ಸಿನಿಮಾ

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ

ಬೆಂಗಳೂರು: ಕಿರುತೆರೆಯಲ್ಲಿ ಹಲವು ಧಾರಾವಾಹಿಗಳಲ್ಲಿ ನಟಿಸಿದ ಹಿರಿಯ ನಟ ಯಲಹಂಕ ಬಾಲಾಜಿ ನಿಧನರಾಗಿದ್ದಾರೆ. ನ್ಯೂಮೋನಿಯಾದಿಂದ ಬಳಲುತ್ತಿದ್ದ ಹಿರಿಯ ನಟ ಬಾಲಾಜಿ ಕೆಲ ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಬುಧವಾರ ಕೊನೆಯುಸಿರೆಳೆದಿದ್ದಾರೆ. ಹಿರಿಯ ನಟ ಬಾಲಾಜಿ ರಾಜಕೀಯ ಕ್ಷೇತ್ರದಲ್ಲಿಯೂ ತೊಡಗಿಕೊಂಡಿದ್ದರು. ಹಿರಿಯ ಕಲಾವಿದನ ಅಗಲಿಕೆಗೆ ಸ್ಯಾಂಡಲ್​ವುಡ್ ನಟ-ನಟಿಯರು ಸಂತಾಪ ಸೂಚಿಸಿದ್ದಾರೆ. ಮಾಯಾಮೃಗ’, ‘ಮುಕ್ತ ಮುಕ್ತ’, ‘ಮಹಾ ಪರ್ವ’, ‘ಮನ್ವಂತರ’, ‘ಮುಕ್ತ’, ‘ಮಿಂಚು’, ‘ಮಗಳು ಜಾನಕಿ’, ‘ಚಂದಿರ’ ಮುಂತಾದ ಧಾರಾವಾಹಿಗಳಲ್ಲಿ ಯಲಹಂಕ ಬಾಲಾಜಿ ಅಭಿನಯಿಸಿದ್ದರು.

ಕಿರುತೆರೆ ಧಾರಾವಾಹಿ ಹಿರಿಯ ನಟ ಬಾಲಾಜಿ ನಿಧನ Read More »

“ಅದು ಕನ್ನಡ್ ಅಲ್ಲ ಕನ್ನಡ ” | ಸುದೀಪ್ ಮಾತು ವೈರಲ್

ಸಮಗ್ರ ನ್ಯೂಸ್: ಪ್ಯಾನ್ ಇಂಡಿಯಾ ಸಿನಿಮಾ ಆಗಿರುವ ವಿಕ್ರಾಂತ್ ರೋಣ ಪ್ರಚಾರ ಕಾರ್ಯ ದೆಹಲಿ ಸೇರಿದಂತೆ ಹಲವೆಡೆ ಭರ್ಜರಿಯಾಗಿ ನಡೆಯುತ್ತಿದೆ. ಈ ಮಧ್ಯೆ ಪ್ರಚಾರ ಕಾರ್ಯದಲ್ಲಿ ಕಿಚ್ಚನ ಒಂದು ಮಾತು ಕನ್ನಡಿಗರ ಅಭಿಮಾನ ಹೆಚ್ಚು ಮಾಡಿದೆ. ಈ ಮೊದಲು ಹಿಂದಿ ರಾಷ್ಟ್ರಭಾಷೆಯ ಕುರಿತು ಬಾಲಿವುಡ್ ನಟ ಅಜಯ್ ದೇವಗನ್ ಜೊತೆಗಿನ ಟ್ವೀಟ್ ವಾರ್‌ನಿಂದ ಕನ್ನಡಾಭಿಮಾನ ಮೆರೆದಿದ್ದ ಸುದೀಪ್‌, ಇದೀಗ ಸ್ಟೇಜ್ ಮೇಲೆ ಕನ್ನಡದ ಬಗೆಗಿನ ಅವರ ಮಾತು ಫುಲ್ ವೈರಲ್ ಆಗುತ್ತಿದೆ. ನಿನ್ನೆ ವಿಕ್ರಾಂತ್ ರೋಣ ಸಿನಿಮಾದ

“ಅದು ಕನ್ನಡ್ ಅಲ್ಲ ಕನ್ನಡ ” | ಸುದೀಪ್ ಮಾತು ವೈರಲ್ Read More »

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ

ಸಮಗ್ರ ನ್ಯೂಸ್: ಸ್ಯಾಂಡಲ್ ವುಡ್ನ ಉದಯೋನ್ಮುಖ ನಟ, ದಿಯಾ ಖ್ಯಾತಿಯ ಪೃಥ್ವಿ ಅಂಬರ್​ ತಾಯಿ ಸುಜಾತ ವೀರಪ್ಪ ಅಂಬರ್ ಹೃದಯ ಸಂಬಂಧಿ ಕಾಯಿಲೆಯಿಂದ ಇಂದು (ಜುಲೈ 15) ಮಂಗಳೂರಿನಲ್ಲಿ ನಿಧನರಾಗಿದ್ದಾರೆ. ಸುಜಾತ ಅವರು ವೀರಪ್ಪ ಅಂಬರ್ ಅವರ ಧರ್ಮಪತ್ನಿಯಾಗಿದ್ದು, ಹೃದಯದ ಸಮಸ್ಯೆಯಿಂದ ಬಳಲುತ್ತಿದ್ದರು. ಇವರ ಅಂತ್ಯಕ್ರಿಯೆ ಇಂದು ನಡೆಯಲಿದೆ. ದುರ್ಗಾಪರಮೇಶ್ವರಿ ಮಹಿಳಾ ಸಂಘದ ಕಾರ್ಯದರ್ಶಿಯಾಗಿದ್ದ ಸುಜಾತ ಅವರು ಹಲವು ರೀತಿಯ ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದರು. ಇನ್ನೂ ಇವರ ಪುತ್ರ ನಟ ಪೃಥ್ವಿ ಅಂಬರ್‌ ಸಿನಿಮಾ

ನಟ ಪೃಥ್ವಿ ಅಂಬರ್ ಗೆ ಮಾತೃವಿಯೋಗ Read More »

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್

ರಾಜಮೌಳಿ ನಿರ್ದೇಶನದ ಪ್ರಭಾಸ್ ನಟನೆಯ ಸೂಪರ್ ಡೂಪರ್ ಹಿಟ್ ಸಿನಿಮಾ ‘ಬಾಹುಬಲಿ ದಿ ಬಿಗಿನಿಂಗ್’ ಬಿಡುಗಡೆಯಾಗಿ ಇಂದಿಗೆ 7 ವರ್ಷಗಳನ್ನು ಪೂರೈಸಿದೆ. ಟಾಲಿವುಡ್ ಮಾತ್ರವಲ್ಲದೆ ಇಡೀ ಭಾರತ ಚಿತ್ರರಂಗವೇ ತಿರುಗಿ ನೋಡುವಂತೆ ಮಾಡಿದ ಈ ಚಿತ್ರವನ್ನು ಅರ್ಕ ಮೀಡಿಯಾ ವರ್ಕ್ಸ್ ಬ್ಯಾನರ್ ನಡಿ ಶೋಬು ಯರ್ಲಗಡ್ಡ ಹಾಗೂ ಪ್ರಸಾದ್ ದೇವಿನೇನಿ ನಿರ್ಮಾಣ ಮಾಡಿದ್ದರು, ಎಂ ಎಂ ಕೀರವಾಣಿ ಸಂಗೀತಕ್ಕೆ ಪ್ರೇಕ್ಷಕರು ಫಿದಾ ಆಗಿದ್ದರು. ರಾಜಮೌಳಿ ಕುಟುಂಬದ ಬಹುತೇಕ ಮಂದಿ ಈ ಸಿನಿಮಾದಲ್ಲಿ ಕೆಲಸ ಮಾಡಿದ್ದಾರೆ. ‘ಬಾಹುಬಲಿ ‘

ಬಾಹುಬಲಿ ಸಿನಿಮಾ ಬಿಡುಗಡೆಯಾಗಿ ಇಂದಿಗೆ 7 ವರ್ಷ ಕಂಪ್ಲೀಟ್ Read More »

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ

ಸಮಗ್ರ ನ್ಯೂಸ್: ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಕುರಿತಾಗಿ ಬಾಲಿವುಡ್ ನಲ್ಲಿ ಸಿನಿಮಾವೊಂದು ಮೂಡಿ ಬರುತ್ತಿದ್ದು, ಈಗಾಗಲೇ ಸಿನಿಮಾದ ಫಸ್ಟ್ ಲುಕ್ ಕೂಡ ರಿಲೀಸ್ ಆಗಿದೆ. ಈ ನಡುವೆ ವೀರ ಸಾವರ್ಕರ್ ಸಿನಿಮಾ ಮಾಡಿದರೆ, ಕೊಲ್ಲುವುದಾಗಿ ನಿರ್ಮಾಪಕರಿಗೆ ಬೆದರಿಕೆ ಹಾಕಿದ್ದಾರಂತೆ. ಈ ಕುರಿತು ಅವರು ಅಂಬೋಲಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. ಈಗಾಗಲೇ ಸಿನಿಮಾದ ಸಿದ್ಧತೆ ನಡೆಸಿದ್ದೇವೆ. ನಾಯಕರ ಆಯ್ಕೆಯಾಗಿದೆ. ವೀರ ಸಾವರ್ಕರ್ ಹುಟ್ಟು ಹಬ್ಬದ ದಿನದಂದು ಫಸ್ಟ್ ಲುಕ್ ಕೂಡ ರಿಲೀಸ್ ಮಾಡಲಾಗಿದೆ. ಇನ್ನೇನು ಶೂಟಿಂಗ್

‘ವೀರ ಸಾವರ್ಕರ್’ ಸಿನಿಮಾ ಮಾಡಿದರೆ ಕೊಲೆ ಮಾಡುವುದಾಗಿ ನಿರ್ಮಾಪಕನಿಗೆ ಬೆದರಿಕೆ Read More »

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ದಕ್ಷಿಣ ಭಾರತದ ಜನಪ್ರಿಯ ನಟ ಚಿಯಾನ್ ವಿಕ್ರಮ್‌ಗೆ ಹೃದಯಾಘಾತವಾಗಿದೆ. ಶುಕ್ರವಾರ (ಜುಲೈ 7) ಬೆಳಗ್ಗೆ ಹೃದಯಾಘಾತಕ್ಕೆ ಒಳಗಾಗಿದ್ದು, ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚೆನ್ನೈನ ಕಾವೇರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿಕ್ರಮ್ ಅಥವಾ ಚಿಯಾನ್ ವಿಕ್ರಮ್ ಎಂದೇ ಜನಪ್ರಿಯರಾಗಿರುವ ನಟನ ಅಸಲಿ ಹೆಸರು ಕೆನಡಿ ಜಾನ್ ವಿಕ್ಟರ್. ತಮಿಳು ಚಿತ್ರರಂಗದಲ್ಲಿ ಹಲವು ಏಳುಬೀಳು ಕಂಡಿರುವ ವಿಕ್ರಮ್ ಏಳು ಫಿಲಂಫೇರ್ ಪ್ರಶಸ್ತಿ ಪಡೆದಿದ್ದು, ಗಾಯಕರಾಗಿ ಕೂಡಾ ಹೆಸರುವಾಸಿಯಾಗಿದ್ದಾರೆ. ರಾಷ್ಟ್ರಪ್ರಶಸ್ತಿ ವಿಜೇತ ನಟ ವಿಕ್ರಮ್ ಹಲವು ಬಾರಿ

ತಮಿಳು ನಟ ವಿಕ್ರಂ ಗೆ ಹೃದಯಾಘಾತ; ಆಸ್ಪತ್ರೆಗೆ ದಾಖಲು Read More »

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್

ಸಮಗ್ರ ನ್ಯೂಸ್: ಪುನೀತ್ ರಾಜ್ ಕುಮಾರ್ ನಿಧನವನ್ನು ಇನ್ನೂ ಅವರ ಅಭಿಮಾನಿಗಳು ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ಅಗಲಿ ಎಂಟು ತಿಂಗಳು ಕಳೆದರೂ, ಅಭಿಮಾನಿಗಳು ಇನ್ನೂ ಅವರನ್ನು ನಾನಾ ರೀತಿಯಲ್ಲಿ ನೆನಪಿಸಿಕೊಳ್ಳುತ್ತಿದ್ದಾರೆ. ಇತ್ತೀಚಿನ ದಿನಗಳಲ್ಲಿ ‘ಕಾಣೆಯಾಗಿದ್ದಾರೆ’ ಎನ್ನುವ ಪೋಸ್ಟರ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಪ್ಪು ಅಭಿಮಾನಿಗಳು ತಮ್ಮ ನೆಚ್ಚಿನ ನಟ ಕಾಣೆಯಾಗಿದ್ದಾರೆ ಹುಡುಕಿಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು ಎಂದು ಭಿತ್ತಿ ಪತ್ರವನ್ನು ಅಂಟಿಸುತ್ತಿದ್ದಾರೆ. ಹುಡುಗನೊಬ್ಬ ಭಿತ್ತಿ ಪತ್ರವನ್ನು ಗೋಡೆಗೆ ಅಂಟಿಸಿ ಕಾಣೆಯಾಗಿರುವ ತಮ್ಮ ನೆಚ್ಚಿನ ನಟನನ್ನು ಹುಡುಕಿಕೊಡಿ ಎಂದು

“ಪುನೀತ್ ರಾಜ್ ಕುಮಾರ್ ಕಾಣೆಯಾಗಿದ್ದಾರೆ ಹುಡುಕಿ ಕೊಟ್ಟವರಿಗೆ ಕೇಳಿದ್ದನ್ನು ಕೊಡಲಾಗುವುದು” -ಪೋಸ್ಟರ್ ವೈರಲ್ Read More »

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್

ಸಮಗ್ರ ನ್ಯೂಸ್: ಮಲೆಯಾಳಂನ ಖ್ಯಾತ ನಟ ಶ್ರೀಜಿತ್ ರವಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಸಾರ್ವಜನಿಕವಾಗಿ ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ ಮಾಡಿದ ಆರೋಪದ ಮೇಲೆ ಶ್ರೀಜಿತ್ ರವಿ ಅವರನ್ನು ಪೋಕ್ಸೋ ಕಾಯ್ದೆಯಡಿ ಬಂಧಿಸಲಾಗಿದೆ. ಜುಲೈ 4 ರಂದು ಅಯ್ಯಂತೊಳೆ ಎಸ್‌ಎನ್‌ ಪಾರ್ಕ್‌ನಲ್ಲಿ ಈ ಘಟನೆ ನಡೆದಿದೆ.ಸದ್ಯ ಶ್ರೀಜಿತ್‌ ರವಿ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿಕೊಂಡು ಅವರನ್ನು ಬಂಧಿಸಲಾಗಿದೆ ಎಂದು ತ್ರಿಶೂರ್ ಪಶ್ಚಿಮ ವಿಭಾಗದ ಪೊಲೀಸರು ತಿಳಿಸಿದ್ದಾರೆ. ಇಬ್ಬರು ಅಪ್ರಾಪ್ತ ಬಾಲಕಿಯರು ನಿಂತಿದ್ದ ವೇಳೆ ತನ್ನ ಕಾರಿನಲ್ಲಿ ಕುಳಿತಿದ್ದ

ಬಾಲಕಿಯರ ಮುಂದೆ ಗುಪ್ತಾಂಗ ಪ್ರದರ್ಶನ| ನಟ ಶ್ರೀಜಿತ್‌ ರವಿ ಫೋಕ್ಸೋ ಕಾಯ್ದೆಯಡಿ ಅರೆಸ್ಟ್ Read More »

ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ

ಸಮಗ್ರ ನ್ಯೂಸ್ : ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ಅವರು 30 ವರ್ಷ ಪ್ರಾಯದ  ಯುವಕ ಇಹಲೋಕ ತ್ಯಜಿಸಿದ್ದಾರೆ. ಕಳೆದೊಂದು ವರ್ಷದಿಂದ ಕ್ಯಾನ್ಸರ್ ವಿರುದ್ಧ ಹೋರಾಡಿದ ಕಿಶೋರ್ ದಾಸ್ ಶನಿವಾರ ಮೃತಪಟ್ಟಿದ್ದಾರೆ. 300 ಕ್ಕೂ ಹೆಚ್ಚು ಮ್ಯೂಸಿಕ್ ವೀಡಿಯೊಗಳಲ್ಲಿ ನಟಿಸಿರುವ ನಟ ಕಿಶೋರ್ ದಾಸ್ ಮಾರ್ಚ್‌ನಿಂದ ಚಿಕಿತ್ಸೆ ಪಡೆಯುತ್ತಿದ್ದು, ಫಲಿಸದೆ ಚೆನ್ನೈನ ಆಸ್ಪತ್ರೆಯಲ್ಲಿ ನಿಧನರಾದರು.

ಜನಪ್ರಿಯ ಅಸ್ಸಾಮಿ ನಟ ಕಿಶೋರ್ ದಾಸ್ ನಿಧನ Read More »

ಗಂಡು ಮಗುವಿನ ಸಂತಸದಲ್ಲಿ ಕಿರುತೆರೆ ನಟಿ ಅಮೃತಾ ನಾಯ್ಡು

ಸಮಗ್ರ ನ್ಯೂಸ್: ಕಿರುತೆರೆ ನಟಿ ಅಮೃತಾ ನಾಯ್ಡು ಮನೆಯಲ್ಲಿ ಇದೀಗ ನೋವು ಮರೆಯಾಗಿ ಸಂತಸ ತಂದಿದೆ. ನಟಿಯ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ನಟಿ ಅಮೃತಾ ಗಂಡು ಮಗುವಿಗೆ ಜನ್ಮ ನೀಡಿದ್ದು, ದಂಪತಿಗಳು ಸಂತೋಷದಲ್ಲಿದ್ದಾರೆ. ನಟಿ ಅಮೃತಾ ಜುಲೈ 2 ರಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ತಾಯಿ ಮತ್ತು ಮಗು ಇಬ್ಬರು ಆರೋಗ್ಯವಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಈ ಸಂತೋಷದ ವಿಚಾರವನ್ನು ನಟಿ ಅಮೃತಾ ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿಕೊಂಡಿದ್ದು,

ಗಂಡು ಮಗುವಿನ ಸಂತಸದಲ್ಲಿ ಕಿರುತೆರೆ ನಟಿ ಅಮೃತಾ ನಾಯ್ಡು Read More »