ಜೆಡಿಎಸ್ ಭದ್ರಕೋಟೆಯಲ್ಲಿ ಕಾಂಗ್ರೆಸ್ ನ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’| ಕೈ ಪಕ್ಷದ ಅತಿರಥ, ಮಹಾರಥರು ಹಾಸನದತ್ತ
ಸಮಗ್ರ ನ್ಯೂಸ್: ಹಲವು ಹಗ್ಗ-ಜಗ್ಗಾಟಗಳ ನಡುವೆಯೇ ಹಾಸನ ನಗರದ ಹೊರವಲಯದ ಕೃಷ್ಣ ನಗರದಲ್ಲಿ ಗುರುವಾರ ಕಾಂಗ್ರೆಸ್‌ನ ಬೃಹತ್ ‘ಜನಕಲ್ಯಾಣ ಸ್ವಾಭಿಮಾನಿ ಸಮಾವೇಶ’ ನಡೆಯಲಿದ್ದು, ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ. ಕೆ.ಶಿವಕುಮಾರ್, ಸಚಿವರು, ಕಾಂಗ್ರೆಸ್ ನಾಯಕರು ಪಾಲ್ಗೊಳ್ಳಲಿದ್ದಾರೆ. ಜೆಡಿಎಸ್‌ನ ಭದ್ರಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ನಾಯಕರು ಸಜ್ಜಾಗಿದ್ದು, ಸಮಾವೇಶಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಅವರು ಹಾಸನದಲ್ಲೇ ವಾಸ್ತವ್ಯ ಹೂಡಿ, ಖುದ್ದಾಗಿ ನಿಂತು ಸಮಾವೇಶದ ಸಿದ್ಧತೆಗಳ ಮೇಲ್ವಿಚಾರಣೆ ನಡೆಸಿದ್ದಾರೆ. ಅರಸೀಕೆರೆ ರಸ್ತೆಯ […]