ಕರಾವಳಿ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಅರಣ್ಯ ಸಚಿವರ ಭೇಟಿ| ಕಡಬ ತಾಲೂಕಿನ ಹಲವೆಡೆ ಕಾಡಾನೆ ಹಾವಳಿ ವಿರುದ್ಧ ಕ್ರಮಕ್ಕೆ ಮನವಿ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತೂರು, ಕೊಣಾಜೆ, ಸುಬ್ರಹ್ಮಣ್ಯ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬೀಡು ಬಿಟ್ಟಿರುವ ಕಾಡಾನೆಗಳನ್ನು ಕಾಡಿಗೆ ಮರಳಿಸುವಂತೆ ಮತ್ತು ನಾಡಿಗೆ ಬಾರದಂತೆ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸುಳ್ಯ ಶಾಸಕರಿಗೆ ಭರವಸೆ ನೀಡಿದ್ದಾರೆ. ಬೆಂಗಳೂರಿನ ವಿಕಾಸಸೌಧದ ಕಚೇರಿಯಲ್ಲಿಂದು ತಮ್ಮನ್ನು ಭೇಟಿ ಮಾಡಿದ ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಅವರಿಂದ ಮನವಿ ಸ್ವೀಕರಿಸಿದ ಸಚಿವರು, ಈ ವರ್ಷ

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯರಿಂದ ಅರಣ್ಯ ಸಚಿವರ ಭೇಟಿ| ಕಡಬ ತಾಲೂಕಿನ ಹಲವೆಡೆ ಕಾಡಾನೆ ಹಾವಳಿ ವಿರುದ್ಧ ಕ್ರಮಕ್ಕೆ ಮನವಿ Read More »

ಸುಳ್ಯ:ನವೋದಯ ಶಾಲೆಯ 2ನೇ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ| ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್:ಜವಾಹರ್ ನವೋದಯ ವಿದ್ಯಾಲಯದ 6ನೇ ತರಗತಿ ಪ್ರವೇಶ ಪರೀಕ್ಷೆಯ 2ನೇ ಸುತ್ತಿನ ಆಯ್ಕೆ ಪಟ್ಟಿಯಲ್ಲಿ ಬೆಳ್ಳಾರೆ ಜ್ಞಾನದೀಪ ಶಿಕ್ಷಣ ತರಬೇತಿ ಸಂಸ್ಥೆಯಿಂದ ತರಬೇತಿ ಪಡೆದ ಮೂವರು ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. 2022-23ನೇ ಸಾಲಿನಲ್ಲಿ ಸಂಸ್ಥೆಯಿಂದ ಒಟ್ಟು 16 ವಿದ್ಯಾರ್ಥಿಗಳು ನವೋದಯ ಶಾಲೆಗೆ ಆಯ್ಕೆಯಾಗಿದ್ದಾರೆ. ಪುತ್ತೂರು ತಾಲೂಕು ಅರಿಯಡ್ಕ ಗ್ರಾಮದ ಬಪ್ಪಪುಂಡೇಲು ದಿನೇಶ್ ಕುಮಾರ್ ಬಿ. ಮತ್ತು ಪೂರ್ಣಿಮಾ ದಂಪತಿಗಳ ಪುತ್ರಿ ಪಾಪೆಮಜಲು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿ ಆಕಾಂಕ್ಷ ಡಿ.ಪಿ., ಪುತ್ತೂರು ತಾಲೂಕು ಕೊಳ್ತಿಗೆ

ಸುಳ್ಯ:ನವೋದಯ ಶಾಲೆಯ 2ನೇ ಸುತ್ತಿನ ಆಯ್ಕೆ ಪಟ್ಟಿ ಪ್ರಕಟ| ಬೆಳ್ಳಾರೆ ಜ್ಞಾನದೀಪ ಸಂಸ್ಥೆಯ ಮೂವರು ವಿದ್ಯಾರ್ಥಿಗಳು ಆಯ್ಕೆ Read More »

ಸುಳ್ಯ:ಎಂ.ಆರ್.ಡಿ.ಎ. ಗೂನಡ್ಕ ಪೇರಡ್ಕ ನೂತನ ಆಡಳಿತ ಮಂಡಳಿ ಆಯ್ಕೆ

ಸಮಗ್ರ ನ್ಯೂಸ್:ಮೊಹಿಯದ್ದೀನ್ ರಿಫಾಯಿ ಧಫ್ ಎಸೋಶಿಯೇಶನ್ ಗೂನಡ್ಕ ಇದರ ಮಹಾಸಭೆ ಹಾಗೂ ನೂತನ ಆಡಳಿತ ಮಂಡಳಿಯ ಆಯ್ಕೆ ಸೆ. 28ರಂದು ಪೇರಡ್ಕದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಟಿ.ಎಂ.ಶಹೀದ್ ವಹಿಸಿದರು. ದವಾ ನೆರವೇರಿಸಿ ಮಾತನಾಡಿದ ಜಮಾಅತ್ ಖತೀಬರಾದ ರಿಯಾಝ್ ಫೈಝಿ ಎಮ್ಮೆಮಾಡು ಸಂಸ್ಥೆಯನ್ನು ಉತ್ತಮ ರೀತಿ ನಡೆಸಿಕೊಂಡು ಬರುವಂತೆ ಕರೆನೀಡಿದರು. ನೂತನ ಆಡಳಿತ ಸಮಿತಿ ರಚಿಸಿ ಅದ್ಯಕ್ಷರಾಗಿ ಜಿ.ಕೆ.ಹಮೀದ್, ಉಪಾದ್ಯಕ್ಷರಾಗಿ ಎನ್.ಹೆಚ್.ಆರಿಸ್ ಹಾಗೂ ಸಲೀಂ ಅಲ್ತಾಪ್ ಗೂನಡ್ಕ, ಪ್ರಧಾನ ಕಾರ್ಯದರ್ಶಿ ಕಾದರ್ ಮೊಟ್ಟೆಂಗಾರ್, ಕಾರ್ಯದರ್ಶಿ ಇರ್ಫಾನ್,

ಸುಳ್ಯ:ಎಂ.ಆರ್.ಡಿ.ಎ. ಗೂನಡ್ಕ ಪೇರಡ್ಕ ನೂತನ ಆಡಳಿತ ಮಂಡಳಿ ಆಯ್ಕೆ Read More »

ಕಡಬ: ಅಕ್ರಮ ಜಾನುವಾರು ಸಾಗಾಟ| ಜಾನುವಾರು ಸಹಿತ ಪಿಕಪ್ ಪೋಲಿಸ್ ವಶಕ್ಕೆ

ಸಮಗ್ರ ನ್ಯೂಸ್: ಅಕ್ರಮವಾಗಿ ಪಿಕಪ್ ವಾಹನದಲ್ಲಿ ಜಾನಾವಾರು ಸಾಗಾಟ ಮಾಡುತ್ತಿದ್ದ ಘಟನೆ ಕಡಬದ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಎಂಬಲ್ಲಿ ನಡೆದಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಕಡಬ ಪೋಲಿಸರು ದಾಳಿ ನಡೆಸಿ, ಜಾನುವಾರು ಹಾಗೂ ಸಾಗಾಟಕ್ಕೆ ಬಳಸಿದ ಪಿಕಪ್ ಕೆ.ಎ.21 ಬಿ.8361ನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಡಬ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.

ಕಡಬ: ಅಕ್ರಮ ಜಾನುವಾರು ಸಾಗಾಟ| ಜಾನುವಾರು ಸಹಿತ ಪಿಕಪ್ ಪೋಲಿಸ್ ವಶಕ್ಕೆ Read More »

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ|ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ

ಸಮಗ್ರ ನ್ಯೂಸ್:ಹನ್ನೆರಡು ವರ್ಷಗಳ ಹಿಂದೆ ನಡೆದ ಸುಳ್ಯ ದ ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ ಸಂಬಂಧಿಸಿ ಅ.5 ರಂದು ಹೈಕೋರ್ಟ್ ತೀರ್ಪು ನೀಡಿದ್ದು ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರೊ.ಎ.ಎಸ್.ರಾಮಕೃಷ್ಣ ಕೊಲೆ ಪ್ರಕರಣದಲ್ಲಿ ಆರು ಆರೋಪಿಗಳನ್ನು ಖುಲಾಸೆಗೊಳಿಸಿ ಅಧೀನ ನ್ಯಾಯಾಲಯ ನೀಡಿದ್ದ ತೀರ್ಪನ್ನು ಕಳೆದ ವಾರವಷ್ಟೆ ರದ್ದುಗೊಳಿಸಿದ್ದ ಹೈಕೋರ್ಟ್ ಅವರು ದೋಷಿಗಳೆಂದು ತೀರ್ಪು ನೀಡಿತ್ತು. ಡಾ. ರೇಣುಕಾ ಪ್ರಸಾದ್ ಕೆ.ವಿ. ಸೇರಿದಂತೆ ಏಳು ಆರೋಪಿಗಳನ್ನು ಖುಲಾಸೆಗೊಳಿಸಿ ಪುತ್ತೂರಿನ ಐದನೇ ಹೆಚ್ಚುವರಿ

ಸುಳ್ಯ: ಕೆ.ವಿ.ಜಿ. ಮೆಡಿಕಲ್ ಕಾಲೇಜು ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣ|ಡಾ.‌ರೇಣುಕಾಪ್ರಸಾದ್ ಸೇರಿದಂತೆ ಐವರಿಗೆ ಜೀವಾವಧಿ ಶಿಕ್ಷೆ Read More »

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಕೆಲವು ಭಾಗಗಳಲ್ಲಿ ನಿಯತಕಾಲಿಕ ನಿರ್ವಹಣಾ ಕೆಲಸ ಇರುವುದರಿಂದ ಅ.7 ರಂದು ಶನಿವಾರ ವಿದ್ಯುತ್ ಕಡಿತ ಆಗಲಿದೆ. ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ ಕೇರ್ಪಳ, ಶ್ರೀರಾಂಪೇಟೆ, ಜಬಳೆ, ಡಿಪೋ, ತೋಡಿಕಾನ, ಕೊಲ್ಚಾರ್, ದೇವರಗುಂಡ, ಅಜ್ಞಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ರಿಂದ ಸಾಯಂಕಾಲ 6ರ ತನಕ ವಿದ್ಯುತ್

ಸುಳ್ಯ: ಅ.7 ರಂದು ಸುಳ್ಯದ ಈ ಭಾಗಗಳಲ್ಲಿ ಕರೆಂಟಿಲ್ಲ Read More »

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ

ಕೆಲವು ದಿನಗಳ ಹಿಂದೆ ನಾಪತ್ತೆಯಾದ ವ್ಯಕ್ತಿ ಶವವಾಗಿ ಪತ್ತೆಯಾದ ಘಟನೆ ಕಾರ್ಕಳದಲ್ಲಿ ಅ. 4ರಂದು ನಡೆದಿದೆ. ಐದು ದಿನಗಳ ಹಿಂದೆ ನಾಪತ್ತೆಯಾದ ಕಾರ್ಕಳದ ದುರ್ಗ ಗ್ರಾಮದ ನಿವಾಸಿ ಸಂದೇಶ್ ಶೆಟ್ಟಿ ಎಂಬವರ ಶವ ಕಾರ್ಕಳ ಪುರಸಭಾ ವ್ಯಾಪ್ತಿಯ ಕಾವೇರಡ್ಕ ಅಯೋಧ್ಯಾ ನಗರ ದುರ್ಗ ತೆಳ್ಳಾರು ಸಂಪರ್ಕ ಸೇತುವೆಯಡಿ ಪತ್ತೆಯಾಗಿದೆ. ಸಂದೇಶ್ ಶೆಟ್ಟಿಯವರು ನಾಪತ್ತೆಯಾದ ದಿನವೇ ಅವರು ದುರ್ಗ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಅಂದಾಜಿಸಲಾಗಿತ್ತು. ಭಾರೀ ಮಳೆಯ ಹಿನ್ನೆಲೆಯಲ್ಲಿ ಅವರ ಶವ ತೇಲಿಕೊಂಡು ಬಂದು ಕಾವೇರಡ್ಕ ಎಂಬಲ್ಲಿನ

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ Read More »

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ

ಸಮಗ್ರ ನ್ಯೂಸ್: ಕರಾವಳಿ ಭಾಗದಲ್ಲಿ ಪ್ರಸಿದ್ಧಿಯಾಗಿರುವ ಯಕ್ಷಗಾನ ಬಯಲಾಟವು ಮೊದಲ ಬಾರಿಗೆ ಭಾರತದ ಜಮ್ಮು ಕಾಶ್ಮೀರದಲ್ಲಿ ಪ್ರದರ್ಶನಗೊಂಡು ಮೈ ರೋಮಾಂಚನಗೊಳಿಸಿದೆ. ವಿಶೇಷವಾಗಿ ಪಾವಂಜೆ ಮೇಳದ ಕಲಾವಿದರು ದೇವಿ ಮಹಾತ್ಮೆ ಯಕ್ಷಗಾನವನ್ನು ಪ್ರಸ್ತುತಪಡಿಸಿದ್ದು, ಖುದ್ದು ಜಮ್ಮು ಕಾಶ್ಮೀರದ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹ ಅವರೇ ಹಾಜರಿದ್ದು ಮೆಚ್ಚುಗೆ ವ್ಯಕ್ತಪಡಿಸಿದರು. ಅಕ್ಟೋಬರ್‌ 2 ರಂದು ಗಾಂಧಿ ಜಯಂತಿ ಪ್ರಯುಕ್ತ ಜಮ್ಮು ಕಾಶ್ಮೀರದ ರಾಜಧಾನಿ ಶ್ರೀನಗರದ ಶೇರ್‌-ಇ-ಕಾಶ್ಮೀರ್‌ ಇಂಟರ್‌ ನ್ಯಾಶನಲ್‌ ಕಾನ್ಫರೆನ್ಸ್‌ ಸೆಂಟರ್‌ನಲ್ಲಿ ಕಾರ್ಯಕ್ರಮವನ್ನ ಆಯೋಜಿಸಲಾಗಿತ್ತು. ಈ ಕಾರ್ಯಕ್ರಮದ ವೇದಿಕೆಯಲ್ಲಿ ಮಂಗಳೂರಿನ

ಕಾಶ್ಮೀರದಲ್ಲಿ ಕರಾವಳಿಯ ಗಂಡು ಕಲೆ ಯಕ್ಷಗಾನ ಪ್ರದರ್ಶನ Read More »

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಸಮಗ್ರ ನ್ಯೂಸ್: ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ನಿರಾಕರಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ಎಚ್‌.ಬಿ. ಪ್ರಭಾಕರ್‌ ಶಾಸ್ತ್ರಿ, ನ್ಯಾ. ಅನಿಲ್‌ ಕೆ.ಕಟ್ಟಿ ಅವರಿದ್ದ ವಿಭಾಗೀಯ ಪೀಠವು, ಆತನ ಹತ್ಯೆ ಸಂಬಂಧ ಸಂಚಿನಲ್ಲಿ‌ ಆರೋಪಿಗಳು ಭಾಗಿಯಾದ ಆರೋಪವಿದೆ ಹೀಗಾಗಿ ಕೆ.ಇಸ್ಮಾಯಿಲ್‌ ಶಫಿ, (ಆರೋಪಿ 9), ಕೆ.ಮೊಹಮ್ಮದ್‌ ಇಕ್ಬಾಲ್‌ (ಆರೋಪಿ 10) ಹಾಗೂ ಎಂ.ಶಾಹೀದ್‌ (ಆರೋಪಿ 11) ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಲಾಗಿದೆ ಎಂದು ಆದೇಶಿಸಿದೆ.

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ| ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ಮಲಬದ್ದತೆಯಿಂದ ಬಳಲುತ್ತಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ| ಮಂಗಳೂರು ಯುವ ವೈದ್ಯರ ಮಹತ್ಸಾಧನೆ

ಸಮಗ್ರ ನ್ಯೂಸ್: ಬಂಟ್ವಾಳ ತಾಲೂಕಿನ ವಗ್ಗದಲ್ಲಿ ಕಾಣಸಿಕ್ಕಿರುವ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದ ಬೃಹತ್ ಗಾತ್ರದ ಹೆಬ್ಬಾವನ್ನು ಮಂಗಳೂರಿನ ಯುವ ವೈದ್ಯರ ತಂಡವೊಂದು ಚಿಕಿತ್ಸೆ ನೀಡಿ ರಕ್ಷಿಸಿ ಮರಳಿ ಸುರಕ್ಷಿತವಾಗಿ ಬಿಟ್ಟಿದೆ. ಉರಗ ರಕ್ಷಕ ಧೀರಜ್ ನಾವೂರು ಅವರಿಗೆ‌ ಬಂಟ್ವಾಳದ ವಗ್ಗದಲ್ಲಿ ಈ ಹೆಬ್ಬಾವು ಅಸ್ವಸ್ಥ ಸ್ಥಿತಿಯಲ್ಲಿ ಕಾಣಸಿಕ್ಕಿದೆ. ಯಾರೋ ಹೊಡೆದಿದ್ದಾರೇನೋ ಅಂದುಕೊಂಡ ಅವರು ತಕ್ಷಣ ಮಂಗಳೂರಿನ ಪಶು ವೈದ್ಯೆ ಡಾ.ಯಶಸ್ವಿ ನಾರಾವಿ ಅವರಿಗೆ ಕರೆ ಮಾಡಿದ್ದಾರೆ‌. ಚಿಕಿತ್ಸೆ ನೀಡಲೆಂದು ಅವರು ಹೆಬ್ಬಾವನ್ನು ಕ್ಲಿನಿಕ್‌ಗೆ ಕರೆ ತರವಂತೆ ಸೂಚಿಸಿದ್ದಾರೆ.

ಮಲಬದ್ದತೆಯಿಂದ ಬಳಲುತ್ತಿದ್ದ ಹೆಬ್ಬಾವಿಗೆ ಶಸ್ತ್ರಚಿಕಿತ್ಸೆ| ಮಂಗಳೂರು ಯುವ ವೈದ್ಯರ ಮಹತ್ಸಾಧನೆ Read More »