ಸುಳ್ಯ, ಕಡಬ ತಾಲೂಕಿನ ಹಲವೆಡೆ ಭಾರೀ ಮಳೆ| ಮಲೆನಾಡಿನಲ್ಲೂ ಅಬ್ಬರಿಸಿದ ವರುಣ
ಸಮಗ್ರ ನ್ಯೂಸ್: ದ.ಕ ಜಿಲ್ಲೆಯ ಸುಳ್ಯ, ಕಡಬ ಸೇರಿದಂತೆ ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಸಂಜೆ ವೇಳೆಗೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಅಕಾಲಿಕವಾಗಿ ಸುರಿದ ಭಾರೀ ಮಳೆಯಿಂದ ಒಣಹಾಕಿದ್ದ ಅಡಿಕೆ, ಕಾಫಿ ಬೆಳೆ ಬಹುತೇಕ ಕಡೆ ನೀರಿನಲ್ಲಿ ಕೊಚ್ಚಿ ಹೋಗಿದೆ. ಕಾಫಿನಾಡು ಚಿಕ್ಕಮಗಳೂರಲ್ಲಿ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಚಿಕ್ಕಮಗಳೂರು, ಕೊಪ್ಪ, ಮೂಡಿಗೆರೆ , ಕಳಸ, ಶೃಂಗೇರಿ, NR ಪುರ ಭಾಗದಲ್ಲಿ ವರುಣ ಅಬ್ಬರಿಸಿದ್ದು, ದಿಢೀರ್ ಸುರಿದ ಮಳೆಯಿಂದ ಜನರು ಕಂಗಾಲಾದ ಪ್ರಸಂಗ ನಡೆದಿದೆ.
ಸುಳ್ಯ, ಕಡಬ ತಾಲೂಕಿನ ಹಲವೆಡೆ ಭಾರೀ ಮಳೆ| ಮಲೆನಾಡಿನಲ್ಲೂ ಅಬ್ಬರಿಸಿದ ವರುಣ Read More »










