ಕರಾವಳಿ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ

ಸಮಗ್ರ ನ್ಯೂಸ್: ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ತನಿಖೆಯಿಂದ ಉಗ್ರಗಾಮಿ ಸಂಘಟನೆಯ ಸಂಚುಕೋರರ ಒಂದೊಂದೇ ಭಯಾನಕ ಪ್ಲಾನ್‌ಗಳು ಹೊರಬೀಳುತ್ತಿದ್ದು, ಉಡುಪಿಯ ಶ್ರೀ ಕೃಷ್ಣ ಮಠವು ಕೂಡ ಶಂಕಿತ ಉಗ್ರರ ಟಾರ್ಗೆಟ್‌ ಆಗಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ. ಕುಕ್ಕರ್ ಬಾಂಬ್ ಸ್ಫೋಟದ ಪ್ರಕರಣದ ಸಂಚು ರೂಪಿಸಿದ್ದ ಉಗ್ರಗಾಮಿ ಸಂಘಟನೆಯ ಸಂಚುಕೋರ, ಶಿವಮೊಗ್ಗ ಮೂಲದ ಅರಾಫತ್ ಅಲಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ ಬಂಧಿಸಿ ವಿಚಾರಣೆ ನಡೆಸುತ್ತಿದ್ದು, ಕರ್ನಾಟಕದಲ್ಲಿ ಮೂರು ಸ್ಥಳಗಳಲ್ಲಿ ಬಾಂಬ್​​ ಬ್ಲಾಸ್ಟ್​ ಮಾಡಲು ಸಂಚು ರೂಪಿಸಲಾಗಿತ್ತು

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ ಪ್ರಕರಣ| ಉಡುಪಿ ಕೃಷ್ಣ ಮಠವೂ ಉಗ್ರರ ಹಿಟ್ ಲಿಸ್ಟ್ ನಲ್ಲಿ!! ತನಿಖೆಯಲ್ಲಿ ಬಹಿರಂಗವಾಯ್ತು ಆತಂಕಕಾರಿ ಸಂಗತಿ Read More »

ಸುಳ್ಯ: ಕೆ.ವಿಜಿ. ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬೆದರಿಸಿದ ಆರೋಪ|ಕೆ.ವಿ.ಚಿದಾನಂದ ಸಹಿತ 5 ಮಂದಿಗೆ ಜಾಮೀನು

ಸಮಗ್ರ ನ್ಯೂಸ್:‌ ಸುಳ್ಯದ ಕೆ.ವಿಜಿ ಪಾಲಿಟೆಕ್ನಿಕ್‌ ಕಾಲೇಜಿಗೆ ಅಕ್ಟೋಬರ್ 5ರಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಮತ್ತು ಸಿಬ್ಬಂದಿಯನ್ನು ಬೆದರಿಸಿದ್ದಾರೆ ಎಂಬ ಆರೋಪ ಎದುರಿಸುತ್ತಿದ್ದ ಕೆ.ವಿ.ಚಿದಾನಂದ ಸಹಿತ 5 ಮಂದಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿದ್ದು ಅವರೆಲ್ಲರಿಗೂ ನ್ಯಾಯಾಲಯ ಜಾಮೀನು ಮಂಜೂರು ಮಾಡುವುದಾಗಿ ತಿಳಿದುಬಂದಿದೆ. ಆಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ. ಜ್ಯೋತಿ ರೇಣುಕಾ ಪ್ರಸಾದ್ ರವರು ಸುಳ್ಯ ಪೊಲೀಸ್‌ ಠಾಣೆಯಲ್ಲಿ ಅ.5 ರಂದು ದೂರು ನೀಡಿ, ಬಾವ ಕೆ.ವಿ ಚಿದಾನಂದ, ಅದರ ಪತ್ನಿ, ಶೋಭಾ ಚಿದಾನಂದ,

ಸುಳ್ಯ: ಕೆ.ವಿಜಿ. ಪಾಲಿಟೆಕ್ನಿಕ್‌ ಕಾಲೇಜಿನ ಪ್ರಾಂಶುಪಾಲರು, ಸಿಬ್ಬಂದಿಯನ್ನು ಬೆದರಿಸಿದ ಆರೋಪ|ಕೆ.ವಿ.ಚಿದಾನಂದ ಸಹಿತ 5 ಮಂದಿಗೆ ಜಾಮೀನು Read More »

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ| ಯುವಕ ಬಂಧನ

ಸಮಗ್ರ ನ್ಯೂಸ್: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಅರೋಪದಡಿ ಯುವಕನನ್ನು ಪುತ್ತೂರು ಮಹಿಳಾ ಠಾಣೆ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ ಘಟನೆ ವರದಿಯಾಗಿದೆ. ಕಡಬ ಪಿಜಕ್ಕಳ ನಿವಾಸಿ ಯಜ್ಞೇಶ್‌ ಪೋಕ್ಸೊ ಕಾಯ್ದೆಯಡಿ ಬಂಧನವಾದ ಆರೋಪಿ. ಕೆಲ ತಿಂಗಳುಗಳ ಹಿಂದೆ ಆರೋಪಿಯು ಬಾಲಕಿಯನ್ನು ಮಡಿಕೇರಿಯ ಲಾಡ್ಜ್‌ ವೊಂದಕ್ಕೆ ಕರೆದುಕೊಂಡು ಹೊಗಿ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.ಇತ್ತೀಚೆಗೆ ಬಾಲಕಿಯ ಆರೋಗ್ಯದಲ್ಲಿ ವ್ಯತ್ಯಾಸಗಳು ಕಾಣಿಸಿದ ಹಿನ್ನಲೆಯಲ್ಲಿ ಆಕೆ ಕಲಿಯುತ್ತಿದ್ದ ಶಾಲೆಯ ಶಿಕ್ಷಕಿ ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಪೊಲೀಸ್‌

ಪುತ್ತೂರು: ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ| ಯುವಕ ಬಂಧನ Read More »

ಕರಾವಳಿಯ ಹಲವೆಡೆ ಸಿಡಿಲಾಘಾತ| ವ್ಯಾಪಕ ಹಾನಿ, ಅಪಾರ ನಷ್ಟ

ಸಮಗ್ರ ನ್ಯೂಸ್: ಮಿಂಚು, ಗುಡುಗಿನಿಂದ ಸುರಿದ ಭಾರೀ ಮಳೆಯಿಂದ ಕರಾವಳಿಯ ಹಲವೆಡೆ ಸಿಡಿಲಾಘಾತ ಉಂಟಾಗಿ ವ್ಯಾಪಕ ಹಾನಿ ಸಂಘವಿಸಿದೆ. ಅಂಕೋಲಾ ತಾಲೂಕಿನ ಅಗಸೂರು ಗ್ರಾಮದ ಹಿತ್ತಲಗದ್ದೆ ನಿವಾಸಿ ರಂಜಿತಾ ಜಗದೀಶ ಗೌಡ ಇವರೇ ಸಿಡಿಲಿನ ಆಘಾತಕ್ಕೆ ಒಳಗಾದ ಮಹಿಳೆಯಾಗಿದ್ದು ಇವರನ್ನು ಕೂಡಲೇ ಅಂಕೋಲಾ ತಾಲೂಕಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳೂರು ಹೊರವಲಯದ ವಾಮಂಜೂರು ಅಮೃತ ನಗರದ ಗೋಪಾಲ ಪೂಜಾರಿ ಎಂಬುವವರ ಮನೆಯಲ್ಲಿ ಸಿಡಿಲಿನಿಂದ ಶಾರ್ಟ್ ಸರ್ಕ್ಯೂಟ್ ಸಂಭವಿಸಿದೆ. ಸಿಡಿಲಿನ ಸದ್ದಿಗೆ ಮನೆಯಲ್ಲಿದ್ದ ಮಹಿಳೆ ಹಾಗೂ 5 ವರ್ಷದ

ಕರಾವಳಿಯ ಹಲವೆಡೆ ಸಿಡಿಲಾಘಾತ| ವ್ಯಾಪಕ ಹಾನಿ, ಅಪಾರ ನಷ್ಟ Read More »

ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಜಾಮೀನು ರಹಿತ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಕರ್ತವ್ಯ ನಿರತ , ಯುನಿಫಾರ್ಮ್ ನಲ್ಲಿದ್ದ ವಲಯ ಅರಣ್ಯಾಧಿಕಾರಿಗಳಿಗೆ ಅವಾಚ್ಯ ಪದಗಳಿಂದ ನಿಂದಿಸಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಕರ್ತವ್ಯ ನಿರ್ವಹಿಸುತ್ತಿರುವಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂಬ ಕಾರಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವಿರುದ್ಧ ದೂರು ದಾಖಲಾಗಿದ್ದು, ಧರ್ಮಸ್ಥಳ ಪೊಲೀಸರು ಸೆಕ್ಷನ್ 353 ರಂತೆ ಜಾಮೀನು ರಹಿತ ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ. ಇದರೊಂದಿಗೆ ರಾಜ್ಯ ಸರ್ಕಾರಿ ನೌಕರರ ಸಂಘದ ವತಿಯಿಂದ ಶಾಸಕ ಹರೀಶ್ ಪೂಂಜಾರ ವಿರುದ್ದ ಪುತ್ತೂರು ಸಹಾಯಕ ಆಯುಕ್ತರಿಗೂ ದೂರು ನೀಡಲಾಗಿದೆ. ಪ್ರಕರಣದ ವಿವರ: ಬೆಳ್ತಂಗಡಿ

ಅರಣ್ಯಾಧಿಕಾರಿಗೆ ಅವಾಚ್ಯ ಪದಗಳಿಂದ ನಿಂದನೆ| ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ಜಾಮೀನು ರಹಿತ ಪ್ರಕರಣ ದಾಖಲು Read More »

ಕರಾವಳಿಗರೇ ಎಚ್ಚರ… ವಾಯುಭಾರ ಕುಸಿತ, ಚಂಡಮಾರುತ ಭೀತಿ| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದ ಲಕ್ಷದ್ವೀಪದ ಪ್ರದೇಶದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಇದರಿಂದ ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ (IMD) ಮಂಗಳವಾರ ತಿಳಿಸಿದೆ. ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮಂಗಳವಾರ ಮಧ್ಯಾಹ್ನದ ನಂತರ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಗುಡುಗು, ಸಿಡಿಲು ಸಹಿತ ಮಳೆಯಾಗಿದೆ. ಅಕ್ಟೋಬರ್ 16 ಮತ್ತು 17 ರಂದು ಸಂಜೆ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು,

ಕರಾವಳಿಗರೇ ಎಚ್ಚರ… ವಾಯುಭಾರ ಕುಸಿತ, ಚಂಡಮಾರುತ ಭೀತಿ| ಭಾರೀ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ Read More »

ಸುಳ್ಯ: ಕಲ್ಪಡ ಮೊವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕುಣಿತ ಭಜನೆ ಕಾರ್ಯಕ್ರಮ

ಸಮಗ್ರ ನ್ಯೂಸ್:ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಗತಿಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಕೊಡಿಯಾಲ ‘ಎ’ ಅಧ್ಯಕ್ಷರು ಪದಾಧಿಕಾರಿಗಳ ಸಹಕಾರದೊಂದಿಗೆ ಅ. 17ರಂದು ಕಲ್ಪಡ ಮೊವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ “ಕುಣಿತ ಭಜನೆ” ಕಾರ್ಯಕ್ರಮ ನಡೆಯಿತು. ದೇವಸ್ಥಾನ ಅರ್ಚಕ ಶಿವರಾಮ ಉಪಾಧ್ಯಯ ಅವರು ದೇವರ ಸ್ತುತಿ ಮೂಲಕ ಉದ್ಘಾಟನೆ ಮಾಡಿದರು. ಬೆಳ್ಳಾರೆ ವಲಯ ಮೇಲ್ವಿಚಾರಕ ಗೋಪಾಲಕೃಷ್ಣ ಪ್ರಸ್ತಾವಿಕ ವಾಗಿ ಮಾತನಾಡಿದರು. ತರಬೇತಿ ಪಡೆಯುವ 23 ಮಕ್ಕಳು ಭಾಗವಹಿಸಿದರು. ಈ ಸಂಧರ್ಭದಲ್ಲಿ ಕುಣಿತ ಭಜನೆ ತರಬೇತುದಾರ

ಸುಳ್ಯ: ಕಲ್ಪಡ ಮೊವಪ್ಪೆ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಕುಣಿತ ಭಜನೆ ಕಾರ್ಯಕ್ರಮ Read More »

ಸುಬ್ರಹ್ಮಣ್ಯ: ಕಿಕು ಬೇಕ್ಸ್ ಅ.18ರಂದು ಶುಭಾರಂಭ

ಸಮಗ್ರ ನ್ಯೂಸ್: ಕಿಕು ಬೇಕ್ಸ್ ಅ.18ರಂದು ಸುಬ್ರಹ್ಮಣ್ಯದ ಕುಲ್ಕುಂದ ಶಿವಗಿರಿ ಕಟ್ಟಡದಲ್ಲಿ ಶುಭಾರಂಭಗೊಳ್ಳಲಿದೆ. ಜೋಮಿನ್ ವೇಶ್ನಾಲ್ ಮಾಲಕತ್ವದ ಕಿಕು ಬೇಕ್ಸ್ ದ.ಕ. ಜಿಲ್ಲೆಯ ಮಾಜಿ ಸೈನಿಕ ಸಂಘದ ಜಿಲ್ಲಾ ಅಧ್ಯಕ್ಷ ಜೆ.ಪಿ.ಎಂ. ಚೇರಿಯನ್ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ದ.ಕ. ಜಿಲ್ಲೆಯ ಮಾಜಿ ಸೈನಿಕ ಸಂಘದ ಗೌರವ ಅಧ್ಯಕ್ಷ ವಾಸುದೇವ ಗೌಡ ಭಾಗವಹಿಸಲಿದ್ದಾರೆ. ನೆಟ್ಟಣ ಸಂತ ಮಾರಿಯಮ್ಮನವರ ದೇವಾಲಯದ ಧರ್ಮ ಗುರು ಪ.ಪೂ. ಆದರ್ಶ ಪಿ. ಜೋಸೆಫ್ ಅವರ ಆಶೀರ್ವಚನದಲ್ಲಿ ಶುಭಾರಂಭಗೊಳ್ಳಲಿದೆ. ಇಲ್ಲಿ ಎಲ್ಲಾ ತರಹದ ವಿಧ ವಿಧ

ಸುಬ್ರಹ್ಮಣ್ಯ: ಕಿಕು ಬೇಕ್ಸ್ ಅ.18ರಂದು ಶುಭಾರಂಭ Read More »

ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ

ಸಮಗ್ರ ನ್ಯೂಸ್: ಉಡುಪಿಯ ಕರಾವಳಿ ಹೋಟೆಲಿನ ಆವರಣದಲ್ಲಿ ವ್ಯಕ್ತಿಯೊಬ್ಬ ಮೃತಪಟ್ಟಿದ್ದು, ಮೇಲ್ನೋಟಕ್ಕೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಈ ಬಗ್ಗೆ ಮಾಹಿತಿ ಪಡೆದ ಸಮಾಜ ಸೇವಕ ವಿಶು ಶೆಟ್ಟಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಪೊಲೀಸ್ ಅಧಿಕಾರಿ ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ. ಕೆಎಂಸಿ ಮಣಿಪಾಲ ಹಾಗೂ ಮಂಗಳೂರಿನ ನ್ಯಾಯ ವಿಜ್ಞಾನ ಪ್ರಯೋಗಾಲಯದವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹರಿತವಾದ ಆಯುಧದಿಂದ ವ್ಯಕ್ತಿಯ ಬಲ ಕೈ ಕಡಿದಿದ್ದು ತೀವ್ರ ರಕ್ತಸ್ರಾವದಿಂದ ಮೃತಪಟ್ಟಂತೆ ಮೇಲ್ನೋಟಕ್ಕೆ ಕಂಡುಬಂದಿದೆ. ಉಡುಪಿ ಠಾಣೆಯಲ್ಲಿ ಈ

ಉಡುಪಿ: ಅಪರಿಚಿತ ವ್ಯಕ್ತಿ ಮೃತದೇಹ ಪತ್ತೆ| ಕೊಲೆ ಶಂಕೆ Read More »

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬೀ ಸಮುದ್ರದಲ್ಲಿ ಮತ್ತೆ ವಾಯುಭಾರ ಕುಸಿತದಿಂದಾಗಿ ಚಂಡಮಾರುತ ಮಾದರಿಯ ವಾತಾವರಣ ಉಂಟಾಗಿದ್ದು, ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪ, ನೈರುತ್ಯ ಅರಬ್ಬೀ ಸಮುದ್ರ ಮತ್ತು ಕೇರಳ ಕರಾವಳಿಯ ಮಧ್ಯೆ ಸಮುದ್ರ ಮಟ್ಟದಿಂದ ಮೂರು ಕಿಮೀ ಎತ್ತರದಲ್ಲಿ ಚಂಡಮಾರುತ ಮಾದರಿ ವರ್ತುಲ ಉಂಟಾಗಿದ್ದು, ಇದರಿಂದಾಗಿ ಅರಬ್ಬೀ ಸಮುದ್ರ ಮತ್ತು ಕರ್ನಾಟಕ, ಕೇರಳ ಕರಾವಳಿಯಲ್ಲಿ ಅ.17ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ 48 ಗಂಟೆಗಳಲ್ಲಿ ಮಾರುತಗಳು ಉತ್ತರ ಭಾಗದತ್ತ

ಅರಬ್ಬಿ ಸಮುದ್ರದಲ್ಲಿ ಚಂಡಮಾರುತ ಸೃಷ್ಟಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ Read More »