ರಾಜಕೀಯ

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ…

ಸಮಗ್ರ ನ್ಯೂಸ್: ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳೂರು ಭೇಟಿ ನೀಡಲಿದ್ದಾರೆ. ಕೊಚ್ಚಿನ್​ನಿಂದ ವಿಶೇಷ ವಿಮಾನದ ಮೂಲಕ ಪ್ರಧಾನಿ ಮಧ್ಯಾಹ್ನ 12.55ರ ಸುಮಾರಿಗೆ ಮಂಗಳೂರು ವಿಮಾನ ನಿಲ್ದಾಣ ತಲುಪಲಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜ್ಯ, ಕೇಂದ್ರ ಸಚಿವರು ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಧ್ಯಾಹ್ನ 1.20ಕ್ಕೆ ಸೇನಾ ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ ಪಣಂಬೂರುನಲ್ಲಿರುವ ಎನ್​.ಎಂ.ಪಿ.ಎ ಹೆಲಿಪ್ಯಾಡ್​ಗೆ ಬರಲಿದ್ದಾರೆ. ಮಧ್ಯಾಹ್ನ 1.30 ಗಂಟೆಗೆ ಎನ್​.ಎಂ.ಪಿ.ಎ ಹೆಲಿಪ್ಯಾಡ್​ನಿಂದ ಒಂದೂವರೆ ಕಿ.ಮೀ […]

ಪ್ರಧಾನಿ ಮೋದಿ ಸ್ವಾಗತಕ್ಕೆ ಕುಡ್ಲ ಸಜ್ಜು| ಇಂದಿನ ಕಾರ್ಯಕ್ರಮಗಳು ಹೀಗಿರಲಿವೆ… Read More »

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ

ಸಮಗ್ರ ನ್ಯೂಸ್: ಮಂಗಳೂರಿಗೆ ನಾಳೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಈ ಕಾರ್ಯಕ್ರಮಕ್ಕೆ ಭಾರೀ ಸಿದ್ಧತೆ ನಡೆಯುತ್ತಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಕಾರ್ಯಕ್ರಮದ ಸ್ಥಳ ಪರಿಶೀಲನೆ ನಡೆಸಿದ್ಧಾರೆ. ಈ ಸಂದರ್ಭದಲ್ಲಿ ಮಾತನಾಡಿದ ಗೃಹಸಚಿವ ಆರಗ ಜ್ಞಾನೇಂದ್ರ, ಪ್ರಧಾನಿಯವರ ಭದ್ರತೆಗೆ ಬೇಕಾಗಿರುವ ಎಲ್ಲಾ ವ್ಯವಸ್ಥೆ ಮಾಡಲಾಗಿದೆ. ಮಂಗಳೂರು ನಗರ ಪೊಲೀಸರು, ವಿವಿಧ ಜಿಲ್ಲೆಗಳ ಪೊಲೀಸರು, ಎಎನ್‌ಎಫ್, ಕೆಎಸ್​ಆರ್​ಪಿ ಪೊಲೀಸರು ಸೇರಿದಂತೆ 3 ಸಾವಿರ ಪೊಲೀಸರು ಕರ್ತವ್ಯ ನಿರ್ವಹಿಸಲಿದ್ದಾರೆ. ಡಿಜಿಪಿ, ಎಡಿಜಿಪಿ ಸೇರಿದಂತೆ 100 ಪೊಲೀಸ್ ಅಧಿಕಾರಿಗಳು

ಮಂಗಳೂರು: ಮೋದಿ ಭೇಟಿ ಸಂಪೂರ್ಣ ಸುರಕ್ಷಿತ – ಆರಗ ಜ್ಞಾನೇಂದ್ರ Read More »

ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭಾ ಚುನಾವಣೆ ಹೊಸ್ತಿಲಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಮತ್ತೊಂದು ಶಾಕ್‌ ಎದುರಾಗಿದೆ. ಮಾಜಿ ಸಂಸದ ಮುದ್ದಹನುಮೇಗೌಡ ತಾವು ಪಕ್ಷ ತೊರೆಯುತ್ತಿರುವುದಾಗಿ ಘೋಷಿಸಿದ್ದಾರೆ. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಂಬರುವ ಚುನಾವಣೆಯಲ್ಲಿ ತಾವು ಸ್ಪರ್ಧಿಸಲಿದ್ದು, ಆದರೆ ಯಾವ ಪಕ್ಷದಿಂದ ಎಂಬುದನ್ನು ಇನ್ನೂ ತೀರ್ಮಾನಿಸಿಲ್ಲ. ಕ್ಷೇತ್ರದ ಜನತೆ ಜೊತೆ ಸಮಾಲೋಚಿಸಿ ಮುಂದಿನ ತೀರ್ಮಾನ ಕೈಗೊಳ್ಳುವುದಾಗಿ ಹೇಳಿದ್ದಾರೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಮುದ್ದಹನುಮೇಗೌಡ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸುವ ಇಚ್ಚೆ ಹೊಂದಿದ್ದರೂ ಸಹ ರಾಜ್ಯದಲ್ಲಿ ಕಾಂಗ್ರೆಸ್‌ – ಜೆಡಿಎಸ್‌ ಮೈತ್ರಿ

ಕರ್ನಾಟಕ ಕಾಂಗ್ರೆಸ್ ನ ಮತ್ತೊಂದು ವಿಕೆಟ್ ಪತನ| ರಾಜೀನಾಮೆ ನೀಡಿದ ಮಾಜಿ ಸಂಸದ ಮುದ್ದಹನುಮೇಗೌಡ Read More »

ವಿಶ್ವಾಸ ಗೆದ್ದ ಕೇಜ್ರಿವಾಲ್| ತಪ್ಪಿದ ಬಿಜೆಪಿ ಲೆಕ್ಕಾಚಾರ

ಸಮಗ್ರ ನ್ಯೂಸ್: ಅಬಕಾರಿ ನೀತಿಯ ಕಾರಣಕ್ಕಾಗಿ ಸಂಕಷ್ಟಕ್ಕೆ ಸಿಲುಕಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ 58 ಮತ ಗಳಿಸುವ ಮೂಲಕ ಗೆದ್ದು ಬೀಗಿದ್ದಾರೆ. ಎಪ್ಪತ್ತು ಸದಸ್ಯ ಬಲ ಹೊಂದಿರುವ ದೆಹಲಿ ವಿಧಾನಸಭೆಯಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ 62 ಸ್ಥಾನಗಳನ್ನು ಗಳಿಸಿದ್ದು ಈ ಪೈಕಿ 58 ಮತಗಳು ಅವರಿಗೆ ಲಭಿಸಿವೆ. ತಮ್ಮ ಪಕ್ಷದ ಸದಸ್ಯರನ್ನು ಖರೀದಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ಈ ಹಿಂದೆ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದು, ಹೀಗಾಗಿ

ವಿಶ್ವಾಸ ಗೆದ್ದ ಕೇಜ್ರಿವಾಲ್| ತಪ್ಪಿದ ಬಿಜೆಪಿ ಲೆಕ್ಕಾಚಾರ Read More »

ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ| ಹಿಂದೂ ಸಂಘಟನೆಗಳಿಗೆ ಹಣ ಕೊಟ್ಟು ಬಲ ಕೊಡಿ- ಪ್ರಮೋದ್ ಮುತಾಲಿಕ್

ಸಮಗ್ರ ನ್ಯೂಸ್: ಮಠ- ಮಂದಿರಗಳಿಗೆ ದುಡ್ಡು ಕೊಡುವುದನ್ನು ನಿಲ್ಲಿಸಿ, ಹಿಂದೂ ಸಂಘಟನೆಗಳಿಗೆ ಹಣ ಕೊಟ್ಟು ಬಲ ಕೊಡಿ ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್ ಮನವಿ ಮಾಡಿದರು. ಸಾವರ್ಕರ್ ಕುರಿತ ಪುಸ್ತಕ ಬಿಡುಗಡೆಯಲ್ಲಿ ಮಾತನಾಡಿದ ಅವರು, ಮಠ ಮಂದಿರ ಬಿಟ್ಟು ಹಿಂದೂ ಸಂಘಟನೆಗಳಿಗೆ ಹಣ ಕೊಡಿ. ಹಿಂದೂ ಸಂಘಟನೆಗಳಿಗೆ ಬಲ ಕೊಡಿ. ಆಗ ನಿಮಗೆ ನಾವು ಹಿಂದೂ ರಾಷ್ಟ್ರ ಮಾಡಿ ತೋರಿಸುತ್ತೇವೆ ಎಂದು ಹೇಳಿದರು. ಇದೇ ವೇಳೆ ಸರ್ಕಾರದ ವಿರುದ್ಧ ಕಿಡಿಕಾರಿದ ಅವರು, ಗೋ ಮಾತೆ,

ಮಠ-ಮಂದಿರಗಳಿಗೆ ಹಣ ಕೊಡುವುದನ್ನು ನಿಲ್ಲಿಸಿ| ಹಿಂದೂ ಸಂಘಟನೆಗಳಿಗೆ ಹಣ ಕೊಟ್ಟು ಬಲ ಕೊಡಿ- ಪ್ರಮೋದ್ ಮುತಾಲಿಕ್ Read More »

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ

ಸಮಗ್ರ ನ್ಯೂಸ್: ಸಪ್ಟೆಂಬರ್​ 2 ರಂದು ಮಂಗಳೂರಿನಲ್ಲಿ ನಡೆಯುವ ಪ್ರಧಾನಿ ನರೇಂದ್ರ ಮೋದಿ ಅವರ ಸರಕಾರಿ ಸಮಾವೇಶಕ್ಕೆ ವಿಶಾಲ ಜರ್ಮನ್ ಪೆಂಡಾಲ್ ಅಳವಡಿಸಲು ಮತ್ತು ವೇದಿಕೆ ಸಹಿತ ಇಡೀ ಸಭಾಂಗಣ ಪೂರ್ತಿ ನೆಲದಿಂದ ಎತ್ತರದಲ್ಲಿ ಇರುವಂತೆ ಸಿದ್ಧತೆ ಆರಂಭವಾಗಿದೆ. ಕೂಳೂರಿನಲ್ಲಿರುವ ಗೋಲ್ಡ್ ಪಿಂಚ್ ಸಿಟಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಕರಾವಳಿಯಲ್ಲಿ ಪದೇ ಪದೇ ಮಳೆಯಾಗುತ್ತಿದ್ದು ಪ್ರಧಾನಿ ಸಮಾವೇಶಕ್ಕೆ ತೊಂದರೆಯಾಗದಂತೆ ಇಡೀ ಸಮಾವೇಶ ಸ್ಥಳವನ್ನು ಪೂರ್ತಿಯಾಗಿ ನೆಲಮಟ್ಟದಿಂದ ತುಸು ಎತ್ತರದಲ್ಲಿ ಫ್ಲ್ಯಾಟ್‌ಫಾರಂ ರಚಿಸಲಾಗುತ್ತದೆ. ಇದರಿಂದಾಗಿ ಒಂದು ವೇಳೆ ಮಳೆ ಬಂದರೂ

ಮೋದಿ ಕಾರ್ಯಕ್ರಮಕ್ಕೆ ಜರ್ಮನ್ ಪೆಂಡಾಲ್| ಭರದಿಂದ ನಡೆಯುತ್ತಿರುವ ತಯಾರಿ Read More »

ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ

ಸಮಗ್ರ ನ್ಯೂಸ್: ‘ಬಸವರಾಜ ಬೊಮ್ಮಾಯಿ ಮುಖ್ಯಮಂತ್ರಿಯಾದ ಬಳಿಕ ವಸತಿ ಯೋಜನೆಯಡಿ 5 ಲಕ್ಷ ಮನೆಗಳನ್ನು ಗ್ರಾಮೀಣ ಪ್ರದೇಶಕ್ಕೆ, 1 ಲಕ್ಷ ಮನೆಗಳನ್ನು ನಗರ ಪ್ರದೇಶಕ್ಕೆ ನೀಡಿದ್ದಾರೆ. 2.34 ಲಕ್ಷ ಮನೆಗಳ ನಿರ್ಮಾಣ ಕಾರ್ಯ ಗ್ರಾಮೀಣ ಭಾಗದಲ್ಲಿ ಆರಂಭವಾಗಿದೆ’ ಎಂದು ವಸತಿ ಮತ್ತು ಮೂಲ ಸೌಕರ್ಯ ಸಚಿವ ವಿ.ಸೋಮಣ್ಣ ಹೇಳಿದರು. ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಶನಿವಾರ ಭೇಟಿ ನೀಡಿ ಅವರು ಸುದ್ದಿಗಾರರ ಜತೆ ಮಾತನಾಡಿದರು. ಹಿಂದಿನ ಸರ್ಕಾರದ ಅವಧಿಯಲ್ಲಿ ಬಾಕಿ ಉಳಿದ 10 ಲಕ್ಷ ಮನೆಗಳೂ ಸೇರಿದಂತೆ ಒಟ್ಟು

ಕುಕ್ಕೆ: ಮಾರ್ಚ್ ಅಂತ್ಯದೊಳಗೆ 16 ಲಕ್ಷ ಮನೆಗಳ ಹಸ್ತಾಂತರ – ಸಚಿವ ವಿ.ಸೋಮಣ್ಣ Read More »

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ

ಸಮಗ್ರ ನ್ಯೂಸ್: ರಾಹುಲ್ ಗಾಂಧಿ ಅವರನ್ನು ಬಿಟ್ಟು ಬೇರೆ ಯಾರೂ ಕಾಂಗ್ರೆಸ್ ನಲ್ಲಿ ದೇಶ ಮಟ್ಟದಲ್ಲಿ ನಾಯಕನ ವರ್ಚಸ್ಸು, ಖ್ಯಾತಿ ಗಳಿಸಿರುವ ನಾಯಕ ಇಲ್ಲದ ಕಾರಣ ಅವರನ್ನು ಮತ್ತೆ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಮನವೊಲಿಸಲಾಗುವುದು ಎಂದು ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಬಿಟ್ಟರೆ ಯಾರಿದ್ದಾರೆ ಹೇಳಿ, ನನಗೆ ಬೇರೊಬ್ಬರು ಕಾಣಿಸುತ್ತಿಲ್ಲ ಎಂದು ಖರ್ಗೆ ಹೇಳಿದ್ದಾರೆ. ರಾಹುಲ್ ಗಾಂಧಿ ಅವರು ಮುಂದಾಳತ್ವ ವಹಿಸಿಕೊಳ್ಳಲು ಸಿದ್ಧರಿಲ್ಲ ಎಂಬ ವರದಿಗಳ ಕುರಿತು, ಖರ್ಗೆ ಅವರು “ಪಕ್ಷಕ್ಕಾಗಿ, ದೇಶಕ್ಕಾಗಿ,

ಕಾಂಗ್ರೆಸ್ ನಲ್ಲಿ ಪರ್ಯಾಯ ನಾಯಕರಿಲ್ಲ, ನನಗೆ ಯಾರೂ ಕಾಣಿಸುತ್ತಿಲ್ಲ – ಖರ್ಗೆ Read More »

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ವಿಧಿವಶ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಹಾಗೂ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ರಾಮೇಗೌಡ ಅವರು ಅನಾರೋಗ್ಯದಿಂದಾಗಿ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರ ಅಂತ್ಯಕ್ರಿಯೆ ಶನಿವಾರ ಮಧ್ಯಾಹ್ನ ಹೊಸಹಳ್ಳಿಯಲ್ಲಿರುವ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಅವರ ಕುಟುಂಬದ ಸದಸ್ಯರು ತಿಳಿಸಿದ್ದಾರೆ. ರಾಮೇಗೌಡ ಅವರಿಗೆ 69 ವರ್ಷ ವಯಸ್ಸಾಗಿತ್ತು, ಮೃತರು ಪತ್ನಿ ರುಕ್ಮಿಣಿ ಮಕ್ಕಳಾದ ರವಿ ರಘು ಮಗಳು ನಾಗರತ್ನ (ಬೋರಮ್ಮ) ಸೇರಿದಂತೆ ಕುಟುಂಬದ ಬಳಗವನ್ನು ಅಗಲಿದ್ದಾರೆ. ಈ ಕುರಿತಾಗಿ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ

ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಿರಿಯ ಸಹೋದರ ವಿಧಿವಶ Read More »

ಸೆ. ೧೨ರಿಂದ ಕರ್ನಾಟಕ ವಿಧಾನಸಭೆ ‌ಮುಂಗಾರು ಅಧಿವೇಶನ

ಸಮಗ್ರ ನ್ಯೂಸ್: ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ರಾಜ್ಯ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ರಾಜ್ಯ ಸಚಿವ ಸಂಪುಟ ಸಭೆ ಗುರುವಾರ ನಿರ್ಧರಿಸಿದೆ. ಗುರುವಾರ ಸಿಎಂ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯು ಸೆಪ್ಟೆಂಬರ್ 12 ರಿಂದ 10 ದಿನಗಳ ಕಾಲ ವಿಧಾನಮಂಡಲದ ಮುಂಗಾರು ಅಧಿವೇಶನ ನಡೆಸಲು ನಿರ್ಧರಿಸಿದೆ. ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆಸಿ ಮಾಧುಸ್ವಾಮಿ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ್ದು, ಶನಿವಾರ ಮತ್ತು ಭಾನುವಾರ ಹೊರತುಪಡಿಸಿ

ಸೆ. ೧೨ರಿಂದ ಕರ್ನಾಟಕ ವಿಧಾನಸಭೆ ‌ಮುಂಗಾರು ಅಧಿವೇಶನ Read More »