ರಾಜಕೀಯ

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ

ಸಮಗ್ರ ನ್ಯೂಸ್: ಗುಜರಾತ್ ನಲ್ಲಿ ಈ ಬಾರಿಯೂ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಚುನಾವಣಾ ಉತ್ತರ ಸಮೀಕ್ಷೆಯಲ್ಲಿ ಗೊತ್ತಾಗಿದೆ. ಟಿವಿ9 ಭಾರತ್ ವರ್ಷ ನಡೆಸಿದ ಸಮೀಕ್ಷೆಯಲ್ಲಿ ಗುಜರಾತ್ ನ 182 ಸ್ಥಾನಗಳಲ್ಲಿ ಬಿಜೆಪಿ 125 ರಿಂದ 130 ಸ್ಥಾನಗಳಲ್ಲಿ ಜಯಗಳಿಸಲಿದೆ. ಕಾಂಗ್ರೆಸ್ 40 ರಿಂದ 50, ಆಮ್ ಆದ್ಮಿ ಪಕ್ಷ 3 ರಿಂದ 5 ಹಾಗೂ ಇತರರು ಮೂರರಿಂದ ಏಳು ಸ್ಥಾನ ಗಳಿಸಲಿದ್ದಾರೆ. ಟಿವಿ9 ಭಾರತ್ ವರ್ಷ ಸಮೀಕ್ಷೆ ಪ್ರಕಾರ ಹಿಮಾಚಲ ಪ್ರದೇಶದಲ್ಲಿ ಅತಂತ್ರ ಫಲಿತಾಂಶ ಸೃಷ್ಟಿಯಾಗಬಹುದು. […]

ಚುನಾವಣೋತ್ತರ ಸಮೀಕ್ಷೆ| ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಮತ್ತೆ ಬಿಜೆಪಿಗೇ ಬಹುಮತ Read More »

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ರೌಡಿಗೆ ಶಾಲು ಹೊದೆಸಿ ಪಕ್ಷಕ್ಕೆ ಸ್ವಾಗತಿಸಿದ ಆರೋಪಕ್ಕೆ ಗುರಿಯಾದ ಸಂಸದ ಪ್ರತಾಪ್ ಸಿಂಹ ಈ ವಿವಾದಕ್ಕೆ ಸ್ಪಷ್ಟನೆ ಕೊಟ್ಟಿದ್ದಾರೆ. ಮೈಸೂರು ಬಿಜೆಪಿ ಕಚೇರಿಯಲ್ಲಿ ಹೋಗಿದ್ದಾಗ ಶಾಲು ಹಾಕಿದೆ, ಅಪ್ಪಣ್ಣ ಅವರು ಎಚ್.ಡಿ‌ಕೋಟೆ ಭಾಗದಲ್ಲಿ ಕೆಲವರನ್ನ ಪಕ್ಷಕ್ಕೆ ಸೇರಿಸಿಕೊಂಡರು, ಆ ಕಾರ್ಯಕ್ರಮದಲ್ಲಿ ಶಾಲು ಹಾಕಿ ಸ್ವಾಗತ ಮಾಡಿದೆ, ಬೆತ್ತನೆಗೆರೆ ಶಂಕರ್ ನ ಬಗ್ಗೆ ನನಗೆ ಗೊತ್ತಿಲ್ಲ.ಪಕ್ಷ ಸೇರ್ಪಡೆಗೆ ಸಾವಿರಾರು ಜನರು ಬರುತ್ತಾರೆ. ಅವರ ಕುಂಡಲಿ, ಜಾತಕ ತೆಗೆದುಕೊಂಡು ನಾನು ಪರೀಕ್ಷೆ ಮಾಡಲು ಸಾಧ್ಯವಿಲ್ಲ.ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ

ರೌಡಿಗಳನ್ನ ಇಟ್ಟುಕೊಂಡು ರಾಜಕಾರಣ ಮಾಡುವ ಕಾಲ ಹೋಗಿದೆ: ಪ್ರತಾಪ್ ಸಿಂಹ Read More »

ರೌಡಿಶೀಟರ್ ಬೆತ್ತನಗೆರೆ ಶಂಕರ್ ನ ಬಿಜೆಪಿಗೆ ಬರಮಾಡಿಕೊಂಡ ಸಂಸದ ಪ್ರತಾಪ್ ಸಿಂಹ

ಸಮಗ್ರ ನ್ಯೂಸ್: ನಲ್ಲೂರು ಶಂಕರೇಗೌಡ ಎಂದು ಹೆಸರು ಬದಲಿಸಿಕೊಂಡ ಬೆತ್ತನಗೆರೆ ಶಂಕರ ಸಂಸದ ಪ್ರತಾಪ್ ಸಿಂಹ ಮತ್ತು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಸಮ್ಮುಖದಲ್ಲಿ ಬಿಜೆಪಿ ಸೇರಿದ್ದಾನೆ. ಸಂಸದ ಪ್ರತಾಪ್ ಸಿಂಹ ಅವರೇ ಬಿಜೆಪಿ ಧ್ವಜ ನೀಡಿ ಪಕ್ಷಕ್ಕೆ ಬರಮಾಡಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಗ್ರಾಮ ವಾಸ್ತವಕ್ಕೆ ಬಂದಿದ್ದ ಕಂದಾಯ ಸಚಿವ ಆರ್​.ಅಶೋಕ್ ಅವರನ್ನು ಬೆತ್ತನಗೆರೆ ಶಂಕರ ಬರಮಾಡಿಕೊಂಡಿದ್ದ. ಆರ್.ಅಶೋಕ್ ಗೃಹ ಸಚಿವರಾಗಿದ್ದ ವೇಳೆ ಬೆತ್ತನಗೆರೆ ಶಂಕರ ಸೋದರ ಸೀನನ ಎನ್​ಕೌಂಟರ್ ಆಗಿತ್ತು. ಆರ್.ಅಶೋಕ್ ಅವರಿಗೆ ತಮ್ಮನ್ನು

ರೌಡಿಶೀಟರ್ ಬೆತ್ತನಗೆರೆ ಶಂಕರ್ ನ ಬಿಜೆಪಿಗೆ ಬರಮಾಡಿಕೊಂಡ ಸಂಸದ ಪ್ರತಾಪ್ ಸಿಂಹ Read More »

ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು

ಸಮಗ್ರ‌ ನ್ಯೂಸ್: ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಬೆಂಗಳೂರಿನ ಹೆಚ್ ಎ ಎಲ್ ರಸ್ತೆಯಲ್ಲಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿಪಕ್ಷ ನಾಯಕ ಸಿದ್ದರಾಮಯ್ಯ ಸಣ್ಣ ಶಸ್ತ್ರಚಿಕಿತ್ಸೆಗೆ ಒಳಗಾಗುತ್ತಿದ್ದು, ಇಂದು ಸಂಜೆಯೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ವೈದ್ಯರು ನಾಲ್ಕು ದಿನಗಳ ಕಾಲ ವಿಶ್ರಾಂತಿಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.

ಮಾಜಿ ಸಿಎಂ, ವಿಪಕ್ಷನಾಯಕ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು Read More »

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ

ಸಮಗ್ರ ನ್ಯೂಸ್: ಯಾವುದೇ ರೌಡಿ ಶೀಟರ್ ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಕೊಡುವುದಿಲ್ಲ, ನಾವು ಯಾವುದೇ ರೌಡಿಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷದ ಟ್ವೀಟ್ ಗೆ ಸಂಬಂಧಿಸಿದಂತೆ ರೌಡಿ ಶೀಟರ್ ಗಳ ಕುರಿತಾದ ಪತ್ರಕರ್ತರ ಪ್ರಶ್ನೆಗೆ ನಾನು ಉತ್ತರಿಸಿದ್ದೇನೆ. ಇದನ್ನು ಇಷ್ಟಕ್ಕೆ ಸೀಮಿತವಾಗಿ ನೋಡಬೇಕು. ನಮ್ಮ ಪಕ್ಷವು ಯಾವುದೇ ರೌಡಿ ಶೀಟರ್ ಗಳಿಗೆ ಮನ್ನಣೆ ಕೊಡುವುದಿಲ್ಲ ಹಾಗೂ ಅವರನ್ನು ಸಹಿಸುವುದಿಲ್ಲ, ನಮ್ಮ ಪಕ್ಷದ ಅಧ್ಯಕ್ಷರು ಈಗಾಗಲೇ ತಿಳಿಸಿರುವಂತೆ ಸೈಲೆಂಟ್

‘ ರೌಡಿ ಶೀಟರ್‌ಗಳಿಗೆ ನಮ್ಮ ಪಕ್ಷದಲ್ಲಿ ಮನ್ನಣೆ ಇಲ್ಲ’ – ಸಿಎಂ Read More »

ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಅಭ್ಯರ್ಥಿ!?

ಮಂಗಳೂರು: ಈ ಬಾರಿ ಕೆಲವು ಕ್ಷೇತ್ರಗಳಲ್ಲಿ ಬಿಜೆಪಿಯು ಅಭ್ಯರ್ಥಿಗಳನ್ನು ಬದಲಿಸಲಿದ್ದು, ಆ ಪೈಕಿ ಕಾಪು ಕ್ಷೇತ್ರ ಕೂಡ ಒಂದು ಎಂದು ತಿಳಿದು ಬಂದಿದೆ. ಕಾಪು ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಹಲವಾರು ಪ್ರಮುಖ ಮುಖಂಡರು ಪ್ರಯತ್ನಿಸುತ್ತಿದ್ದು, ಆ ಪೈಕಿ ಹಿರಿಯ ನಾಯಕ ಸುರೇಶ್ ಶೆಟ್ಟಿ ಗುರ್ಮೆ ಹೆಸರು ಗಟ್ಟಿಯಾಗಿ ಕೇಳಿ ಬರುತ್ತಿದೆ. ಇವರ ಹೆಸರು ಕಳೆದ ಬಾರಿಯೇ ಕೇಳಿ ಬಂದಿದ್ದು, ಕೊನೆ ಕ್ಷಣಕ್ಕೆ ಬದಲಾದ ಬೆಳವಣಿಗೆಯಲ್ಲಿ ಹಿಂದಿನ ಶಾಸಕ ಲಾಲಾಜಿ ಆರ್. ಮೆಂಡನ್ ಅವರಿಗೇ ಟಿಕೆಟ್ ನೀಡಲಾಗಿತ್ತು. ಬೆಂಗಳೂರಿನಲ್ಲಿ

ಕಾಪು ಕ್ಷೇತ್ರಕ್ಕೆ ಗುರ್ಮೆ ಸುರೇಶ್ ಶೆಟ್ಟಿ ಬಿಜೆಪಿ ಅಭ್ಯರ್ಥಿ!? Read More »

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ

ಸಮಗ್ರ ನ್ಯೂಸ್: ಚಿಕ್ಕಮಗಳೂರಿನ ಕೊಪ್ಪದಲ್ಲಿ ನಡೆಯುತ್ತಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಸಿ.ಟಿ.ರವಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂ ಕಾರ್ಯಕರ್ತರ ಹತ್ಯೆಯಾಗುತ್ತೆ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರನ್ನು ಸಿದ್ರಾಮುಲ್ಲಾಖಾನ್ ಎಂದು ಕರೆದಿರುವ ಸಿ.ಟಿ.ರವಿ, ಸಿದ್ರಾಮುಲ್ಲಾಖಾನ್ ಮತ್ತೆ ಅಧಿಕಾರಕ್ಕೆ ಬಂದರೆ ಹಿಂದೂಗಳ ಹತ್ಯೆಯಾಗುತ್ತೆ. ಅದೇ ಬಿಜೆಪಿ ಅಧಿಕಾರಕ್ಕೆ ಬಂದರೆ ಹಿಂದೂ ಅರ್ಚಕರಿಂದ ವಿಜೃಂಭಣೆಯಿಂದ ದತ್ತ ಜಯಂತಿ ನಡೆಯುತ್ತದೆ ಎಂದು ಹೇಳುವ ಮೂಲಕ ವಿವಾದದ ಕಿಡಿ ಹೊತ್ತಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ

ವಿವಾದಕ್ಕೆ ಕಿಡಿ ಹೊತ್ತಿಸಿದ ಸಿ.ಟಿ ರವಿ| ಸಿದ್ದರಾಮಯ್ಯ ವಿರುದ್ದ ಆಕ್ರೋಶಕಾರಿ ಹೇಳಿಕೆ Read More »

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ

ಸಮಗ್ರ ನ್ಯೂಸ್: ಮಾಜಿ ಸ್ಪೀಕರ್ ಶ್ರೀ ರಮೇಶ್ ಕುಮಾರ್ ಬಗ್ಗೆ ನಾನು ಬಳಸಿದೆ ಎನ್ನಲಾದ ಪದ ಸ್ವತಃ ನನಗೂ ನೋವುಂಟು ಮಾಡಿದೆ. ಆ ಪದ ಬಳಕೆ ನನ್ನ ಜಾಯಮಾನವಲ್ಲ, ನನ್ನ ವ್ಯಕ್ತಿತ್ವವೂ ಅಲ್ಲ. ಈ ಮಾತಿನಿಂದ ರಮೇಶ್ ಕುಮಾರ್ ಅವರಿಗಾಗಲಿ, ಇನ್ನಾರಿಗೆ ಆಗಲಿ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ. ಆ ಮಾತನ್ನು ಹಿಂಪಡೆಯುತ್ತೇನೆಂದು ಜೆಡಿಎಸ್ ನಾಯಕ ಹೆಚ್.ಡಿ. ಕುಮಾರಸ್ವಾಮಿಯವರು ಹೇಳಿದ್ದಾರೆ. ಕುಮಾರಸ್ವಾಮಿಯವರು ಆಕ್ರೋಶಗೊಂಡು ಶ್ರೀನಿವಾಸಪುರದ ಹಾಲಿ ಶಾಸಕ ಹಾಗೂ ಮಾಜಿ ಸ್ಪೀಕರ್​ ರಮೇಶ್​ ಕುಮಾರ್ ಅವರ ಬಗ್ಗೆ ಮಾತನಾಡುತ್ತಾ

ನಾನು ಬಳಸಿದೆ ಎನ್ನಲಾದ ಪದದಿಂದ ನನಗೇ ನೋವಾಗಿದೆ – ಎಚ್.ಡಿ ಕುಮಾರಸ್ವಾಮಿ Read More »

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ| ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ ಎಂದು ಮೂಡಿಗೆರೆ ತಾಲೂಕಿನ ಬಿಜೆಪಿ ಟಿಕೆಟ್ ಆಕಾಂಕ್ಷಿ ದೀಪಕ್ ದೊಡ್ಡಯ್ಯ ಸ್ಪಷ್ಟಪಡಿಸಿದರು. ನ.23 ರಂದು ನಗರದ ಬಸವನಹಳ್ಳಿ ಮುಖ್ಯರಸ್ತೆಯಲ್ಲಿರುವ ಓಂಕಾರೇಶ್ವರ ದೇವಾಲಯದಲ್ಲಿ ಮೂಡಿಗೆರೆ ತಾಲೂಕಿನ ಹುಲ್ಲೇಮನೆ-ಕುಂದೂರು ಗ್ರಾಮದಲ್ಲಿ ನಡೆದ ಶಾಸಕ ಕುಮಾರಸ್ವಾಮಿ ಮೇಲಿನ ಹಲ್ಲೆಗೂ ನನಗೂ ಯಾವುದೇ ಸಂಬಂಧವಿಲ್ಲ. ಇದರ ಸತ್ಯಾಸತ್ಯತೆಯನ್ನೂ ನೀವೇ ಪರಿಶೀಲನೆ ಮಾಡಿ, ತಪ್ಪಿತಸ್ಥರಿಗೆ ನ್ಯಾಯ, ನೀತಿ, ಧರ್ಮದ ಆಧಾರದಲ್ಲಿ ಶಿಕ್ಷೆ ಕೊಡು ಎಂದು

ಚಿಕ್ಕಮಗಳೂರು: ಶಾಸಕರ ಮೇಲೆ ಹಲ್ಲೆ ಪ್ರಕರಣ| ದೇವಸ್ಥಾನದಲ್ಲಿ ಪ್ರಮಾಣ ಮಾಡಿದ ಬಿಜೆಪಿ ಟಿಕೆಟ್ ಆಕಾಂಕ್ಷಿ Read More »

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ

ಸಮಗ್ರ ನ್ಯೂಸ್: ಗೃಹ ಸಚಿವ ಅರಗ ಜ್ಞಾನೇಂದ್ರ ವಿರುದ್ದ ಬಿಜೆಪಿ ಶಾಸಕರೇ ಅಸಮಾಧಾನ ಹೊರಹಾಕಿದ್ದಾರೆ. ಈ ಮೂಲಕ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧವೇ ಮೂಡಿಗೆರೆಯ ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಅವರು, ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ವಿರುದ್ದ ಆಡಳಿತ ಪಕ್ಷದ ಮೂಡಿಗೆರೆ ಶಾಸಕ ಎಂ.ಪಿ‌.ಕುಮಾರಸ್ವಾಮಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು ನಾನೊಬ್ಬ ದಲಿತ ಶಾಸಕ ಎಂಬ ಕಾರಣದಿಂದ ಮೊನ್ನೆ ನನ್ನ ಕ್ಷೇತ್ರದಲ್ಲಿ ನಡೆದ ಘಟನೆ ಸಂಬಂಧ ಸೌಜನ್ಯಕ್ಕೂ ಮಾತನಾಡಿಸಿ

ಗೃಹಸಚಿವರನ್ನು ಹಿಗ್ಗಾಮುಗ್ಗ ತರಾಟೆಗೆತ್ತಿಕೊಂಡ ಶಾಸಕ ಎಂ.ಪಿ ಕುಮಾರಸ್ವಾಮಿ| ನನ್ನನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆಂದು ಆರೋಪ Read More »