ಕರಾವಳಿ

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು

ಸಮಗ್ರ ನ್ಯೂಸ್: ಲೋಕಸಭೆ ಚುನಾವಣೆಗೆ ಎರಡನೇ ಹಂತದ (ಕರ್ನಾಟಕದಲ್ಲಿ ಮೊದಲ ಹಂತ) ಮತದಾನ ಇಂದು ನಡೆಯುತ್ತಿದ್ದು ದ.ಕ ಜಿಲ್ಲೆಯ ಬೆಳ್ತಂಗಡಿತಾಲೂಕಿನ ನೆರಿಯ ಗ್ರಾಮದ ಬಾಂಜಾರು ಮಲೆಯಲ್ಲಿ ಶೇ.100 ಮತದಾನವಾಗಿದೆ. ದ.ಕ‌ ಜಿಲ್ಲೆಯ ಅತ್ಯಂತ ಕುಗ್ರಾಮವಾಗಿರುವ ಬಾಂಜಾರು ಮಲೆಯ ಸಮುದಾಯ ಭವನದಲ್ಲಿ ನಡೆದ ಮತದಾನದಲ್ಲಿ ಎಲ್ಲರೂ ತಮ್ಮ ಹಕ್ಕುಗಳನ್ನು ಚಲಾಯಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದಾರೆ. ನೂರು ಶೇಖಡಾ ಮತದಾನವಾದ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. ಬಾಂಜಾರು ಮಲೆ ಮತಗಟ್ಟೆಯಲ್ಲಿ 4 ಗಂಟೆಯ ಸುಮಾರಿಗೆ ಶೇ.100 […]

ದ.ಕ ಜಿಲ್ಲೆಯ ಈ ಮತಗಟ್ಟೆಯಲ್ಲಿ ಶೇ.100 ಮತದಾನ| ದೇಶಕ್ಕೆ ಮಾದರಿಯಾದ ಕುಗ್ರಾಮದ ಮತದಾರರು Read More »

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ

ಸಮಗ್ರ ನ್ಯೂಸ್‌ : ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ 80ನೇ ಬಡಗಬೆಟ್ಟು ಗ್ರಾಪಂನ ರಾಜೀವ ನಗರ ಸಂಯುಕ್ತ ಪ್ರೌಢಶಾಲೆಯ ಮತಗಟ್ಟೆಯಲ್ಲಿ ವ್ಯಕ್ತಿಯೊಬ್ಬರ ಹೆಸರಿನಲ್ಲಿ ಬೇರೆ ವ್ಯಕ್ತಿ ಆಗಮಿಸಿ ಮತದಾನ ಮಾಡಿದ್ದು, ಇಲ್ಲಿ ನಕಲಿ ಮತದಾನ ನಡೆದಿರುವ ಆರೋಪಗಳು ಕೇಳಿಬಂದಿವೆ. ಅರ್ಬಿಯ ಕೃಷ್ಣ ನಾಯಕ್ ಎಂಬವರು ಮತದಾನ ಮಾಡಲು ಮತಗಟ್ಟೆಗೆ ಆಗಮಿಸಿದಾಗ ತಮ್ಮ ಹೆಸರಿನಲ್ಲಿ ಆಗಲೇ ಮತದಾನ ಮಾಡಿರುವುದಾಗಿ ಮತ ಗಟ್ಟೆ ಅಧಿಕಾರಿಗಳು ತಿಳಿಸಿದರು. ಆದರೆ ನಾನು ಮತದಾನ ಮಾಡಿಲ್ಲ ಎಂದು ಕೃಷ್ಣ ನಾಯಕ್ ವಾದ ಮಂಡಿಸಿದರು. ಇದರಿಂದ

ಉಡುಪಿ: ರಾಜೀವನಗರ ಮತಗಟ್ಟೆಯಲ್ಲಿ ನಕಲಿ ಮತದಾನದ ಆರೋಪ Read More »

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ

ಸಮಗ್ರ ನ್ಯೂಸ್: ಸುಳ್ಯದ ಕುರುಂಜಿ ವೆಂಕಟ್ರಮಣ ಗೌಡ ಪಾಲಿಟೆಕ್ನಿಕ್ ನ ಇಂಡಿಯನ್ ಸೊಸೈಟಿ ಫಾರ್ ಟೆಕ್ನಿಕಲ್ ಎಜುಕೇಶನ್ (ಐ.ಎಸ್.ಟಿ.ಇ) ಇದರ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪ ಪ್ರಾಂಶುಪಾಲ ಅಣ್ಣಯ್ಯ ಕೆ. ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು.ವ್ರತ್ತಿಪರ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ವ್ರತ್ತಿ ಅಭಿವ್ರದ್ಧಿ ಮತ್ತು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಪೂರಕ ಕಾರ್ಯಕ್ರಮಗಳನ್ನು ರೂಪಿಸುತ್ತಿರುವ ಐ.ಎಸ್‌.ಟಿ.ಇ ಸಂಸ್ಥೆಯ ಬಗ್ಗೆ ಸಂಚಾಲಕ

ಸುಳ್ಯ: ಕೆವಿಜಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಐ.ಎಸ್.ಟಿ.ಇ ವಿದ್ಯಾರ್ಥಿ ಘಟಕದ ನೂತನ ಸದಸ್ಯರಿಗೆ ಸ್ವಾಗತ, ಉಪನ್ಯಾಸ Read More »

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಸಮಗ್ರ ನ್ಯೂಸ್‌ : ಮತದಾನದ ವೇಳೆ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಮಧ್ಯೆ ಮಾತಿನ ಚಕಮಕಿ ನಡೆದ ಘಟನೆ ಕಡಬದ ಬಿಳಿನೆಲೆ ಮತಗಟ್ಟೆ ಬಳಿ ನಡೆದಿದೆ. ಮತಗಟ್ಟೆ ಕೇಂದ್ರದ ಗೇಟಿನ ಬಳಿ ಪ್ರಚಾರಕ್ಕೆ ಯತ್ನಿಸಿದ್ದ ಒಂದು ರಾಜಕೀಯ ಪಕ್ಷದ ಕಾರ್ಯಕರ್ತರು ನಡೆಯನ್ನು ಇನ್ನೊಂದು ಪಕ್ಷದ ಕಾರ್ಯಕರ್ತರು ತೀವ್ರವಾಗಿ ಆಕ್ಷೇಪಿಸಿದ್ದಾರೆ. ಈ ಸಂದರ್ಭ ಎರಡೂ ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ವಿಕೋಪಕ್ಕೆ ತಿರುಗುವ ಸಂದರ್ಭ ಪೊಲೀಸರು ಮಧ್ಯ ಪ್ರವೇಶಿಸಿ ಕಾರ್ಯಕರ್ತರನ್ನು ಚದುರಿಸಿದ್ದಾರೆ.

ಪುತ್ತೂರು: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ Read More »

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ

ಸಮಗ್ರ ನ್ಯೂಸ್‌ : ಮುಂದಿನ ಐದು ವರ್ಷ ಯಾವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ವೋಟ್ ಮಾಡ್ತೇನೆ. ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು ಎಂದು ನಟ, ನಿರ್ದೇಶಕ ರಕ್ಷಿತ್ ಶೆಟ್ಟಿ ಹೇಳಿದರು. ಉಡುಪಿ ಕುಕ್ಕಿಕಟ್ಟೆ ಶಾಲೆಯ ಮತಗಟ್ಟೆಯಲ್ಲಿ ಮತದಾನ ಮಾಡಿ ಮಾಧ್ಯಮದವರೊಂದಿಗೆ ಮಾತನಾಡಿದರು. ಐದು ವರ್ಷದಲ್ಲಿ ಏನು ಅಭಿವೃದ್ಧಿಯಾಗಿದೆ ಎಂದು ನೋಡಿ ವೋಟ್ ಹಾಕುತ್ತೇನೆ. ಯೋಚನೆ ಮಾಡಿ ರಾಜಕೀಯ ತಿಳಿದವರ ಜೊತೆ ತರ್ಕ ಮಾಡಿ ಮತ ಹಾಕುತ್ತೇನೆ. ಯಾವಾಗಲೂ ನಾನು ಒಂದು ನಿರ್ಧಾರಕ್ಕೆ

ಉಡುಪಿ: ದೇಶವನ್ನು ಚೆನ್ನಾಗಿ ನಡೆಸಿಕೊಂಡು ಹೋಗುವ ನಾಯಕ ಅಧಿಕಾರಕ್ಕೆ ಬರಬೇಕು-ರಕ್ಷಿತ್ ಶೆಟ್ಟಿ Read More »

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ

ಸಮಗ್ರ ನ್ಯೂಸ್‌ : ನಮಗೆ ಬೇಕಾಗಿರುವ ಸರಕಾರ ರೂಪಿಸುವ ದೊಡ್ಡ ಬದ್ಧತೆ ಪ್ರಜೆಗಳ ಮೇಲೆ ಇದೆ. ಹೀಗಾಗಿ ಎಲ್ಲಾ ಪ್ರಜೆಗಳು ತಪ್ಪದೇ ಮತದಾನ ಮಾಡಬೇಕು. ಯಾರು ಕೂಡ ಮತದಾನದಿಂದ ದೂರ ಉಳಿಯಬಾರದು ಎಂದು ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ಹೇಳಿದರು. ಮತದಾನ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾನ ಮಾಡಿ ತುಂಬಾ ಹೆಮ್ಮೆ ಅನಿಸುತ್ತಿದೆ. ರಾಮದೇವರ ಪ್ರಾಣ ಪ್ರತಿಷ್ಠೆ ಮಾಡಿದಾಗ ಅನುಭವಿಸಿದ ಧನ್ಯತಾಭಾವ ಈಗಲೂ ಅನುಭವಿಸಿದ್ದೇವೆ. ದೇಶದಲ್ಲಿ ಎಲ್ಲಾ ಬಗೆಯ ಜನ ಎಲ್ಲಾ ಕಾಲಕ್ಕೂ ಇರುತ್ತಾರೆ.

ಉಡುಪಿ: ಮತದಾನದಿಂದ ದೂರ ಉಳಿದವರಿಗೆ ಪೌರತ್ವ ಕೊಡಬಾರದು- ಪೇಜಾವರ ಶ್ರೀ Read More »

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ

ಸಮಗ್ರ ನ್ಯೂಸ್‌ : ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಬಿರುಸಿನಿಂದ ಮತದಾನ ನಡೆಯುತ್ತಿದ್ದು, ಸಂಜೆ 5ಗಂಟೆಯ ವೇಳೆ ಶೇ. 72.13 ರಷ್ಟು ಮತದಾನವಾಗಿದೆ. ಕಾರ್ಕಳ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಶೇ. 73.53, ಕಾಪುವಿನಲ್ಲಿ ಶೇ.74.50, ಕುಂದಾಪುರದಲ್ಲಿ ಶೇ.74.28, ಉಡುಪಿಯಲ್ಲಿ ಶೇ.72.52, ಚಿಕ್ಕಮಗಳೂರಿನಲ್ಲಿ ಶೇ. 66.13, ಮೂಡುಗೆರೆಯಲ್ಲಿ ಶೇ. 73.48, ಶೃಂಗೇರಿಯಲ್ಲಿ ಶೇ. 75.02 ಹಾಗೂ ತರೀಕೆರೆಯಲ್ಲಿ ಶೇ. 69.06ರಷ್ಟು ಮತದಾನವಾಗಿದೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಿಂದ ತಿಳಿದುಬಂದಿದೆ.

ಉಡುಪಿ-ಚಿಕ್ಕಮಗಳೂರು ಕ್ಷೇತ್ರ| ಸಂಜೆ 5ಗಂಟೆಗೆ ಶೇ. 72.13ರಷ್ಟು ಮತದಾನ Read More »

ಪುತ್ತೂರು: ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾ

ಸಮಗ್ರ ನ್ಯೂಸ್‌ : ದಕ್ಷಿಣಕನ್ನಡ ಜಿಲ್ಲೆಯಲ್ಲಿ ಉರಿ ಬಿಸಿಲು ಹೆಚ್ಚಾಗಿದೆ. ಇಂದು ನಗರದ ತೆಂಕಿಲದ ವಿವೇಕಾನಂದ ಶಾಲೆಯಲ್ಲಿ ಮಸ್ಟರಿಂಗ್ ಕೇಂದ್ರ ಕಾರ್ಯಾಚರಿಸುತ್ತಿದೆ. ಇದೀಗ ಮಸ್ಟರಿಂಗ್ ಕೇಂದ್ರದಿಂದ ತಮ್ಮ ತಮ್ಮ ಮತಗಟ್ಟೆಗಳಿಗೆ ಚುನಾವಣಾ ಕರ್ತವ್ಯ ಸಿಬ್ಬಂದಿಗಳು ತೆರಳಿದ್ದಾರೆ. ಇನ್ನು ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾಗಿದ್ದಾರೆ. ಬಿಸಿಲಿನ ಝಳವನ್ನು ತಪ್ಪಿಸಲು ಮತದಾನದ ಪರಿಕರಗಳನ್ನೇ ತಡೆಯಾಗಿ ಸಿಬ್ಬಂದಿಗಳು ಬಳಸಿಕೊಂಡದ್ದು ಕಂಡು ಬಂತು. ಕೆಲವರು ಇವಿ ಪ್ಯಾಟ್ ಪೆಟ್ಟಿಗೆಯನ್ನು ತಲೆಯಲ್ಲಿಟ್ಟು ಬಿಸಿಲಿನ ಪ್ರಕರತೆ ತಪ್ಪಿಸಿಕೊಳ್ಳುತ್ತಿದ್ದಾರೆ. ಇನ್ನು ಕೆಲವರು ಮತಯಂತ್ರ ಮರೆಯಾಗಿ ಇಡುವ

ಪುತ್ತೂರು: ಬಿಸಿಲಿನ ತಾಪಕ್ಕೆ ಮತಗಟ್ಟೆ ಸಿಬ್ಬಂದಿಗಳು ಹೈರಾಣಾ Read More »

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸಮಗ್ರ ನ್ಯೂಸ್‌ : ಸ್ಲೀಪರ್ ಕೋಚ್ ಬಸ್‌ನಲ್ಲಿ ಬೆಂಗಳೂರಿನಿಂದ ಬಂಟ್ವಾಳಕ್ಕೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ಮೂಲದ ಮಹಮ್ಮದ್ ಅಝೀಮ್ ಬಂಧಿತ ಆರೋಪಿಯಾಗಿದ್ದಾನೆ. ಬೆಂಗಳೂರಿನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಯುವತಿಯೊಂದಿಗೆ ಸಹಪ್ರಯಾಣಿಕನಾಗಿದ್ದ ಆರೋಪಿ ಅಝೀಮ್ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದನು. ಬಸ್‌ ಸಕಲೇಶಪುರ ಕಳೆದು ಮುಂದಕ್ಕೆ ಸಾಗುತ್ತಿದ್ದಂತೆಯೇ ಮಲಗಿದ್ದ ವಿದ್ಯಾರ್ಥಿನಿಯ ಮೈಮೇಲೆ ಸಹಪ್ರಯಾಣಿಕ ಕೈ ಮಾಡಿರುವುದು ಕಂಡು ಬಂತು. ಕೃತ್ಯವನ್ನು ಬಸ್ಸಿನ ಚಾಲಕನ ಗಮನಕ್ಕೆ ತಂದರು. ಆದರೆ ಚಾಲಕನಿಂದ

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ Read More »

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು

ಸಮಗ್ರ ನ್ಯೂಸ್: ಜೀಪೊಂದು‌ ಬೈಕ್ ಮೇಲೆ‌ ಮಗುಚಿ ಬಿದ್ದ ಪರಿಣಾಮ ಬೈಕ್‌ ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಕೊನೆಯುಸಿರು ಎಳೆದಿರುವ ಘಟನೆ ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಮಾರ್ಗ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಅಜ್ಜಾವರ ಮೂಲದ ದಂಪತಿಗಳು ಗಂಭೀರ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತು. ಈ ಪೈಕಿ ವಿನಾಯಕ ಮೂರ್ತಿ ಎಂಬುವವರು ಮೃತಪಟ್ಟಿರುವುದಾಗಿ ತಿಳಿದು ಬಂದಿದ್ದು, ಇವರ ಪತ್ನಿಯನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಮೃತಪಟ್ಟ ವ್ಯಕ್ತಿಯ ಮೃತದೇಹ ಸುಳ್ಯದ ಕೆವಿಜಿ ಆಸ್ಪತ್ರೆಯಲ್ಲಿ ಇರುವುದಾಗಿ ತಿಳಿದುಬಂದಿದೆ. ಸುಳ್ಯ

ಸುಳ್ಯ: ಬೈಕ್‌ ಮೇಲೆ ಪಲ್ಟಿ ಹೊಡೆದ ಜೀಪು| ಗಂಭೀರ ಗಾಯಗೊಂಡಿದ್ದ ಸವಾರ ಸಾವು Read More »