ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದರ ಬಾಲೆ

ಸಮಗ್ರ ನ್ಯೂಸ್: ಭಕ್ತರೊಬ್ಬರು ಕಳೆದುಕೊಂಡ ಹಣದ ಬಂಡಲನ್ನು ಐದರ ಹರೆಯದ ಬಾಲಕಿಯೊಬ್ಬಳ ಪ್ರಾಮಾಣಿಕತೆಯಿಂದ ವಾರಿಸುದಾರರ ಕೈ ಸೇರುವಂತಾದ ಘಟನೆ ದಕ್ಷಿಣ ಕನ್ನಡದ ಪುರಾಣ ಪ್ರಸಿದ್ದ ಕ್ಷೇತ್ರ ಕುಕ್ಕೆಸುಬ್ರಹ್ಮಣ್ಯದಲ್ಲಿ ನಡೆದಿದೆ. ಬೆಂಗಳೂರು ಮೂಲದ ಶ್ರೀಧರ ಎಂಬವರು ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಕೆ ತೀರಿಸಲು ಬಂದಿದ್ದರು.ಈ ಸಂದರ್ಭ ತಮ್ಮ ಬ್ಯಾಗ್ ನಲ್ಲಿದ್ದ ಸುಮಾರು ಐವತ್ತು ಸಾವಿರ ನೋಟಿನ ಕಂತೆ ಆಕಸ್ಮಿಕವಾಗಿ ಬಿದ್ದು ಹೋಗಿತ್ತು. ದೇಗುಲದ ಜಮಾ ಉಗ್ರಾಣ ಬಳಿ ಇರುವ ಹಣ್ಣು ಕಾಯಿ ಅಂಗಡಿ ಬಳಿಯಲ್ಲಿ ಬಿದ್ದಿದ್ದ ಈ ನೋಟಿನ ಕಂತೆ

ಕುಕ್ಕೆ ಸುಬ್ರಹ್ಮಣ್ಯ: ಬಿದ್ದು ಸಿಕ್ಕಿದ ಹಣ ಮರಳಿಸಿ ಪ್ರಾಮಾಣಿಕತೆ ಮೆರೆದ ಐದರ ಬಾಲೆ Read More »

ಪುತ್ತೂರು: ಕೇವಲ ಕೇಸರಿ ಶಾಲು ಹಾಕಿದರೆ ಹಿಂದುತ್ವ ಆಗುತ್ತಾ..? ಪುತ್ತಿಲ ಪರಿವಾರದಿಂದ ಜೀವಕ್ಕೇ ಅಪಾಯವಿದೆ”| ಪುತ್ತಿಲ ಪರಿವಾರ ವಿರುದ್ಧ ಸಂತೋಷ್ ಕುಟುಂಬ ವಾಗ್ದಾಳಿ

ಸಮಗ್ರ ನ್ಯೂಸ್: ಮಂತ್ರಾಕ್ಷತೆ ಹಂಚುವ ವಿಚಾರದಲ್ಲೇ ಪುತ್ತಿಲ ಪರಿವಾರದ ಸದಸ್ಯರಿಂದ ನಮ್ಮ ಮೇಲೆ ಹಲ್ಲೆ ನಡೆದಿದೆ ನಮಗೆ ಬದುಕಲು ಬಿಡುತ್ತಿಲ್ಲ ನಮ್ಮ ಜೀವಕ್ಕೆ ಅಪಾಯವಿದೆ ಎಂದು ಜ. 16ರಂದು ನಡೆದ ಸುದ್ದಿಗೋಷ್ಟಿಯಲ್ಲಿ ಹಲ್ಲೆಗೊಳಗಾದ ಸಂತೋಷ್ ಅಳಲು ತೋಡಿಕೊಂಡಿದ್ದಾರೆ. ತಮ್ಮ ಕುಟುಂಬದ ಜೊತೆ ಸೇರಿ ಪುತ್ತೂರಿನಲ್ಲಿ ಸುದ್ದಿಗೋಷ್ಟಿ ನಡೆಸಿದ ಸಂತೋಷ್, ಹಲ್ಲೆ ಮಾಡಿದವರು ಮತ್ತು ನಮ್ಮ ನಡುವೆ ಕಳೆದ ಮೂರು ವರ್ಷಗಳಿಂದ ದಾರಿ ವಿವಾದವಿದೆ. ಆದರೂ ನಾವು ಯಾವತ್ತೂ ಅವರ ಜೊತೆಗೆ ತಕರಾರು ಎತ್ತಲು ಹೋಗಿಲ್ಲ. ಆದರೆ ರಾಮಮಂದಿರದ

ಪುತ್ತೂರು: ಕೇವಲ ಕೇಸರಿ ಶಾಲು ಹಾಕಿದರೆ ಹಿಂದುತ್ವ ಆಗುತ್ತಾ..? ಪುತ್ತಿಲ ಪರಿವಾರದಿಂದ ಜೀವಕ್ಕೇ ಅಪಾಯವಿದೆ”| ಪುತ್ತಿಲ ಪರಿವಾರ ವಿರುದ್ಧ ಸಂತೋಷ್ ಕುಟುಂಬ ವಾಗ್ದಾಳಿ Read More »

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್

ಸಮಗ್ರ ನ್ಯೂಸ್: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ

ಉಡುಪಿ ಪರ್ಯಾಯ ಮಹೋತ್ಸವಕ್ಕೆ 10 ಕೋಟಿ ಬಿಡುಗಡೆಗೆ ಕ್ರಮ – ಲಕ್ಷ್ಮೀ ಹೆಬ್ಬಾಳ್ಕರ್ Read More »

ಸುಳ್ಯ: ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ದಿಯಾ ಡಿ.ಎಸ್. ಪ್ರಥಮ

ಸಮಗ್ರ ನ್ಯೂಸ್: ಯಾಮೊಟೋ ಶೋಟೋಕಾನ್ ಕರಾಟೆ ಅಸೋಸಿಯನ್ನ್ ಟ್ರಸ್ಟ್ ಮಂಗಳೂರು ಹಾಗೂ ರೋಟರಿ ಕ್ಲಬ್ ಲೊರೊಟೊ ಹಿಲ್ಸ್ ಬಂಟ್ವಾಳ, ರೋಟರಿ ಕ್ಲಬ್ ಸಿದ್ದಕಟ್ಟೆ, ಪಲ್ಗುಣಿ ರೋಟರಿ ಕ್ಲಬ್, ಬಿ.ಸಿ ರೋಡು ಸಿಟಿ ವತಿಯಿಂದ ಬಿ.ಸಿ ರೋಡ್ ಸ್ಪರ್ಶ ಕಲಾಮಂದಿರದಲ್ಲಿ ಜ. 14ರಂದು ನಡೆದ ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ 2024ರ ಕಟಾ ಮತ್ತು ಕುಮಿಟೆ ವಿಭಾಗದಲ್ಲಿ ದಿಯಾ ಡಿ.ಎಸ್. ಪ್ರಥಮ ಸ್ಥಾನ‌ ಪಡೆದಿದ್ದಾರೆ. ವೆಸ್ಟರ್ನ್ ಇನ್ಸ್ಟಿಟ್ಯೂಟ್ ಆಪ್ ಮಾರ್ಷಲ್ ಆಟ್ಸ್ ವತಿಯಿಂದ ಮಂಗಳೂರಿನ

ಸುಳ್ಯ: ಎರಡನೇ ರಾಜ್ಯ ಮಟ್ಟದ ಆಹ್ವಾನಿತ ಕರಾಟೆ ಚಾಂಪಿಯನ್‌ ಶಿಪ್ ನಲ್ಲಿ ದಿಯಾ ಡಿ.ಎಸ್. ಪ್ರಥಮ Read More »

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಶ್ರೀ ದಿನೇಶ್ ಕುಮಾರ್

ಸಮಗ್ರ ನ್ಯೂಸ್: ನೈಸರ್ಗಿಕ ಕಾರಣಗಳನ್ನು ಹೊರತುಪಡಿಸಿ ರಸ್ತೆ ಅಪಘಾತಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಾವು ನೋವುಗಳು ಉಂಟಾಗುತ್ತದೆ. ದೇಶಾದ್ಯಂತ ಲಕ್ಷಾಂತರ ಜನ ರಸ್ತೆ ಅಫಘಾತಗಳಲ್ಲಿ ಸಾವನ್ನಪ್ಪುತ್ತಾರೆ. ಮಂಗಳೂರು ನಗರದಲ್ಲಿ ಪ್ರತೀ ವರ್ಷ ಸುಮಾರು 800 ರಿಂದ 900 ಅಪಘಾತ ಪ್ರಕರಣಗಳು ವರದಿಯಾಗುತ್ತದೆ. 900 ರಿಂದ 1000 ಜನ ನೋವನ್ನು ಅನುಭವಿಸುತ್ತಾರೆ ಮತ್ತು ಮತ್ತು ಹಲವರು ಗಾಯಾಳುಗಳಾಗುತ್ತಾರೆ. ಅದರಲ್ಲಿ 100 ರಿಂದ 125 ರಷ್ಟು ಜನ ಪ್ರಾಣವನ್ನು ಕಳಕೊಳ್ಳುತ್ತಾರೆ. ರಸ್ತೆ ಅಪಘಾತಗಳನ್ನು ಕಡಿಮೆ ಮಾಡಬೇಕನ್ನುವಂತಹ ಕಾರಣದಿಂದ ಮಿನಿಷ್ಟ್ರಿ ಆಫ್ ರೋಡ್

ರಸ್ತೆ ಸುರಕ್ಷತಾ ನಿಯಮಗಳನ್ನು ಪಾಲಿಸಿ, ಜೀವ ಉಳಿಸಿಕೊಳ್ಳಿ: ಶ್ರೀ ದಿನೇಶ್ ಕುಮಾರ್ Read More »

ಸುಳ್ಯ: ಮೊಗ್ರ ಜಾತ್ರೆಗೆ ಗೊನೆ ಮುಹೂರ್ತ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮೊಗ್ರ ಶ್ರೀ ಕನ್ನಡ ದೇವತೆ ಯಾನೆ ಪುರುಷ ದೈವಸ್ಥಾನದಲ್ಲಿ ಜ. 19 ರಿಂದ 23ರವರೆಗೆ ನಡೆಯುವ ಕಾಲಾವಧಿ ಜಾತ್ರಾ ಉತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು. ದೈವಸ್ಥಾನದ ಆಡಳಿತ ಮೊಕ್ತೇಸರ ಎಮ್.ಎನ್ ವೆಂಕಟ್ರಮಣ ಮೊಗ್ರ, ಮೊಕ್ತೇಸರ ಕಾರ್ಯಪ್ಪ ಗೌಡ ಚಿಕ್ಮುಳಿ, ಕಾರ್ಯನಿರ್ವಹಣಾ ಮೊಕ್ತೇಸರ ಚೆನ್ನಕೇಶವ ಗೌಡ ಕಮಿಲ, ಉಮೇಶ ಗೌಡ ಮಕ್ಕಿ , ಹೆಬ್ಬಾರರಾದ ಕೇಶವ ಗೌಡ ಬಳ್ಳಕ್ಕ,ಪೂಜಾರಿ ವರ್ಗ, ಸೇವಕರು ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಸುಳ್ಯ: ಮೊಗ್ರ ಜಾತ್ರೆಗೆ ಗೊನೆ ಮುಹೂರ್ತ Read More »

ಪುತ್ತೂರು: ಅಕ್ಷತೆ ಹಂಚುತ್ತಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ರಾ‌ ಪುತ್ತಿಲ ಪರಿವಾರ? ನಿಜಕ್ಕೂ ಅಲ್ಲಿ ಆಗಿದ್ದೇನು? ಎಸ್ಪಿ ರಿಷ್ಯಂತ್ ನೀಡಿದ ಎಚ್ಚರಿಕೆ ಏನು?

ಸಮಗ್ರ ನ್ಯೂಸ್: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ಸಿ.ಬಿ ಸ್ಪಷ್ಟನೆ ನೀಡಿದ್ದಾರೆ. ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದ್ದು, ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ. ಈತ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತೋಷ್ ಮುಂಡೂರು ಗ್ರಾಮದಲ್ಲಿ ರಾಮಮಂದಿರದ ಅಕ್ಷತೆ ಹಂಚುವ

ಪುತ್ತೂರು: ಅಕ್ಷತೆ ಹಂಚುತ್ತಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ರಾ‌ ಪುತ್ತಿಲ ಪರಿವಾರ? ನಿಜಕ್ಕೂ ಅಲ್ಲಿ ಆಗಿದ್ದೇನು? ಎಸ್ಪಿ ರಿಷ್ಯಂತ್ ನೀಡಿದ ಎಚ್ಚರಿಕೆ ಏನು? Read More »

ಧರ್ಮಸ್ಥಳ: ನೈತಿಕ ಪೊಲೀಸ್ ಗಿರಿ| ಭಿನ್ನಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು

ಸಮಗ್ರ ನ್ಯೂಸ್ : ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿಯ ಘಟನೆ ಮರುಕಳಿಸಿದೆ. ಕ್ಷೇತ್ರಕ್ಕೆ ಮುಸ್ಲಿಂ ಯುವಕನ ಜೊತೆ ಬಂದಿದ್ದ ಹಿಂದೂ ಯುವತಿಯ ಜೋಡಿಯನ್ನು ಸಾರ್ವಜನಿಕರು ಹಿಡಿದು ವಿಚಾರಿಸಿ ಬಳಿಕ ಪೋಲಿಸರಿಗೆ ಒಪ್ಪಿಸಿದ್ದಾರೆ. ಬೆಂಗಳೂರು ಮೂಲದ ಈ ಜೋಡಿ ಧರ್ಮಸ್ಥಳದಲ್ಲಿ ತಿರುಗಾಡುತ್ತಿದ್ದಾಗ ಸಂಶಯಗೊಂಡ ಸಾರ್ವಜನಿಕರು ಹಿಡಿದು ವಿಚಾರಿಸಿದ್ದಾರೆ. ಆಗ ಯುವಕ ಮುಸ್ಲಿಂ ಧರ್ಮದವನಾಗಿದ್ದು ಯುವತಿ ಹಿಂದೂ ಎಂದು ಗೊತ್ತಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿ ಸ್ಥಳಕ್ಕೆಧಾವಿಸಿ ಬಂದ ಪೊಲೀಸರು ಯುವಕ ಯುವತಿಯನ್ನು ವಶಕ್ಕೆ

ಧರ್ಮಸ್ಥಳ: ನೈತಿಕ ಪೊಲೀಸ್ ಗಿರಿ| ಭಿನ್ನಕೋಮಿನ ಜೋಡಿಯನ್ನು ಪೊಲೀಸರಿಗೆ ಒಪ್ಪಿಸಿದ ಸಾರ್ವಜನಿಕರು Read More »

ಬೆಳ್ತಂಗಡಿ: ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು

ಸಮಗ್ರ ನ್ಯೂಸ್: ಮಕ್ಕಳ ಜೊತೆ ಆಟವಾಡುತ್ತಿರುವ ವೇಳೆ ತೆರೆದ ಬಾವಿಗೆ ಕಾಲು ಜಾರಿ ಬಿದ್ದು 7 ವರ್ಷದ ಬಾಲಕ ಸಾವನಪ್ಪಿರುವ ಘಟನೆ ಬೆಳ್ತಂಗಡಿಯ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ. ಮೃತ ಬಾಲಕ ಪಣಕಜೆ ನಿವಾಸಿ ಮಹಮ್ಮದ ಹನೀಫ್ ಅವರ ಪುತ್ರ ಮಹಮ್ಮದ್ ಅನಾನ್(7) ಜ. 15ರಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ

ಬೆಳ್ತಂಗಡಿ: ಕಾಲುಜಾರಿ ಬಾವಿಗೆ ಬಿದ್ದು ಬಾಲಕ ಸಾವು Read More »

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ

ಸಮಗ್ರ ನ್ಯೂಸ್:ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇತ್ತೀಚೆಗೆ ಅಕ್ರಮವಾಗಿ ಸಾಗಿಸುತ್ತಿದ್ದ 98 ಲಕ್ಷ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆದಿದ್ದರು, ಇದೀಗ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ಬಂಧಿಸಿ 50 ಲಕ್ಷ ಮೌಲ್ಯದ ಚಿನ್ನವನ್ನು ಜಪ್ತಿ ಮಾಡಿದ್ದಾರೆ. ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದ ಇಬ್ಬರು ಪ್ರಯಾಣಿಕರ ಚಲನವಲನಗಳ ಮೇಲೆ ಅನುಮಾನ ಮೂಡಿದ ಹಿನ್ನೆಲೆ ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಹೆಚ್ಚಿನ ತಪಾಸಣೆ ನಡೆಸಿದ್ದಾರೆ. ಈ ವೇಳೆ ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ Read More »