ಸುಹಾಸ್ ಶೆಟ್ಟಿ ಹತ್ಯೆ ನಂತರ ಇನ್ನಿಬ್ಬರು ಹಿಂದೂ ಮುಖಂಡರಿಗೆ ಬೆದರಿಕೆ: ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್
ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಿಂದೂ ಕಾರ್ಯಕರ್ತ ಹಾಗೂ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಮೇ 1 ರಂದು ನಡೆದಿದೆ. ಇದೀಗ ತನಿಖೆಯು ನಡೆಯುತ್ತಿದ್ದು ಇದರ ಬೆನ್ನಲ್ಲೇ ಮಂಗಳೂರಿನಲ್ಲಿ ಹಿಂದೂ ಮುಖಂಡರಿಗೆ ಕಿಡಿಗೇಡಿಗಳಿಂದ ಜೀವ ಬೆದರಿಕೆ ಹಾಕಲಾಗುತ್ತಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಮತ್ತು ಭರತ್ ಕುಮ್ಡೇಲ್ ಎಂದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್ ಮಾಡಲಾಗಿದೆ. ಮೇ 5ರಂದು ರಾತ್ರಿ 9.30ಕ್ಕೆ ನಿನ್ನ ಸ್ಥಳದಲ್ಲೇ ಕೊಲ್ಲುವುದಾಗಿ ಕಿಡಿಗೇಡಿಗಳು ಹಿಂದೂ ಮುಖಂಡ ಭರತ್ ಕುಮ್ಡೇಲ್ಗೆ ಜೀವ ಬೆದರಿಕೆ […]