ಪಿಯುಸಿ ಪರೀಕ್ಷೆ ಹಿನ್ನಲೆ| ಮಾ.9ಕ್ಕೆ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಕರೆನೀಡಿದ್ದ ಕರ್ನಾಟಕ ಬಂದ್ ವಾಪಾಸ್
ಸಮಗ್ರ ನ್ಯೂಸ್: ಸರ್ಕಾರದ ಭ್ರಷ್ಟಾಚಾರ ವಿರೋಧಿಸಿ ಕಾಂಗ್ರೆಸ್ ಗುರುವಾರ ಬಂದ್ ಗೆ ಕರೆ ಕೊಟ್ಟಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ಸೇರಿದಂತೆ ರಾಜ್ಯಾದ್ಯಂತ ಶಾಲಾ- ಕಾಲೇಜುಗಳ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ನ ಹಿಂಪಡೆಯಲು ನಿರ್ಧರಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ಹಾಗೂ ಪೋಷಕರ ಒತ್ತಡದ ಮೇರೆಗೆ ನಾಳೆ ನಡೆಸಬೇಕಿದ್ದ ಸಾಂಕೇತಿಕ ಕರ್ನಾಟಕ ಬಂದ್ ಅನ್ನು ವಾಪಸ್ ತೆಗೆದುಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. ಭ್ರಷ್ಟಾಚಾರ ವಿರೋಧಿಸಿ […]










