ಕರಾವಳಿ

ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ-ದೂರು ದಾಖಲು

ಸಮಗ್ರ ನ್ಯೂಸ್ : ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ತಕರಾರು ತೆಗೆದ ದಯಾನಂದ, ಅಚ್ಚುತ ಹಾಗೂ ಇಬ್ಬರು ಅಪರಿಚಿತರು ಹಲ್ಲೆ ನಡೆಸಿ, ಜೀವಬೆದರಿಕೆ ಹಾಕಿರುವುದಾಗಿ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇಂದು ಬೆಳಗಿನ ಜಾವ, ತನ್ನ ಆಟೋರಿಕ್ಷಾದಲ್ಲಿ ಪ್ರಯಾಣಿಕರೊಬ್ಬರಿಗೆ ಡ್ರಾಪ್ ಕೊಡಲು ಪುತ್ತೂರು ತಾಲೂಕು ಪಡವನ್ನೂರು ಗ್ರಾಮದ ಕೆಳಗಿನ ಕನ್ನಡ್ಕ ಬಸ್ ನಿಲ್ದಾಣ ಬಲಿ ಬಂದಿದ್ದಾಗ ದಯಾನಂದ, ಅಚ್ಚುತ ಹಾಗೂ ಮತ್ತಿಬ್ಬರು ಅಪರಿಚಿತರು ಆಟೋ ಬಳಿ ಬಂದು, ಈ ಹಿಂದೆ ಠಾಣೆಯಲ್ಲಿ ದಾಖಲಾದ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ತಕರಾರು ತೆಗೆದು

ಪುತ್ತೂರು: ಆಟೋಚಾಲಕನ ಮೇಲೆ ಹಲ್ಲೆ, ಜೀವಬೆದರಿಕೆ-ದೂರು ದಾಖಲು Read More »

ಮಂಗಳೂರು: ಕಾಂಗ್ರೆಸ್‍ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಕರೆ

ಸಮಗ್ರ ನ್ಯೂಸ್ : ಲೋಕಸಭಾ ಚುನಾವಣೆಗೆ ಬಿಜೆಪಿ ಭರ್ಜರಿ ತಯಾರಿ ಶುರು ಮಾಡಿದ್ದು, ಕರ್ನಾಟಕದ ಚುಕ್ಕಾಣಿ ಹಿಡಿಯಬೇಕೆಂದು ಬಿಜೆಪಿ ನಾನಾ ತಂತ್ರಗಳನ್ನು ಹೆಣೆಯುತ್ತಿದೆ. ಇಂತಹ ಸಮಯದಲ್ಲೇ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕಾಂಗ್ರೆಸ್‍ನ ರಕ್ಷಿತ್ ಶಿವರಾಂ ಅವರನ್ನು ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಬೆಳ್ತಂಗಡಿ ವಿಧಾನಸಭೆಯ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ ಸೋಲಿನ ಬಗ್ಗೆ ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಅಸಮಾಧಾನ ಹೊರ ಹಾಕಿದ್ದು ಅಚ್ಚರಿಯ ಹೇಳಿಕೆ ನೀಡಿದ್ದಾರೆ.

ಮಂಗಳೂರು: ಕಾಂಗ್ರೆಸ್‍ನ ರಕ್ಷಿತ್ ಶಿವರಾಂ ಬೆಂಬಲಿಸುವಂತೆ ಬಿಜೆಪಿ ಶಾಸಕ ಉಮಾನಾಥ್ ಕೋಟ್ಯಾನ್ ಕರೆ Read More »

ಮಂಗಳೂರಿನಲ್ಲಿ ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಹೊಡೆದ ಸೊಸೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ, ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಸೊಸೆ ಹೊಡೆದಿರುವಂತಹ ವಿಡಿಯೋ ಇದೀಗ ಬೆಳಕಿಗೆ ಬಂದಿದೆ. ಮಾರ್ಚ್ 9 ರಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕುಲಶೇಖರ ನಿವಾಸಿ ಪದ್ಮನಾಭ ಸುವರ್ಣ (76) ಎಂಬುವವರು ಹಲ್ಲೆಗೊಳಗಾದವರು, ಇವರ ಮಗಪ್ರೀತಂ. ಇವರು ವಿದೇಶದಲ್ಲಿ ಕೆಲಸದಲ್ಲಿದ್ದಾರೆ, ಆದರೆ ಮನೆಯಲ್ಲಿ ಸಿಸಿಟಿವಿಯನ್ನು ತನ್ನ ಮೊಬೈಲಿಗೆ ಕನೆಕ್ಟ್‌ ಮಾಡಿದ್ದರು. ತನ್ನ ಪತ್ನಿ ಉಮಾಶಂಕರಿ ಅವರು ಎರಡು ದಿನಗಳ ಹಿಂದೆ ವಾಕಿಂಗ್‌ ಸ್ಟಿಕ್‌ನಲ್ಲಿ ತಂದೆ ಮೇಲೆ ಹಲ್ಲೆ

ಮಂಗಳೂರಿನಲ್ಲಿ ಅಮಾನವೀಯ ಘಟನೆ: ವೃದ್ಧ ಮಾವನಿಗೆ ವಾಕಿಂಗ್ ಸ್ಟಿಕ್​​ನಲ್ಲಿ ಹೊಡೆದ ಸೊಸೆ Read More »

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ

ಸಮಗ್ರ ನ್ಯೂಸ್: ನೇತ್ರಾವತಿ ಸೇತುವೆಯ ಕೆಳಗೆ ಅಪರಿಚಿತ ಶವವೊಂದು ಪತ್ತೆಯಾಗಿದೆ. ಧರ್ಮಸ್ಥಳ ಠಾಣಾಧಿಕಾರಿ ಅನಿಲ್‌ ಕುಮಾರ್‌ ಕರೆ ಮಾಡಿ ತಿಳಿಸಿದ ಕೂಡಲೇ ಶೌರ್ಯ ತುರ್ತು ಸ್ಪಂದನ ತಂಡದ ಸ್ವಯಂಸೇವಕರು ಸ್ಪಂದಿಸಿ ಶವವನ್ನು ನೀರಿನಿಂದ ಮೇಲಕ್ಕೆತ್ತಿದ್ದಾರೆ. ಧರ್ಮಸ್ಥಳ ಠಾಣೆಯ ಆರಕ್ಷಕರಾದ ಸಾಮ್ಯುವೆಲ್‌ ಹಾಗೂ ಧರ್ಮಪಾಲ ಅವರ ಉಪಸ್ಥಿತಿಯಲ್ಲಿ ಮಂಗಳೂರಿನ ಸರಕಾರಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಧರ್ಮಸ್ಥಳ: ನೇತ್ರಾವತಿ ಸೇತುವೆ ಬಳಿ ಅಪರಿಚಿತ ಶವ ಪತ್ತೆ Read More »

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ

ಸಮಗ್ರ ನ್ಯೂಸ್ : ರಸ್ತೆ ಬದಿ ನಿಲ್ಲಿಸಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಮರೀಲ್ ನ ಕ್ಯಾಂಪ್ಕೋ ಚಾಕೊಲೇಟ್ ಫ್ಯಾಕ್ಟರಿ ಬಳಿ ನಡೆದಿದೆ. ಗುಲಾಬಿ (55), ಕೃಷ್ಣಪ್ಪ ನಾಯ್ಕ್ (60) ಇಬ್ಬರಿಗೆ ಗಂಭೀರ ಗಾಯ, ರೋಹಿಣಿ (32), ಗನ್ಯ (2) ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಕಾಸರಗೋಡು ಜಿಲ್ಲೆಯ ಪೈವಳಿಕೆ ಗ್ರಾಮದ ಸುಳ್ಳಿಮಲೆಯ ಒಂದೇ ಕುಟುಂಬದ ನಿವಾಸಿಗಳು ಕಾರಿನಲ್ಲಿ ಬರುತ್ದಿದ್ದ ವೇಳೆ ಎದುರಿಗೆ

ಪುತ್ತೂರು – ನಿಂತಿದ್ದ ಗೂಡ್ಸ್ ಲಾರಿಗೆ ಕಾರು ಢಿಕ್ಕಿ – ನಾಲ್ವರು ಗಂಭೀರ Read More »

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು

ಸಮಗ್ರ ನ್ಯೂಸ್ : ಪೊಲೀಸರ ಮೇಲೆ ಹತ್ತಕ್ಕೂ ಹೆಚ್ಚು ಮಂದಿಯ ತಂಡವೊಂದು ಹಲ್ಲೆ ನಡೆಸಿದ ಘಟನೆ ತೆಂಕ ಕಾರಂದೂರು ಗ್ರಾಮದ ಪೆರಾಲ್ಡಕಟ್ಟೆ ಸಮೀಪ ಸಂಭವಿಸಿದ್ದು ಘಟನೆಯ ಬಗ್ಗೆ ಮೂವರ ವಿರುದ್ಧ ಹಾಗೂ ಇತರ ಅಪರಿಚಿತರ ವಿರುದ್ಧ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿ ತಿಳಿದು ಬಂದಿದೆ. ಮಹೇಶ್, ಸುರೇಶ್, ಅರುಣ್ ಹಾಗೂ ಇತರ ಹತ್ತಕ್ಕೂ ಹೆಚ್ಚು ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ವೇಣೂರು ಪೊಲೀಸ್ ಠಾಣೆಯ ಎ.ಎಸ್.ಐ ರಾಮಯ್ಯ ಹೆಗ್ಡೆ ಅವರು ಯುವಕರ

ಬೆಳ್ತಂಗಡಿ: ಪೊಲೀಸರ ಮೇಲೆ ಹಲ್ಲೆ- ಪ್ರಕರಣ ದಾಖಲು Read More »

ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ

ಸಮಗ್ರ ನ್ಯೂಸ್ : ಸುಳ್ಳು ಆರೋಪಗಳನ್ನು ಹೊರಿಸಿ, ಕರ್ತವ್ಯದ ಸಮಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ವೇಣೂರು ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಶಿರ್ಲಾಲು ಗ್ರಾಮದ ಬಗ್ಯೋಟ್ಟು ಮನೆಯ ಮಾಧವ ಕುಲಾಲ್ ಶಿರ್ಲಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಜಯ ಲಕ್ಷ್ಮೀ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದು, ಕೆಲಸಕ್ಕೆ ತೆರಳುವ ಸಮಯ ಆತನ ಆಟೋರಿಕ್ಷಾದಲ್ಲಿ ಹಿಂಬಾಲಿಸುತ್ತ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.

ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ Read More »

ಕಡಬ: ಯವತಿಯ ಜತೆ ಸರ್ಕಾರಿ ಬಸ್ ನಿರ್ವಾಹಕ ಅನುಚಿತ ವರ್ತನೆ

ಸಮಗ್ರ ನ್ಯೂಸ್ : ಉಪ್ಪಿನಂಗಡಿಯಿಂದ ಕಡಬ ಮೂಲಕ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಸರಕಾರಿ ಬಸ್ ನಿಗದಿತ ಸ್ಥಳದಲ್ಲಿ ನಿಲ್ಲಿಸದೆ ಯುವತಿಯ ಜತೆ ಅನುಚಿತ ವರ್ತನೆ ತೋರಿದ ಅರೋಪದಲ್ಲಿ ಬಸ್ ನಿರ್ವಾಹಕನನ್ನು ಕಡಬ ಪೋಲೀಸರು ವಶಕ್ಕೆ ಪಡೆದ ಘಟನೆ ಕಡಬದಲ್ಲಿ ಶನಿವಾರ ಸಂಭವಿಸಿದೆ. ರಾಮಕುಂಜ ಸಮೀಪದ ಕುಂಡಾಜೆ ಎಂಬ ಪ್ರದೇಶದಿಂದ ಯುವತಿ ಬಸ್ ಹತ್ತಿದ್ದು, ಆಲಂಕಾರಿಗೆ ಟಿಕೆಟ್ ಕೊಡಿ ಎಂದು ಯುವತಿ ಹೇಳಿದ್ದರೂ ನಿರ್ವಾಹಕ ಕಡಬಕ್ಕೆ ಟಿಕೆಟ್ ನೀಡಿ ಯುವತಿ ಹೇಳಿದ ಸ್ಥಳದಲ್ಲಿ ನಿಲ್ಲಿಸದೆ ಪ್ರಯಾಣ ಮುಂದುವರಿಸಿದರು. ಯುವತಿ ತಾನು

ಕಡಬ: ಯವತಿಯ ಜತೆ ಸರ್ಕಾರಿ ಬಸ್ ನಿರ್ವಾಹಕ ಅನುಚಿತ ವರ್ತನೆ Read More »

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಸಮಗ್ರ ನ್ಯೂಸ್ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಧರ್ಮಸ್ಥಳದ ಕಜೋಡಿ ಮೂಲಿಕ್ಕಾರ್‌ನಲ್ಲಿ ನಡೆದಿದೆ. ಧರ್ಮಸ್ಥಳ ಗ್ರಾಮದ ಮೂಲಿಕ್ಕಾರ್ ನಿವಾಸಿ ರಾಮಣ್ಣ ಹಾಗೂ ಗೀತಾ ದಂಪತಿಗಳ ಪುತ್ರ ವಿಘ್ನೇಶ್ (19 ) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಮನೆಯ ಕೊಟ್ಟಿಗೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ಆತ್ಮಹತ್ಯೆ ದಾಖಲಾಗಿದೆ.

ಬೆಳ್ತಂಗಡಿ : ಉಜಿರೆ ಖಾಸಗಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು

ಸಮಗ್ರ ನ್ಯೂಸ್ : ಬೈಕ್‌ಗಳ ನಡುವೆ ಅಪಘಾತ ಸಂಭವಿಸಿ ಹಾಲಿನ ಡೈರಿಗೆ ಹೋಗುತ್ತಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಕಾಣಿಯೂರು ಸಮೀಪದ ಬರೆಪ್ಪಾಡಿ ಎಂಬಲ್ಲಿ ನಡೆದಿದೆ. ಮೃತಪಟ್ಟ ಮಹಿಳೆ ಬರೆಪ್ಪಾಡಿ ನಿವಾಸಿ ನಾರಾಯಣ ಭಟ್ ಎಂಬವರ ಪತ್ನಿ ವೈಶಾಲಿ (45) ಎಂದು ಗುರುತಿಸಲಾಗಿದೆ. ತನ್ನ ಮನೆಯಿಂದ ಹಾಲಿನ ಡೈರಿಗೆಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಬೈಕ್‌ಗಳೆರಡು ಅಪಘಾತವಾಗಿದೆ. ಒಂದು ಬೈಕ್ ರಸ್ತೆಯಂಚಿನಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಗೆ ಢಿಕ್ಕಿಯಾಗಿದೆ ಎನ್ನಲಾಗಿದೆ. ಅಪಘಾತದ ರಭಸಕ್ಕೆ ಪಾದಾಚಾರಿ ಮಹಿಳೆ ಮೃತಪಟ್ಟಿರುವುದಾಗಿ ಮಾಹಿತಿ ತಿಳಿದು

ಕಾಣಿಯೂರು: ಬೈಕ್‌ಗಳ ನಡುವೆ ಅಪಘಾತ- ಪಾದಾಚಾರಿ ಮಹಿಳೆ ಸಾವು Read More »