ಕರಾವಳಿ

ರಾಷ್ಟ್ರಪತಿ ಪದಕ ಪುರಸ್ಕೃತ ಡಾ. ಮುರಲಿ ಮೋಹನ ಚೂಂತಾರುಗೆ ಸನ್ಮಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಕಛೇರಿ ಸಿಬ್ಬಂದಿಗಳು ಹಾಗು ಗೃಹರಕ್ಷಕರಿಂದ 2024ನೇ ಸಾಲಿನ ರಾಷ್ಟ್ರಪತಿ ಪದಕ ಪುರಸ್ಕೃತರಾದ ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀ ಮೋಹನ ಚೂಂತಾರು ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು. ಸನ್ಮಾನವನ್ನು ಸ್ವೀಕರಿಸಿದ ಡಾ|| ಮುರಲೀ ಮೋಹನ ಚೂಂತಾರುರವರು ಮಾತನಾಡಿ, ಈ ಪದಕ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಸಹೋದರ ಸಹೋದರಿ ಗೃಹರಕ್ಷಕರು ಮತ್ತು ಗೃಹರಕ್ಷಕಿಯರಿಗೆ ಸಲ್ಲುತ್ತದೆ. ಮುಂದೆಯೂ ನಿಮ್ಮ ಸಹಕಾರವನ್ನು ಬಯಸುತ್ತೇನೆ. ಹಿಂದಿನ ಕಾರ್ಯಚಟುವಟಿಕೆಗಳಿಗಿಂತ […]

ರಾಷ್ಟ್ರಪತಿ ಪದಕ ಪುರಸ್ಕೃತ ಡಾ. ಮುರಲಿ ಮೋಹನ ಚೂಂತಾರುಗೆ ಸನ್ಮಾನ Read More »

ಪುತ್ತೂರು: ಬಸ್ ನಿಲ್ಲಿಸಿಲ್ಲವೆಂದು ಕರಾರಸಾನಿ ಸಿಬ್ಬಂದಿಯಿಂದ ಚಾಲಕನಿಗೆ ಹಲ್ಲೆ; ದೂರು ದಾಖಲು

ಸಮಗ್ರ ನ್ಯೂಸ್: ಬಸ್‌ ನಿಲ್ಲಿಸಿಲ್ಲವೆಂದು ಚಾಲಕನಿಗೆ ಕೆಎಸ್‌ಆರ್‌ಟಿಸಿ ಸಿಬಂದಿ ಹಲ್ಲೆ ನಡೆಸಿದ ಘಟನೆ ಕಡಬ ತಾಲೂಕಿನ ಸವಣೂರಿನಲ್ಲಿ ಶುಕ್ರವಾರ ನಡೆದಿದೆ. ಸವಣೂರು ಪೆಟ್ರೋಲ್‌ ಪಂಪ್‌ ಬಳಿಯ ಬಸ್‌ ನಿಲ್ದಾಣದಲ್ಲಿ ನಿಂತಿದ್ದ ಕೆಎಸ್‌ಆರ್‌ಟಿಸಿ ಸಿಬಂದಿ ನಾರಾಯಣ ಅವರು ಚಾಲಕ ಭರತ್‌ಗೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಬಸ್‌ ಸಹಪ್ರಯಾಣಿಕರು ಘಟನೆಯ ವೀಡಿಯೋ ಚಿತ್ರೀಕರಿಸಿದ್ದು, ವೈರಲ್‌ ಆಗಿದೆ. ಚಾಲಕ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖ ಲಾಗಿದ್ದು, ಅವರು ನೀಡಿದ ದೂರಿನಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹಲ್ಲೆ ಖಂಡಿಸಿ ಬಸ್‌ ಸಂಚಾರ

ಪುತ್ತೂರು: ಬಸ್ ನಿಲ್ಲಿಸಿಲ್ಲವೆಂದು ಕರಾರಸಾನಿ ಸಿಬ್ಬಂದಿಯಿಂದ ಚಾಲಕನಿಗೆ ಹಲ್ಲೆ; ದೂರು ದಾಖಲು Read More »

ಮಂಗಳೂರು: ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಭೂ ಮಂಜೂರಾತಿಗೆ ಹೈ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾಲಯದ ಕ್ಯಾಂಪಸ್ ನೊಳಗೆ, ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ, 2022 ರಲ್ಲಿ ಮಂಜೂರಾಗಿದ್ದ 2 ಎಕರೆ ಜಮೀನಿಗೆ ಮಾನ್ಯ ಹೈಕೋರ್ಟ್ ಆ. 22 ರಂದು ತಡೆಯಾಜ್ಞೆ ನೀಡಿದೆ. ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಮಂಜೂರು ಮಾಡಿರುವ ಜಮೀನು, 1982 ರಲ್ಲಿ ಮಂಗಳೂರು ವಿಶ್ವವಿದ್ಯಾನಿಲಯಕ್ಕೆ ಸರ್ವೇ ನಂಬರ್ 149/2 ರಲ್ಲಿ 8.40 ಎಕರೆ ಜಮೀನನು ಮಂಜೂರಾಗಿದ್ದು, ಅದೇ ಜಾಗದಲ್ಲಿ ಈಗ ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ 2 ಎಕರೆ ಜಮೀನು ಮಂಜೂರು

ಮಂಗಳೂರು: ನಿರ್ಮಲ ಭಾರತ ಚಾರಿಟೇಬಲ್ ಟ್ರಸ್ಟ್ ಗೆ ಭೂ ಮಂಜೂರಾತಿಗೆ ಹೈ ಕೋರ್ಟ್ ತಡೆಯಾಜ್ಞೆ Read More »

ಪುತ್ತೂರು: ವಿದ್ಯಾರ್ಥಿನಿಗೆ ಹಲ್ಲೆಗೈದ ಪ್ರಕರಣ| ಕಾನೂನು ಪ್ರಕಾರ ತನಿಖೆ ಎಂದ ಎಸ್ಪಿ

ಸಮಗ್ರ ನ್ಯೂಸ್: ಪುತ್ತೂರಿನ ಕೊಂಬೊಟ್ಟುವಿನಲ್ಲಿ ಬಾಲಕಿ ಮೇಲೆ ಬ್ಲೇಡ್ ನಿಂದ ಗಾಯಗೊಳಿಸಿ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾನೂನು ಪ್ರಕಾರವೇ ತನಿಖೆ ನಡೆಯಲಿದೆ ಎಂದು ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದ ದಕ್ಷಿಣಕನ್ನಡ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಮಂಗಳವಾರ ಬೆಳಿಗ್ಗೆ ಸುಮಾರು 8.30 ಕ್ಕೆ ಈ ಘಟನೆ ನಡೆದಿದೆ. ಪುತ್ತೂರಿನ ಕೊಂಬೆಟ್ಟು ಜೂನಿಯರ್ ಕಾಲೇಜಿನ ಬಾಲಕಿ ನೀಡಿದ ದೂರಿನ ಪ್ರಕಾರ ಪ್ರಕರಣ ದಾಖಲಿಸಲಾಗಿದೆ. ಹಲ್ಲೆಗೊಳಗಾದ ಬಾಲಕಿ ಕಾಲೇಜಿಗೆ ತೆರಳುವ

ಪುತ್ತೂರು: ವಿದ್ಯಾರ್ಥಿನಿಗೆ ಹಲ್ಲೆಗೈದ ಪ್ರಕರಣ| ಕಾನೂನು ಪ್ರಕಾರ ತನಿಖೆ ಎಂದ ಎಸ್ಪಿ Read More »

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌

ಸಮಗ್ರ ನ್ಯೂಸ್: ಎಂಎಲ್ ಸಿ ಐವನ್ ಡಿಸೋಜಾ ಅವರ ಮಂಗಳೂರಿನ ಮನೆ ಮೇಲೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ನಡೆದಿದೆ. ಮಂಗಳೂರಿನ ವೆಲೆನ್ಸಿಯಾದಲ್ಲಿರುವ ಎಂಎಲ್ ಸಿ ಐವನ್ ಡಿಸೋಜಾ ಅವರ ಮನೆ ಮೇಲೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಕಲ್ಲೆಸೆದು ಪರಾರಿಯಾಗಿದ್ದಾರೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಐವನ್ ಡಿಸೋಜಾ ಅವರು ಇತ್ತೀಚೆಗಷ್ಟೇ ವಿವಾದಾತ್ಮಕ ಹೇಳಿಕೆ ನೀಡಿದ್ದರು, ಈ ಹೇಳಿಕೆಗೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಗೆಹ್ಲೋಟ್

ಮಂಗಳೂರು: ಎಂಎಲ್ಸಿ ಐವನ್ ಡಿಸೋಜಾ ಮನೆ ಮೇಲೆ ತಡರಾತ್ರಿ ಕಲ್ಲು ತೂರಾಟ‌ Read More »

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ

ಸಮಗ್ರ ನ್ಯೂಸ್: ಮಂಗಳೂರು ವಿಶ್ವವಿದ್ಯಾನಿಲಯಲ್ಲಿ ವ್ಯಾಸಂಗ ಮಾಡಿದ ಮತ್ತು ಮಾಡುತ್ತಿರುವ 2022-23ನೇ (NEP ವಿದ್ಯಾರ್ಥಿಗಳು) ಸಾಲಿನ ನಂತರದ ವಿದ್ಯಾರ್ಥಿಗಳಿಗೆ ವಿಶ್ವ ವಿದ್ಯಾನಿಲಯದ ಕಡೆಯಿಂದ ದೊರಕಬೇಕಾದ ಭೌತಿಕ ಅಂಕಗಳನ್ನು ಹೊಂದಿದ ಅಂಕಪಟ್ಟಿ ನೀಡಬೇಕಾಗಿ ಪತ್ರಿಕಾಗೋಷ್ಠಿ ನಡೆಸಿದರು. ಈ ವಿಚಾರವಾಗಿ ಉಪ ಕುಲಪತಿಗಳನ್ನು ಕೇಳಿದಾಗ, ಪ್ರಸ್ತುತ ಭೌತಿಕ ಅಂಕಪಟ್ಟಿ ಗಳನ್ನು ನೀಡದಿರುವಂತೆ ಸರಕಾರದ ಆದೇಶವಿರುವುದಾಗಿಯೂ, ಈ ವಿಚಾರದಲ್ಲಿ ಬದಲಾವಣೆ ತರಲು ಸರ್ಕಾರಕ್ಕೆ ಮಾತ್ರ ಸಾಧ್ಯವಿರುದಾಗಿಯೂ ಅವರು ತಿಳಿಸಿದ್ದು, ಆದರೆ ಈಗಾಗಲೇ ಸೆಮಿಸ್ಟರ್ ಒಂದಕ್ಕೆ ₹230ರಂತೆ ಅಂಕಪಟ್ಟಿ ಶುಲ್ಕವನ್ನು ವಿಶ್ವವಿದ್ಯಾಲಯಕ್ಕೆ ವಿದ್ಯಾರ್ಥಿಗಳು

ಪದವಿ ಮುಗಿದರೂ ಮಂಗಳೂರು ವಿಶ್ವವಿದ್ಯಾನಿಲಯದಿಂದ ವಿದ್ಯಾರ್ಥಿಗಳಿಗೆ ಸಿಗದ ಅಂಕಪಟ್ಟಿ Read More »

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ

ಸಮಗ್ರ ನ್ಯೂಸ್: ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಪಂಜಹೋಬಳಿ ಘಟಕದ ವತಿಯಿಂದ ಸ್ವಾತಂತ್ರ್ಯ ನಂತರ ನಾಡಿನ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಹಿರಿಯರ ಸಂಸ್ಮರಣೆ ಕಾರ್ಯಕ್ರಮವು ಆ.15 ರಂದು ಸರಕಾರಿ ಪದವಿ ಪೂರ್ವ ಕಾಲೇಜು ಪಂಜದಲ್ಲಿ ನಡೆಯಿತು ಹೋಬಳಿ ಘಟಕದ ಅಧ್ಯಕ್ಷರಾದ ಬಾಬುಗೌಡ ಅಚ್ರಪ್ಪಾಡಿಯವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು  ಸುಳ್ಯ ತಾಲೂಕು ಕ.ಸಾ.ಪ.ಅಧ್ಯಕ್ಷರಾದ ಚಂದ್ರಶೇಖರ ಪೇರಾಲ್ ಇವರು ದೀಪ ಹಚ್ಚುವ ಮೂಲಕ ಉದ್ಘಾಟಿಸಿ ಮಾತನಾಡಿ” ಈ ನಾಡು.ನುಡಿ.ಮಣ್ಣಿಗಾಗಿ ದುಡಿದವರನ್ನು ಸ್ಮರಿಸುವುದು ಉತ್ತಮ ಕಾರ್ಯ, ನಮ್ಮ

ಪಂಜ: ಸುಳ್ಯತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಹೋಬಳಿ ಘಟಕದ ವತಿಯಿಂದ ಹಿರಿಯರ ಸಂಸ್ಮರಣೆ ಕಾರ್ಯಕ್ರಮ Read More »

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ

ಸಮಗ್ರ ನ್ಯೂಸ್: ಮನೆಯ ಅಂಗಳದಲ್ಲಿಯೇ ವ್ಯಕ್ತಿಯನ್ನು ಮಾರಾಕಾಸ್ತ್ರದಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಬೆಳಾಲು ಗ್ರಾಮದ ಎಸ್.ಪಿ.ಬಿ ಕಾಂಪೌಂಡಿನಲ್ಲಿ ನಡೆದಿದೆ. ಕೊಲೆಯಾದ ಎಸ್.ಪಿ.ಬಾಲಕೃಷ್ಣ ಭಟ್ (73) ಅವರು ನಿವೃತ್ತ ಶಿಕ್ಷಕ ಎನ್ನಲಾಗಿದೆ. ಅವರ ಮನೆಯ ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ‌ ಮಾಡಲಾಗಿದೆ ಎನ್ನಲಾಗಿದ್ದು, ತಲೆಗೆ ಭಾರೀ ಹೊಡೆತ ಬಿದ್ದಿದೆ ಎಂದು ಪ್ರಕರಣ ಉಲ್ಲೇಖಿಸಿ ಮಾಧ್ಯಮಗಳು ವರದಿ ಮಾಡಿವೆ. ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಧಾವಿಸಿದ್ದು ಪ್ರಕರಣದ ಕುರಿತು ತನಿಖೆ ಆರಂಭಿಸಿದ್ದಾರೆ. ಕೊಲೆಯನ್ನು ಯಾರು, ಯಾಕೆ

ಬೆಳ್ತಂಗಡಿ: ಮನೆಯಂಗಳದಲ್ಲೇ ಮಾರಕಾಸ್ತ್ರಗಳಿಂದ‌ ಕೊಚ್ಚಿ ನಿವೃತ್ತ ಶಿಕ್ಷಕನ ಬರ್ಬರ ಕೊಲೆ Read More »

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್

ಸಮಗ್ರ ನ್ಯೂಸ್: ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ತನಗೆ ಹಿಂದೂ ಯುವಕ ಚೂರಿ ಇರಿದಿದ್ದಾನೆ ಎಂದು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ಪುತ್ತೂರಿನಲ್ಲಿ ‌ನಡೆದಿದ್ದು, ಪ್ರಕರಣ ಬೇರೆಯದೇ ತಿರುವು ಪಡೆದುಕೊಂಡಿದೆ. ಪುತ್ತೂರು ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಗೆ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದಾಗಿ ಆರೋಪ ಮಾಡಿದ್ದು ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ. ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಅವಳ ಕೈಯಲ್ಲಿ ಗೀರಿದ ಗುರುತು

ಪುತ್ತೂರು: ವಿದ್ಯಾರ್ಥಿನಿಗೆ ಚೂರಿ ಇರಿತ ಪ್ರಕರಣ| ಗಾಯಾಳು ಆರೋಪವೇನು? ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಇದುವರೆಗಿನ ಅಪ್ಡೇಟ್ Read More »

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿಯೋರ್ವಳಿಗೆ ಹಿಂದೂ ಯುವಕ ಚೂರಿಯಿಂದ ಇರಿದ ಘಟನೆ ಆ 20 ರಂದು ನಡೆದಿದೆ. ಬನ್ನೂರು ಮೂಲದ ಪುತ್ತೂರು ಸರಕಾರಿ ಕಾಲೇಜಿನ ವಿದ್ಯಾರ್ಥಿನಿಗೆ,‌ ಅದೇ ಕಾಲೇಜಿನ ವಿದ್ಯಾರ್ಥಿಯೋರ್ವ ಚೂರಿಯಿಂದ ಇರಿದಿದ್ದು, ಗಾಯಗೊಂಡ ಯುವತಿಯನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಪುತ್ತೂರು ನಗರ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.

ಪುತ್ತೂರು: ಕಾಲೇಜು ವಿದ್ಯಾರ್ಥಿನಿಗೆ ಚೂರಿ ಇರಿದ ಸಹಪಾಠಿ ವಿದ್ಯಾರ್ಥಿ Read More »