ಸಿನಿಮಾ

“ಮಿಸೆಸ್ ಇಂಡಿಯಾ” ಆಗಿ ನಿವೇದಿತಾ ಗೌಡಗೆ ಪ್ರಶಸ್ತಿ

ಸಮಗ್ರ ನ್ಯೂಸ್: ಕನ್ನಡದ ಹೆಸರಾಂತ ಗಾಯಕ ಚಂದನ್ ಶೆಟ್ಟಿ ಪತ್ನಿ ನಿವೇದಿತಾ ಗೌಡ ಮಿಸೆಸ್​ ಇಂಡಿಯಾ 2022 ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ಈ ಬಗ್ಗೆ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್​ ಮಾಡಿಕೊಂಡಿದ್ದಾರೆ. ಎಲ್ಲರಿಗೂ ಗೊತ್ತಿರುವಂತೆ ನಿವೇದಿತಾ ಗೌಡ ಒಂದು ಯೂಟ್ಯೂಬ್​ ಚಾನೆಲ್​ ಕೂಡ ಹೊಂದಿದ್ದಾರೆ. ಅದರಲ್ಲಿ ಅವರು ಹೋಮ್​ ಟೂರ್, ಬಟ್ಟೆ ಕಲೆಕ್ಷನ್ ಹಾಗೂ ಬ್ಯಾಗ್​ ಕಲೆಕ್ಷನ್​ ಸೇರಿದಂತೆ ಹಲವಾರು ರೀತಿಯ ವಿಡಿಯೋಗಳನ್ನು ಮಾಡಿ ಅಭಿಮಾನಿಗಳ ಜೊತೆ ಶೇರ್ ಮಾಡಿಕೊಳ್ಳುತ್ತಿರುತ್ತಾರೆ. ಈ ಬಾರಿ ಮಿಸೆಸ್​ ಇಂಡಿಯಾಗೆ ಅವರು ಹೇಗೆಲ್ಲಾ […]

“ಮಿಸೆಸ್ ಇಂಡಿಯಾ” ಆಗಿ ನಿವೇದಿತಾ ಗೌಡಗೆ ಪ್ರಶಸ್ತಿ Read More »

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ನಟ ಸೂರ್ಯ ಮತ್ತು ಅಜಯ್ ದೇವಗನ್‌ ಅತ್ಯುತ್ತಮ ನಟರು| “ಡೊಳ್ಳು” ಕನ್ನಡದ ಅತ್ಯುತ್ತಮ ಚಿತ್ರ

ಸಮಗ್ರ ನ್ಯೂಸ್: 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ವಿಜೇತರನ್ನು ಘೋಷಿಸಲಾಗಿದ್ದು ತಮಿಳು ನಟ ಸೂರ್ಯ ಮತ್ತು ಅಜಯ್ ದೇವಗನ್ ಕ್ರಮವಾಗಿ ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್ಸಂಗ್ ವಾರಿಯರ್ ಚಿತ್ರಗಳಲ್ಲಿನ ಅಭಿನಯಕ್ಕಾಗಿ ಅತ್ಯುತ್ತಮ ನಟ ಪ್ರಶಸ್ತಿಯನ್ನು ಹಂಚಿಕೊಂಡಿದ್ದಾರೆ. ನಟಿ ಅಪರ್ಣಾ ಬಾಲಮುರಳಿ ಸೂರರೈ ಪೊಟ್ರು ಚಿತ್ರದಲ್ಲಿನ ನಟನೆಗಾಗಿ ಅತ್ಯುತ್ತಮ ನಟಿ ಪ್ರಶಸ್ತಿಯನ್ನು ಪಡೆದರು. ಕನ್ನಡದ ಅತ್ಯುತ್ತಮ ಚಿತ್ರ ಪ್ರಶಸ್ತಿಯನ್ನು “ಡೊಳ್ಳು” ಪಡೆದುಕೊಂಡಿತು. 68 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಶುಕ್ರವಾರ ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಘೋಷಿಸಲಾಯಿತು.

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ| ನಟ ಸೂರ್ಯ ಮತ್ತು ಅಜಯ್ ದೇವಗನ್‌ ಅತ್ಯುತ್ತಮ ನಟರು| “ಡೊಳ್ಳು” ಕನ್ನಡದ ಅತ್ಯುತ್ತಮ ಚಿತ್ರ Read More »

ಕ್ರೇಜಿಸ್ಟಾರ್ ರವಿಚಂದ್ರನ್ ಮಗನ ಕ್ರಿಯೇಟಿವ್ ವೆಡ್ಡಿಂಗ್ ಕಾರ್ಡ್ ರೆಡಿ

ಬೆಂಗಳೂರು: ಕ್ರೇಜಿಸ್ಟಾರ್ ರವಿಚಂದ್ರನ್ ಪುತ್ರ ಮನೋರಂಜನ್ ವೈವಾಹಿಕ ಜೀವನಕ್ಕೆ ಕಾಲಿಡುತ್ತಿದ್ದು, ಅವರ ಮದುವೆಯ ಆಮಂತ್ರಣ ಪತ್ರಿಕೆ ಹೊರಬಂದಿದೆ. ಮನೋರಂಜನ್ ಆಗಸ್ಟ್ 20 ಮತ್ತು 21 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಸಂಗೀತಾ ದೀಪಕ್ ಎಂಬವರ ಜೊತೆ ಮದುವೆಯಾಗಲಿದ್ದಾರೆ. ಈ ಕಾರ್ಯಕ್ರಮಕ್ಕೆ ರವಿಚಂದ್ರನ್ ಕುಟುಂಬ ವಿಶಿಷ್ಟವಾಗಿ ವೆಡ್ಡಿಂಗ್ ಕಾರ್ಡ್ ತಯಾರಿಸಿದೆ. ಆಮಂತ್ರಣ ಪತ್ರಿಕೆಯಲ್ಲಿ ರವಿಮಾಮನ ವಿಶಿಷ್ಟ ಪೋಟೋವಿದ್ದು ಜೊತೆಗೆ ಹೃದಯದ ವಿನ್ಯಾಸವಿದೆ.

ಕ್ರೇಜಿಸ್ಟಾರ್ ರವಿಚಂದ್ರನ್ ಮಗನ ಕ್ರಿಯೇಟಿವ್ ವೆಡ್ಡಿಂಗ್ ಕಾರ್ಡ್ ರೆಡಿ Read More »

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ Read More »

“ಅದು ಕನ್ನಡ್ ಅಲ್ಲ ಕನ್ನಡ ” | ಸುದೀಪ್ ಮಾತು ವೈರಲ್

ಸಮಗ್ರ ನ್ಯೂಸ್: ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ವಿಕ್ರಾಂತ್ ರೋಣ ಪ್ರಚಾರ ಕಾರ್ಯ ದೆಹಲಿ ಸೇರಿದಂತೆ ಹಲವೆಡೆ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರಚಾರ ಕಾರ್ಯದಲ್ಲಿ ಕಿಚ್ಚನ ಒಂದು ಮಾತು ಕನ್ನಡಿಗರ ಅಭಿಮಾನ ಹೆಚ್ಚು ಮಾಡಿದೆ. ಈ ಮೊದಲು ಹಿಂದಿ ರಾಷ್ಟ್ರಭಾಷೆಯ ಕುರಿತು ಬಾಲಿವುಡ್ ನಟ ಅಜಯ್ ದೇವಗನ್ ಜೊತೆಗಿನ ಟ್ವೀಟ್ ವಾರ್‌ನಿಂದ ಕನ್ನಡಾಭಿಮಾನ ಮೆರೆದಿದ್ದ ಸುದೀಪ್‌, ಇದೀಗ ಸ್ಟೇಜ್ ಮೇಲೆ ಕನ್ನಡದ ಬಗೆಗಿನ ಅವರ ಮಾತು ಫುಲ್ ವೈರಲ್ ಆಗುತ್ತಿದೆ. ನಿನ್ನೆ ವಿಕ್ರಾಂತ್ ರೋಣ ಸಿನಿಮಾದ

“ಅದು ಕನ್ನಡ್ ಅಲ್ಲ ಕನ್ನಡ ” | ಸುದೀಪ್ ಮಾತು ವೈರಲ್ Read More »

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ನ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ Read More »

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್

ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ಸೂಪರ್ ಡೂಪರ್ ಹಿಟ್ ಸಿನಿಮಾ ‘ಬಾಹುಬಲಿ ದಿ ಬಿಗಿನಿಂಗ್’ ಬಿಡುಗಡೆಯಾಗಿ ಇಂದಿಗೆ 7 ವರ್ಷಗಳನ್ನು ಪೂರೈಸಿದೆ. ಟಾಲಿವುಡ್ ಮಾತ್ರವಲ್ಲದೆ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಈ ಚಿತ್ರವನ್ನು ಅರ್ಕ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಶೋಬು ಯರ್ಲಗಡ್ಡ ಹಾಗೂ ಪ್ರಸಾದ್ ದೇವಿನೇನಿ ನಿರ್ಮಾಣ ಮಾಡಿದ್ದರು, ಎಂ ಎಂ ಕೀರವಾಣಿ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದರು. ರಾಜಮೌಳಿ ಕುಟುಂಬದ ಬಹುತೇಕ ಮಂದಿ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ‘ಬಾಹುಬಲಿ ‘

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್ Read More »

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ಪುನೀತ್ ರಾಜ್ ಕುಮಾರ್ ನಿಧನವನ್ನು ಇನ್ನೂ ಅವರ ಅಭಿಮಾನಿಗಳು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಅಗಲಿ ಎಂಟು ತಿಂಗಳು ಕಳೆದರೂ, ಅಭಿಮಾನಿಗಳು ಇನ್ನೂ ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ‘ಕಾಣೆಯಾಗಿದ್ದಾರೆ’ ಎನ್ನುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟ ಕಾಣೆಯಾಗಿದ್ದಾರೆ ಹುಡುಕಿಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು ಎಂದು ಭಿತ್ತಿ ಪತ್ರವನ್ನು ಅಂಟಿಸುತ್ತಿದ್ದಾರೆ. ಹುಡುಗನೊಬ್ಬ ಭಿತ್ತಿ ಪತ್ರವನ್ನು ಗೋಡೆಗೆ ಅಂಟಿಸಿ ಕಾಣೆಯಾಗಿರುವ ತಮ್ಮ ನೆಚ್ಚಿನ ನಟನನ್ನು ಹುಡುಕಿಕೊಡಿ ಎಂದು

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್ Read More »