ಕೊಲೆ ಆರೋಪಿ ನಟ ದರ್ಶನ್‌ಗೆ ರಾಜಾತಿಥ್ಯ| ಪರಪ್ಪನ ಅಗ್ರಹಾರ ಜೈಲಿನ 7 ಸಿಬ್ಬಂದಿ ಅಮಾನತು| ಶೀಘ್ರದಲ್ಲಿ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ – ಸಿಎಂ
ಸಮಗ್ರ ನ್ಯೂಸ್: ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ ಪರಪ್ಪನ ಆಗ್ರಹಾರ ಜೈಲಿನಲ್ಲಿ ವಿಶೇಷ ಆತಿಥ್ಯ ನೀಡಿ ಕರ್ತವ್ಯ ಲೋಪ ಎಸಗಿದ ಆರೋಪದಡಿ 7 ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಪ್ಪ ಪ್ರಭು, ಎಸ್ ಖಂಡೇಲ್ ವಾಲ್, ಅಸಿಸ್ಟೆಂಟ್ ಜೈಲರ್ ಎಲ್.ಎಸ್. ತಿಪ್ಪೇಸ್ವಾಮಿ, ಶ್ರೀಕಾಂತ್ ತಲ್ವಾರ್, ಹೆಡ್ ವಾರ್ಡರ್ ವೆಂಕಪ್ಪ, ಸಂಪತ್ ಕುಮಾರ್, ವಾರ್ಡರ್ ಬಸಪ್ಪ ತೇಲಿ ಎಂಬವರನ್ನು ಅಮಾನತು ಮಾಡಲಾಗಿದೆ ಎಂದು […]