ಸಿನಿಮಾ

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಾಪ್ಟರ್ 1 ಚಿತ್ರಕ್ಕೆ ಸಾಲು ಸಾಲು ಸಂಕಷ್ಟಗಳು ಎದುರಾಗುತ್ತಿವೆ. ಇದೀಗ ಕೇರಳ ಮೂಲದ ಸಹ ಕಲಾವಿದ ಕಪಿಲ್ ಎಂಬುವರು ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಶೂಟಿಂಗ್ ಮುಗಿಸಿದ ಬಳಿಕ ಕೊಲ್ಲೂರಿನ ಸೌಪರ್ಣಿಕ ನದಿಯಲ್ಲಿ ಕಪಿಲ್ ಅವರು ತಮ್ಮ ತಂಡದವರ ಜೊತೆ ಈಜಲು ತೆರಳಿದ್ದರು. ನೀರಿನ ಆಳ ತಿಳಿಯದೇ ಅವರು ನದಿಗೆ ಇಳಿದರು. ಈ ವೇಳೆ ಅವರು ಮುಳುಗಿ ಸಾವಿಗೀಡಾಗಿದ್ದಾರೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾಂತಾರ: […]

ಕಾಂತಾರ ಚಾಪ್ಟರ್ 1 ಸಿನಿಮಾದ ಕಲಾವಿದ ನಿಧನ Read More »

ಸಮಗ್ರ ಕರ್ನಾಟಕದ ಕ್ಷಮೆ ಕೇಳಿದ ಗಾಯಕ ಸೋನುನಿಗಮ್

ಸಮಗ್ರ ನ್ಯೂಸ್: ಕಾರ್ಯಕ್ರಮ ಒಂದರಲ್ಲಿ ಕನ್ನಡಿಗರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ಗಾಯಕ ಸೋನು ನಿಗಮ್ ಕೊನೆಗೂ ಕನ್ನಡಿಗರ ಮುಂದೆ ಮಂಡಿಯೂರಿದ್ಧು, ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಕ್ಷಮಿಸು ಕರ್ನಾಟಕ ಎಂದು ಪೋಸ್ಟ್ ಹಾಕಿದ್ದಾರೆ ಕೊನೆಗೂ ಕನ್ನಡಿಗರಿಗೆ ಸೋನು ನಿಗಮ್ ಕ್ಷಮೆ ಕೇಳಿದ್ದಾರೆ. ಕನ್ನಡಿಗರ ಬಗ್ಗೆ ಸೋನು ನಿಗಮ್ ವಿವಾದಾತ್ಮಕ ಹೇಳಿಕೆ ನೀಡಿದರು ಈ ವಿಚಾರವಾಗಿ ಸೋನು ನಿಗಮ್ ಇದೀಗ ಕನ್ನಡಿಗರ ಕ್ಷಮೆ ಕೇಳಿದ್ದಾರೆ. ಇನ್ಸ್ಟಾಗ್ರಾಮ್ ನಲ್ಲಿ ಪೋಸ್ಟ್ ಮಾಡಿ ಸೋನು ನಿಗಮ್ ಕೊನೆಗೂ ಕ್ಷಮೆ ಕೇಳಿದ್ದಾರೆ.

ಸಮಗ್ರ ಕರ್ನಾಟಕದ ಕ್ಷಮೆ ಕೇಳಿದ ಗಾಯಕ ಸೋನುನಿಗಮ್ Read More »

ಹಸೆಮಣೆ ಏರಲು ಸಜ್ಜಾದ ‘ಸೀತಾರಾಮ’ ಖ್ಯಾತಿಯ ನಟಿ ವೈಷ್ಣವಿ ಗೌಡ

ಸಮಗ್ರ ನ್ಯೂಸ್: ಅಗ್ನಿ ಸಾಕ್ಷಿ ಹಾಗೂ ಸೀತಾರಾಮ ಧಾರಾವಾಹಿ ನಟಿ ವೈಷ್ಣವಿ ಗೌಡ ಸದ್ದಿಲ್ಲದೇ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ವೈಷ್ಣವಿ ಗೌಡ ಅವರು ಅಕಾಯ್‌ ಎನ್ನುವವರ ಜೊತೆ ನಿಶ್ಚಿತಾರ್ಥ ಮಾಡಿಕೊಂಡಿದ್ದು. ವೈಷ್ಣವಿ ಗೌಡ ಮತ್ತು ಅಕಾಯ್‌ ನಿಶ್ಚಿತಾರ್ಥದ ಹಲವಾರು ವಿಡಿಯೋಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿವೆ. ಅಕಾಯ್‌ ಅವರು ಬೇರೆ ರಾಜ್ಯದವರು ಎನ್ನಲಾಗಿದೆ. ಏರ್‌ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದಾರೆ. ಅಕಾಯ್‌ ಅವರಿಂದಲೇ ವೈಷ್ಣವಿ ಈ ಬಾರಿ ಬೆಂಗಳೂರಿನಲ್ಲಿ ನಡೆದಿದ್ದ ಏರ್‌ಶೋ ವೀಕ್ಷಣೆ ಮಾಡಿದ್ದರು. ಇದನ್ನೇ ಅವರು ಪರೋಕ್ಷವಾಗಿ ಸೋಶಿಯಲ್‌ ಮೀಡಿಯಾದಲ್ಲಿ

ಹಸೆಮಣೆ ಏರಲು ಸಜ್ಜಾದ ‘ಸೀತಾರಾಮ’ ಖ್ಯಾತಿಯ ನಟಿ ವೈಷ್ಣವಿ ಗೌಡ Read More »

ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ನಿಧನ

ಸಮಗ್ರ ನ್ಯೂಸ್: ದೇಶಭಕ್ತಿ ಚಿತ್ರಗಳು ಮತ್ತು ‘ಭರತ್ ಕುಮಾರ್’ ಎಂಬ ಅಡ್ಡಹೆಸರಿನಿಂದ ಹೆಸರುವಾಸಿಯಾದ ಭಾರತೀಯ ನಟ ಮತ್ತು ಚಲನಚಿತ್ರ ನಿರ್ದೇಶಕ ಮನೋಜ್ ಕುಮಾರ್, ತಮ್ಮ 87 ನೇ ವಯಸ್ಸಿನಲ್ಲಿ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ನಿಧನರಾದರು. ಕುಮಾರ್ 1999 ರಲ್ಲಿ ನಟನೆಯಿಂದ ನಿವೃತ್ತರಾದರು, ಆದರೆ ಅವರ ಚಲನಚಿತ್ರಗಳನ್ನು ಇನ್ನೂ ಯುವಕರು ವೀಕ್ಷಿಸುತ್ತಾರೆ. ಅವರು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಪಡೆದಿದ್ದಾರೆ ಮತ್ತು 1992 ರಲ್ಲಿ ಪದ್ಮಶ್ರೀ ಮತ್ತು ಭಾರತೀಯ ಚಲನಚಿತ್ರ ಮತ್ತು ಕಲೆಗಳಿಗೆ ನೀಡಿದ ಕೊಡುಗೆಗಾಗಿ 2015 ರಲ್ಲಿ

ಬಾಲಿವುಡ್ ಹಿರಿಯ ನಟ ಮನೋಜ್ ಕುಮಾರ್ ನಿಧನ Read More »

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಕೇಂದ್ರ ಸರ್ಕಾರದಿಂದ 2025ನೇ ಸಾಲಿನ ಪದ್ಮ ವಿಭೂಷಣ ಪ್ರಶಸ್ತಿ ಪ್ರಕಟಿಸಲಾಗಿದೆ. 2025ನೇ ಸಾಲಿನ ಪದ್ಮಭೂಷಣ ಪ್ರಶಸ್ತಿಗೆ ಕನ್ನಡದ ಖ್ಯಾತ ಹಿರಿಯ ನಟ ಅನಂತ್ ನಾಗ್ ಅವರಿಗೆ ಸಂದಿದೆ. ಇಂದು ಪ್ರಕಟಿಸಿದ 2025ನೇ ಸಾಲಿನ ಅತ್ಯನ್ನತ ನಾಗರಿಕ ಸೇವಾ ಪ್ರಶಸ್ತಿ ಪದ್ಮಭೂಷಣಕ್ಕೆ ಸ್ಯಾಂಡಲ್‌ವುಡ್‌ ಹಿರಿಯ ನಟ ಅನಂತ್‌ನಾಗ್‌ ಭಾಜನರಾಗಿದ್ದಾರೆ. ಒಟ್ಟೂ 19 ಸಾಧಕರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ ಮಾಡಲಾಗಿದ್ದು 113 ಸಾಧಕರಿಗೆ ಪದ್ಮಶ್ರೀ ಪ್ರಶಸ್ತಿ ಘೋಷಿಸಿದ್ದಾರೆ. ಕಲಾ ವಿಭಾಗದಲ್ಲಿ ಹಿರಿಯ ನಟ ಅನಂತ್‌ನಾಗ್‌ ಗೌರವಕ್ಕೆ ಪಾತ್ರರಾಗಿದ್ದಾರೆ.

ಹಿರಿಯ ನಟ ಅನಂತ್ ನಾಗ್ ಗೆ ಪದ್ಮಭೂಷಣ ಪ್ರಶಸ್ತಿ ಘೋಷಣೆ Read More »

ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ|ಸುಳ್ಯ ತಾಲೂಕಿನ ಕಲಾವಿದರಿಗೆ ಮುಕ್ತ ಅವಕಾಶ

ಸಮಗ್ರ ನ್ಯೂಸ್: ಬೆಂಗಳೂರಿನ ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ. ಚಲನಚಿತ್ರದ ಚಿತ್ರೀಕರಣವನ್ನು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಆಸುಪಾಸಿನಲ್ಲಿ ಮಾಡುತ್ತಿದ್ದು, ಇದೀಗ ಕಲಾವಿದರಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ನಟನೆಯಲ್ಲಿ ಆಸಕ್ತಿ ಉಳ್ಳವರು ಹಾಗೂ ನಾಟಕದ ಹಿನ್ನೆಲೆ ಇರುವವರು ನಿಮ್ಮ ಅಭಿನಯದ ವಿಡಿಯೋವನ್ನು ಭವಿಷ್ಯ ಸಿನೆಮಾಸ್ ಸಂಸ್ಥೆಯ ವಾಟ್ಸ್ ಪ್ ನಂಬರ್ 7483953979 ಗೆ ಕಳುಹಿಸುವಂತೆ ಮನವಿ ಮಾಡಿಕೊಂಡಿದ್ದಾರೆ. ಸಂಪರ್ಕಿಸಿ: 7483953979

ಭವಿಷ್ಯ ಸಿನೆಮಾಸ್ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸ ಚಲನಚಿತ್ರಕ್ಕೆ ಕಲಾವಿದರು ಬೇಕಾಗಿದ್ದಾರೆ|ಸುಳ್ಯ ತಾಲೂಕಿನ ಕಲಾವಿದರಿಗೆ ಮುಕ್ತ ಅವಕಾಶ Read More »

‘ಕಾಂತಾರ-೨’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಬೆಂಕಿ ಹಚ್ಚಿ‌ ಹಾನಿ ಆರೋಪ; ದೂರು ದಾಖಲು

ಸಮಗ್ರ ನ್ಯೂಸ್: ರಿಷಬ್ ಶೆಟ್ಟಿ ನಟಿಸಿ ನಿರ್ದೇಶಿಸುತ್ತಿರುವ ‘ಕಾಂತಾರ 2’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಹಾನಿ ಮಾಡಿದ ಆರೋಪ ಕೇಳಿ ಬಂದಿದೆ. ಅರಣ್ಯದ ಜಾಗದಲ್ಲಿ ಬೆಂಕಿ ಹಚ್ಚಿ ಪರಿಸರಕ್ಕೆ ಹಾನಿ ಮಾಡಲಾಗುತ್ತಿದೆ ಎಂದು ದೂರಲಾಗಿದೆ. ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಹೆರೂರು ಗ್ರಾಮದ ಅರಣ್ಯ ಪ್ರದೇಶದಲ್ಲಿ ‘ಕಾಂತಾರ -2’ ಚಿತ್ರದ ಶೂಟಿಂಗ್ ನಡೆಯುತ್ತಿದೆ. ಹೊಸೂರು ಗ್ರಾಮ ಪಂಚಾಯಿತಿಯ ಹೆರೂರು ಗ್ರಾಮದಲ್ಲಿ ಚಿತ್ರೀಕರಣ ಸ್ಥಳದಲ್ಲಿ ಅರಣ್ಯಕ್ಕೆ ಹಾನಿ ಮಾಡಲಾಗಿದೆ. ಜನವರಿ 2ರಿಂದ ಸಿನಿಮಾ ಚಿತ್ರೀಕರಣ ನಡೆಯುತ್ತಿದೆ. ಚಿತ್ರೀಕರಣಕ್ಕಾಗಿ ಗೋಮಾಳ

‘ಕಾಂತಾರ-೨’ ಚಿತ್ರತಂಡದ ವಿರುದ್ಧ ಅರಣ್ಯಕ್ಕೆ ಬೆಂಕಿ ಹಚ್ಚಿ‌ ಹಾನಿ ಆರೋಪ; ದೂರು ದಾಖಲು Read More »

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ

ಸಮಗ್ರ ನ್ಯೂಸ್: ಬಾಲಿವುಡ್ ನಟ ಸೈಫ್ ಅಲಿ ಖಾನ್ ಬಾಂದ್ರಾ (ಪಶ್ಚಿಮ) ದಲ್ಲಿರುವ ಅವರ ನಿವಾಸಕ್ಕೆ ದರೋಡೆಕೋರನೊಬ್ಬ ನುಗ್ಗಿ ಚಾಕುವಿನಿಂದ ಇರಿದ ಪರಿಣಾಮ ಗಾಯಗೊಂಡಿದ್ದಾರೆ. ಗುರುವಾರ ಬೆಳಗಿನ ಜಾವ 2:30 ರ ಸುಮಾರಿಗೆ ನಟ ತಮ್ಮ ಇತರ ಕುಟುಂಬ ಸದಸ್ಯರೊಂದಿಗೆ ಮನೆಯಲ್ಲಿ ಮಲಗಿದ್ದಾಗ ಈ ಘಟನೆ ಸಂಭವಿಸಿದೆ. ಮನೆಯಲ್ಲಿದ್ದವರು ಎಚ್ಚರಗೊಂಡು ದರೋಡೆಕೋರನನ್ನು ಪತ್ತೆಹಚ್ಚಲು ಪ್ರಯತ್ನಿಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬಾಂದ್ರಾ ಪೊಲೀಸರು ಎಫ್‌ಐಆರ್ ದಾಖಲಿಸುವ ಪ್ರಕ್ರಿಯೆಯಲ್ಲಿದ್ದಾರೆ ಮತ್ತು ಅಪರಾಧಿಯನ್ನು ಹಿಡಿಯಲು ಹಲವಾರು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಹಿರಿಯ

ಬಾಲಿವುಡ್ ನಟ ಸೈಫ್ ಅಲಿಖಾನ್ ಗೆ ಚೂರಿ ಇರಿತ Read More »

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್

ಸಮಗ್ರ ನ್ಯೂಸ್‌: ಬಾಲಿವುಡ್ ಬೆಡಗಿ ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು, ಮಾಜಿ ಪಿಎಂ ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಜೀವ ತುಂಬಿದ್ದಾರೆ. ಈ ಚಿತ್ರದ 2ನೇ ಟ್ರೈಲರ್ ಇದಾಗಿದ್ದು, ಇಂದಿರಾ ಗಾಂಧಿ ಪಾತ್ರದಲ್ಲಿ ಕಂಗನಾ ಪರಕಾಯ ಪ್ರವೇಶ ಮಾಡಿದ್ದಾರೆ. 1975ರಲ್ಲಿ ಮಾಜಿ ಪ್ರಧಾನಿ ದಿವಂಗತ ಇಂದಿರಾ ಗಾಂಧಿ ಅವರು ದೇಶದಲ್ಲಿ ತುರ್ತು ಪರಿಸ್ಥಿತಿ ಜಾರಿ ಮಾಡಿದ ಐತಿಹಾಸಿಕ ಸನ್ನಿವೇಶದ ಚಿತ್ರಣ ಹೊಂದಿರುವ ಸಿನಿಮಾ ಇದಾಗಿದೆ. ರಾಜಕೀಯ ಮತ್ತು ಭಾವನಾತ್ಮಕ ಸನ್ನಿವೇಶಗಳನ್ನು ಇಂದಿರಾ

ಕಂಗನಾ ರಣಾವತ್ ನಟನೆಯ ‘ಎಮರ್ಜೆನ್ಸಿ’ ಚಿತ್ರದ ಟ್ರೈಲರ್ ರಿಲೀಸ್ Read More »

ತೆಲುಗು ಬಿಗ್ ಬಾಸ್ ವಿನ್ನರ್ ಆಗಿ ಕನ್ನಡಿಗ ನಿಖಿಲ್ ಮಲಿಯಕ್ಕಲ್

ಸಮಗ್ರ ನ್ಯೂಸ್: ತೆಲುಗು ಬಿಗ್‌ಬಾಸ್‌ ಸೀಸನ್‌ 8ರ ವಿನ್ನರ್‌ ಆಗಿ‌ ನಿಖಿಲ್ ಮಲಿಯಕ್ಕಲ್ ಹೊರಹೊಮ್ಮಿದ್ದಾರೆ. ಭಾನುವಾರ ನಡೆದ ಗ್ರ್ಯಾಂಡ್‌ ಫಿನಾಲೆಯಲ್ಲಿ ನಿಖಿಲ್ ಅವರನ್ನು ವಿನ್ನರ್‌ ಎಂದು ಘೋಷಿಸಲಾಗಿದೆ. ಶೋ ನಡೆಸಿಕೊಟ್ಟ ನಟ ಅಕ್ಕಿನೇನಿ ನಾಗಾರ್ಜುನ್‌ ಹಾಗೂ ವಿಶೇಷ ಅತಿಥಿಯಾಗಿ ಆಗಮಿಸಿದ್ದ ನಟ ರಾಮ್‌ ಚರಣ್‌ ಅವರ ಸಮ್ಮುಖದಲ್ಲಿ ಈ ಬಗ್ಗೆ ಅಧಿಕೃತ ಘೋಷಣೆಯಾಗಿದೆ. ಟಾಲಿವುಡ್‌ನ ಮೆಗಾ ಪವರ್‌ಸ್ಟಾರ್ ರಾಮ್ ಚರಣ್ ಅವರು ಬಿಗ್‌ಬಾಸ್‌ ವಿಜೇತರನ್ನು ಘೋಷಿಸಿದರು. ಉಗುರು ಕಚ್ಚುವ ಸ್ಪರ್ಧೆಯಲ್ಲಿ ಸಹ ಫೈನಲಿಸ್ಟ್ ಗೌತಮ್ ಕೃಷ್ಣ ವಿರುದ್ಧ

ತೆಲುಗು ಬಿಗ್ ಬಾಸ್ ವಿನ್ನರ್ ಆಗಿ ಕನ್ನಡಿಗ ನಿಖಿಲ್ ಮಲಿಯಕ್ಕಲ್ Read More »