂದಾಣಿಕೆ ರಾಜಕೀಯ ಬೇಕಿತ್ತಾ..? ದೇವೆಗೌಡರ ವಿರುದ್ಧ ನಾಲಿಗೆ ಹರಿ ಬಿಟ್ಟ ಕೆ.ಎನ್ ರಾಜಣ್ಣ Read More »

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ

ಸಮಗ್ರ ನ್ಯೂಸ್: ಕಾಂಗ್ರೆಸ್ ಪಕ್ಷದ ಲೋಕಸಭಾ ಚುನಾವಣಾ ಪ್ರಣಾಳಿಕೆ ಬಿಡುಗಡೆ. ನ್ಯಾಯ ಪತ್ರ ಎಂಬ ಹೆಸರಿನಲ್ಲಿ ಪ್ರಣಾಳಿಕೆ ಬಿಡುಗಡೆಯಾಗಿದೆ. ದೆಹಲಿಯಲ್ಲಿ ನಡೆದ ಪ್ರಣಾಳಿಕೆ ಬಿಡುಗಡೆ ಕಾರ್ಯಕ್ರಮದಲ್ಲಿ ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಭಾಗವಹಿಸಿದ್ದರು. ಮಲ್ಲಿಕಾರ್ಜುನ ಖರ್ಗೆ ಪ್ರಣಾಳಿಕೆಯ ಅಂಶಗಳನ್ನು ವಾಚಿಸಿದರು. ಈ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಪಕ್ಷಗಳು ಬಡವರ ಮೇಲೆ ಭರವಸೆಗಳ ಸುರಿಮಳೆಗೈದಿವೆ. ಪ್ರಣಾಳಿಕೆಯಲ್ಲಿ 25 ಬಗೆಯ ಭರವಸೆಗಳನ್ನು ನೀಡಲಾಗಿದೆ. ‘ಭಾಗಿದರಿ ನ್ಯಾಯ’, ‘ಕಿಸಾನ್ ನ್ಯಾಯ’, ‘ನಾರಿ ನ್ಯಾಯ’, ‘ಶ್ರಮಿಕ್ ನ್ಯಾಯ’ ಮತ್ತು

Lok Sabha Election: ಪ್ರತಿ ಕುಟುಂಬಕ್ಕೆ ಒಂದು ಲಕ್ಷ ರೂ! ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ Read More »

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ

ಸಮಗ್ರ ನ್ಯೂಸ್: ತಮಿಳುನಾಡಿನ ರಾಮನಾಥಪುರಂ ಕ್ಷೇತ್ರದಿಂದ ಲೋಕಸಭೆ ಚುನಾವಣೆಗೆ ಕಣಕ್ಕಿಳಿದಿರುವ ಮಾಜಿ ಮುಖ್ಯಮಂತ್ರಿ ಒ. ಪನ್ನೀರ್‍ಸೆಲ್ವಂ ಅವರಿಗೆ ಚುನಾವಣಾ ಆಯೋಗ ಹಲಸಿನ ಹಣ್ಣನ್ನು ಚಿಹ್ನೆಯಾಗಿದೆ ನೀಡಿದೆ. ಅದರ ಬಳಿಕ ಅವರ ಅಭಿಮಾನಿಗಳು ಎಲ್ಲೆಡೆ ಹಲಸಿನ ಹಣ್ಣು ಖರೀದಿಗೆ ಸಭೆಗಳಿಗೆ ಆಗಮಿಸುತ್ತಿದ್ದಾರೆ ಮತ್ತು ಮನೆಗೂ ಕೊಂಡೊಯ್ಯುತ್ತಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಹಲಸಿನ ಮಾರಾಟ ದಿಢೀರ್ ಹೆಚ್ಚಳವಾಗಿದೆ. ಪ್ರತಿದಿನ 30 ರಿಂದ 40 ಟನ್‍ಗಳಷ್ಟು ಹಲಸು ಮಾರಾಟವಾಗುತ್ತಿದೆ, ಈ ಎರಡು ದಿನಗಳಿಂದ ಹಲಸು ಬೇಡಿಕೆ ಹೆಚ್ಚಾಗುತ್ತಿದೆ ಎಂದು ಇಲ್ಲಿನ ಹಣ್ಣಿನ ವ್ಯಾಪಾರಸ್ಥರು

ಒ. ಪನ್ನೀರ್‍ಸೆಲ್ವಂ ಅವರಿಗೆ ಹಲಸಿನ ಹಣ್ಣಿನ ಚಿಹ್ನೆ ನೀಡಿದ ಚುನಾವಣಾ ಆಯೋಗ/ ಹೆಚ್ಚಾದ ಹಲಸಿನ ಹಣ್ಣಿನ ಬೇಡಿಕೆ Read More »

ಲೋಕಸಭೆ ಚುನಾವಣೆಗ ಸಿಗದ ಟಿಕೆಟ್/ ರಾಜೀನಾಮೆ ನೀಡಿದ ಲೋಕ ಜನಶಕ್ತಿ ಪಕ್ಷದ ನಾಯಕರು

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆಗೆ ಟಿಕೆಟ್ ಸಿಗದ ಕಾರಣ ಲೋಕ ಜನಶಕ್ತಿ ಪಕ್ಷದ 22 ನಾಯಕರು ಏಕಕಾಲಕ್ಕೆ ರಾಜೀನಾಮೆ ನೀಡಿದ್ದಾರೆ. ಚಿರಾಗ್ ಪಾಸ್ವಾನ್ ನೇತೃತ್ವದ ಪಕ್ಷದ ನಾಯಕರು ರಾಜೀನಾಮೆ ನೀಡಿದ್ದು, ಹಣಕ್ಕಾಗಿ ಟಿಕೆಟ್ ಮಾರಾಟದ ಆರೋಪ ಮಾಡಿದ್ದಾರೆ. ರಾಜೀನಾಮೆ ನೀಡಿದ ಪ್ರಮುಖರಲ್ಲಿ ಮಾಜಿ ಸಚಿವ ರೇಣು ಕುಶ್ವಾಹ, ಮಾಜಿ ಶಾಸಕ ಮತ್ತು ಎಲ್‌ಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾ‌ರ್, ರಾಜ್ಯ ಸಂಘಟನೆ ಸಚಿವ ರವೀಂದ್ರ ಸಿಂಗ್‌, ಅಜಯ್ ಕುಶ್ವಾಹ, ಸಂಜಯ್ ಸಿಂಗ್ ಮತ್ತು ರಾಜ್ಯ ಪ್ರಧಾನ

ಲೋಕಸಭೆ ಚುನಾವಣೆಗ ಸಿಗದ ಟಿಕೆಟ್/ ರಾಜೀನಾಮೆ ನೀಡಿದ ಲೋಕ ಜನಶಕ್ತಿ ಪಕ್ಷದ ನಾಯಕರು Read More »

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ

ಸಮಗ್ರ ನ್ಯೂಸ್: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಇಂದು ನಾಮಪತ್ರ ಸಲ್ಲಿಸಿದರು. ರಾಹುಲ್ ಗಾಂಧಿ ಅವರು ತಮ್ಮ ಸಹೋದರಿ ಪ್ರಿಯಾಂಕಾ ಗಾಂಧಿ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ ಸಿ ವೇಣುಗೋಪಾಲ್ ಸೇರಿದಂತೆ ಪಕ್ಷದ ಇತರ ಹಿರಿಯ ನಾಯಕರೊಂದಿಗೆ ಚುನಾವಣಾಧಿಕಾರಿಯೂ ಆಗಿರುವ ವಯನಾಡ್ ಜಿಲ್ಲಾಧಿಕಾರಿಗೆ ಇಂದು ನಾಮಪತ್ರ ಸಲ್ಲಿಸಿದರು. ಇಂದು ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ವಯನಾಡಿಗೆ ಆಗಮಿಸಿದ ರಾಹುಲ್ ಗಾಂಧಿ, ನಾಮಪತ್ರ ಸಲ್ಲಿಸುವ ಮುನ್ನ ಇಲ್ಲಿನ ಕಲ್ಪೆಟ್ಟಾದಿಂದ ಸಿವಿಲ್ ಸ್ಟೇಷನ್

ವಯನಾಡ್ ಲೋಕಸಭಾ ಕ್ಷೇತ್ರದಿಂದ ರಾಹುಲ್ ಗಾಂಧಿ ನಾಮಪತ್ರ ಸಲ್ಲಿಕೆ Read More »

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ

ಸಮಗ್ರ ನ್ಯೂಸ್ : ಚಾಮರಾಜನಗರದ ಗಲ್ಲಿಗಲ್ಲಿಗಳಲ್ಲಿ ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್ ಮತ್ತು ಬರಹಗಳು ರಾರಾಜಿಸುತ್ತಿದ್ದು ಲೋಕಸಭಾ ಕೈ ಅಭ್ಯರ್ಥಿ ಸುನಿಲ್ ಬೋಸ್ಗೆ ಮುಜುಗರವನ್ನುಂಟುಮಾಡಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಸುನಿಲ್ ಬೋಸ್ ವಿರುದ್ಧ ಅನಾಮಿಕರು ಅಸಮಾಧಾನ ಹೊರಹಾಕಿದ್ದಾರೆ, ಪಟ್ಟಣದ ರಸ್ತೆ ಬದಿಯ ಗೋಡೆಗಳಲ್ಲಿ ಗೋಬ್ಯಾಕ್ ಪೋಸ್ಟರ್ ಅಂಟಿಸಿ ಆಕ್ರೋಶ ಹೊರಹಾಕಿದ್ದು, ಗೋಬ್ಯಾಕ್ ಸುನಿಲ್ ಬೋಸ್ ಎಂದು ಬರೆದಿರುವ ಅಪರಿಚಿತರು ಮರಳು ಮಾಫಿಯಾ ದೊರೆಗೆ ಮರುಳಾಗಬೇಡಿ ಎಂದು ಬರೆದು ಪೋಸ್ಟರ್ ಗಳನ್ನು ಎಲ್ಲಾ ಕಡೆ ಅಂಟಿಸಿದ್ದಾರೆ.

ಚಾಮರಾಜನಗರ : ಗೋಬ್ಯಾಕ್ ಸುನಿಲ್ ಬೋಸ್ ಪೋಸ್ಟರ್| ಕೈ ಅಭ್ಯರ್ಥಿಗೆ ಮುಜುಗರ Read More »

ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್

ಸಮಗ್ರ ನ್ಯೂಸ್: ವಯನಾಡ್ ಕ್ಷೇತ್ರದಿಂದ ಕಾಂಗ್ರೆಸ್‍ನ ನಾಯಕ ರಾಹುಲ್ ಗಾಂಧಿ ಸ್ಪರ್ಧೆ ಮಾಡುತ್ತಿರುವುದಕ್ಕೆ ಇಂಡಿಯಾ ಮೈತ್ರಿಕೂಟದ ಸದಸ್ಯ ಪಕ್ಷ ಹಾಗೂ ಕೇರಳ ಮುಖ್ಯಮಂತ್ರಿ ಪಿಣರಾಜಿ ವಿಜಯನ್ ಟೀಕೆ ಮಾಡಿದ್ದು, ಮೈತ್ರಿಕೂಟದಲ್ಲಿ ಎಲ್ಲವೂ ಸರಿಯಾಗಿಲ್ಲ ಎನ್ನುವುದಕ್ಕೆ ಮತ್ತೊಂದು ಪುರಾವೆ ಸಿಕ್ಕಿದೆ. ವಯನಾಡ್‍ನಲ್ಲಿ ಎಲ್‍ಡಿಎಫ್ ಹಾಗೂ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಸಿಪಿಐ) ರಾಷ್ಟ್ರೀಯ ನಾಯಕಿ ಅನ್ನಿ ರಾಜಾರನ್ನು ಕಣಕ್ಕೆ ಇಳಿಸಿದೆ. ‘ರಾಷ್ಟ್ರಮಟ್ಟದಲ್ಲಿ ಹೆಸರಾಂತ ಎಡ ನಾಯಕಿ ಅನ್ನಿ ರಾಜಾ ವಿರುದ್ಧ ರಾಹುಲ್ ಗಾಂಧಿ ಸ್ಪರ್ಧಿಸುತ್ತಿದ್ದಾರೆ. ಮಣಿಪುರದ ವಿಷಯದಲ್ಲಿ ಬಿಜೆಪಿ

ವಯನಾಡಿನಲ್ಲಿ ರಾಹುಲ್ ಸ್ಪರ್ಧೆ/ ಆಕ್ಷೇಪ ವ್ಯಕ್ತಪಡಿಸಿದ ಪಿಣರಾಯಿ ವಿಜಯನ್ Read More »

ಲೋಕಸಭೆ ಚುನಾವಣೆ/ ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಕಾಂಗ್ರೆಸ್‍ನ ಬೃಹತ್ ಯಾತ್ರೆ

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆ ಹಿನ್ನಲೆಯಲ್ಲಿ ಏ.5ರಂದು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆಯಾಗಲಿದ್ದು, ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಬೃಹತ್ ಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಜೈಪುರದಲ್ಲಿ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಮಾತನಾಡಲಿದ್ದಾರೆ. ಅದೇ ದಿನ ಹೈದರಾಬಾದ್‍ನಲ್ಲಿ ರಾಹುಲ್ ಗಾಂಧಿ ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಲಿದ್ದಾರೆ ಎಂದು ಕಾಂಗ್ರೆಸ್ ವಕ್ತಾರ ಕೆ.ಸಿ.ವೇಣುಗೋಪಾಲ್ ತಮ್ಮ ಟ್ವೀಟ್‍ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಲೋಕಸಭೆ ಚುನಾವಣೆ/ ಏ.6ರಂದು ಜೈಪುರ ಹಾಗೂ ಹೈದರಾಬಾದ್‍ನಲ್ಲಿ ಕಾಂಗ್ರೆಸ್‍ನ ಬೃಹತ್ ಯಾತ್ರೆ Read More »