ರಾಜಕೀಯ

ಆರ್ ಜೆ ತ್ರಿಶುಲ್ ವಿರುದ್ಧ ಪೊಲೀಸ್ ದೂರು/ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ತೀವ್ರ ಖಂಡನೆ

ಆರ್ ಜೆ ತ್ರಿಶುಲ್ ಅವರು, ಅವರ ಊರಿನಲ್ಲಿ ಅಭಿವೃದ್ಧಿ ಹೊಂದದೆ ಇರುವ ಬಗ್ಗೆ ಕಾಳಜಿ ವಹಿಸಿ ಜನರ ಪರವಾಗಿ, ಸಾಮಾಜಿಕ ಜಾಲತಾಣದಲ್ಲಿ ಜನಪ್ರತಿನಿದಿನಗಳ ಗಮನ ಸೆಳೆಯುವ ಪ್ರಯತ್ನ ಮಾಡುತ್ತಾರೆ. ಅವರ ಆತ್ಮ ಸ್ಥೈರ್ಯವನ್ನು ಕುಗ್ಗಿಸುವ ಕೆಲಸ ಮಾಡುವುದು ಪ್ರಜಾ ಪ್ರಭುತ್ವ ವ್ಯವಸ್ಥೆಯ ಕಗ್ಗೊಲೆ.ಅರಂತೋಡು ಎಲಿಮಲೆ ರಸ್ತೆಯ ಬಗ್ಗೆ, ಅರಮನೆಗಾಯ ತೂಗು ಸೇತುವೆ ಬಗ್ಗೆ ನಮ್ಮೂರಿನ ಜನತೆಯೇ ಕೇಳಿಕೊಂಡ ತಕ್ಷಣ ತಮ್ಮ ಅಮೂಲ್ಯ ಸಮಯವನ್ನು ನಮ್ಮ ಊರಿನ ಅಭಿವೃದ್ಧಿಗೆ ಮೀಸಲಿಟ್ಟು ವಿಡಿಯೋ ಮಾಡಿ ಹಾಕಿದ್ದಾರೆ.ಅವರಿಗೆ ನಮ್ಮೂರಿನ ಜನತೆಯ ಪರವಾಗಿ […]

ಆರ್ ಜೆ ತ್ರಿಶುಲ್ ವಿರುದ್ಧ ಪೊಲೀಸ್ ದೂರು/ಅಡ್ತಲೆ ನಾಗರಿಕ ಹಿತರಕ್ಷಣ ವೇದಿಕೆ ತೀವ್ರ ಖಂಡನೆ Read More »

ಶೃಂಗೇರಿಯಲ್ಲೂ ಸಿದ್ದರಾಮಯ್ಯ ವಿರುದ್ದ ಕಪ್ಪು ಬಾವುಟ ಪ್ರದರ್ಶನ| ಭಜರಂಗದಳ ಕಾರ್ಯಕರ್ತರು ಅರೆಸ್ಟ್

ಸಮಗ್ರ ನ್ಯೂಸ್: ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಬಂದಿದ್ದ 7ಕ್ಕೂ ಹೆಚ್ಚು ಭಜರಂಗದಳದ ಕಾರ್ಯಕರ್ತರನ್ನು ಶೃಂಗೇರಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಕಪ್ಪು ಬಾವುಟ ಪ್ರದರ್ಶಿಸಲು ಕಾರ್ಯಕರ್ತರು ಬಂದಿದ್ದರು. ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ ಭಜರಂಗದಳದ ಕಾರ್ಯಕರ್ತರಿಗೆ ಥಳಿಸಿ ತಮ್ಮ ಜೀಪಿಗೆ ತುಂಬಿಸಿದ್ದಾರೆ. ಈ ಘಟನೆಯಲ್ಲಿ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ಉಂಟಾಯಿತು. ಈ ವೇಳೆ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದ ಮಾಧ್ಯಮದವರ ಮೇಲೆ ಪೊಲೀಸರು ಆಕ್ರೋಶ

ಶೃಂಗೇರಿಯಲ್ಲೂ ಸಿದ್ದರಾಮಯ್ಯ ವಿರುದ್ದ ಕಪ್ಪು ಬಾವುಟ ಪ್ರದರ್ಶನ| ಭಜರಂಗದಳ ಕಾರ್ಯಕರ್ತರು ಅರೆಸ್ಟ್ Read More »

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ಅಬಕಾರಿ ಹಗರಣಕ್ಕೆ ಸಂಬಂಧಿಸಿದಂತೆ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿದಂತೆ 15 ಆರೋಪಿಗಳನ್ನು ಕೇಂದ್ರೀಯ ತನಿಖಾ ದಳ ತನ್ನ ಎಫ್‌ಐಆರ್ ನಲ್ಲಿ ಪಟ್ಟಿ ಮಾಡಿದೆ. ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ 19 ಸ್ಥಳಗಳಲ್ಲಿ ತನಿಖಾ ಸಂಸ್ಥೆ ಶುಕ್ರವಾರ ದಾಳಿ ನಡೆಸಿದೆ. ಕಳೆದ ವರ್ಷ ನವೆಂಬರ್ನಲ್ಲಿ ಜಾರಿಗೆ ತಂದ ದೆಹಲಿ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸಲು ಎಫ್‌ಐಆರ್ ದಾಖಲಿಸಿದ ನಂತ್ರ ಕೇಂದ್ರೀಯ ತನಿಖಾ

ಅಬಕಾರಿ ಹಗರಣ; ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಸೇರಿ 15 ಮಂದಿ ವಿರುದ್ಧ ಎಫ್ಐಆರ್ Read More »

ನಾವೇನು ಸುಮ್ನೆ ಕೂರಲ್ಲ, ಇಡೀ ರಾಜ್ಯಕ್ಕೆ ಬೆಂಕಿ ಹಚ್ತೇವೆ – ರಾಜ್ಯ ಸರ್ಕಾರದ ವಿರುದ್ದ ಸಿದ್ದು ಗರಂ

ಸಮಗ್ರ ನ್ಯೂಸ್: ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಇಂದು ಕೊಡಗಿಗೆ ಆಗಮಿಸಿದ್ದ ವೇಳೆ ಅವರ ಕಾರಿಗೆ ಸಂಘ ಪರಿವಾರದ ಕಾರ್ಯಕರ್ತರು ಮೊಟ್ಟೆ ಹೊಡೆದು ವಿರೋಧ ವ್ಯಕ್ತಪಡಿಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ. ಈ ವಿಚಾರವಾಗಿ ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕೊಡಗು ಜಿಲ್ಲಾ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ವಿರುದ್ದ ಹರಿಹಾಯ್ದಿದ್ದಾರೆ. ಕೊಡಗಿನ ಗುಡ್ಡೆಹೊಸೂರುವಿನಲ್ಲಿ ಸಿದ್ದರಾಮಯ್ಯ ಪ್ರಯಾಣಿಸುತ್ತಿದ್ದ ಕಾರಿಗೆ ಮೊಟ್ಟೆ ಎಸೆದಿದ್ದು, ಬಿಜೆಪಿಯ ಕೆಲ ಕಾರ್ಯಕರ್ತರನ್ನ ಕುಶಾಲನಗರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆದರೆ

ನಾವೇನು ಸುಮ್ನೆ ಕೂರಲ್ಲ, ಇಡೀ ರಾಜ್ಯಕ್ಕೆ ಬೆಂಕಿ ಹಚ್ತೇವೆ – ರಾಜ್ಯ ಸರ್ಕಾರದ ವಿರುದ್ದ ಸಿದ್ದು ಗರಂ Read More »

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ; 9 ಮಂದಿಯ ಬಂಧನ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿದ್ದ ಪ್ರಕರಣ ಸಂಬಂಧ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ. ಗುರುವಾರದಂದು ಸಿದ್ದರಾಮಯ್ಯ ಅವರು ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಗುಡ್ಡೆಹೊಸೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಅವರ ಕಾರಿಗೆ ಕೆಲವರು ಮೊಟ್ಟೆ ಎಸೆದಿದ್ದರು. ಈ ಬಗ್ಗೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದ ಕುಶಾಲನಗರ ಪೊಲೀಸರು ಇದೀಗ 9 ಮಂದಿಯನ್ನು ಬಂಧಿಸಿದ್ದಾರೆ.

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆತ ಪ್ರಕರಣ; 9 ಮಂದಿಯ ಬಂಧನ Read More »

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು| ಮಾಜಿ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ?

ಸಮಗ್ರ ನ್ಯೂಸ್: ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿಗೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದ ಘಟನೆಗೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದಿರುವುದು ಸರಿಯಲ್ಲ. ಯಾವುದೇ ಕಾರಣಕ್ಕೂ ಈ ರೀತಿಯ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ಇರಲಿ, ಯಡಿಯೂರಪ್ಪ ಇರಲಿ, ಅಥವಾ ಮತ್ಯಾರೋ ಇರಬಹುದು. ಇಂತಹ ಘಟನೆಗಳು ನಡೆಯಬಾರದು. ಸಿದ್ದರಾಮಯ್ಯ ವಿಪಕ್ಷ ನಾಯಕರಾಗಿದ್ದಾರೆ. ಅವರನ್ನು ಗೌರವದಿಂದ ಕಾಣಬೇಕು. ಈ ರೀತಿಯ ನಡವಳಿಕೆಯನ್ನು ಯಾವುದೇ ಕಾರಣಕ್ಕೂ ಸಹಿಸಕೂಡದು, ಯಾರೂ ಈ

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದ ಬಿಜೆಪಿ ಕಾರ್ಯಕರ್ತರು| ಮಾಜಿ ಸಿಎಂ ಯಡಿಯೂರಪ್ಪ ಏನಂದ್ರು ಗೊತ್ತಾ? Read More »

ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದು ಆಕ್ರೋಶ

ಸಮಗ್ರ ನ್ಯೂಸ್: ಮಾಜಿ ಸಿಎಂ ಸಿದ್ಧರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದು, ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಮಡಿಕೇರಿ ನಗರದಲ್ಲಿ ನಡೆದಿದೆ. ಸಾವರ್ಕರ್ ಫ್ಲೆಕ್ಸ್ ವಿಚಾರದಲ್ಲಿ ಸಿದ್ಧರಾಮಯ್ಯ ಹೇಳಿಕೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಬಿಜೆಪಿ ಕಾರ್ಯಕರ್ತರು ಜ.ತಿಮ್ಮಯ್ಯ ವೃತ್ತದಲ್ಲಿ ಆಕ್ರೋಶ ವ್ಯಕ್ತಪಡಿಸಿ, ಕಾರಿನ ಮೇಲೆ ಮೊಟ್ಟೆ ಎಸೆದಿದ್ದಾರೆ. ಅತಿವೃಷ್ಠಿಯಿಂದಾದ ನಾಶದ ಪರಿಸ್ಥಿತಿ ಅವಲೋಕನಕ್ಕಾಗಿ ಮಡಿಕೇರಿ ಪ್ರವಾಸದಲ್ಲಿರುವ ಸಿದ್ದರಾಮಯ್ಯ ವಿರುದ್ಧ ಇಂದು ಮುಂಜಾನೆಯಿಂದಲೇ ಜಿಲ್ಲೆಯಲ್ಲಿ ಕಪ್ಪು ಪಟ್ಟಿ ಧರಿಸಿ, ಗೋ ಬ್ಯಾಕ್ ಸಿದ್ದುಖಾನ್ ಎಂಬ ಘೋಷಣೆಯೊಂದಿಗೆ ಘೇರಾವ್ ಹಾಕುತ್ತಿದ್ದರು.

ಮಡಿಕೇರಿ: ಮಾಜಿ ಸಿಎಂ ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆದು ಆಕ್ರೋಶ Read More »

ಚುನಾವಣಾ ತಂತ್ರಗಾರಿಕೆ‌ ಭಾಗವಾಗಿ‌‌ ತಿಂಗಳಿಗೊಮ್ಮೆ ರಾಜ್ಯಕ್ಕೆ ಮೋದಿ ಕರೆಸುವ ಪ್ರಯತ್ನ – ಬಿಎಸ್ವೈ

ಸಮಗ್ರ ನ್ಯೂಸ್: ಪಕ್ಷದ ಸಂಘಟನೆ, ಚುನಾವಣಾ ತಂತ್ರಗಾರಿಕೆ ಭಾಗವಾಗಿ ಪ್ರತಿ ತಿಂಗಳಿಗೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯಕ್ಕೆ ಕರೆ ತರಲು ಪ್ರಯತ್ನಿಸಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ಪಕ್ಷದ ಸಂಸದೀಯ ಮಂಡಳಿ ಸದಸ್ಯರಾಗಿ ನೇಮಕವಾದ ಹಿನ್ನೆಲೆಯಲ್ಲಿ ‘ಕಾವೇರಿ’ ನಿವಾಸದಲ್ಲಿ ಸಿಎಂ ಬೊಮ್ಮಾಯಿ ಆದಿಯಾಗಿ ಪಕ್ಷದ ಹಲವು ನಾಯಕರ ಜತೆಗೂಡಿ ಮಾಧ್ಯಮಗೋಷ್ಠಿಯಲ್ಲಿ ಬುಧವಾರ ಮಾತನಾಡಿದರು. ವರಿಷ್ಠರು ತೆಗೆದುಕೊಂಡ ನಿರ್ಧಾರದಿಂದ ಆನೆ ಬಲ ಬಂದಂತಾಗಿದ್ದು, ರಾಜ್ಯದಲ್ಲಿ ಪಕ್ಷವನ್ನು ಮತ್ತೆ ಅಧಿಕಾರಕ್ಕೆ ತರಲು ಕಾಲಿಗೆ ಚಕ್ರ ಕಟ್ಟಿಕೊಂಡು ಓಡಾಡುವೆ.

ಚುನಾವಣಾ ತಂತ್ರಗಾರಿಕೆ‌ ಭಾಗವಾಗಿ‌‌ ತಿಂಗಳಿಗೊಮ್ಮೆ ರಾಜ್ಯಕ್ಕೆ ಮೋದಿ ಕರೆಸುವ ಪ್ರಯತ್ನ – ಬಿಎಸ್ವೈ Read More »

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಮೀನಿನ ಖಾದ್ಯಗಳ ಹೊಟೇಲ್ -ಸಚಿವ ಎಸ್.ಅಂಗಾರ

ಸಮಗ್ರ ನ್ಯೂಸ್: ‘ಖಾಸಗಿ ಸಹಭಾಗಿತ್ವದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳಲ್ಲಿ ಮೀನಿನ ಖಾದ್ಯಗಳ ಹೊಟೇಲ್‍ಗಳನ್ನು ಆರಂಭಿಸಲಾಗುವುದು’ ಎಂದು ಮೀನುಗಾರಿಕೆ, ಬಂದರು ಮತ್ತು ಒಳನಾಡು ಸಾರಿಗೆ ಸಚಿವ ಎಸ್.ಅಂಗಾರ (S. Angara) ಅವರು ತಿಳಿಸಿದ್ದಾರೆ. ಬುಧವಾರ ವಿಧಾನಸೌಧದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ರಾಜ್ಯದ ಪ್ರಮುಖ ಜಲಾಶಯಗಳಾದ ಕೃಷ್ಣರಾಜಸಾಗರ(ಕೆಆರ್ ಎಸ್), ಆಲಮಟ್ಟಿ, ಲಿಂಗನಮಕ್ಕಿ, ಭದ್ರಾ ಸೇರಿದಂತೆ ರಾಜ್ಯದ ಹನ್ನೆರಡು ಜಲಾಶಯಗಳಲ್ಲಿಯೂ ಗರಿಷ್ಠ ಪ್ರಮಾಣದ ಮೀನು ಉತ್ಪಾದನೆ ಮಾಡಲು ನಿರ್ಧರಿಸಲಾಗಿದೆ. ಆ ಮೂಲಕ ರಾಜ್ಯದಲ್ಲಿ ಮತ್ಸ್ಯ ಕ್ರಾಂತಿ ನಡೆಯಲಿದ್ದು,

ಖಾಸಗಿ ಸಹಭಾಗಿತ್ವದಲ್ಲಿ ರಾಜ್ಯಾದ್ಯಂತ ಮೀನಿನ ಖಾದ್ಯಗಳ ಹೊಟೇಲ್ -ಸಚಿವ ಎಸ್.ಅಂಗಾರ Read More »

‘ಕೋಮುಗಲಭೆಯಲ್ಲ ಇದು ಜೂಜಿನ ಗಲಭೆ, ರಾಜಕೀಯ ಬೇಳೆ ಬೇಯಿಸಬೇಡಿ’ – ಬಿಜೆಪಿಗೆ ಭದ್ರಾವತಿ ಶಾಸಕರ ತಿರುಗೇಟು

ಸಮಗ್ರ ನ್ಯೂಸ್: ಸ್ವಾತಂತ್ರ್ಯ ದಿನಾಚರಣೆ ದಿನವಾದ ಸೋಮವಾರ ಸಂಜೆ ಸಾವರ್ಕರ್​ ಫ್ಲೆಕ್ಸ್​ ತೆರವು ವಿವಾದದಲ್ಲಿ ಪ್ರೇಮ್​ಸಿಂಗ್​ ಎಂಬಾತನಿಗೆ ಮುಸ್ಲಿಂ ಯುವಕರು ಚಾಕುವಿನಿಂದ ಇರಿದ ಪ್ರಕರಣ ಸಂಬಂಧ ಶಿವಮೊಗ್ಗದಲ್ಲಿ ಪ್ರಕ್ಷ್ಯುಬ್ಧ ಸ್ಥಿತಿ ನಿರ್ಮಾಣಗೊಂಡಿತ್ತು. ಇದರ ಬೆನ್ನಲ್ಲೇ ಮಂಗಳವಾರ ಭದ್ರಾವತಿಯಲ್ಲಿ ಹಿಂದೂ ಯುವಕ ಸುನೀಲ್​ ಎಂಬಾತನ ಮೇಲೆ ಅನ್ಯಕೋಮಿನ ಯುವಕನಿಂದ ಹಲ್ಲೆ ನಡೆದಿತ್ತು. ಈ ಘಟನೆ ರಾಜ್ಯವನ್ನೇ ತಲ್ಲಣಗೊಳಿಸಿತ್ತು. ಇದೀಗ ಸುನೀಲ್​ ಮೇಲಿನ ಹಲ್ಲೆ ಪ್ರಕರಣ ಕುರಿತು ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್​, ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. ಭದ್ರಾವತಿ ಯುವಕನ

‘ಕೋಮುಗಲಭೆಯಲ್ಲ ಇದು ಜೂಜಿನ ಗಲಭೆ, ರಾಜಕೀಯ ಬೇಳೆ ಬೇಯಿಸಬೇಡಿ’ – ಬಿಜೆಪಿಗೆ ಭದ್ರಾವತಿ ಶಾಸಕರ ತಿರುಗೇಟು Read More »