ರಾಜಕೀಯ

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ.

ಸಮಗ್ರ ನ್ಯೂಸ್: ರಾಜಸ್ಥಾನದ ನೂತನ ಮುಖ್ಯಮಂತ್ರಿ ಯಾರು ಎಂಬ ಕುತೂಹಲಕ್ಕೆ ಇಂದು ತೆರೆ ಬೀಳುವ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಇಂದು (ಮಂಗಳವಾರ) ಸಂಜೆ ನಿಗದಿಯಾಗಿದ್ದು,ರಕ್ಷಣಾ ಸಚಿವ ಹಾಗೂ ಪಕ್ಷದ ಕೇಂದ್ರ ವೀಕ್ಷಕರಾದ ರಾಜನಾಥ್ ಸಿಂಗ್, ರಾಷ್ಟ್ರೀಯ ಉಪಾಧ್ಯಕ್ಷ ಸರೋಜ್‌ ಪಾಂಡೆ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವೆ ನೇತೃತ್ವದಲ್ಲಿ ಸಭೆ ನಡೆಯಲಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ ಹಾಗೂ ಶಾಸಕ ಭಜನ್‌ಲಾಲ್ ಶರ್ಮಾ ಹೇಳಿದ್ದಾರೆ. ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬುದನ್ನು ಸಭೆ ಬಳಿಕ ಘೋಷಿಸಲಾಗುತ್ತದೆ […]

ರಾಜಸ್ಥಾನಕ್ಕೆ ನೂತನ ಮುಖ್ಯಮಂತ್ರಿ/ ಇಂದು ಘೋಷಣೆಯಾಗುವ ಸಾಧ್ಯತೆ. Read More »

ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್

ಸಮಗ್ರ ನ್ಯೂಸ್: 90 ಸ್ಥಾನಗಳ ಛತ್ತೀಸಗಢ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ 54ರಲ್ಲಿ ಗೆಲುವು ಸಾಧಿಸುವ ಮೂಲಕ ಅಧಿಕಾರದ ಗದ್ದುಗೆ ಏರಿದ್ದು, ಶಾಸಕರ ಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್ ಅವರನ್ನು ಆಯ್ಕೆ ಮಾಡಲಾಗಿದೆ. ವಿಷ್ಣುದೇವ್ ಸಾಯ್ ಅವರು 2020ರಿಂದ 2022ರ ವರೆಗೆ ಛತ್ತೀಸಗಢದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರಾಗಿದ್ದರು. ಪ್ರಧಾನಿ ಮೋದಿ ಅವರ ಸಂಪುಟದಲ್ಲಿ ಸಚಿವರಾಗಿಯೂ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಡಿಸೆಂಬರ್ 3ರ ಫಲಿತಾಂಶಕ್ಕೂ ಮುನ್ನ ಬಹುತೇಕ ಸಮೀಕ್ಷೆಗಳು ಛತ್ತೀಸಗಢದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಎಂದು ಹೇಳಿದ್ದವು.

ಛತ್ತೀಸಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣುದೇವ್ ಸಾಯ್ Read More »

ಬಹುಜನ ಸಮಾಜ ಪಕ್ಷಕ್ಕೆ ಉತ್ತರಾಧಿಕಾರಿ ಆಯ್ಕೆ/ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ನೂತನ ಉತ್ತರಾಧಿಕಾರಿ

ಸಮಗ್ರ ನ್ಯೂಸ್: ಬಹುಜನ ಸಮಾಜ ಪಕ್ಷದ (ಬಿಎಸ್‍ಪಿ) ಉತ್ತರಾಧಿಕಾರಿಯಾಗಿ ತನ್ನ ಸೋದರಳಿಯ ಆಕಾಶ್ ಆನಂದ್ ಅವರನ್ನು ಮುಖ್ಯಸ್ಥೆ ಮಾಯಾವತಿ ಅವರು ನೇಮಕ ಮಾಡಿದ್ದಾರೆ. 2019ರ ಲೋಕಸಭಾ ಚುನಾವಣೆಯಲ್ಲಿ ಆಕಾಶ್ ಆನಂದ್ ರಾಜಕೀಯ ಪ್ರವೇಶಿಸಿದ್ದು, ಸದ್ಯ ಮಾಯಾವತಿಯ ರಾಜಕೀಯ ವ್ಯವಹಾರಗಳನ್ನು ನೋಡಿಕೊಳ್ಳುತ್ತಿದ್ದರು. ಉತ್ತರ ಪ್ರದೇಶ ಮತ್ತು ಉತ್ತರಾಖಂಡದ ಮೇಲ್ವಿಚಾರಣೆಯನ್ನು ಮಾಯಾವತಿ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮುಖಂಡ ಉದಯ್‍ವೀರ್ ಸಿಂಗ್ ತಿಳಿಸಿದ್ದಾರೆ.

ಬಹುಜನ ಸಮಾಜ ಪಕ್ಷಕ್ಕೆ ಉತ್ತರಾಧಿಕಾರಿ ಆಯ್ಕೆ/ ಮಾಯಾವತಿ ಸೋದರಳಿಯ ಆಕಾಶ್ ಆನಂದ್ ನೂತನ ಉತ್ತರಾಧಿಕಾರಿ Read More »

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ/ ಮಲ್ಲಿಕಾರ್ಜುನ ಖರ್ಗೆ ಘೋಷಣೆ

ಸಮಗ್ರ ನ್ಯೂಸ್: ರೇವಂತ್ ರೆಡ್ಡಿ ಅವರನ್ನು ತೆಲಂಗಾಣ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಘೋಷಣೆ ಮಾಡಲಾಗಿದೆ. ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 119 ಸ್ಥಾನಗಳ ಪೈಕಿ 64 ಸ್ಥಾನಗಳ ಬಹುಮತದೊಂದಿಗೆ ಕಾಂಗ್ರೆಸ್ ಗೆಲುವು ಸಾಧಿಸಿತ್ತು. ಚುನಾವಣಾ ಫಲಿತಾಂಶ ಪ್ರಕಟ ಆದ ತಕ್ಷಣ ಮುಖ್ಯಮಂತ್ರಿ ಸ್ಥಾನಕ್ಕೆ ರೇವಂತ್ ರೆಡ್ಡಿ ಹೆಸರು ಕೇಳಿಬಂದಿತ್ತು. ಆದರೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಮತ್ತು ವೀಕ್ಷಕರು ಸಿಎಂ ಹೆಸರನ್ನು ಪಕ್ಷದ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಕಟಿಸುತ್ತಾರೆ ಎಂದು ಹೇಳಿದ್ದರು. ಇದೀಗ ಖರ್ಗೆ ರೇವಂತ್ ರೆಡ್ಡಿ ಹೆಸರನ್ನು ಘೋಷಣೆ

ತೆಲಂಗಾಣದ ನೂತನ ಸಿಎಂ ಆಗಿ ರೇವಂತ್‌ ರೆಡ್ಡಿ/ ಮಲ್ಲಿಕಾರ್ಜುನ ಖರ್ಗೆ ಘೋಷಣೆ Read More »

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ

ಸಮಗ್ರ ನ್ಯೂಸ್: ಈಶಾನ್ಯ ರಾಜ್ಯವಾದ ಮಿಜೋರಾಂನ ವಿಧಾನಸಭೆಯಲ್ಲಿ ಜೋರಾಮ್ ಪೀಪಲ್ಸ್ ಮೂವ್‍ಮೆಂಟ್ 40 ಸದಸ್ಯ ಬಲದ ವಿಧಾನಸಭೆಯಲ್ಲಿ 27 ಸ್ಥಾನಗಳನ್ನು ಗೆದ್ದು ಸ್ವಂತ ಬಲದಿಂದ ಬಹುಮತ ಗಳಿಸಿದೆ. ಜೋರಾಮ್ ಪೀಪಲ್ಸ್ ಮೂವ್‍ಮೆಂಟ್ ಪಕ್ಷದ ಮುಖ್ಯಸ್ಥ, ಪಕ್ಷಾಂತರ ನಿಷೇಧ ಕಾಯ್ದೆಯಡಿ ಸದಸ್ಯತ್ವ ಕಳೆದುಕೊಂಡ ಮೊದಲ ಸಂಸದ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ ಭದ್ರತಾ ಉಸ್ತುವಾರಿಯಾಗಿದ್ದ ಲಾಲ್ದುಹೋಮ 30 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. 1984 ರಲ್ಲಿ ಆಗಿನ

ಪಕ್ಷಾಂತರ ವಿರೋಧಿ ಕಾನೂನಿನಡಿಯಲ್ಲಿ ಅನರ್ಹಗೊಂಡ ಮೊದಲ ಸಂಸದ/ ಇಂದು ಮಿಜೋರಾಂನ ನೂತನ ಮುಖ್ಯಮಂತ್ರಿ Read More »

ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಬಿಜೆಪಿಯ ಹಿರಿಯ ಮುಖಂಡ ಆರ್. ಅಶೋಕ್ ಅವರನ್ನು ಆಯ್ಕೆ ಮಾಡಲಾಗಿದೆ. ಇಂದು ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿಯ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಚುನಾವಣೆ ನಡೆದು ಹಲವು ಸಮಯ ಕಳೆದರೂ ವಿರೋಧ ಪಕ್ಷದ ನಾಯಕನ ಆಯ್ಕೆ ನಡೆದಿರಲಿಲ್ಲ. ವಿಧಾನ ಸಭೆಯ ಮೊದಲ ಅಧಿವೇಶನ ವಿಪಕ್ಷ ನಾಯಕನಿಲ್ಲದೇ ನಡೆದುಹೋಗಿತ್ತು. ಕಳೆದ ವಾರವಷ್ಟೇ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷರನ್ನಾಗಿ ಬಿವೈ ವಿಜಯೇಂದ್ರ ಅವರನ್ನು ನೇಮಕ ಮಾಡಲಾಗಿದ್ದು,

ವಿಪಕ್ಷ ನಾಯಕರಾಗಿ ಆರ್. ಅಶೋಕ್/ ಬಿಜೆಪಿ ಶಾಸಕಾಂಗ ಸಭೆಯಲ್ಲಿ ನಿರ್ಣಯ Read More »

ಜೆಡಿಎಸ್‍ನಲ್ಲಿ ಮುಂದುವರಿದ ಭಿನ್ನಮತ/ ಸಿ ಎಂ ಇಬ್ರಾಹಿಂ ಅಮಾನತು

ಸಮಗ್ರ ನ್ಯೂಸ್: ಜೆಡಿಎಸ್ ಪಕ್ಷದಲ್ಲಿ ಭಿನ್ನಮತ ಮುಂದುವರೆದಿದ್ದು, ಇದೀಗ ಜೆಡಿಎಸ್‍ನ ಮಾಜಿ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ. ಪಕ್ಷ ವಿರೋಧಿ ಚಟುವಟಿಕೆಗಳ ಹಿನ್ನಲೆಯಲ್ಲಿ ಈ ಕೂಡಲೇ ಜಾರಿಗೆ ಬರುವಂತೆ ಸಿ ಎಂ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್ ಡಿ ದೇವೇಗೌಡ ಆದೇಶ ಹೊರಡಿಸಿದ್ದಾರೆ. ಜೆಡಿಎಸ್ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಜೊತೆ ಮಾಡಿಕೊಂಡಿರುವ ಒಪ್ಪಂದ ಒಮ್ಮತದ ನಿರ್ಣಯವಾಗಿದ್ದರೂ, ಬಹಿರಂಗವಾಗಿ ಪಕ್ಷ ವಿರೋಧಿ ಹೇಳಿಕೆಗಳನ್ನು ನೀಡಿರುತ್ತಾರೆ. ಇದು

ಜೆಡಿಎಸ್‍ನಲ್ಲಿ ಮುಂದುವರಿದ ಭಿನ್ನಮತ/ ಸಿ ಎಂ ಇಬ್ರಾಹಿಂ ಅಮಾನತು Read More »

ನನ್ನನ್ನು ವಿರೋಧಿಸಿದರೆ, ಮೋದಿ ಅವರನ್ನು ವಿರೋಧಿಸಿದಂತೆ: ಬಿ. ವೈ. ವಿಜಯೇಂದ್ರ

ಸಮಗ್ರ ನ್ಯೂಸ್: ನನ್ನನ್ನು ರಾಜ್ಯಾಧ್ಯಕ್ಷರನ್ನಾಗಿ ಮಾಡಿದ್ದು ನರೇಂದ್ರ ಮೋದಿಯವರು. ಹಾಗಾಗಿ ನನ್ನನ್ನು ವಿರೋಧಿಸಿದರೆ, ಪ್ರಧಾನಿ ಮೋದಿ ಅವರನ್ನು ವಿರೋಧಿಸಿದಂತೆ ಎಂದು ಹೇಳುವ ಮೂಲಕ ವಿರೋಧಿಗಳಿಗೆ ಬಿಜೆಪಿಯ ನೂತನ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಟಾಂಗ್ ಕೊಟ್ಟಿದ್ದಾರೆ. ನನ್ನನ್ನು ಪಕ್ಷದ ರಾಜ್ಯಾಧ್ಯಕ್ಷರನ್ನಾಗಿ ಮಾಡಿದವರು ಯಾರು? ಯಡಿಯೂರಪ್ಪನಾ? ಪ್ರಧಾನಿ ಮೋದಿ, ಗೃಹ ಸಚಿವ ಅಮಿತ್ ಷಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ ಪಿ ನಡ್ಡಾ ಅವರು ನನ್ನನ್ನು ಪಕ್ಷದ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದಾರೆ. ಸಚಿವ ಪ್ರಹ್ಲಾದ್ ಜೋಷಿ, ಬಿ. ಎಲ್.

ನನ್ನನ್ನು ವಿರೋಧಿಸಿದರೆ, ಮೋದಿ ಅವರನ್ನು ವಿರೋಧಿಸಿದಂತೆ: ಬಿ. ವೈ. ವಿಜಯೇಂದ್ರ Read More »

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ

ಸಮಗ್ರ ನ್ಯೂಸ್: ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು(87 ವರ್ಷ) ತಡರಾತ್ರಿ 12.20 ಕ್ಕೆ ದಾರದಹಳ್ಳಿಯ ತಮ್ಮ ನಿವಾಸದಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ. ಮಂಗಳವಾರ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಡಿ.ಬಿ. ಚಂದ್ರೇಗೌಡರ ಪಾರ್ಥಿವ ಶರೀರವನ್ನು ಸಾರ್ವಜನಿಕ ಅಂತಿಮ ದರ್ಶನಕ್ಕೆ ಇರಿಸಲಾಗುವುದು. ಬುಧವಾರ ಮಧ್ಯಾಹ್ನ ದಾರದಹಳ್ಳಿಯ ಅವರ ಪೂರ್ಣಚಂದ್ರ ಎಸ್ಟೇಟ್ ನಲ್ಲಿ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು. ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಗ್ರಾಮದ ಪಟೇಲ್ ಭೈರೇಗೌಡ ಹಾಗೂ ಪುಟ್ಟಮ್ಮ ಅವರ

ಮಾಜಿ ಸಚಿವ, ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ.ಚಂದ್ರೇಗೌಡರು ಇನ್ನಿಲ್ಲ Read More »

ವಿಧಾನಸಭಾ ಚುನಾವಣೆ/ ತೆಲಂಗಾಣದತ್ತ ಕರ್ನಾಟಕದ ಕಾಂಗ್ರೆಸ್ ನಾಯಕರು

ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ವೇದಿಕೆ ಸಿದ್ಧವಾಗಿದ್ದು, ಇದೀಗ ಕರ್ನಾಟಕದ ಕಾಂಗ್ರೆಸ್ ನಾಯಕರು ಮತ್ತು ಸಚಿವರುಗಳು ತೆಲಂಗಾಣದತ್ತ ಮುಖ ಮಾಡಿದ್ದಾರೆ. ಎಐಸಿಸಿ ನೂರಕ್ಕೂ ಅಧಿಕ ಕಾಂಗ್ರೆಸ್ ನಾಯಕರನ್ನು ಚುನಾವಣಾ ಪ್ರಚಾರಕ್ಕೆ ನೇಮಿಸಿದೆ. ಕೆಪಿಸಿಸಿ ಅಧ್ಯಕ್ಷರು ಮತ್ತು ಉಪಮುಖ್ಯಮಂತ್ರಿಗಳಾದ ಡಿ. ಕೆ. ಶಿವಕುಮಾರ್ ಈಗಾಗಲೇ ತೆಲಂಗಾಣದಲ್ಲಿ ಪ್ರಚಾರ ಆರಂಭಿಸಿದ್ದು, ಇದೀಗ ಎಐಸಿಸಿ ಕ್ಲಸ್ಟರ್ ಉಸ್ತುವಾರಿಗಳಾಗಿ, ಸಚಿವರಾದ ದಿನೇಶ್ ಗುಂಡೂರಾವ್, ಈಶ್ವರ್ ಖಂಡ್ರೆ, ಬಿ. ನಾಗೇಂದ್ರ, ಜಮೀರ್ ಅಹ್ಮದ್ ಖಾನ್, ಶಿವರಾಜ್ ಎಸ್ ತಂಗಡಗಿ, ಪ್ರಿಯಾಂಕ್ ಖರ್ಗೆ, ಎಂ ಸಿ

ವಿಧಾನಸಭಾ ಚುನಾವಣೆ/ ತೆಲಂಗಾಣದತ್ತ ಕರ್ನಾಟಕದ ಕಾಂಗ್ರೆಸ್ ನಾಯಕರು Read More »