ಪುತ್ತೂರು: ಅಕ್ಷತೆ ಹಂಚುತ್ತಿದ್ದ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ್ರಾ ಪುತ್ತಿಲ ಪರಿವಾರ? ನಿಜಕ್ಕೂ ಅಲ್ಲಿ ಆಗಿದ್ದೇನು? ಎಸ್ಪಿ ರಿಷ್ಯಂತ್ ನೀಡಿದ ಎಚ್ಚರಿಕೆ ಏನು?
ಸಮಗ್ರ ನ್ಯೂಸ್: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ಹಿನ್ನಲೆ ರಾಮಮಂದಿರದ ಅಕ್ಷತೆ ವಿತರಣೆ ಮಾಡುತ್ತಿದ್ದ ಹಿಂದೂ ಸಂಘಟನೆಯ ಕಾರ್ಯಕರ್ತನ ಮೇಲೆ ಪುತ್ತಿಲ ಪರಿವಾರದ ಬೆಂಬಲಿಗರು ಹಲ್ಲೆ ನಡೆಸಿದ್ದಾರೆ ಎನ್ನಲಾಗಿದ್ದು, ಈ ಕುರಿತು ದ.ಕ ಜಿಲ್ಲಾ ಎಸ್.ಪಿ ರಿಷ್ಯಂತ್ ಸಿ.ಬಿ ಸ್ಪಷ್ಟನೆ ನೀಡಿದ್ದಾರೆ. ಘಟನೆ ಪುತ್ತೂರಿನ ಮುಂಡೂರು ಎಂಬಲ್ಲಿ ನಡೆದಿದ್ದು, ಸಂತೋಷ್ ಎಂಬಾತ ಹಲ್ಲೆಗೊಳಗಾದ ಹಿಂದೂ ಸಂಘಟನೆಯ ಕಾರ್ಯಕರ್ತ. ಈತ ಪುತ್ತೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸಂತೋಷ್ ಮುಂಡೂರು ಗ್ರಾಮದಲ್ಲಿ ರಾಮಮಂದಿರದ ಅಕ್ಷತೆ ಹಂಚುವ










