ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ
ಸಮಗ್ರ ನ್ಯೂಸ್ : ಸುಳ್ಳು ಆರೋಪಗಳನ್ನು ಹೊರಿಸಿ, ಕರ್ತವ್ಯದ ಸಮಯ ಅವಾಚ್ಯ ಶಬ್ದಗಳಿಂದ ನಿಂದಿಸಿ ಬೆದರಿಕೆ ಒಡ್ಡಿದ ಕುರಿತು ಆಶಾ ಕಾರ್ಯಕರ್ತೆ ಒಬ್ಬರು ವೇಣೂರು ಠಾಣೆಯಲ್ಲಿ ದೂರು ದಾಖಲಿಸಿರುವ ಘಟನೆ ನಡೆದಿದೆ. ಶಿರ್ಲಾಲು ಗ್ರಾಮದ ಬಗ್ಯೋಟ್ಟು ಮನೆಯ ಮಾಧವ ಕುಲಾಲ್ ಶಿರ್ಲಾಲು ಪ್ರಾಥಮಿಕ ಆರೋಗ್ಯ ಕೇಂದ್ರದ ಆಶಾ ಕಾರ್ಯಕರ್ತೆ ಜಯ ಲಕ್ಷ್ಮೀ ಅವರ ಮೇಲೆ ಸುಳ್ಳು ಆರೋಪ ಹೊರಿಸಿ, ಮೇಲಾಧಿಕಾರಿಗಳಿಗೆ ದೂರು ನೀಡುತ್ತಿದ್ದು, ಕೆಲಸಕ್ಕೆ ತೆರಳುವ ಸಮಯ ಆತನ ಆಟೋರಿಕ್ಷಾದಲ್ಲಿ ಹಿಂಬಾಲಿಸುತ್ತ ತೊಂದರೆ ನೀಡುತ್ತಿದ್ದ ಎಂದು ದೂರಲಾಗಿದೆ.
ಬೆಳ್ತಂಗಡಿ: ಆಶಾ ಕಾರ್ಯಕರ್ತೆ ಮೇಲೆ ಸುಳ್ಳು ಆರೋಪ, ಬೆದರಿಕೆ Read More »










