ಕರಾವಳಿ

ಅಂಗನವಾಡಿಯಲ್ಲಿ ವಿತರಿಸಿದ‌ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ!!

ಸಮಗ್ರ ನ್ಯೂಸ್: ಅಂಗನವಾಡಿ ಕೇಂದ್ರದಲ್ಲಿ ಇತ್ತೀಚೆಗೆ ವಿತರಿಸಲಾದ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ ಪತ್ತೆಯಾಗಿದೆ ಎಂಬ ಆರೋಪ ಗುಡಿಬಂಡೆ ತಾಲೂಕಿನ ಹಂಪಸಂದ್ರ ಗ್ರಾಮದಿಂದ ವರದಿಯಾಗಿದೆ. ಗರ್ಭಿಣಿಯರು, ಬಾಣಂತಿಯರಿಗೆ ಅಂಗನವಾಡಿ ಕೇಂದ್ರದಲ್ಲಿ ಈ ಪೊಟ್ಟಣಗಳನ್ನು ವಿತರಿಸಲಾಗಿತ್ತು. ಗರುಡಾಚಾರ್ಲಹಳ್ಳಿ ಗ್ರಾಮದ ನಿವಾಸಿ ರತ್ನಮ್ಮ ಎಂಬುವರಿಗೆ ನೀಡಿದ ಎರಡು ಬೆಲ್ಲದ ಪೊಟ್ಟಣಗಳ ಪೈಕಿ ಒಂದರಲ್ಲಿ ಈ ಸತ್ತ ಇಲಿ ಕಂಡುಬಂದಿವೆ. ಕೂಡಲೇ ಅವರು ಪೊಟ್ಟಣಗಳನ್ನು ಅಂಗನವಾಡಿ ಕಾರ್ಯಕರ್ತೆ ಗಮನಕ್ಕೆ ತಂದಿದ್ದಾರೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೂಲಕ ಅಂಗನವಾಡಿಗಳಿಗೆ ಪೂರೈಸುವ […]

ಅಂಗನವಾಡಿಯಲ್ಲಿ ವಿತರಿಸಿದ‌ ಬೆಲ್ಲದ ಪೊಟ್ಟಣದಲ್ಲಿ ಸತ್ತ ಇಲಿ!! Read More »

ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾ.ಪಂ ಅಧ್ಯಕ್ಷೆಗೆ ಸ್ವಾತಂತ್ರ್ಯೋತ್ಸವದ ಆಮಂತ್ರಣ| ಸುಳ್ಯದ ಅಚ್ರಪ್ಪಾಡಿ ಶಾಲೆ ಮಾಜಿ ಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸೇರಿ ಜಿಲ್ಲೆಯ ಮೂವರಿಗೆ ಅವಕಾಶ

ಸಮಗ್ರ ನ್ಯೂಸ್: ಹೊಸದಿಲ್ಲಿಯಲ್ಲಿ ನಡೆಯುವ 78ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ರಾಜ್ಯದ ನಾಲ್ಕು ಪಿಎಂಶ್ರೀ ಶಾಲೆಗಳ ನಾಲ್ವರು ವಿದ್ಯಾರ್ಥಿಗಳು ಹಾಗೂ ನಾಲ್ವರು ಶಿಕ್ಷಕರು ವಿಶೇಷ ಅವಕಾಶ ಪಡೆದುಕೊಂಡಿದ್ದು, ಇದರಲ್ಲಿ ಮೈಸೂರು ಶೈಕ್ಷಣಿಕ ವಿಭಾಗದಿಂದ ದ.ಕ. ಜಿಲ್ಲೆಯ ಓರ್ವ ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾಮ ಪಂಚಾಯತ್ ಅಧ್ಯಕ್ಷೆಯೊಬ್ಬರಿಗೆ ಭಾಗವಹಿಸಲು ವಿಶೇಷ ಆಮಂತ್ರಣ ದೊರಕಿದೆ. ದ.ಕ. ಜಿಲ್ಲೆಯ ಮಂಗಳೂರಿನ ಶಕ್ತಿನಗರ ನಾಲ್ಯಪದವು ಕುವೆಂಪು ಶತಮಾನೋತ್ಸವ ಉನ್ನತೀಕರಿಸಿದ ಮಾದರಿ ಸ.ಹಿ.ಪ್ರಾ. ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಪೂರ್ವಿ ಯು. ಶೆಟ್ಟಿ ಹಾಗೂ

ವಿದ್ಯಾರ್ಥಿನಿ, ಶಿಕ್ಷಕಿ ಹಾಗೂ ಗ್ರಾ.ಪಂ ಅಧ್ಯಕ್ಷೆಗೆ ಸ್ವಾತಂತ್ರ್ಯೋತ್ಸವದ ಆಮಂತ್ರಣ| ಸುಳ್ಯದ ಅಚ್ರಪ್ಪಾಡಿ ಶಾಲೆ ಮಾಜಿ ಶಿಕ್ಷಕಿ ಶ್ವೇತಾ ವೇಣುಗೋಪಾಲ್ ಸೇರಿ ಜಿಲ್ಲೆಯ ಮೂವರಿಗೆ ಅವಕಾಶ Read More »

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು

ಸಮಗ್ರ ನ್ಯೂಸ್: ರಸ್ತೆದಾಟಲು ನಿಂತಿದ್ದ ವೃದ್ದರೊಬ್ಬರಿಗೆ ಸ್ಕೂಟರ್ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಬಳಿಕ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಡಬ ತಾಲೂಕಿನ ಕೋಡಿಂಬಾಳದಿಂದ ವರದಿಯಾಗಿದೆ. ಕೋಡಿಂಬಾಳ ಗ್ರಾಮದ ಶ್ಯಾಮಿಯಾನ ಅಂಗಡಿಯೊಂದರ ಬಳಿ ಸ್ಕೂಟರ್ ಸವಾರ ಸ್ಕೂಟರ್ ಸವಾರ ಮಹಮ್ಮದ್ ನೌಫಾಲ್ ಎಂಬಾತ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ರಸ್ತೆಯ ಬದಿಯಲ್ಲಿ ರಸ್ತೆ ದಾಟಲು ನಿಂತಿದ್ದ ಕೋಡಿಂಬಾಳದ ಹುಕ್ರ (ವ 75 ) ಎಂಬವರಿಗೆ ಡಿಕ್ಕಿ ಹೊಡೆದಿರುವುದಾಗಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ . ಅಪಘಾತದ ಪರಿಣಾಮ

ಕಡಬ: ಸ್ಕೂಟರ್ ಡಿಕ್ಕಿ ಹೊಡೆದು ಗಾಯಗೊಂಡಿದ್ದ ಪಾದಚಾರಿ ಸಾವು Read More »

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್

ಸಮಗ್ರ ನ್ಯೂಸ್: ರೌಡಿಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯನ್ನು ಅಟ್ಟಾಡಿಸಿ ತಲವಾರಿನಿಂದ ಕಡಿದು ಹತ್ಯೆ ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕಲ್ಲಾಪುವಿನಲ್ಲಿ ರಾ.ಹೆ.66ರ ಪಕ್ಕದಲ್ಲಿರುವ ವಿ.ಕೆ.ಫರ್ನಿಚರ್ ಕಟ್ಟಡದ ಹಿಂಭಾಗದಲ್ಲಿ ಭಾನುವಾರ ಮಧ್ಯರಾತ್ರಿ ವೇಳೆ ನಡೆದಿದೆ. ಉಳ್ಳಾಲ ಕಡಪ್ಪುರ ನಿವಾಸಿ ಸಮೀರ್ (35) ಹತ್ಯೆಯಾದವರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ತಾಯಿ ಜೊತೆಗೆ ಕಲ್ಲಾಪುವಿನ ರೆಸ್ಟೋರೆಂಟ್ ಒಂದಕ್ಕೆ ಊಟಕ್ಕೆಂದು ಬಂದ ಸಂದರ್ಭ ಕಾರಿನಲ್ಲಿ ಹಿಂಬಾಲಿಸಿದ್ದ ತಂಡ ಸಮೀರ್ ಇಳಿಯುತ್ತಿದ್ದಂತೆ ತಲವಾರಿನಿಂದ ಕಡಿದು ಕೊಲೆಗೆ ಯತ್ನಿಸಿದೆ.

ಉಳ್ಳಾಲ: ರೌಡಿ ಶೀಟರ್ ಟಾರ್ಗೆಟ್ ಇಲ್ಯಾಸ್ ಕೊಲೆ ಪ್ರಕರಣದ ಆರೋಪಿಯ ಅಟ್ಟಾಡಿಸಿ ಕೊಲೆ| ತಾಯಿ ಜೊತೆ ಇದ್ದಾಗಲೇ ಹಂತಕರ ಮಚ್ಚಿಗೆ ಬಲಿಯಾದ ಸಮೀರ್ Read More »

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ

ಸಮಗ್ರ ನ್ಯೂಸ್: ಬೆಳ್ಳಾರೆ ಬ್ಲಾಕ್ ನ 2024-27 ನೇಯ ಸಾಲಿಗೆ ಪದಾಧಿಕಾರಿಗಳನ್ನು ಚುನಾವಣೆಯ ಮೂಲಕ ಆ.10 ರಂದು ಆಯ್ಕೆ ಮಾಡಲಾಯಿತು. ನೂತನ ಸಮಿತಿಯ ಅಧ್ಯಕ್ಷರಾಗಿ ರಫೀಕ್ ಎಂ ಎ ಕಾರ್ಯದರ್ಶಿಯಾಗಿ ಹಮೀದ್ ಮರಕ್ಕಡ, ಕೋಶಾಧಿಕಾರಿಯಾಗಿ, ಇರ್ಷಾದ್ ಸರ್ವೆ, ಉಪಾಧ್ಯಕ್ಷರಾಗಿ ಅಬ್ದುಲ್ ರಹಿಮಾನ್ ತಂಬಿನಮಕ್ಕಿ, ಜೊತೆ ಕಾರ್ಯದರ್ಶಿಯಾಗಿ ಅಝೀಝ್ ಅಯ್ಯನಕಟ್ಟೆ,ಸಮಿತಿ ಸದಸ್ಯರಾಗಿ ಮೊಯ್ದೀನ್ ಬೆಳ್ಳಾರೆ ಹಾಗೂ ಯೂಸಫ್ ಹಾಜಿ ಬೇರಿಕೆ ಯವರು ಆಯ್ಕೆಯಾದರು. ಚುನಾವಣೆ ಪ್ರಕ್ರಿಯೆಯ ಆರ್. ಓ ಆಗಿ,ಎಸ್‌ಡಿಪಿಐ ದ.ಕ ಜಿಲ್ಲಾ ಸಮಿತಿ ಸದಸ್ಯರಾದ ಅಶ್ರಫ್ ತಲಪಾಡಿ

SDPI ಬೆಳ್ಳಾರೆ ಬ್ಲಾಕ್ ಪ್ರತಿನಿಧಿ ಸಭೆ,ಆಂತರಿಕ ಚುನಾವಣೆ Read More »

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಕರಾವಳಿಯಲ್ಲಿ ಮತ್ತೆ ವರುಣನ ಆರ್ಭಟ ಶುರುವಾಗಿದೆ, ಮೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ನೀಡಲಾಗಿದ್ದು, ಮುಂದಿನ ಮೂರು ದಿನ ಮುಂಗಾರು ಚುರುಕಾಗಿರಲಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮನಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಳೆದ ಎರಡು ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ಮಳೆ ಮತ್ತೆ ಕರಾವಳಿಯಲ್ಲಿ ಆತಂಕವನ್ನು ಸೃಷ್ಟಿ

ಹವಾಮಾನ ವರದಿ| ಕರಾವಳಿ, ಮಲೆನಾಡಿನಲ್ಲಿ ಮತ್ತೆ ಮಳೆ ಶುರು| ಎಲ್ಲೋ ಅಲರ್ಟ್ ಘೋಷಣೆ Read More »

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ

ಸಮಗ್ರ ನ್ಯೂಸ್: ಮಂಗಳೂರು- ಬೆಂಗಳೂರು ರೈಲು ಮಾರ್ಗದ ಎಡಕುಮೇರಿ -ಕಡಗರವಳ್ಳಿ ನಡುವಣ ದೋಣಿಗಲ್‌ನಲ್ಲಿ ಭೂಕುಸಿತ ನಡೆದಲ್ಲಿ ದುರಸ್ತಿ ಕಾರ್ಯ ಪೂರ್ಣಗೊಂಡಿದ್ದು, ಸುಮಾರು 12 ದಿನಗಳ ಬಳಿಕ ಗುರುವಾರದಿಂದ ರೈಲು ಸಂಚಾರ ಪುನರಾರಂಭಗೊಂಡಿದೆ. ಭಾರೀ ಮಳೆಯಿಂದಾಗಿ ಕಡಗರವಳ್ಳಿ ಮತ್ತು ಯಡಕುಮೇರಿ ನಡುವಿನ ರೈಲು ಮಾರ್ಗದ ಕೆಳಬದಿಯಲ್ಲಿ ಭೂಕುಸಿತವಾಗಿತ್ತು, ರೈಲ್ವೆ ಇಲಾಖೆ ನಿರಂತರ ಮಳೆಯ ನಡುವೆಯೂ ಕ್ರಿಬ್‌ ಗೋಡೆ, ತಡೆಗೋಡೆ ನಿರ್ಮಾಣ ಕಾಮಗಾರಿಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿದೆ. ಆಗಸ್ಟ್ 4 ರಂದು ಈ ಮಾರ್ಗದಲ್ಲಿ ರೈಲು ಸಂಚಾರಕ್ಕೆ ಅನುಮತಿ ನೀಡಲಾಗಿತ್ತು. ರೈಲಿನ

12 ದಿನಗಳ ಬಳಿಕ ಮಂಗಳೂರು – ಬೆಂಗಳೂರು ರೈಲು ಸಂಚಾರ ಪುನರಾರಂಭ| ಪೂರ್ಣಗೊಂಡ ಮಾರ್ಗ ದುರಸ್ತಿ ಕಾರ್ಯ Read More »

ಕರಾವಳಿಯನ್ನು ಬೆಚ್ಚಿಬೀಳಿಸಿದ ಸೌಮ್ಯ ಭಟ್ ಕೊಲೆಗೆ 27 ವರ್ಷ| ಇನ್ನೂ ಪತ್ತೆಯಾಗಿಲ್ಲ ಮಿಲಿಟ್ರಿ ಅಶ್ರಫ್

ಸಮಗ್ರ ನ್ಯೂಸ್: ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಪುತ್ತೂರಿನ ವಿದ್ಯಾರ್ಥಿನಿ ಸೌಮ್ಯಾ ಭಟ್‌ ಕೊಲೆ ಪ್ರಕರಣ ನಡೆದು 27 ವರ್ಷ ತುಂಬಿದೆ ಆದರೆ ಪೊಲೀಸರ ಕೈಯಿಂದ ತಪ್ಪಿಸಿಕೊಂಡಿದ್ದ ಆರೋಪಿ ಮಿಲಿಟ್ರಿ ಅಶ್ರಫ್ ಸುಳಿವು ಇನ್ನೂ ಪತ್ತೆಯಾಗಿಲ್ಲ. ದಕ್ಷಿಣ ಕನ್ನಡದ ಪುತ್ತೂರು ವಿವೇಕಾನಂದ ಕಾಲೇಜಿನ ಬಿಎಸ್‌ಸಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿದ್ದ ಸೌಮ್ಯಾ ಭಟ್‌ ಅವರನ್ನು ಹಿಂಬಾಲಿಸಿ ಕುದಂಬ್ಲಾಜೆಯ ಮಿಲಿಟ್ರಿ ಅಶ್ರಫ್‌ ಬರ್ಬರವಾಗಿ ಕೊಲೆಗೈದಿದ್ದ ಆ ಘಟನೆ ಇಡೀ ಪುತ್ತೂರು ಕೆರಳಿ ಕೆಂಡದಂತೆ ಮಾಡಿತ್ತು. ಅದು 1997ರ ಆಗಸ್ಟ್‌ 7 ರಂದು

ಕರಾವಳಿಯನ್ನು ಬೆಚ್ಚಿಬೀಳಿಸಿದ ಸೌಮ್ಯ ಭಟ್ ಕೊಲೆಗೆ 27 ವರ್ಷ| ಇನ್ನೂ ಪತ್ತೆಯಾಗಿಲ್ಲ ಮಿಲಿಟ್ರಿ ಅಶ್ರಫ್ Read More »

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್ : ಜೋಕಟ್ಟೆಯ ಬಾಡಿಗೆ ಮನೆಗೆ ಅತಿಥಿಯಾಗಿ ಬಂದಿದ್ದ ಬೆಳಗಾವಿ ಮೂಲದ 14 ವರ್ಷದ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಪಣಂಬೂರು ಪೊಲೀಸರು ಬಂಧಿಸಿದ್ದಾರೆ. ಕಳೆದ 6 ತಿಂಗಳಿನಿಂದ ಜೋಕಟ್ಟೆಯಲ್ಲಿ ವಾಸಿಸುತ್ತಿದ್ದ ಬೆಳಗಾವಿ ಜಿಲ್ಲೆ ಪರಸಘಡ ನಿವಾಸಿ ಫಕ್ಕೀರಪ್ಪ ಹಣಮಪ್ಪ ಮಾದರ (51) ಕೊಲೆ ಆರೋಪಿ. ಆರೋಪಿಯು ಜೋಕಟ್ಟೆಯಲ್ಲಿ ವಿಜಯ ವಿಠಲ ಭಜನಾ ಮಂದಿರದ ಹಿಂಭಾಗದಲ್ಲಿ ಕೇಶವ ಎಂಬವರ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಆರೋಪಿಯು ಜೋಕಟ್ಟೆ ಪರಿಸರದಲ್ಲಿ ದಿನಗೂಲಿ ಕಾರ್ಮಿಕನಾಗಿ ಕೆಲಸ ಮಾಡಿಕೊಂಡಿದ್ದ. ಕೃತ್ಯ ನಡೆದ

ಮಂಗಳೂರು: ಚಿಕಿತ್ಸೆಗೆಂದು ಬಂದಿದ್ದ ಬಾಲಕಿಯ ಕೊಲೆಗೈದ ಪ್ರಕರಣ| ಆರೋಪಿಯನ್ನು ಬಂಧಿಸಿದ ಪೊಲೀಸರು Read More »

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ

ಸಮಗ್ರ ನ್ಯೂಸ್: ಹಲವು ದಿನಗಳ ಆತಂಕದ ಬಳಿಕ ಶಿರಾಡಿಘಾಟ್ ಸಂಚಾರಕ್ಕೆ ಮುಕ್ತವಾಗಿದ್ದು, ದಿನದ 24 ಗಂಟೆಯೂ ಎಲ್ಲಾ ವಾಹನಗಳ ಓಡಾಟಕ್ಕೆ ಅವಕಾಶ ಕಲ್ಪಿಸಲಾಗಿದೆ. ಮಲೆನಾಡಿನಲ್ಲಿ ಮಳೆ ಕಡಿಮೆಯಾದ ಹಿನ್ನೆಲೆ ವಾಹನಗಳ ಓಡಾಟಕ್ಕೆ ಜಿಲ್ಲಾಡಳಿತ ಅವಕಾಶ ಮಾಡಿದೆ. ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿ ಹಲವು ಭಾರಿ ಗುಡ್ಡ ಕುಸಿದಿದ್ದ ಸ್ಥಳದಲ್ಲಿ ಮಣ್ಣನ್ನು ತೆರವು ಮಾಡಿ ಆತಂಕ ನಿವಾರಣೆ ಮಾಡಲಾಗಿದೆ. ಈ ಹಿನ್ನಲೆ ವಾಹನಗಳು ಸಂಚರಿಸಲು ಅನುವು ಮಾಡಿಕೊಡಲಾಗಿದೆ. ಮಂಗಳೂರು – ಬೆಂಗಳೂರು ರೈಲು ಮಾರ್ಗದ ಎಡಕುಮೇರಿ- ಕಡಗರವಳ್ಳಿ ನಡುವಿನಲ್ಲಿ

ಶಿರಾಡಿ ಘಾಟ್ ಈಗ ಸಂಚಾರಕ್ಕೆ ಮುಕ್ತ| ಎಲ್ಲಾ ವಾಹನಗಳ ಸಂಚಾರಕ್ಕೆ ಅನುಮತಿ ನೀಡಿದ ಹಾಸನ ಡಿಸಿ Read More »