ರಾಜಕೀಯ

ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ

ಸಮಗ್ರ ನ್ಯೂಸ್: ಇತ್ತೀಚಿಗೆ ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿದ್ದ ಗುರುಲಿಂಗಸ್ವಾಮಿ ಹೊಳಿಮಠ ಅವರು ಅಕಾಲಿಕವಾಗಿ ನಿಧನದ ಕಾರಣದಿಂದ ತೆರವಾಗಿದ್ದ ಸ್ಥಾನಕ್ಕೆ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ಅವರನ್ನು ನೇಮಕ ಮಾಡಲಾಗಿದೆ. ಜೊತೆಗೆ ಸಿಎಂ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಲಹೆಗಾರರನ್ನಾಗಿ ಮೋಹನ್ ಕೃಷ್ಣ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ತಕ್ಷಣದಿಂದ […]

ಸಿಎಂ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಶಂಕರ್ ಪಾಗೋಜಿ ನೇಮಕ Read More »

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ

ಬೆಂಗಳೂರು: ಭಾರತ ಜೋಡೋ ಯಾತ್ರೆ, ವಿಧಾನಸಭಾ ಕಲಾಪದ ನಡುವೆ ಜಾರಿ ನಿರ್ದೇಶನಾಲಯ ಸಮನ್ಸ್ ನೀಡಿರುವುದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. “ಭಾರತ ಜೋಡೋ ಯಾತ್ರೆಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್‌ ನೀಡಿದೆ” ಎಂದಿದ್ದಾರೆ. “ನಾನು ತನಿಖೆಗೆ ಸಹಕರಿಸಲು ಸಿದ್ಧ. ಆದರೆ, ಈ

ವಿಧಾನಸಭಾ ಕಲಾಪದ ನಡುವೆ ಸಮನ್ಸ್: ಡಿಕೆ ಶಿವಕುಮಾರ್ ಬೇಸರ Read More »

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿರೋದಾಗಿ ತಿಳಿದು ಬಂದಿದೆ. ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಅನಾರೋಗ್ಯ ಹಿನ್ನೆಲೆಯಲ್ಲಿ ವೈದ್ಯರು ಕೆಲ ದಿನಗಳ ವಿಶ್ರಾಂತಿಗೆ ಸೂಚಿಸಿದ್ದಾರೆ. ಈ ಕಾರಣಕ್ಕಾಗಿ ಸದನದ ಕಲಾಪದಲ್ಲಿ ಭಾಗವಹಿಸಲು ಸಾಧ್ಯವಾಗದೇ ಇರುವುದಕ್ಕೆ ವಿಷಾದವಿದೆ. ಆದಷ್ಟು ಶೀಘ್ರದಲ್ಲೇ ಕರ್ತವ್ಯಕ್ಕೆ ಹಾಜರಾಗುತ್ತೇನೆ. ನಿಮ್ಮ ಹಾರೈಕೆ ಇರಲಿ ಎಂದು ಹೇಳಿದ್ದಾರೆ. ಇಂದು ವಿಧಾನಸಭೆ ಪ್ರಶ್ನೋತ್ತರ ಕಲಾಪದ ವೇಳೆಯಲ್ಲಿ ಸದಸ್ಯರ ಗೈರು ಹಾಜರಿಗೆ ಸ್ಪೀಕರ್ ವಿಶ್ವೇಶ್ವರ

ಸಚಿವ ಡಾ. ಸುಧಾಕರ್ ಗೆ ಅನಾರೋಗ್ಯ; ಆಸ್ಪತ್ರೆಗೆ ದಾಖಲು Read More »

ವಿಧಾನ ಮಂಡಲ ಅಧಿವೇಶನ ನೇರಪ್ರಸಾರ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆಯ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು ೫ನೇ ದಿನದ ಅಧಿವೇಶನ ನೇರಪ್ರಸಾರ ವೀಕ್ಷಿಸಲು ಕೆಳಗಿನ ಲಿಂಕ್ ಕ್ಲಿಕ್ ಮಾಡಿ; ವಿಡಿಯೋ ಕೃಪೆ: ಡಿಡಿ ಚಂದನ

ವಿಧಾನ ಮಂಡಲ ಅಧಿವೇಶನ ನೇರಪ್ರಸಾರ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಮಂಡಲದ ಅಧಿವೇಶನ ಸೋಮವಾರ ಆರಂಭಗೊಳ್ಳಲಿದ್ದು, ಹತ್ತು ದಿನಗಳ ಕಲಾಪದಲ್ಲಿ (ಸೆ.12 ರಿಂದ ಸೆ.23) ಬಿಜೆಪಿ ಸರ್ಕಾರದ ಹೆಡೆಮುರಿ ಕಟ್ಟಲು ಕಾಂಗ್ರೆಸ್‌ ಮತ್ತು ಜೆಡಿಎಸ್‌ ಹಲವು ‘ಅಸ್ತ್ರ’ಗಳನ್ನು ಸಿದ್ಧ ಮಾಡಿಕೊಂಡಿವೆ. ಗುತ್ತಿಗೆ ಕಾಮಗಾರಿಯಲ್ಲಿ ಶೇ 40 ಲಂಚದ ಆರೋಪ, ಇತ್ತೀಚಿನ ಮಳೆ ಮತ್ತು ಪ್ರವಾಹದಿಂದ ಜನರಿಗಾದ ಸಂಕಷ್ಟ, ಪಠ್ಯ ಪುಸ್ತಕ ಪರಿಷ್ಕರಣೆಯಲ್ಲಿ ಅವಾಂತರ ಸೇರಿದಂತೆ ಹಲವು ವಿಷಯಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಉಭಯ ಪಕ್ಷಗಳು ಸಜ್ಜಾಗಿವೆ. ಇದಕ್ಕೆ ತಿರುಗೇಟು ನೀಡಲು ಬಿಜೆಪಿಯೂ ತಯಾರಿ

ಇಂದಿನಿಂದ ರಾಜ್ಯ ವಿಧಾನಮಂಡಲ ಅಧಿವೇಶನ| ಸರ್ಕಾರದ ವಿರುದ್ದ ಮುಗಿಬೀಳಲು ಪ್ರತಿಪಕ್ಷಗಳು ಸಜ್ಜು Read More »

ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್

ಸಮಗ್ರ ನ್ಯೂಸ್: ಬಿಜೆಪಿಗರು 40% ಕಮಿಷನ್‌ ಲೂಟಿಯ ಹಣದಲ್ಲಿ ʼಕಮಿಷನ್‌ ಸಮಾವೇಶʼ ನಡೆಸುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್‌ ಕಮಲಪಾಳಯದ ವಿರುದ್ಧ ಗುಡುಗಿದೆ. ಈ ಕುರಿತು ಸರಣಿ ಟ್ಟೀಟ್‌ ಮಾಡಿರುವ ಕೆಪಿಸಿಸಿ, ಬಿಜೆಪಿ ನಡೆಸುತ್ತಿರುವುದು ಜನಸ್ಪಂದನ ಸಮಾವೇಶವಲ್ಲ “ಕಮಿಷನ್ ಸಮಾವೇಶ” 40% ಕಮಿಷನ್ ಲೂಟಿಯ ಪಾಪದ ಹಣದಲ್ಲಿ ನಡೆಯುತ್ತಿರುವ ಸಮಾವೇಶದಲ್ಲಿ ಯಾವ ಸಾಧನೆ ಹೇಳಿಕೊಳ್ಳುವಿರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ?. ನಿಮ್ಮದೇ ಪಕ್ಷದ ಕಾರ್ಯಕರ್ತ ಮತ್ತು ಗುತ್ತಿಗೆದಾರ ಸಂತೋಷ್ ಪಾಟೀಲ್‌ರನ್ನು ಕಮಿಷನ್ ಕಿರುಕುಳದಲ್ಲಿ ಕೊಂದಿದ್ದನ್ನು ಹೇಳಿಕೊಳ್ಳುವಿರಾ? ಎಂದು ಪ್ರಶ್ನಿಸಿದೆ.

ಇದು 40% ಕಮಿಷನ್ ಸಮಾವೇಶ – ರಾಜ್ಯ ಸರ್ಕಾರಕ್ಕೆ ಕುಟುಕಿದ ಕಾಂಗ್ರೆಸ್ Read More »

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ

ಸಮಗ್ರ ನ್ಯೂಸ್: ಬಿಜೆಪಿ ಜನಸ್ಪಂದನ ಸಮಾವೇಶದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ, ಪ್ರವೀಣ್​ ನೆಟ್ಟಾರು ಕುಟುಂಬಕ್ಕೆ ಸಿಎಂ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದ.ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಬೆಳ್ಳಾರೆಯಲ್ಲಿ ಹತ್ಯೆಗೀಡಾಗಿದ್ದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಕೆಲಸ ನೀಡುವುದಾಗಿ ತಿಳಿಸಿದ್ದಾರೆ ರಾಜ್ಯ ಬಿಜೆಪಿ ಸರ್ಕಾರದ ಮೂರು ವರ್ಷಗಳ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ಶಕ್ತಿ ಪ್ರದಶರ್ನಕ್ಕೆ ಮುಂದಾಗಿದೆ.ಈ ಹಿನ್ನೆಲೆಯಲ್ಲಿ ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ಅದ್ದೂರಿ ಬಿಜೆಪಿ ಜನಸ್ಪಂದನ ಸಮಾವೇಶ ಆಯೋಜನೆ ಮಾಡಿದೆ. ಈ

ಹತ್ಯೆಯಾದ ಪ್ರವೀಣ್ ನೆಟ್ಟಾರು ಕುಟುಂಬದ ಸದಸ್ಯರೊಬ್ಬರಿಗೆ ಸಿಎಂ ಕಚೇರಿಯಲ್ಲಿ ಉದ್ಯೋಗ – ಸಿ ಎಂ ಬೊಮ್ಮಾಯಿ ಘೋಷಣೆ Read More »

ಇಂದು ರಾಜ್ಯ ಸರ್ಕಾರದ ಜನಸ್ಪಂದನಾ ಸಮಾವೇಶ| ಸಾಧನೆಗಳ ಜೊತೆಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ರಾಜ್ಯ ಬಿಜೆಪಿ ಸರ್ಕಾರದ ಸರ್ಕಾರದ ಮೂರು ವರ್ಷಗಳ ಸಾಧನೆಯ ಅನಾವರಣ’ ಸಮಾವೇಶ ಜನಸ್ಪಂದನಾ ಸಮಾವೇಶವು ಇಂದು(ಸೆ.10) ಮಧ್ಯಾಹ್ನ 12 ಗಂಟೆಗೆ ದೊಡ್ಡಬಳ್ಳಾಪುರದಲ್ಲಿ ನಡೆಯಲಿದ್ದು, ಮೂರು ಲಕ್ಷಕ್ಕೂ ಹೆಚ್ಚು ಮಂದಿ ಪಾಲ್ಗೊಳ್ಳುವ ನಿರೀಕ್ಷೆ ಇದೆ. ಜನಸ್ಪಂದನ ಸಾರ್ಥಕ ಸೇವೆ ಸಬಲೀಕರಣ ಸಮಾವೇಶ ಇಂದು ಮಧ್ಯಾಹ್ನ 12 ಗಂಟೆಗೆ ಆರಂಭವಾಗಲಿದೆ. ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಅರುಣಾ, ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ಸಚಿವ ಸುಧಾಕರ್, ಎಂ.ಟಿ.ಬಿ

ಇಂದು ರಾಜ್ಯ ಸರ್ಕಾರದ ಜನಸ್ಪಂದನಾ ಸಮಾವೇಶ| ಸಾಧನೆಗಳ ಜೊತೆಗೆ ಬಿಜೆಪಿ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ Read More »

ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ| ದಿ.ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್ ಸಿ‌ ಹುದ್ದೆಯ ಕೃಪೆ

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಾಧ್ಯಮ ಸಂಯೋಜಕರಾಗಿ ನೇಮಕಗೊಂಡಿದ್ದ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿಯವರು ಅವರು ಕೆಲ ದಿನಗಳ ಹಿಂದೆ ದಿಢೀರ್ ಹೃದಯಾಘಾತಗೊಂಡು ನಿಧನರಾಗಿದ್ದರು. ಇಂತಹ ಅವರ ಅಕಾಲಿಕ ನಿಧನದಿಂದಾಗಿ ಕಂಗಾಲಾಗಿದ್ದ ಕುಟುಂಬಕ್ಕೆ ಮಾನವೀಯತೆ ನೆಲೆಯಲ್ಲಿ, ಮೃತ ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್-ಸಿ ಹುದ್ದೆಯನ್ನು ನೀಡಿ ಆದೇಶಿಸಿದ್ದಾರೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಮುಖ್ಯಮಂತ್ರಿಯವರ ಸಚಿವಾಲಯಕ್ಕೆ 115 ಗ್ರೂಪ್-ಸಿ ಗುತ್ತಿಗೆ ಹುದ್ದೆಗಳನ್ನು ನೇಮಕಕ್ಕೆ ಆದೇಶಿಸಲಾಗಿತ್ತು. ಈ ಹುದ್ದೆಗಳಲ್ಲಿ

ಮಾನವೀಯತೆ ಮೆರೆದ ಸಿಎಂ ಬೊಮ್ಮಾಯಿ| ದಿ.ಗುರುಲಿಂಗಸ್ವಾಮಿ ಪತ್ನಿಗೆ ಗ್ರೂಪ್ ಸಿ‌ ಹುದ್ದೆಯ ಕೃಪೆ Read More »

ಮಂಗಳೂರು: ಮ.ನ. ಪಾ. ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮ

ಸಮಗ್ರ ನ್ಯೂಸ್: ಮಂಗಳೂರು ಮಹಾನಗರ ಪಾಲಿಕೆಯ 23ನೇ ಅವಧಿಯ ಚುನಾವಣೆ ಸೆ.9ರಂದು ನಡೆದಿದ್ದು ಮೇಯರ್ ಆಗಿ ಜಯಾನಂದ ಅಂಚನ್ ಹಾಗೂ ಉಪ ಮೇಯರ್ ಆಗಿ ಪೂರ್ಣಿಮ ಆಯ್ಕೆಯಾಗಿದ್ದಾರೆ. ನಡೆದ ಮೇಯರ್, ಉಪ ಮೇಯರ್ ಹಾಗೂ 4 ಸ್ಥಾಯಿ ಸಮಿತಿ ಸದಸ್ಯರ ಮಹತ್ವದ ಚುನಾವಣೆಯಲ್ಲಿ ಈ ಆಯ್ಕೆ ನಡೆದಿದೆ. ಉಪ ಮೇಯರ್ ಪೂರ್ಣಿಮಮೇಯರ್‌ ಮತ್ತೆ ಸಾಮಾನ್ಯ ಅಭ್ಯರ್ಥಿಗೆ ಹಾಗೂ ಉಪ ಮೇಯರ್ ಸ್ಥಾನವು ಹಿಂದುಳಿದ ವರ್ಗ ಮಹಿಳೆಗೆ ಮೀಸಲಾಗಿತ್ತು. ಪಾಲಿಕೆಯ ಒಟ್ಟು 60 ಸ್ಥಾನಗಳ ಪೈಕಿ ಬಿಜೆಪಿ 44

ಮಂಗಳೂರು: ಮ.ನ. ಪಾ. ಮೇಯರ್ ಆಗಿ ಜಯಾನಂದ ಅಂಚನ್, ಉಪ ಮೇಯರ್ ಆಗಿ ಪೂರ್ಣಿಮ Read More »