ರಾಜಕೀಯ

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆ ದುರ್ಬಳಕೆ ತಡೆಯಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ರಾಜ್ಯದಲ್ಲಿ ಶಕ್ತಿ ಯೋಜನೆಯಡಿ ಪ್ರತಿದಿನ ಸರಾಸರಿ 45 ಲಕ್ಷ ಮಹಿಳೆಯರು ಪ್ರಯಾಣಿಸುತ್ತಿದ್ದಾರೆ. ನಿರ್ವಾಹಕರ ವಿರುದ್ಧ ಗೋಲ್ಮಾಲ್ ಆರೋಪ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಆದಾಯ ಸೋರಿಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಿಸಲು ಚಿಂತನೆ ನಡೆದಿದೆ. ಅಲ್ಲದೇ, ಕೆಲವು ಮಹಿಳೆಯರು ಉಚಿತ ಟಿಕೆಟ್ ಪಡೆಯುವ ಸಂಬಂಧಿಸಿದ ದಾಖಲೆ ತೋರಿಸದೆ ನಿರ್ವಾಹಕರೊಂದಿಗೆ ವಾಗ್ವಾದಕ್ಕೆ ಇಳಿಯುವುದು ನಡೆಯುತ್ತಿದ್ದು, […]

‘ಶಕ್ತಿ’ ಯೋಜನೆ ದುರ್ಬಳಕೆ ತಡೆಗೆ ಸ್ಮಾರ್ಟ್ ಕಾರ್ಡ್ ವಿತರಣೆಗೆ ಚಿಂತನೆ Read More »

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಮುಡಾ ಕೇಸ್ ನಲ್ಲಿ ಸಿಎಂ ಸಿದ್ದರಾಮಯ್ಯಗೆ ಇದಿಗ ಸಿಬಿಐ ತನಿಖೆ ಭೀತಿ ಎದುರಾಗಿತ್ತು. ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಒಂದು ಪ್ರಕರಣ ಸಿಬಿಐ ತನಿಖೆಗೆ ಕೋರಿ ರಿಟ್ ಅರ್ಜಿ ಸಲ್ಲಿಸಿದ್ದರು. ಇಂದು ವಿಚಾರಣೆ ಕೈಗೆತ್ತಿಕೊಂಡ ವೇಳೆಯಲ್ಲಿ ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ನವೆಂಬರ್.26ಕ್ಕೆ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿಕೆ ಮಾಡಿದೆ. ಇಂದು ಸ್ನೇಹಮಯಿ ಕೃಷ್ಣ ಅವರು ಲೋಕಾಯುಕ್ತ ತನಿಖೆಯಲ್ಲಿ ನಂಬಿಕೆಯಿಲ್ಲ. ಸಿಬಿಐ ತನಿಖೆಗೆ ಆದೇಶಿಸುವಂತೆ ಕೇರಿ ಸಲ್ಲಿಸಿದ್ದಂತ ರಿಟ್ ಅರ್ಜಿಯನ್ನು ಹೈ ಕೋರ್ಟ್ ನಲ್ಲಿ ನ್ಯಾ

‘ಸಿಎಂ ಸಿದ್ದರಾಮಯ್ಯ’ಗೆ ಬಿಗ್ ರಿಲೀಫ್: ನ.26ಕ್ಕೆ ‘CBI ತನಿಖೆ’ ಕೋರಿದ್ದ ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್ Read More »

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲು

ಸಮಗ್ರ ನ್ಯೂಸ್: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಎಸ್ಐಟಿ ಎಡಿಜಿಪಿ ಎಂ. ಚಂದ್ರಶೇಖರ್ ನೀಡಿರುವ ದೂರಿನ ಅನ್ವಯ ಬೆಂಗಳೂರಿನ ಸಂಜಯ ನಗರ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್. ದಾಖಲಾಗಿದೆ. ಬೆದರಿಕೆ ಹಾಗೂ ಸುಳ್ಳು ಆರೋಪಕ್ಕೆ ಸಂಬಂಧಿಸಿ ಎಸ್ಐಟಿ ಎಡಿಜಿಪಿ ಎಂ.ಚಂದ್ರಶೇಖರ್ ಅವರು ಕುಮಾರಸ್ವಾಮಿ, ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಮತ್ತು ಸುರೇಶ್ ಬಾಬು ವಿರುದ್ಧ ತಿಂಗಳ ಹಿಂದೆ ಸಂಜಯ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಈ ದೂರು ಆಧರಿಸಿ ಪೊಲೀಸರು ಎನ್ಸಿಆರ್ ದಾಖಲಿಸಿಕೊಂಡಿದ್ದರು. ಇದೀಗ ನ್ಯಾಯಾಲಯದ ಆದೇಶದಂತೆ

ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ವಿರುದ್ದ ಎಫ್ಐಆರ್ ದಾಖಲು Read More »

ಮುಡಾ ಹಗರಣ ತನಿಖೆ| ವಿಚಾರಣೆಗೆ ಹಾಜರಾಗಲು ಸಿಎಂಗೆ ನೋಟೀಸ್ ನೀಡಿದ ಲೋಕಾಯುಕ್ತ

ಸಮಗ್ರ ನ್ಯೂಸ್: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ-ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದಾರೆ. ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಎ1 ಆರೋಪಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಮೈಸೂರು ಲೋಕಾಯುಕ್ತ ಅಧಿಕಾರಿಗಳು ನೋಟಿಸ್ ಜಾರಿ ಮಾಡಿದ್ದು, ನವೆಂಬರ್ 6ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದ್ದಾರೆ. ನ.6ರಂದು ಮೈಸೂರು ಲೋಕಾಯುಕ್ತ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದೆ. ಈ ಮೂಲಕ 40 ವರ್ಷಗಳ ಸಿದ್ದರಾಮಯ್ಯ ಅವರ ರಾಜಕೀಯ ಜೀವನದಲ್ಲಿ ಮೊದಲ ಬಾರಿಗೆ ವಿಚಾರಣೆಗೆ ನೋಟಿಸ್ ನೀಡಲಾಗಿದೆ. ಮುಡಾ

ಮುಡಾ ಹಗರಣ ತನಿಖೆ| ವಿಚಾರಣೆಗೆ ಹಾಜರಾಗಲು ಸಿಎಂಗೆ ನೋಟೀಸ್ ನೀಡಿದ ಲೋಕಾಯುಕ್ತ Read More »

ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್‌

ಸಮಗ್ರ ನ್ಯೂಸ್: ಉಪಚುನಾವಣೆ ಪ್ರಚಾರಕ್ಕೆಂದು ಹಾವೇರಿ ಜಿಲ್ಲೆಗೆ ತೆರಳಿರುವ ಸಿಎಂ ಸಿದ್ದರಾಮಯ್ಯನವರು ನ.04 ರಂದು ಹುಲಗೂರು ಗ್ರಾಮದಲ್ಲಿ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡರು. ಇದೇ ವೇಳೆ, ಕಾರ್ಯಕ್ರಮದಲ್ಲಿ ಹಾಕಲಾಗಿದ್ದ ಪೆಂಡಾಲ್ ಕಿತ್ತುಹೋಯಿತು. ಸಿಎಂ ಉಪಸ್ಥಿತರಿದ್ದ ವೇದಿಕೆ ಮುಂಭಾಗದಲ್ಲಿ ಪೆಂಡಾಲ್‌ ಹಾರಿತು. ತಕ್ಷಣ ಸ್ಥಳದಲ್ಲಿದ್ದ ಸಿಬ್ಬಂದಿ ಪೆಂಡಾಲ್ ಅನ್ನು ಹಿಡಿದುಕೊಂಡು ನಿಂತು ಹೆಚ್ಚಿನ ಸಮಸ್ಯೆಯಾಗದಂತೆ ತಡೆದರು.

ಸಿಎಂ ಸಿದ್ದರಾಮಯ್ಯ ಕುಳಿತಿದ್ದಾಗ ಕಿತ್ತುಬಂದ ಪೆಂಡಾಲ್‌ Read More »

ಡಿಸಿಎಂ ಡಿ.ಕೆ.ಶಿ ಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದಿಂದ ಡಿಸಿಎಂ ಡಿ.ಕೆ ಶಿವಕುಮಾ‌ರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದನ್ನು ಹಿಂಪಡೆಯಲಾಗಿತ್ತು.ಈ ಮೂಲಕ ಡಿಸಿಎಂ ಡಿಕೆಶಿಗೆ ಮತ್ತೆ ರಿಲೀಫ್ ನೀಡಿದೆ.ಇಂದು ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್ ಹಾಗೂ ನ್ಯಾಯಮೂರ್ತಿ ಉಜ್ಜಲ್ ಭುಯನ್ ಅವರನ್ನೊಳಗೊಂಡ ದ್ವಿಸದಸ್ಯ ನ್ಯಾಯಪೀಠವು ವಿಚಾರಣೆ ಕೈಗೆತ್ತಿಕೊಂಡರು. ಈ ವೇಳೆ ಸಾಲಿಸಿಟರ್ ಜನರಲ್ ತುಷಾರ್ ಮೆಹ್ರಾ ಅವರು ಕರ್ನಾಟಕ ಹೈಕೋರ್ಟ್ ನ ತೀರ್ಪಿನ ವಿರುದ್ಧ ಸಿಬಿಐ ಮೇಲ್ಮನವಿ ಸಲ್ಲಿಸಿದೆ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ

ಡಿಸಿಎಂ ಡಿ.ಕೆ.ಶಿ ಗೆ ಬಿಗ್ ರಿಲೀಫ್: CBI ತನಿಖೆ ಹಿಂಪಡೆದ ಅರ್ಜಿ ವಿಚಾರಣೆ 4 ವಾರ ಮುಂದೂಡಿದ ಸುಪ್ರೀಂ ಕೋರ್ಟ್ Read More »

ಸುನ್ನತ್ ಕುರಿತು ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಫೋಟೋ ಎಡಿಟ್ ಮಾಡಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ‘ಮುಂದೊಂದು ದಿನ ಹಿಂದೂಗಳು ಸುನ್ನತ್ ಮಾಡಿಕೊಳ್ಳುವ ಸಂದರ್ಭ ಬರಬಹುದು’ ಎಂದು ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿವಾದಾತ್ಮಕ ಹೇಳಿಕೆ ವಿಚಾರ ಇದೀಗ ಮಂಗಳೂರಿನಲ್ಲಿ ಸದ್ದು ಮಾಡ್ತಿದೆ. ಬೆಳ್ತಂಗಡಿಯಲ್ಲಿ ನಡೆದ ‘ದೀಪಾವಳಿ ದೋಸೆ ಹಬ್ಬ’ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾ ಮಾತನಾಡಿ, ನಮ್ಮ ಕಡೆಯ ಉಸಿರು ಇರುವವರೆಗೂ ಹಿಂದುತ್ವವೇ ಬದುಕು ಎಂಬ ರೀತಿಯ ರಾಜಕಾರಣ ಮಾಡದಿದ್ದರೆ, ಮುಂದೊಂದು ದಿನ ನಾವು ಸುನ್ನತ್ ಮಾಡಿಕೊಳ್ಳಬೇಕಾದ ಸಂದರ್ಭ ಬರಬಹುದು. ಆದ್ದರಿಂದ ನಾವು ಹಿಂದುತ್ವವನ್ನು ಮೈಗೂಡಿಸಿಕೊಂಡು ಕೆಲಸ ಮಾಡಬೇಕು ಎಂದು

ಸುನ್ನತ್ ಕುರಿತು ವಿವಾದಾತ್ಮಕ ಹೇಳಿಕೆ| ಬೆಳ್ತಂಗಡಿ ಶಾಸಕ‌ ಹರೀಶ್ ಪೂಂಜಾ ಫೋಟೋ ಎಡಿಟ್ ಮಾಡಿದ ಕಿಡಿಗೇಡಿಗಳು Read More »

ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ

ಸಮಗ್ರ ನ್ಯೂಸ್: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಲ್ಲಿ ಘಟಾನುಘಟಿಗಳಿಂದ ಪ್ರಚಾರ ನಡೆಯಲಿದೆ. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರು ಉಪಚುನಾವಣೆ ಅಖಾಡಕ್ಕೆ ಇಳಿಯಲಿದ್ದಾರೆ.ಎನ್.ಡಿ.ಎ. ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಇಂದು ದೇವೇಗೌಡರು ಪ್ರಚಾರ ನಡೆಸಲಿದ್ದಾರೆ. ಬಿಜೆಪಿ ಸಂಸದ ಯದುವೀರ್ ಒಡೆಯರ್ ಹೊಂಗನೂರಿನಲ್ಲಿ ನಿಖಿಲ್ ಕುಮಾರಸ್ವಾಮಿ ಪರವಾಗಿ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೂ ಇಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಬಿರುಗಾಳಿ ಪ್ರಚಾರ ನಡೆಸಲಿದ್ದಾರೆ. ಒಟ್ಟು 13 ಕಡೆಗಳಲ್ಲಿ ಎಂದು ಹೆಚ್‌.ಡಿ.ಕೆ. ನಿಖಿಲ್ ಪರವಾಗಿ ಮತಯಾಚಿಸಲಿದ್ದಾರೆ. ಕಾಂಗ್ರೆಸ್‌ ಅಭ್ಯರ್ಥಿ ಸಿ.ಪಿ.

ಉಪ ಚುನಾವಣೆ ಅಖಾಡಕ್ಕೆ ಮಾಜಿ ಪ್ರಧಾನಿ:ಚನ್ನಪಟ್ಟಣದಲ್ಲಿ ಇಂದು ನಿಖಿಲ್ ಪರ ದೇವೇಗೌಡರಿಂದ ಭರ್ಜರಿ ಪ್ರಚಾರ Read More »

ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ `ಶಕ್ತಿ’ ಯೋಜನೆ ಸ್ಥಗಿತ : CM ಸಿದ್ದರಾಮಯ್ಯ ಸ್ಪಷ್ಟನೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಶಕ್ತಿ ಯೋಜನೆ ಪರಿಷ್ಕರಣೆ ಕುರಿತಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಶಕ್ತಿ ಯೋಜನೆ ಪರಿಷ್ಕರಣೆ ಸರ್ಕಾರದ ಹಂತದಲ್ಲಿಲ್ಲ ಎಂದು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಕ್ತಿ ಯೋಜನೆ ಪರಿಷ್ಕರಣೆ ಉದ್ದೇಶ ಪ್ರಸ್ತಾವನೆ ಸರ್ಕಾರದ ಮುಂದೆ ಇಲ್ಲ. ಅನೇಕ ಮಂದಿ ಹೆಣ್ಣು ಮಕ್ಕಳು ನಮಗೆ ಟಿಕೆಟ್ ತೆಗೆದುಕೊಳ್ಳುವ ಶಕ್ತಿಯಿದೆ. ಉಚಿತ ಪ್ರಯಾಣ ಬೇಡ ಎಂದು ಟ್ವಿಟ್ ಹಾಗೂ ಇ-ಮೇಲ್ ಮೂಲಕ ವಿಚಾರ ತಿಳಿಸುತ್ತಿದ್ದಾರೆ. ಈ ಬಗ್ಗೆ ನಾವು ಚರ್ಚೆ ಮಾಡುತ್ತೇವೆ. “ನಾವು ಹಣ ಕೊಡಲು ಮುಂದಾದರೂ,

ರಾಜ್ಯದಲ್ಲಿ ಮಹಿಳೆಯರ ಉಚಿತ ಬಸ್‌ ಪ್ರಯಾಣದ `ಶಕ್ತಿ’ ಯೋಜನೆ ಸ್ಥಗಿತ : CM ಸಿದ್ದರಾಮಯ್ಯ ಸ್ಪಷ್ಟನೆ Read More »

ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ

ಸಮಗ್ರ ನ್ಯೂಸ್: ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೆ ತುತ್ತಾಗಿದೆ. ಅವರ ಬೆಂಗಾವಲು ಕಾರುಗಳು ಸರಣಿಯಾಗಿ ಡಿಕ್ಕಿ ಹೊಡೆದುಕೊಂಡಿವೆ. ತಿರುವನಂತಪುರದಲ್ಲಿ ಈ ಘಟನೆ ನಡೆದಿದೆ. ಸಿಎಂ ಪಿಣರಾಯಿ ಅವರು ಎಂದಿನಂತೆ ತಮ್ಮ ಬೆಂಗಾವಲು ವಾಹನಗಳೊಂದಿಗೆ ಪ್ರಯಾಣಿಸುತ್ತಿದ್ದರು.ಈ ವೇಳೆ ಮುಖ್ಯರಸ್ತೆಯಲ್ಲೇ ಮುಂದಿದ್ದ ಕಾರು ತಕ್ಷಣ ಬ್ರೇಕ್ ಹಾಕಿದೆ. ಸ್ವಲ್ಪ ವೇಗವಾಗಿಯೇ ಬೆಂಗಾವಲು ವಾಹನಗಳು ಚಲಿಸುತ್ತಿದ್ದರಿಂದ ನಿಯಂತ್ರಣ ತಪ್ಪಿ, ಒಂದಕ್ಕೊಂದು ಡಿಕ್ಕಿ ಹೊಡೆದುಕೊಂಡಿವೆ ಎನ್ನಲಾಗಿದೆ. ಈ ವೇಳೆ ಹಿಂದೆಯೇ ವೇಗವಾಗಿ ಬರುತ್ತಿದ್ದ ಸಿಎಂ ವಾಹನ ಸೇರಿದಂತೆ ಕೊನೆಯ

ಕೇರಳ ಸಿಎಂ ಪಿಣರಾಯಿ ವಿಜಯನ್ ಕಾರು ಸರಣಿ ಅಪಘಾತ Read More »