ಕರ್ನಾಟಕದಲ್ಲಿ ಮುಂದಿನ ಚುನಾವಣೆಯಲ್ಲೂ ಬಿಜೆಪಿಗೇ ಬಹುಮತ| ಹೊರಬಿದ್ದ ಸಮೀಕ್ಷೆಯಿಂದ ಕೇಸರಿ ಪಡೆ ಫುಲ್ ಖುಷ್
ಸಮಗ್ರ ನ್ಯೂಸ್: 2023ರ ವಿಧಾನಸಭಾ ಚುನಾವಣೆಯಲ್ಲಿ ಇತರ ಎಲ್ಲಾ ಪಕ್ಷಗಳನ್ನು ಹಿಂದಿಕ್ಕಿ ಆಡಳಿತಾರೂಢ ಬಿಜೆಪಿ ಹೆಚ್ಚು ಸ್ಥಾನ ಗಳಿಸುವ ಮೂಲಕ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮುವ ಸಾಧ್ಯತೆ ಇದೆ. ಭಾರೀ ಜಿದ್ದಾಜಿದ್ದಿನ 2023ರ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯು ಹೆಚ್ಚುಕಡಿಮೆ ಕಳೆದ ಬಾರಿಯಷ್ಟೇ ಸ್ಥಾನ ಗಳಿಸುವ ಸಾಧ್ಯತೆಯಿದೆ ಎಂದು ಆಂತರಿಕ ಸಮೀಕ್ಷೆಯಿಂದ ಗೊತ್ತಾಗಿದೆ. 2018ರಲ್ಲಿ 104 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ 2023ರಲ್ಲೂ ಹೆಚ್ಚು ಕಡಿಮೆ ಅಷ್ಟೇ ಸ್ಥಾನವನ್ನು ಪಡೆಯಬಹುದೆಂದು ದೆಹಲಿ ಮೂಲದ ಖಾಸಗಿ ಸಂಸ್ಥೆ ನಡೆಸಿದ ಆಂತರಿಕ ಸಮೀಕ್ಷೆಯಲ್ಲಿ […]