‘ಕಾಂತಾರ’ ಬಳಿಕ ಗಡಿದಾಟಲಿದ್ದಾನೆ ‘ಶಿವದೂತೆ ಗುಳಿಗೆ’ | ತುಳು ರಂಗಭೂಮಿಯ ಕ್ರಾಂತಿ ಕನ್ನಡ, ಹಿಂದಿಯಲ್ಲಿ ಪ್ರದರ್ಶನಕ್ಕೆ ಸಜ್ಜು!
ಸಮಗ್ರ ನ್ಯೂಸ್: ತುಳುನಾಡಿನ ದೈವಗಳಾದ ಪಂಜುರ್ಲಿ, ಗುಳಿಗನ ಕಥೆಯಾಧಾರಿತ “ಕಾಂತಾರ’ ಸಿನೆಮಾ ದೇಶ-ವಿದೇಶದಲ್ಲಿ ಮೋಡಿ ಮಾಡುತ್ತಿರುವ ಮಧ್ಯೆಯೇ, ಕರಾವಳಿಯಾದ್ಯಂತ ತುಳು ರಂಗಭೂಮಿಯಲ್ಲಿ ಹೊಸ ಕ್ರಾಂತಿ ಬರೆದ “ಶಿವದೂತೆ ಗುಳಿಗೆ’ ತುಳು ನಾಟಕ ಇದೀಗ ಕನ್ನಡ ಹಾಗೂ ಹಿಂದಿ ಭಾಷೆಯಲ್ಲಿ ಪ್ರದರ್ಶನಕ್ಕೆ ಅಣಿಯಾಗಿದೆ! “ಕಾಂತಾರ’ ಸಿನೆಮಾದಲ್ಲಿ 20 ನಿಮಿಷ ತುಳುನಾಡಿನ ಕಾರಣಿಕ ಶಕ್ತಿ ಗುಳಿಗನ ಪ್ರದರ್ಶನವಿದ್ದರೆ, ಶಿವದೂತೆ ಗುಳಿಗೆ ನಾಟಕವು ಪೂರ್ಣ ಗುಳಿಗನ ಕಥೆಯಾಧಾರಿತವಾಗಿದೆ. ವಿಶೇಷವೆಂದರೆ, ಕಾಂತಾರದಲ್ಲಿ “ಗುರುವ’ನಾಗಿ ಮಿಂಚಿರುವ ಕಿರುತೆರೆ ನಟ ಸ್ವರಾಜ್ ಶೆಟ್ಟಿ ಅವರೇ ಶಿವದೂತೆ […]









