ಕರಾವಳಿ

ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ.

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾವಿದ್ಯಾಲಯದ ಆಂತರಿಕ ಗುಣಮಟ್ಟ ಭರವಸಾ ಕೋಶ, ಆಂಗ್ಲ ಭಾಷಾ ವಿಭಾಗ ಮತ್ತು ಯೂತ್ ರೆಡ್ ಕ್ರಾಸ್ ಘಟಕದ ವತಿಯಿಂದ ಆತ್ಮಹತ್ಯೆ ತಡೆ ದಿನದ ಪ್ರಯುಕ್ತ ಸೆ. 11 ರಂದು ಹಮ್ಮಿಕೊಳ್ಳಲಾದ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಬಾತ್ರಾ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ ದೆಹಲಿ ಇಲ್ಲಿನ ಸರ್ಜನ್ ಡಾ. ಅವಿನ್ ಡಿ.ಪಿ.ಅವರು ಆಧುನಿಕ ಜಂಜಾಟದ ಬದುಕಿನಲ್ಲಿ ಪ್ರತಿಯೊಬ್ಬರು ಒತ್ತಡ ರಹಿತವಾದ ಜೀವನವನ್ನು ರೂಢಿಸಿಕೊಳ್ಳಬೇಕೆಂದು ಕಿವಿಮಾತು ಹೇಳಿದರು. ಪ್ರಭಾರ ಪ್ರಾಂಶುಪಾಲರಾದ ದಿನೇಶ್.ಕೆ

ಸುಬ್ರಹ್ಮಣ್ಯ:ಆತ್ಮಹತ್ಯೆಯಿಂದ ಹೊರಬರಲು ಒತ್ತಡ ರಹಿತ ಜೀವನವನ್ನು ರೂಡಿಸಿಕೊಳ್ಳಿ: ಡಾ.ಅವಿನ್.ಡಿ.ಪಿ. Read More »

ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ

ಸಮಗ್ರ ನ್ಯೂಸ್: ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನ ಹಿಂದಿ ವಿಭಾಗ ಹಾಗೂ IQAC ಯ ಸಹಯೋಗದೊಂದಿಗೆ ಸೆ. 14ರಂದು ಹಿಂದಿ ದಿವಸ್ ಆಚರಿಸಲಾಯಿತು. ದೀಪಾ ಕಟೇರ ಅವರು ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಹಿಂದಿ ದಿವಸದ ಮಹತ್ವ ಹಾಗೂ ಆಚರಣೆಯ ಬಗ್ಗೆ ಮಾತನಾಡಿದರು. ವಿಧ್ಯಾರ್ಥಿಗಳಿಗೆ ಹಿಂದಿ ಭಾಷಣ ಸ್ಪರ್ಧೆ, ಹಿಂದಿ ರಸಪ್ರಶ್ನೆ, ಹಿಂದಿ ದೇಶಭಕ್ತಿ ಗೀತೆ ಸ್ಪರ್ಧೆಗಳನ್ನು ಏರ್ಪಡಿಸಿ ಬಹುಮಾನ ವಿತರಿಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ (ಪ್ರಭಾರ) ಡಾ.ದಿನೇಶ್ ಕೆ ಅವರು ಕಾರ್ಯಕ್ರಮದ ಅಧ್ಯ್ಷತೆಯನ್ನು ವಹಿಸಿದರು ಮಾತನಾಡಿದರು. ಈ

ಕುಕ್ಕೇ ಶ್ರೀ ಸುಬ್ರಹ್ಮಣ್ಯೇಶ್ವರ ಕಾಲೇಜಿನಲ್ಲಿ ಹಿಂದಿ ದಿವಸ್ ಆಚರಣೆ Read More »

ಸುಳ್ಯ: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ

ಸಮಗ್ರ ನ್ಯೂಸ್:ಸುಳ್ಯದ ಜಯನಗರ ಕೊರಂಬಡ್ಕ ಶ್ರೀ ನಾಗಬ್ರಹ್ಮ ಆದಿಮೊಗೇರ್ಕಳ ದೈವಸ್ಥಾನ, ಶ್ರೀ ಗುಳಿಗ ದೈವ, ಸ್ವಾಮಿ ಶ್ರೀ ಕೊರಗತನಿಯ ದೈವಸ್ಥಾನ ಮತ್ತು ವ್ಯವಸ್ಥಾಪನಾ ಆಡಳಿತ ಕಾರ್ಯ ಸೇವಾ ಟ್ರಸ್ಟ್ ಆಶ್ರಯದಲ್ಲಿ ನಡೆದ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ, ಶ್ರೀ ಕೃಷ್ಣ ಲೀಲೋತ್ಸವ ಕಾರ್ಯಕ್ರಮ ಸೆ. 10ರಂದು ನಡೆಯಿತು. ಸಮಾಜ ಸೇವಕಿ ಮಹಾಲಕ್ಷ್ಮೀ ಕೊರಂಬಡ್ಕ ಅವರು ಕಾರ್ಯಕ್ರಮದ ಉದ್ಘಾಟನೆಯನ್ನು ಮಾಡಿ ದೀಪ ಬೆಳಗಿಸಿ ಶುಭಹಾರೈಸಿದರು. ವೇದಿಕೆಯಲ್ಲಿ ಆಡಳಿತ ಸಮಿತಿಯ ಅಧ್ಯಕ್ಷ ಕೇಶವ ಸಿ.ಎ, ಪ್ರಧಾನ ಕಾರ್ಯದರ್ಶಿ

ಸುಳ್ಯ: ಶ್ರೀ ಕ್ಷೇತ್ರ ಕೊರಂಬಡ್ಕದಲ್ಲಿ 2 ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ, ಸನ್ಮಾನ Read More »

ಹವಾಮಾನ ವರದಿ| ಸೆ.20ರವರೆಗೂ ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ. ಬುಧವಾರ ಚನ್ನಪಟ್ಟಣ, ಧರ್ಮಸ್ಥಳ, ಗೇರುಸೊಪ್ಪ, ಸಕಲೇಶಪುರ, ಮದ್ದೂರು, ಮಡಿಕೇರಿ, ಮಂಗಳೂರು, ಮಾಣಿ, ಪುತ್ತೂರು,

ಹವಾಮಾನ ವರದಿ| ಸೆ.20ರವರೆಗೂ ಕರಾವಳಿಯಲ್ಲಿ ಉತ್ತಮ ಮಳೆ ಸಾಧ್ಯತೆ Read More »

ಕರಾವಳಿಯಲ್ಲಿ ಗಣೇಶ ಚತುರ್ಥಿ ರಜೆ ಯಾವಾಗ? ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು?

ಸಮಗ್ರ ನ್ಯೂಸ್: ಸೆಪ್ಟೆಂಬರ್‌ 19ರಿಂದ ದೇಶಾದ್ಯಂತ ಗಣೇಶ ಚತುರ್ಥಿಯನ್ನು ಆಚರಣೆ ಮಾಡಲಾಗುತ್ತಿದೆ. ಈ ಹಿನ್ನೆಲೆ ಸೆಪ್ಟೆಂಬರ್‌ 19ರಂದು ಸರ್ಕಾರಿ ರಜೆ ಘೋಷಣೆ ಮಾಡಬೇಕೆನ್ನುವ ಕೂಗುಗಳು ಎದ್ದಿದೆ. ಅದೇ ರೀತಿಯಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಸಹ ಅದೇ ಬೇಡಿಕೆಗಳು ಕೇಳಿಬಂದಿವೆ. ಗಣೇಶೋತ್ಸವ ಹಿನ್ನೆಲೆ ಸೆಪ್ಟೆಂಬರ್‌ 19ರಂದು ದಕ್ಷಿಣ ಕನ್ನಡ ಜಿಲ್ಲೆಗೆ ಸರ್ಕಾರಿ ರಜೆ ಘೋಷಣೆ ಮಾಡಿ ಎಂದು ವಿಧಾನಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ಅವರು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಮನವಿ ಮಾಡಿದ್ದರು. ಇದೀಗ

ಕರಾವಳಿಯಲ್ಲಿ ಗಣೇಶ ಚತುರ್ಥಿ ರಜೆ ಯಾವಾಗ? ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದೇನು? Read More »

ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ

ಸಮಗ್ರ ನ್ಯೂಸ್: ಸೆ. 13ರಂದು ಪುತ್ತೂರು ಘಟಕ ಕಛೇರಿಯನ್ನು ಪುತ್ತೂರು ಹಳೆಯ ಪೊಲೀಸ್ ಠಾಣೆಯ ಎದುರು ಭಾಗದಲ್ಲಿರುವ ಮಹಾಲಿಂಗೇಶ್ವರ ವೆಂಚರ್ಸ್ ಕಟ್ಟಡಕ್ಕೆ (ಹಳೆಯ ಬೋನಂತಾಯ ಆಸ್ಪತ್ರೆ) ಸ್ಥಳಾಂತರ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಸುರೇಶ್ ಬಲ್ನಾಡು ಅವರು ದೀಪ ಬೆಳಗಿಸಿ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಗೃಹರಕ್ಷಕರು ಒಳ್ಳೆಯ ರೀತಿಯಲ್ಲಿ ಕರ್ತವ್ಯಗಳನ್ನು ನಿರ್ವಹಿಸುತ್ತಾರೆ. ಅವರಿಗೆ ಜನರು ಹೆಚ್ಚಿನ ಸಹಕಾರವನ್ನು ಕೊಡಬೇಕು ಹಾಗೂ ಪ್ರೋತ್ಸಾಹ ಕೊಡಬೇಕು, ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ ಗೃಹರಕ್ಷಕರು ಬಹಳ ಅಗತ್ಯ ಅವರ ಸಮಸ್ಯೆಗಳಿಗೆ ಸರಕಾರ ಹೆಚ್ಚಿನ

ಪುತ್ತೂರು: ಗೃಹರಕ್ಷಕರ ಘಟಕ ಕಛೇರಿ ಸ್ಥಳಾಂತರ Read More »

ಸುಳ್ಯ: ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮ

ಸಮಗ್ರ ನ್ಯೂಸ್:‌ ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮವು ಜರುಗಿತು. ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಆಯೋಜಿಸಲಾಗಿದ್ದ ಈ ಭಕ್ತಿಗೀತೆಗಳ ರಸಮಂಜರಿ ಕಾರ್ಯಕ್ರಮವನ್ನು ಸಮಾಜಸೇವಕ ಮಂಜು ಮೇಸ್ತ್ರಿ ಬಳ್ಳಾರಿ ಉದ್ಘಾಟಿಸಿದರು. ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಮತ್ತು ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಟರ್ ರವರು ವಾಷ್ಠರ್ ಭಕ್ತಿ ಗಾನ

ಸುಳ್ಯ: ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದಿಂದ ವಾಷ್ಠರ್ ಭಕ್ತಿ ಗಾನಮಂಜರಿ ಕಾರ್ಯಕ್ರಮ Read More »

ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ

ಸಮಗ್ರ ನ್ಯೂಸ್: ಕೋಟಿ ಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚೈತ್ರಾ ಕುಂದಾಪುರ ಸೇರಿದಂತೆ ಇಬ್ಬರನ್ನು ಬೆಂಗಳೂರಿನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಇದಕ್ಕೂ ಮೊದಲು ಚೈತ್ರಾ ಕುಂದಾಪುರ, ಕಾಂಗ್ರೆಸ್​ ಮುಖಂಡೆ ಮನೆಯಲ್ಲಿ ಅವಿತುಕೊಂಡಿದ್ದರು ಎನ್ನಲಾಗಿತ್ತು. ಸದ್ಯ ಈ ಕುರಿತು ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಪ್ರತಿಕ್ರಿಯೆ ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ನಾನು ಆಶ್ರಯ ನೀಡಿದ್ದರೆ ಪೊಲೀಸರು ವಿಚಾರಣೆಗೆ ಕರೆಯಬೇಕಿತ್ತಲ್ಲವೇ ಎಂದು ಪ್ರಶ್ನಿಸಿದರು. ಸಿಸಿಬಿ ಪೊಲೀಸರಿಂದ ನನಗೆ ಯಾವುದೇ ನೋಟಿಸ್ ಬಂದಿಲ್ಲ. ಚೈತ್ರಾ ಕುಂದಾಪುರ ಭೇಟಿಯಾಗಿ ಒಂದು ವರ್ಷ

ಚೈತ್ರಾ ಕುಂದಾಪುರಗೆ ನಾನು ಆಶ್ರಯ ನೀಡಿರಲಿಲ್ಲ: ಕಾಂಗ್ರೆಸ್ ವಕ್ತಾರೆ ಸುರಯ್ಯ ಅಂಜುಂ ಸ್ಪಷ್ಟನೆ Read More »

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ

ಸಮಗ್ರ ನ್ಯೂಸ್: ಬೈಂದೂರು ಬಿಜೆಪಿ ಟಿಕೆಟ್ ಆಕಾಂಕ್ಷಿ ಗೋವಿಂದ ಪೂಜಾರಿಗೆ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಕೊಡಿಸುವುದಾಗಿ ಆಮಿಷವೊಡ್ಡಿ 7 ಕೋಟಿ ರೂಪಾಯಿ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಾಕಾರಿ ಭಾಷಣಕಾರ್ತಿ ಚೈತ್ರ ಕುಂದಾಪುರ, ಶ್ರೀಕಾಂತ್, ರಮೇಶ್, ಗಗನ್, ಪ್ರಜ್ವಲ್ ಹಾಗೂ ಧನರಾಜ್ನನ್ನು ಸೆಪ್ಟೆಂಬರ್ 23ರವರೆಗೆ ಸಿಸಿಬಿ ಕಸ್ಟಡಿಗೆ ನೀಡಿ ಬೆಂಗಳೂರಿನ 1ನೇ ಎಸಿಎಂಎಂ ಕೋರ್ಟ್ ಆದೇಶ ಹೊರಡಿಸಿದೆ. ಕೆಲ ಸಮಯದಿಂದ ತಲೆಮರೆಸಿಕೊಂಡಿದ್ದ ಚೈತ್ರಾ ಕುಂದಾಪುರ ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬೆಂಗಳೂರಿನ ಸಿಸಿಬಿ ಪೊಲೀಸರಿಗೆ

ಬಹುಕೋಟಿ ವಂಚನೆ ಪ್ರಕರಣ| ಚೈತ್ರಾ ಕುಂದಾಪುರ ಗ್ಯಾಂಗ್ ಸಿಸಿಬಿ ಕಸ್ಟಡಿಗೆ Read More »

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ

ಸಮಗ್ರ ನ್ಯೂಸ್: ಸುಳ್ಯದ ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವ ವಿದ್ಯಾಲಯದ ಧ್ಯಾನ ಮಂದಿರದಲ್ಲಿ ಸುಳ್ಯದ ಚಂದನ ಸಾಹಿತ್ಯ ವೇದಿಕೆ ವತಿಯಿಂದ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಚಂದನ ಕವಿಗೋಷ್ಠಿ ಜರುಗಿತು. ನಿವೃತ್ತ ಕೃಷಿ ಅಧಿಕಾರಿ ಮೋಹನ್ ನಂಗಾರು ಅವರು ಶ್ರೀಕೃಷ್ಣ ಪ್ರತಿಮೆಗೆ ಮಂಗಳಾರತಿ ಮಾಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಚಂದನ ಸಾಹಿತ್ಯ ವೇದಿಕೆಯ ಅಧ್ಯಕ್ಷ, ಸಾಹಿತಿ ಮತ್ತು ಜ್ಯೋತಿಷಿಯಾದ ಎಚ್. ಭೀಮರಾವ್ ವಾಷ್ಟರ್ ರವರು ಕವಿಗೋಷ್ಠಿ ಸಮಾರಂಭದ ಅಧ್ಯಕ್ಷತೆ ವಹಿಸಿ ನಿರೂಪಿಸಿದರು. ಖ್ಯಾತ ಹಿರಿಯ ಸಾಹಿತಿಗಳಾದ ಪುತ್ತೂರಿನ ಗೋಪಾಲ

ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಚಂದನ ಸಾಹಿತ್ಯ ವೇದಿಕೆಯಿಂದ ಚಂದನ ಕವಿಗೋಷ್ಠಿ Read More »