ರಾಜಕೀಯ

ಡಾ|ಸುಧಾಕರ್ ಗೆ ಸವಾಲು ಎಸೆದ ಶಾಸಕ ಪ್ರದೀಪ್ ಈಶ್ವರ್

ಸಮಗ್ರ ನ್ಯೂಸ್: ಮಾಜಿ ಸಚಿವ ಡಾ| ಕೆ. ಸುಧಾಕರ್ ಅವರ ಚಾಲೆಂಜ್ ಅನ್ನು ಸ್ವೀಕಾರ ಮಾಡಿರುವ ಶಾಸಕ ಪ್ರದೀಪ್ ಈಶ್ವರ್ ಇದೀಗ ಪ್ರತಿ ಸವಾಲು ಹಾಕಿದ್ದಾರೆ. ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ನಿವೇಶನ ಹಂಚಿಕೆ ಪತ್ರ ವಿಚಾರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಸುಳ್ಳು ಅಭಿಯಾನ ಅರಂಭಿಸಿದ್ದಾರೆ. ಹೀಗಾಗಿ ಅವರು ಶ್ರೀ ಭೋಗನಂಧೀಶ್ವರ ದೇವಾಲಯಕ್ಕೆ ಬಂದು ದೀಪ ಹಚ್ಚಲಿ ಅಂತ ಮಾಜಿ ಸಚಿವ ಸುಧಾಕರ್ ಸವಾಲು ಹಾಕಿದರು. ಈ ಸವಾಲನ್ನ ನಾನು ಸ್ವೀಕರಿಸುತ್ತೇನೆ. ಆದ್ರೆ ನನ್ನದೊಂದು ಸವಾಲು ಸಹ ಇದೆ. […]

ಡಾ|ಸುಧಾಕರ್ ಗೆ ಸವಾಲು ಎಸೆದ ಶಾಸಕ ಪ್ರದೀಪ್ ಈಶ್ವರ್ Read More »

ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ

ಸಮಗ್ರ ನ್ಯೂಸ್: ಮಹಿಳೆಯರು ಬಹು ನಿರೀಕ್ಷೆಯಿಂದ ನೋಡುತ್ತಿರುವ ಗೃಹ ಲಕ್ಷ್ಮೀ ಯೋಜನೆಗೆ ಅರ್ಜಿ ಸಲ್ಲಿಕೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ.16ರಂದು ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದ್ದು, ಆಗಸ್ಟ್ ನಲ್ಲಿ 2000 ರೂ ಕುಟುಂಬದ ಯಜಮಾನಿ ಮಹಿಳೆಯರ ಖಾತೆಗೆ ಜಮಾ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ರಾಜ್ಯ ಬಜೆಟ್ ಮಂಡನೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಇಂದು ಮಂಡಿಸಿದ ಬಜೆಟ್ ಪೂರ್ಣಪ್ರಮಾಣದ ಬಜೆಟ್ ಆಗಿದೆ. ಬೊಮ್ಮಾಯಿ ನಾಲ್ಕು ತಿಂಗಳು ಲೇಖಾನುಧಾನ ತೆಗೆದುಕೊಂಡಿದ್ದರು ಎಂದರು. ಜೂನ್ 18ರಿಂದ ಗೃಹ

ಜು.16ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಾರಂಭ – ಸಿಎಂ Read More »

ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.!

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಜೆಟ್ ಮಂಡನೆಯ ವೇಳೆ ಸದನದ ಒಳಗಡೆ ಕುಳಿತಿದ್ದ ವ್ಯಕ್ತಿಯನ್ನು ಕರಿಯಪ್ಪ ಯಾನೇ ತಿಪ್ಪೇರುದ್ರ ಎಂದು ಗುರುತಿಸಲಾಗಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದಿದ್ದಾರೆ. ಸಿಸಿಬಿ ಜಂಟಿ ಪೊಲೀಸ್ ಆಯುಕ್ತ ಶರಣಪ್ಪ ಅವರು ಕರಿಯಪ್ಪ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ. 70 ವರ್ಷದ ಈ ವ್ಯಕ್ತಿಯನ್ನು ಪೊಲೀಸ್ ಕಮಿಷನರ್ ಗಂಭೀರವಾಗಿ ಪರಿಗಣಿಸಿದ್ದಾರೆ. ಯಾವ ಶಾಸಕರ ಹೆಸರನ್ನು ಬಳಸಿ ಒಳಹೋಗಿದ್ದ?, ಆಸನದಲ್ಲಿ ಕುಳಿತುಕೊಂಡಿದ್ದು ಯಾಕೆ? ಹಾಗೂ ಯಾವ ದಾಖಲೆಗಳು ತನ್ನ ಬಳಿಯಿದ್ದವು ಅನ್ನೋದರ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಸದನದೊಳಗೆ

ಬಜೆಟ್ ಮಂಡನೆಯ ವೇಳೆ ಶಾಸಕರ ಸೀಟ್‍ನಲ್ಲಿ ಕುಳಿತಿದ್ದ ಕರಿಯಪ್ಪ ಬಂಧನ.! Read More »

ಬುರ್ಖಾದೊಳಗೆ ಅವಳಲ್ಲ ಅವನು! ಉಚಿತ ಪ್ರಯಾಣದ ಆಸೆಯಿಂದ ಪೇಚಿಗೆ ಸಿಲುಕಿದ ಆತ!!

ಸಮಗ್ರ ನ್ಯೂಸ್: ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ. ಸಂಶಿಯ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬುರ್ಖಾ ತೊಟ್ಟಿದ್ದ ವ್ಯಕ್ತಿ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ

ಬುರ್ಖಾದೊಳಗೆ ಅವಳಲ್ಲ ಅವನು! ಉಚಿತ ಪ್ರಯಾಣದ ಆಸೆಯಿಂದ ಪೇಚಿಗೆ ಸಿಲುಕಿದ ಆತ!! Read More »

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ

ಸಮಗ್ರ ವಾರ್ತೆ: ಅಕ್ರಮ ಆಸ್ತಿ ಗಳಿಕೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರ ವಶದಲ್ಲಿದ್ದ ಅಜಿತ್ ರೈ ಯನ್ನು ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ಹೊರಡಿಸಿದೆ. ಲೋಕಾಯುಕ್ತ ಕಸ್ಟಡಿ ಅವಧಿ ಜು.6ಕ್ಕೆ ಮುಕ್ತಾಯವಾದ ಹಿನ್ನೆಲೆ ಅಜಿತ್ ರೈ ಅವರನ್ನು ಇಂದು ಕೋರ್ಟ್ಗೆ ಹಾಜರುಪಡಿಸಿದ ಲೋಕಾಯುಕ್ತ ಅಧಿಕಾರಿಗಳು, ಮತ್ತೆ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದ್ದರು. ಆದರೆ ವಿಚಾರಣೆ ನಡೆಸಿದ ಕೋರ್ಟ್ ‘ಅಜಿತ್ ರೈ’ ಯನ್ನು ನ್ಯಾಯಾಂಗ ವಶಕ್ಕೆ ನೀಡಿದ ವಿಶೇಷ ನ್ಯಾಯಾಲಯ ಜುಲೈ 11 ಕ್ಕೆ ವಿಚಾರಣೆ

ಭ್ರಷ್ಟ ಅಧಿಕಾರಿ ಅಜಿತ್ ರೈ ನ್ಯಾಯಾಂಗ ಬಂಧನಕ್ಕೆ ‌ಕೋರ್ಟ್‌ ಆದೇಶ Read More »

ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?…

ಸಮಗ್ರ ನ್ಯೂಸ್: ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಒತ್ತಡ, ಎತ್ತಿನಹೊಳೆ, ಮೇಕೆದಾಟು, ಕೃಷ್ಣಾ-ಭದ್ರಾ ಮೇಲ್ದಂಡೆ, ಆಲಮಟ್ಟಿಯಂತಹ ಬೃಹತ್‌ ನೀರಾವರಿ ಯೋಜನೆಗಳಿಗೆ ಹಣ ಮೀಸಲಿಡುವ ಅನಿವಾರ್ಯತೆ, ಸಿಬ್ಬಂದಿ ವೇತನ ಹೆಚ್ಚಳ, ರಾಜ್ಯದ ಆರ್ಥಿಕ ಸ್ಥಿತಿಯನ್ನು ಮೇಲೆತ್ತುವಂತಹ ಸಾಲು-ಸಾಲು ಸವಾಲುಗಳ ಒತ್ತಡದ ನಡುವೆ ಇಂದು(ಜು.7) 2023-24ನೇ ಸಾಲಿನ ಬಜೆಟ್‌ ಮಂಡನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಣಿಯಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಮಂಡಿಸಲಿರುವ ಆಯವ್ಯಯದಲ್ಲಿ ಗ್ಯಾರಂಟಿ ಯೋಜನೆಗಳ ಹೊರತಾಗಿ ಯಾವುದೇ ಜನಪ್ರಿಯ ಯೋಜನೆಗಳ ಘೋಷಣೆ ಸಾಧ್ಯತೆ ಕಡಿಮೆಯಿದ್ದರೂ, ಡೆಲಿವರಿ ಬಾಯ್‌ಗಳಂತಹ

ಇಂದು ರಾಜ್ಯ ಬಜೆಟ್ ಮಂಡನೆ| ಜನಸಾಮಾನ್ಯರ ಕಿಸೆಗೆ ಕತ್ತರಿ ‘ಗ್ಯಾರಂಟಿ’ನಾ?… Read More »

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ: ಯತ್ನಾಳ್ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್

ಸಮಗ್ರ ನ್ಯೂಸ್: ನನ್ನ ಕನ್ನಡ ಹೆಚ್ಚು ಕಡಿಮೆ ಇರಬಹುದು, ಆದರೆ ಅದು ನಮ್ಮ ಪ್ರೀತಿಯ ಭಾಷೆ. ಪ್ರೀತಿ, ಸೋದರತೆ ಸಾಮರಸ್ಯದ ಭಾಷೆ. ಅದಕ್ಕೆ ನಾನು ಯತ್ನಾಳ್‌ ಅವರಿಗೆ ಕೃತಜ್ಞತೆ ಹೇಳುತ್ತಿದ್ದೇನೆ ಎಂದು ಸ್ಪೀಕರ್ ಯು.ಟಿ ಖಾದರ್ ಹೇಳಿದ್ದಾರೆ. ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ ಎಂದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಯಿಂದ ವಿಧಾನಸಭೆಯಲ್ಲಿ ಖಾದರ್ ಅವರ ಕನ್ನಡದ ಬಗ್ಗೆ ಸ್ವಾರಸ್ಯಕರ ಮಾತು ನಡೆಯಿತು. ಸ್ಪೀಕರ್ ಕನ್ನಡದ ಬಗ್ಗೆ ಚರ್ಚೆಯ ಹಿನ್ನೆಲೆಯಲ್ಲಿ ವಿಷಯ ಪ್ರಸ್ತಾಪ ಮಾಡಿದ ಖಾದರ್,

ಸ್ಪೀಕರ್ ಟು ಕನ್ನಡ ಆಪ್ ಹಾಕಿಕೊಡಿ: ಯತ್ನಾಳ್ನನ್ನ ಕನ್ನಡ ಹೆಚ್ಚು ಕಡಿಮೆ ಇರ್ಬೋದು, ಆದ್ರೆ ಪ್ರೀತಿಯ ಭಾಷೆ: ಖಾದರ್ Read More »

ದುಡಿಯಲು ಸಮರ್ಥಳಾದ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್ ತೀರ್ಪು

ಸಮಗ್ರ ನ್ಯೂಸ್: ದುಡಿಯಲು ಸಮರ್ಥ ಪತ್ನಿ ಹೆಚ್ಚಿನ ಜೀವನಾಂಶ ಕೋರುವಂತಿಲ್ಲವೆಂದು ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ. ಜತೆಗೆ, ಪ್ರಕರಣವೊಂದರಲ್ಲಿ ಪತ್ನಿಗೆ ಪತಿ ನೀಡಬೇಕಿದ್ದ ಮಾಸಿಕ ಜೀವನಾಂಶದ ಮೊತ್ತವನ್ನು 10 ಸಾವಿರ ರೂಪಾಯಿಯಿಂದ 5 ಸಾವಿರ ರೂಪಾಯಿಗಳಿಗೆ ಕಡಿಮೆ ಮಾಡಿದ ಸೆಷನ್ಸ್ ಕೋರ್ಟ್ ಆದೇಶವನ್ನು ಎತ್ತಿಹಿಡಿದಿದೆ. ವಿವಾಹಕ್ಕೆ ಮುನ್ನ ಉದ್ಯೋಗದಲ್ಲಿದ್ದ ಪತ್ನಿ ಈಗ ಮತ್ತೆ ಕೆಲಸಕ್ಕೆ ಸೇರದಿರಲು ಸಮರ್ಪಕ ಕಾರಣಗಳಿಲ್ಲ. ಆಲಸ್ಯದಿಂದ ಮನೆಯಲ್ಲಿಯೇ ಕುಳಿತು ಪತಿಯಿಂದಲೇ ಸಂಪೂರ್ಣ ಜೀವನಾಂಶ ಕೇಳುವುದು ಸಮಂಜಸವಲ್ಲ. ತನ್ನ ಜೀವನ ನಿರ್ವಹಣೆಗೆ ಪತ್ನಿ ಪ್ರಯತ್ನಿಸಬೇಕು.

ದುಡಿಯಲು ಸಮರ್ಥಳಾದ ಪತ್ನಿ ಹೆಚ್ಚಿನ ಜೀವನಾಂಶ ಕೇಳುವಂತಿಲ್ಲ: ಹೈಕೋರ್ಟ್ ತೀರ್ಪು Read More »

ಸಕಾಲಿಕ ಚಿಂತನೆ| ವಿಧಾನ ಮಂಡಲ ಅನುಭಾವ ತುಂಬಿದ ಅನುಭವ ಮಂಟಪವಾಗಬೇಕಲ್ಲದೆ ಹುಚ್ಚರ ಸಂತೆಯಾಗಬಾರದು..!

ಸಮಗ್ರ ವಿಶೇಷ: ವಿಧಾನ ಮಂಡಲದ ಉಭಯ ಸದನಗಳ ಕಾರ್ಯಕಲಾಪಗಳನ್ನು ನೇರವಾಗಿ ವೀಕ್ಷಿಸುವ ಯುವ ಜನಾಂಗದ ಮನಸ್ಸುಗಳು ಹೇಗೆ ಯೋಚಿಸಬಹುದು? ಕನಿಷ್ಠ ಶಾಲೆಗಳಲ್ಲಿ ಇರುವಷ್ಟು ಶಿಸ್ತು ಅಥವಾ ಬಸ್ಸು ರೈಲು ನಿಲ್ದಾಣಗಳಲ್ಲಿ ಇರಬಹುದಾದಷ್ಟು ಶಿಸ್ತು, ಮದುವೆಯ ಆರತಕ್ಷತೆಯಲ್ಲಿ ಇರುವ ಶಿಸ್ತು, ಮತದಾನ ಮಾಡುವಾಗ ಇರುವಷ್ಟು ಶಿಸ್ತು, ಉಪನ್ಯಾಸ – ವಿಚಾರ ಸಂಕಿರಣಗಳಲ್ಲಿ ಇರುವ ಶಿಸ್ತು ಅಥವಾ ಸಿನಿಮಾ ಮಂದಿರಗಳಲ್ಲಿ ಇರಬಹುದಾದಷ್ಟು ಶಿಸ್ತು ಕೂಡ ಇವರಲ್ಲಿ ಇಲ್ಲವಾಯಿತೇ? ಎಂದು ಒಂದು ಕ್ಷಣ ಅನಿಸಬಹುದೇ. ಎಷ್ಟೊಂದು ವ್ಯವಸ್ಥಿತವಾಗಿ, ಎಷ್ಟೊಂದು ಬುದ್ದಿವಂತ ಅಧಿಕಾರಿಗಳ

ಸಕಾಲಿಕ ಚಿಂತನೆ| ವಿಧಾನ ಮಂಡಲ ಅನುಭಾವ ತುಂಬಿದ ಅನುಭವ ಮಂಟಪವಾಗಬೇಕಲ್ಲದೆ ಹುಚ್ಚರ ಸಂತೆಯಾಗಬಾರದು..! Read More »

ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯುತ್ತಾರಾ ಶೋಭಾ ಕರಂದ್ಲಾಜೆ!? ಯಡಿಯೂರಪ್ಪ ಹೈಕಮಾಂಡ್ ಗೆ ಹೇಳಿದ ಆ ಗುಟ್ಟೇನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ…

ಸಮಗ್ರ ವಾರ್ತೆ: ರಾಜ್ಯ ವಿಧಾನಸಭೆ ಚುನಾವಣೆ ಮುಗಿದು ನೂತನ ಸರ್ಕಾರ ಆರಂಭವಾಗಿ ಅಧಿವೇಶನ ಶುರುವಾದರೂ ಬಿಜೆಪಿ ಅಧ್ಯಕ್ಷರ ನೇಮಕ ಮಾತ್ರ ಇನ್ನೂ ಬಾಕಿಯಾಗಿ ಉಳಿದಿದೆ. ಈ ನಿಟ್ಟಿನಲ್ಲಿ ಬಿಜೆಪಿ ಹೈಕಮಾಂಡ್‌ ಕೂಡ ಅಧ್ಯಕ್ಷ ಆಯ್ಕೆ ಬಗ್ಗೆ ತಲೆಕೆಡಿಸಿಕೊಂಡಿದ್ದು, ಈ ಸ್ಥಾನಕ್ಕೆ ಮಹಿಳೆಯೊಬ್ಬರು ಆಯ್ಕೆಯಾಗುವ ಸಾಧ್ಯತೆ ಇದೆ. ಹಾಲಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರ ಅಧಿಕಾರವಧಿ ಮುಗಿದಿದ್ದು ತುರ್ತಾಗಿ ನೂತನ ಅಧ್ಯಕ್ಷ ನೇಮಕವಾಗಬೇಕಿದೆ. ನೂತನ ಅಧ್ಯಕ್ಷರ ಸ್ಥಾನಕ್ಕೆ ಹಲವು ನಾಯಕರ ಹೆಸರುಗಳು ಕೇಳಿ ಬಂದಿದ್ದು, ಮಾಜಿ ಮುಖ್ಯಮಂತ್ರಿ

ರಾಜ್ಯ ಬಿಜೆಪಿ ಚುಕ್ಕಾಣಿ ಹಿಡಿಯುತ್ತಾರಾ ಶೋಭಾ ಕರಂದ್ಲಾಜೆ!? ಯಡಿಯೂರಪ್ಪ ಹೈಕಮಾಂಡ್ ಗೆ ಹೇಳಿದ ಆ ಗುಟ್ಟೇನು? ಇಲ್ಲಿದೆ ಕಂಪ್ಲೀಟ್ ಸ್ಟೋರಿ… Read More »