ಸಚಿವ ಎಸ್.ಅಂಗಾರ ಸೇರಿ 25 ಮಂದಿ ಹಾಲಿ ಶಾಸಕರಿಗೆ ಟಿಕೆಟ್ ಡೌಟ್| ಬಿಜೆಪಿ ಕೋರ್ ಕಮಿಟಿ ಸಭೆಯಲ್ಲಿ ಮಹತ್ವದ ನಿರ್ಧಾರ
ಸಮಗ್ರ ನ್ಯೂಸ್: ಆಡಳಿತಾ ವಿರೋಧಿ ಅಲೆ ಹಾಗೂ ಅನ್ಯ ಕಾರಣಗಳಿಗಾಗಿ ಆಡಳಿತಾರೂಢ ಬಿಜೆಪಿಯ ಎರಡು ಡಜನ್‍ಗೂ ಅಧಿಕ ಶಾಸಕರಿಗೆ ಟಿಕೆಟ್ ಸಿಗುವುದು ಅನುಮಾನ ಎನ್ನಲಾಗುತ್ತಿದೆ. ಈ ಬಗ್ಗೆ ಕೋರ್ ಕಮಿಟಿ ಸಭೆಯಲ್ಲಿ ಸುದೀರ್ಘ ಚರ್ಚೆ ನಡೆದಿದ್ದು, ಹಾಲಿ ಶಾಸಕರಿಗೆ ಕೋಕ್ ನೀಡಿ ಹೊಸ ಮುಖಗಳಿಗೆ ಮನ್ನಣೆ ನೀಡಬೇಕೆಂಬ ಅಭಿಪ್ರಾಯ ವ್ಯಕ್ತವಾಗಿದೆ. ಆಡಳಿತ ವಿರೋಧಿ ಹಾಗೂ ಕೆಲವು ಗಂಭೀರ ಸ್ವರೂಪದ ಆರೋಪಗಳನ್ನು ಎದುರಿಸುತ್ತಿರುವ ಹಿನ್ನಲೆಯಲ್ಲಿ ಹಾಲಿ ಶಾಸಕರಿಗೆ ಟಿಕೆಟ್ ನೀಡದೆ ಹೊಸಬರಿಗೆ ವಿಶೇಷವಾಗಿ ಪಕ್ಷ ನಿಷ್ಠರಿಗೆ ಟಿಕೆಟ್ ಘೋಷಣೆ […]










