ರಾಜಕೀಯ

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಗ್ಯಾರಂಟಿ ಯೋಜನೆಗಳ ಪೈಕಿ ನಂ.2 ಗೃಹ ಲಕ್ಷ್ಮೀ ಇದನ್ನು ಜಾರಿಗೊಳಿಸುವ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಮಾಹಿತಿ ತಿಳಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ ಬ್ಯಾಂಕ್ ಅಕೌಂಟ್ಸ್, ಆಧಾರ್ ಕಾರ್ಡ್ ಒದಗಿಸಬೇಕಾಗುತ್ತದೆ. ಯಾರು ಮನೆಯ ಯಜಮಾನಿ ಎಂಬುದು ತೀರ್ಮಾನಿಸಬೇಕಾಗಿದೆ. ನಾವು ಹೇಳಿರುವಂತದ್ದು ಮನೆಯ ಯಜಮಾನಿಗೆ ತಿಂಗಳಿಗೆ 2,000 ರೂ ಜಮಾ ಮಾಡುತ್ತೇವೆ ಎಂದಿದ್ದೆವು. ಆದ್ದರಿಂದ ಅಕೌಂಟ್ ಮಾಹಿತಿ, ಆಧಾರ್ ಕಾರ್ಡ್, ಅರ್ಜಿ ಸಲ್ಲಿಸಬೇಕು. ಜೂನ್ 15 ರಿಂದ ಜುಲೈ 15ರ ಒಳಗಾಗಿ ಮನೆ ಒಡತಿಯ ಮಾಹಿತಿ ನೀಡಬೇಕು. […]

‘ಗೃಹಲಕ್ಷ್ಮಿ’ ಯೋಜನೆ ಆ.15ಕ್ಕೆ ಅನುಷ್ಠಾನ – ಸಿಎಂ ಸಿದ್ದರಾಮಯ್ಯ Read More »

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​​ ಘೋಷಿಸಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾಗಿರುವ ಗೃಹಜ್ಯೋತಿ ಮೊದಲ ಗ್ಯಾರಂಟಿ ಯೋಜನೆಯನ್ನು ಉಚಿತವಾಗಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಘೋಷಣೆ ಮಾಡಿದ್ದಾರೆ. ಸಚಿವ ಸಂಪುಟದಲ್ಲಿ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮತನಾಡಿದ್ದು, ಗೃಹಲಕ್ಷ್ಮೀ, ಅನ್ನಭಾಗ್ಯ, ಗೃಹಜ್ಯೋತಿ, ಯುವನಿಧಿ, ಮಹಿಳೆಯರಿಗೆ ಉಚಿತ ಬಸ್​ ಯೋಜನೆಯ ಯಾವುದೇ ಜಾತಿ, ಧರ್ಮ, ಭಾಷೆ ಇಲ್ಲದೆ ಎಲ್ಲರಿಗೂ ಅನ್ವಯ ಆಗುವ ಹಾಗೆ ಗ್ಯಾರಂಟಿ ಜಾರಿ‌ ಮಾಡುತ್ತೇವೆ ಎಂದು ಹೇಳಿದ್ದಾರೆ. ಮೊದಲ ಗ್ಯಾರಂಟಿಯಾಗಿರುವ, ಗೃಹಜ್ಯೋತಿ ಜಾರಿಗೆ ಸಂಪುಟ ಸಭೆ ನಿರ್ಧರಿಸಿದ್ದು,

ಎಲ್ಲರಿಗೂ 200 ಯೂನಿಟ್ ಉಚಿತ ವಿದ್ಯುತ್ – ಸಿಎಂ ಸಿದ್ದರಾಮಯ್ಯ ಘೋಷಣೆ Read More »

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್

ಸಮಗ್ರ ನ್ಯೂಸ್: ಮೃತ ಮಹಿಳೆಯ ಮೇಲಿನ ಅತ್ಯಾಚಾರವು ಐಪಿಸಿ ಸೆಕ್ಷನ್ 376 ರ ನಿಬಂಧನೆಗಳ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗುವುದಿಲ್ಲ ಎಂದು ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್, ‘ಡೆಡ್ ಬಾಡಿ’ ಎಂಬ ಪದವನ್ನು ಪರಿಚಯಿಸಲು ಈ ಸೆಕ್ಷನ್ ಗೆ ತಿದ್ದುಪಡಿ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ಮೃತದೇಹಗಳ ಜೊತೆ ಸಂಭೋಗ ನಡೆಸುವವರಿಗೆ ಅತ್ಯಾಚಾರ ಅಪರಾಧದ ಅಡಿಯಲ್ಲಿ ಶಿಕ್ಷೆ ವಿಧಿಸುವ ಅವಕಾಶ ಇಲ್ಲದಿರುವ ಕಾರಣ, ಭಾರತೀಯ ದಂಡ ಸಂಹಿತೆ-1860ರ (ಐಪಿಸಿ) ಕಲಂ 377ಕ್ಕೆ (ಅಸ್ವಾಭಾವಿಕ ಲೈಂಗಿಕ ಅಪರಾಧಗಳು) ತಿದ್ದುಪಡಿ ತರಬೇಕು

ಶವಸಂಭೋಗ ಅತ್ಯಾಚಾರವೆಂದು ಪರಿಗಣಿಸಲಾಗದು – ಕರ್ನಾಟಕ ಹೈಕೋರ್ಟ್ Read More »

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾನೂನು ಸಲಹೆಗಾರರಾಗಿ ಕೊಡಗು ಜಿಲ್ಲೆಯ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣರನ್ನು ನೇಮಕ ಮಾಡಿ, ಸಂಪುಟ ದರ್ಜೆ ಸ್ಥಾನಮಾನ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಮುಖ್ಯಕಾರ್ಯದರ್ಶಿಗೆ ಟಿಪ್ಪಣಿ ಬರೆದಿದ್ದಾರೆ. ನನ್ನ ಕಾನೂನು ಸಲಹೆಗಾರರನ್ನಾಗಿ ನೇಮಿಸಿ ಸಂಪುಟ ದರ್ಜೆಯ ಸಚಿವರ ಸ್ಥಾನಮಾನದೊಂದಿಗೆ, ಲಭ್ಯವಿರುವ ಎಲ್ಲಾ ಸೌಲಭ್ಯಗಳನ್ನು ಒದಗಿಸಿ ಈ ಕೂಡಲೆ ಆದೇಶ ಹೊರಡಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯರ ಕಾನೂನು ಸಲಹೆಗಾರರಾಗಿ ವಿರಾಜಪೇಟೆ ಶಾಸಕ ಎ.ಎಸ್ ಪೊನ್ನಣ್ಣ ನೇಮಕ Read More »

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಯ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಬಸ್ ಸೇವೆ ಕಲ್ಪಿಸಲು ಕಾಂಗ್ರೆಸ್ ಸರ್ಕಾರ ಸನ್ನದ್ಧವಾಗಿದೆ. ಆದರೆ, ಇದಕ್ಕೆ ಕೆಲವು ನಿಯಮಾವಳಿಯನ್ನು ರೂಪಿಸಲಾಗಿದೆ. ಏಸಿ ಬಸ್, ಡಿಲಕ್ಸ್ ಬಸ್ ಗಳನ್ನು ಹೊರತುಪಡಿಸಿ ಸಾಮಾನ್ಯ ಬಸ್ ಗಳಲ್ಲಿ ಎಲ್ಲಾ ವರ್ಗಗಳ ಮಹಿಳೆಯರು ಕರ್ನಾಟಕ ರಾಜ್ಯದೆಲ್ಲೆಡೆ ಎಲ್ಲಿ ಬೇಕಾದರೂ ಉಚಿತವಾಗಿ ಸಂಚರಿಸಬಹುದಾಗಿದೆ. ಈ ನಿಯಮವು ಕರ್ನಾಟಕದ ಮಹಿಳೆಯರಿಗೆ ಮಾತ್ರ ಅನ್ವಯವಾಗುತ್ತದೆ. ಕಾಂಗ್ರೆಸ್ ನ ಗ್ಯಾರಂಟಿ ಕಾರ್ಡ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಕೆಲವು ನಿಬಂಧನೆಗಳನ್ನು

ಮಹಿಳೆಯರ ಉಚಿತ ಬಸ್ ಪ್ರಯಾಣಕ್ಕೆ ಐದು ನಿಯಮಗಳು ಜಾರಿ Read More »

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು?

ಸಮಗ್ರ ನ್ಯೂಸ್: ನಿನ್ನೆ(ಮೇ.31) ದೇಶದ ಬಿಹಾರ, ಕರ್ನಾಟಕ, ಕೇರಳ ಮೂರು ರಾಜ್ಯಗಳಲ್ಲಿ ಏಕಕಾಲದಲ್ಲಿ ಎನ್​​ಐಎ(NIA) ದಾಳಿ ಮಾಡಿತ್ತು. ಮೂರು ರಾಜ್ಯಗಳ 85 ಕಡೆ ದಾಳಿ ನಡೆಸಿದ್ದ ಎನ್​ಐಎತಂಡ, ಕರ್ನಾಟಕದ ದಕ್ಷಿಣ ಕನ್ನಡ, ಶಿವಮೊಗ್ಗ ಜಿಲ್ಲೆಯಲ್ಲಿ 25 ಕಡೆ ದಾಳಿ ಮಾಡಿದ್ದು, ಕೇರಳ ರಾಜ್ಯದ ಕಾಸರಗೋಡು, ಮಲ್ಲಾಪುರಂ, ಕೋಝಿಕೊಡ್, ತಿರುವನಂತಪುರಂನಲ್ಲಿ ರಾಷ್ಟ್ರೀಯ ತನಿಖಾ ದಳ ದಾಳಿ ನಡೆಸಿ, ಪರಿಶೀಲನೆ ನಡೆಸಿತ್ತು. ಈ ವೇಳೆ 17,50,100 ಲಕ್ಷ ನಗದು ಜಪ್ತಿ ಮಾಡಲಾಗಿದೆ. ಇಂದು(ಜೂ.1) ಕೂಡ ಕೆಲವೆಡೆ ದಾಳಿ ಮುಂದುವರಿಸಿದೆ ಎಂದು

ಕರ್ನಾಟಕ ಸೇರಿ ದೇಶಾದ್ಯಂತ ಎನ್ಐಎ ದಾಳಿ| ಎರಡು ದಿನಗಳ ಕಾರ್ಯಾಚರಣೆಯಲ್ಲಿ ಸಿಕ್ಕಿದ್ದೇನು? Read More »

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರಧಾನ ಸಲಹೆಗಾರರಾಗಿ ಚುನಾವಣಾ ತಂತ್ರಗಾರ ಸುನೀಲ್ ಕನುಗೋಲು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ. ಕಾಂಗ್ರೆಸ್ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಕನುಗೋಲು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದ ಕನುಗೋಲು ಅವರನ್ನೇ ಸಿದ್ದರಾಮಯ್ಯ ಪ್ರಧಾನ ಸಲಹೆಗಾರರನ್ನಾಗಿ ನೇಮಿಸಿಕೊಳ್ಳಲು ಮುಂದಾಗಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಪೇಸಿಎಂ ಅಭಿಯಾನ ಕೈಗೊಂಡಿದ್ದರು. ಇದು ಬಿಜೆಪಿಗೆ ಭಾರೀ ಆಘಾತ ನೀಡಿತ್ತು, 40% ಸರ್ಕಾರ ಅನ್ನೋ ಕ್ಯಾಂಪೇನ್‌ ಅನ್ನು ಕಾಂಗ್ರೆಸ್‌ ಮಾಡಿತ್ತು. ಪೇ ಸಿಎಂ ಅಭಿಯಾನ, ಭಾರತ್ ಜೋಡೋ

ಸಿಎಂ ಸಿದ್ದರಾಮಯ್ಯ ಪ್ರಧಾನ ಸಲಹೆಗಾರನಾಗಿ ಸುನಿಲ್ ಕನುಗೋಲು ನೇಮಕ Read More »

‘ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳೂ ಸಹಕರಿಸಿ’|ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ

ಸಮಗ್ರ ನ್ಯೂಸ್: ಸರಕಾರದ ಯೋಜನೆಗಳನ್ನು ಉತ್ತಮ ರೀತಿಯಲ್ಲಿ ಅನುಷ್ಠಾನ ಮಾಡುವಲ್ಲಿ ಅಧಿಕಾರಿಗಳ ಜವಬ್ದಾರಿ ಹೆಚ್ಚಿನದ್ದು. ಅಧಿಕಾರಿಗಳು ಜನರನ್ನು ಯಾವುದೇ ಕಾರಣಕ್ಕೂ ಸತಾಯಿಸದೇ ಅವರಿಗೆ ಸೂಕ್ತ ಸಲಹೆಗಳನ್ನು ನೀಡಿ ಅವರ ಕೆಲಸಗಳನ್ನು ಮಾಡಿಕೊಡಬೇಕು. ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸುವ ನನ್ನ ಕನಸಿಗೆ ಅಧಿಕಾರಿಗಳು ಸಹಕರಿಸಬೇಕು ಎಂದು ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದರು. ಸುಳ್ಯ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಬುಧವಾರ ಮಾತನಾಡಿದರು. ಅಧಿಕಾರಿಗಳು ತಮ್ಮ ಕ್ಷೇತ್ರದಲ್ಲಿ ಉತ್ತಮ ಅನುಭವವನ್ನು

‘ಸುಳ್ಯವನ್ನು ಮಾದರಿ ಕ್ಷೇತ್ರವನ್ನಾಗಿಸಲು ಅಧಿಕಾರಿಗಳೂ ಸಹಕರಿಸಿ’|ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಶಾಸಕಿ ಭಾಗೀರಥಿ ಮುರುಳ್ಯ Read More »

ಎಂ.ಬಿ ಪಾಟೀಲ್, ಪ್ರಿಯಾಂಕ ಖರ್ಗೆಗೆ ಹೆಚ್ಚುವರಿ ಖಾತೆಗಳ ಹೊಣೆ

ಸಮಗ್ರ ನ್ಯೂಸ್: ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ. ಪಾಟೀಲ್ ಅವರಿಗೆ ಹೆಚ್ಚುವರಿಯಾಗಿ ಮೂಲಸೌಲಭ್ಯ ಅಭಿವೃದ್ಧಿ ಖಾತೆಯನ್ನು ಹಂಚಿಕೆ ಮಾಡಿ ಬುಧವಾರ ಅಧಿಸೂಚನೆ ಹೊರಡಿಸಲಾಗಿದೆ. ಅಲ್ಲದೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮಾಹಿತಿ ತಂತ್ರಜ್ಞಾನ (ಐಟಿ) ಮತ್ತು ಜೈವಿಕ ತಂತ್ರಜ್ಞಾನ (ಬಿಟಿ) ಖಾತೆಯನ್ನೂ ನೀಡಲಾಗಿದೆ. ಇದೇ 28ರಂದು ಎಲ್ಲ ಸಚಿವರಿಗೆ ಖಾತೆಗಳನ್ನು ಹಂಚಲಾಗಿತ್ತು. ಆಗ ಮೂಲಸೌಲಭ್ಯ ಅಭಿವೃದ್ಧಿ ಮತ್ತು ಐಟಿ ಬಿಟಿ ಖಾತೆಯನ್ನು ಮುಖ್ಯಮಂತ್ರಿ ವಹಿಸಿಕೊಂಡಿದ್ದರು. ಪರಿಷ್ಕೃತ ಖಾತೆ ಹಂಚಿಕೆ

ಎಂ.ಬಿ ಪಾಟೀಲ್, ಪ್ರಿಯಾಂಕ ಖರ್ಗೆಗೆ ಹೆಚ್ಚುವರಿ ಖಾತೆಗಳ ಹೊಣೆ Read More »

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ

ಸಮಗ್ರ ನ್ಯೂಸ್: ಚುನಾವಣೆಗಳಲ್ಲಿ ಗೆಲುವು ಸಾಧಿಸುವ ಉದ್ದೇಶದಿಂದ ಕಾಂಗ್ರೆಸ್‌ ಅನುಸರಿಸುತ್ತಿರುವ ‘ಗ್ಯಾರಂಟಿ ಸೂತ್ರ’ ದೇಶವನ್ನು ದಿವಾಳಿ ಮಾಡುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಟೀಕಿಸಿದ್ದಾರೆ. ಕೇಂದ್ರದ ಬಿಜೆಪಿ ಸರ್ಕಾರಕ್ಕೆ ಒಂಬತ್ತು ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯಸ್ಥಾನದಲ್ಲಿ ನಡೆದ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ‘ಇದೇ ತಿಂಗಳ ಆರಂಭದಲ್ಲಿ ನಡೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿರುವ ವಿಚಾರ ಉಲ್ಲೇಖಿಸಿದರು. ಕಾಂಗ್ರೆಸ್ ಹೊಸ ಗ್ಯಾರಂಟಿ ಸೂತ್ರವನ್ನು ಅನುಸರಿಸುತ್ತಿದೆ. ಆದರೆ, ಅವರು (ಕಾಂಗ್ರೆಸ್ಸಿಗರು) ಕೊಟ್ಟ ಭರವಸೆಗಳನ್ನು ಪೂರೈಸುತ್ತಿದ್ದಾರೆಯೇ ಎಂದು

ಕಾಂಗ್ರೆಸ್ ನ ಚುನಾವಣಾ ಗ್ಯಾರಂಟಿ ದೇಶವನ್ನು ದಿವಾಳಿ ಮಾಡುತ್ತೆ – ನಮೋ ವಾಗ್ದಾಳಿ Read More »