ಕರಾವಳಿ

ಸೌಜನ್ಯ ಪರ ದನಿ ಎತ್ತಿದ ನಟ ಕಿಶೋರ್

ಸಮಗ್ರ ನ್ಯೂಸ್: ನಟ ಕಿಶೋರ್ ನಟನೆ ಮಾತ್ರವಲ್ಲದೇ ಸಾಮಾಜಿಕ ಕಳಕಳಿ ಇರುವ ವ್ಯಕ್ತಿ. ಸಂಭವಿಸುವ ಘಟನೆಗಳಿಂದ ಅನ್ಯಾಯ ಎನಿಸಿದಾಗ ನ್ಯಾಯಕ್ಕಾಗಿ ಧ್ವನಿ ಎತ್ತಲು ಹಿಂದೆ ಮುಂದೆ ನೋಡುವುದಿಲ್ಲ. ಯಾವುದೇ ಘಟನೆ ಇರಲಿ ಅನ್ಯಾಯದ ವಿರುದ್ದ ಮಾತನಾಡುತ್ತಾರೆ. ಮಣಿಪುರ ಘಟನೆ ಬಗ್ಗೆಯು ಆಡಳಿತ ವ್ಯವಸ್ಥೆ ಬಗ್ಗೆ ಗುಡುಗಿದ್ದ ಕಿಶೋರ್ ಇದೀಗ ಸೌಜನ್ಯ ಕೇಸ್ ಪ್ರಕರ ಸಂಬಂಧ ಪಟ್ಟಂತೆ ಮಾತನಾಡಿದ್ದಾರೆ. ಸೌಜನ್ಯ ಕೇಸ್​,ಮಣಿಪುರ ಘಟನೆ ಈ ಎರಡು ವಿಷಯಗಳು ನೋವಿನ ಸಂಗತಿ. ರಾಜಕೀಯದ ದಾಳಗಳಾಗಿ ಅಪರಾಧ ಪ್ರಕರಣಗಳನ್ನು ತಿರುವುದು ತಪ್ಪುಎಂದಿದ್ದಾರೆ.

ಸೌಜನ್ಯ ಪರ ದನಿ ಎತ್ತಿದ ನಟ ಕಿಶೋರ್ Read More »

ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್

ಸಮಗ್ರ ನ್ಯೂಸ್: ಧರ್ಮಸ್ಥಳದ ಪಾಂಗಾಳದಲ್ಲಿ ಅಮಾನುಷವಾಗಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾದ ಸೌಜನ್ಯ ಕುಟುಂಬಸ್ಥರನ್ನು ಸಂಪರ್ಕಿಸಿದ ನಟ ದುನಿಯಾ ವಿಜಯ್ ಸಾಂತ್ವನ ತಿಳಿಸಿ ನ್ಯಾಯದ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಆ.2ರಂದು ದೂರವಾಣಿ ಮೂಲಕ ಸಂಪರ್ಕಿಸಿದ ವಿಜಯ್ ರವರು ಸೌಜನ್ಯ ತಾಯಿ ಕುಸುಮಾವತಿ, ಸಹೋದರ ಜಯರಾಮ್ ಜೊತೆ ಮಾತನಾಡಿ ಘಟನೆಯ ಕುರಿತಂತೆ ಮಾಹಿತಿ ಪಡೆದುಕೊಂಡಿದ್ದಾರೆ. ಇದೇ ವೇಳೆ ಅವರೊಂದಿಗೆ ಮಾತನಾಡಿದ ವಿಜಯ್ ಸೌಜನ್ಯಳಿಗೆ ಆದ ‌ ಅನ್ಯಾಯದ ವಿರುದ್ಧ ದನಿ ಎತ್ತಿದ್ದು, ನ್ಯಾಯಕ್ಕಾಗಿ ಪ್ರಕರಣವನ್ನು ಮರುತನಿಖೆ ನಡೆಸಲು ಆಗ್ರಹಿಸುವುದಾಗಿ ತಿಳಿಸಿದ್ದಾರೆ.

ಸೌಜನ್ಯ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ದುನಿಯಾ ವಿಜಯ್ Read More »

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯ ಆರ್ಭಟ ಜೋರಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕ್ಯಾಸಲ್​ರಾಕ್,

ಹವಾಮಾನ‌ ವರದಿ|ಕರಾವಳಿಯಲ್ಲಿ ಇಂದಿನಿಂದ ಮತ್ತೆ ಮಳೆ ಮುನ್ಸೂಚನೆ | ಎಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ Read More »

ವಿಟ್ಲ: ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ: ಟ್ರಸ್ಟಿಗಳ ಮೇಲೆ ಎಫ್ಐಆರ್

ಸಮಗ್ರ ನ್ಯೂಸ್: ಟ್ರಸ್ಟ್ ಕಾರ್ಯದರ್ಶಿಯ ಗಮನಕ್ಕೆ ತಾರದೆ, ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್ ನಲ್ಲಿದ್ದ ಲಕ್ಷಾಂತರ ರೂಪಾಯಿ ದುರುಪಯೋಗ ಪಡಿಸಿದ ವಿಟ್ಲ ಕಂಬಳಬೆಟ್ಟುವಿನ ಜನಪ್ರಿಯ ಸೆಂಟ್ರಲ್ ಶಾಲೆಯ ಟ್ರಸ್ಟಿಗಳ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಕ್ರಿಮಿನಲ್ ಕೇಸು ದಾಖಲಾಗಿದೆ. ವಿಟ್ಲ ಮುಡ್ನೂರು ಗ್ರಾಮದಲ್ಲಿರುವ ಜನಪ್ರಿಯ ಸೆಂಟ್ರಲ್ ಸ್ಕೂಲ್ ಆಡಳಿತವು ಟ್ರಸ್ಟ್ ಡೀಡ್ ಪ್ರಕಾರ ನೋಂದಣಿಗೊಂಡಿದ್ದು, ಮಹಮ್ಮದ್ ಇರ್ಫಾನ್ ಟ್ರಸ್ಟ್ ಕಾರ್ಯದರ್ಶಿ ಯಾಗಿರುತ್ತಾರೆ. ಟ್ರಸ್ಟೀಗಳಾದ ಹಾಸನದಲ್ಲಿ ವಾಸ್ತವ್ಯವಿರುವ ಫಾತಿಮಾ ನಸ್ರೀನ್ ಬಶೀರ್ ಕೋಂ ಡಾ ಅಬ್ದುಲ್ ಬಶೀರ್ ವಿ.ಕೆ

ವಿಟ್ಲ: ನಕಲಿ ದಾಖಲೆ ಸೃಷ್ಟಿಸಿ ಟ್ರಸ್ಟ್ ಹಣ ದುರುಪಯೋಗ: ಟ್ರಸ್ಟಿಗಳ ಮೇಲೆ ಎಫ್ಐಆರ್ Read More »

ಸುಳ್ಯ: ನವಂಬರ್ 4 ರ ತನಕ ಇನ್ನೂ ದಿನಪೂರ್ತಿ ತರಗತಿ

ಸಮಗ್ರ ನ್ಯೂಸ್: ಜೂನ್ ಮತ್ತು ಜುಲೈ ತಿಂಗಳಲ್ಲಿ ವರುಣನ ಆರ್ಭಟಕ್ಕೆ ನೀಡಿದ್ದ ರಜೆಗಳನ್ನು ಸರಿದೂಗಿಸಲು ನವಂಬರ್ 4ರ ತನಕ ಶನಿವಾರ ದಿನ ಪೂರ್ತಿ ತರಗತಿಗಳು ನಡೆಯಲಿದೆ. ಈ ವರ್ಷ ಮಳೆಯ ಕಾರಣ ಸುಳ್ಯದಲ್ಲಿ 6 ದಿನ ರಜೆ ನೀಡಲಾಗಿತ್ತು. ಇದನ್ನು ಸರಿದೂಗಿಸಲು ಶಿಕ್ಷಣ ಇಲಾಖೆ ಶನಿವಾರದಂದು ಸಹ ಪೂರ್ತಿ ದಿನ ತರಗತಿಗಳು ನಡೆಸಲು ನಿರ್ಧರಿಸಿದೆ. ಒಂದು‌ ದಿನದ ರಜೆಗೆ ಎರಡು ಶನಿವಾರ ತರಗತಿ ನಡೆಸಿ ರಜೆಯನ್ನು ಸರಿದೂಗಿಸಿ ವೇಳಾ ಪಟ್ಟಿ ಹೊರಡಿಸಿದೆ. ಅದರನ್ವಯ ನ.4 ರವರೆಗೆ ದಿನಪೂರ್ತಿ

ಸುಳ್ಯ: ನವಂಬರ್ 4 ರ ತನಕ ಇನ್ನೂ ದಿನಪೂರ್ತಿ ತರಗತಿ Read More »

ಕಾರ್ಕಳ: ವೈದ್ಯರ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ| ಐವರು ಅರೆಸ್ಟ್

ಸಮಗ್ರ ನ್ಯೂಸ್: ಕಾರ್ಕಳದಲ್ಲಿ ಮಂಗಳೂರಿನ ವೈದ್ಯರ ತಂಡದ ಕಾರು ತಡೆದು ದುಷ್ಕರ್ಮಿಗಳು ಹಲ್ಲೆಗೆ ಯತ್ನಿಸಿದ್ದ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕುಂಟಲ್ಪಾಡಿ ಗ್ರಾಮದ ಬಳಿ ಮಂಗಳೂರಿನ ಕಾಲೇಜಿನ ವೈದ್ಯರ ತಂಡ ತೆರಳುತ್ತಿದ್ದ ಕಾರು ತಡೆದು ಅವಾಜ್​ ಹಾಕಿ ನೈತಿಕ ಪೊಲೀಸ್​ಗಿರಿ ನಡೆಸಿದ್ದಾರೆ. ಈ ಸಂಬಂಧ ಕಾರ್ಕಳ ಪೊಲೀಸರು ಐವರನ್ನು ಬಂಧಿಸಿದ್ದಾರೆ. ಸಂತೋಷ್ ನಂದಳಿಕೆ, ಕಾರ್ತಿಕ್ ಪೂಜಾರಿ, ಸುನೀಲ್ ಮೂಲ್ಯ, ಸಂದೀಪ್ ಪೂಜಾರಿ, ಸುಜಿತ್ ಸಫಲಿಗ ಬಂಧಿತ ಆರೋಪಿಗಳು. ಮಾಳ ಎಸ್.ಕೆ. ಗಡಿ

ಕಾರ್ಕಳ: ವೈದ್ಯರ ತಂಡದ ಮೇಲೆ ನೈತಿಕ ಪೊಲೀಸ್ ಗಿರಿ| ಐವರು ಅರೆಸ್ಟ್ Read More »

ವಿಟ್ಲ: ಸಂಘ ಪರಿವಾರದವರಿಂದ ಬಾಲಕಿಯ ನಿರಂತರ ಅತ್ಯಾಚಾರ| ಬಿಜೆಪಿ ಬಾಯಿ ಮುಚ್ಚಿ ಕುಳಿತಿರುವುದ್ಯಾಕೆ?-ಕಾಂಗ್ರೆಸ್ ಪ್ರಶ್ನೆ

ಸಮಗ್ರ ನ್ಯೂಸ್:‌ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಕಾಂಗ್ರೆಸ್,” ದಲಿತ ಹೆಣ್ಣುಮಗಳು ಎಂಬ ಕಾರಣಕ್ಕೆ ಅಸಡ್ಡೆಯೇ? ಹಿಂದೂ ಹೆಣ್ಣುಮಕ್ಕಳಿಗೆ ನ್ಯಾಯ ಕೊಡಿಸುವ ಶೋಭಾ ಕರಂದ್ಲಾಜೆ ಅವರ ಬಾಯಿಯನ್ನು ಈಗ ಅದುಮಿ ಹಿಡಿದವರು ಯಾರು?” ಎಂದು ಕೇಂದ್ರ ಸಚಿವೆಯನ್ನು ತರಾಟಗೆ ತೆಗದುಕೊಂಡಿದೆ.”ಉಡುಪಿಯಲ್ಲಿ ಇಲಿಯನ್ನು ಹುಲಿ ಮಾಡಲು ಹೊರಟಿರುವ ಬಿಜೆಪಿ ನಾಯಕರಿಗೆ ಅದೇ ಕರಾವಳಿಯ

ವಿಟ್ಲ: ಸಂಘ ಪರಿವಾರದವರಿಂದ ಬಾಲಕಿಯ ನಿರಂತರ ಅತ್ಯಾಚಾರ| ಬಿಜೆಪಿ ಬಾಯಿ ಮುಚ್ಚಿ ಕುಳಿತಿರುವುದ್ಯಾಕೆ?-ಕಾಂಗ್ರೆಸ್ ಪ್ರಶ್ನೆ Read More »

ಚಾರ್ಜರ್ ಪಿನ್‌ಗೆ ಬಾಯಿ ಹಾಕಿದ 8 ತಿಂಗಳ ಕಂದಮ್ಮ ಸಾವು

ಸಮಗ್ರ ನ್ಯೂಸ್: ಮೊಬೈಲ್ ಚಾರ್ಜರ್ ಪಿನ್‌ಗೆ ಬಾಯಿ ಹಾಕಿ 8 ತಿಂಗಳ ಕಂದಮ್ಮ ಸಾವನಪ್ಪಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸಿದ್ದರದಲ್ಲಿ ನಡೆದಿದೆ. ಸಂತೋಷ್ ಕಲ್ಗುಟ್ಕರ್ ಹಾಗೂ ಸಂಜನಾ ಎಂಬವರ 8 ತಿಂಗಳ ಮಗು ಸಾನಿಧ್ಯ ಸಾವನಪ್ಪಿದ ಮಗು, ಮೊಬೈಲ್ ಚಾರ್ಜ್ ಮಾಡಿದ ಬಳಿಕ ಪೋಷಕರು ಪ್ಲಗ್‌ಅನ್ನು ಆಫ್ ಮಾಡದೇ ನಿರ್ಲಕ್ಷ್ಯವಹಿಸಿದ್ದರು. ಈ ವೇಳೆ ಮಗು ಆಟವಾಡುತ್ತಾ ಚಾರ್ಜರ್ ಪಿನ್ ಅನ್ನು ಬಾಯಿಗೆ ಹಾಕಿಕೊಂಡಿತ್ತು. ಇದರಿಂದಾಗಿ ಶಾಕ್ ಹೊಡೆದು ಮಗು ಸಾವನ್ನಪ್ಪಿದೆ. ಘಟನೆ ಸಂಬಂಧ ಕಾರವಾರ

ಚಾರ್ಜರ್ ಪಿನ್‌ಗೆ ಬಾಯಿ ಹಾಕಿದ 8 ತಿಂಗಳ ಕಂದಮ್ಮ ಸಾವು Read More »

ಹವಾಮಾನ ವರದಿ: ಕರಾವಳಿಯಲ್ಲಿ ನಾಳೆಯಿಂದ ಮತ್ತೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆಗಸ್ಟ್​ 3 ರಿಂದ ವರುಣಾರ್ಭಟ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಬಿಟ್ಟು ಉಳಿದ ಭಾಗಗಳಾದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ

ಹವಾಮಾನ ವರದಿ: ಕರಾವಳಿಯಲ್ಲಿ ನಾಳೆಯಿಂದ ಮತ್ತೆ ಮಳೆ ಸಾಧ್ಯತೆ Read More »

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ :ಡಾ.ವೀರೇಂದ್ರ ಹೆಗ್ಗಡೆ

ಸಮಗ್ರ ನ್ಯೂಸ್: ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಲು ಒತ್ತಾಯಿಸುತ್ತೇನೆ ಎಂದು ಡಾ. ವೀರೇಂದ್ರ ಹೆಗ್ಗಡೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಸೌಜನ್ಯ ಸಾವು ಪ್ರಕರಣ ಪ್ರಸ್ತುತ ನ್ಯಾಯಾಲಯ, ಸರ್ಕಾರ ಮತ್ತು ತನಿಖಾ ಸಂಸ್ಥೆಯ ವ್ಯಾಪ್ತಿಯಲ್ಲಿ ಇರುವುದರಿಂದ ಸೌಜನ್ಯಳ ಸಾವಿಗೆ ಸಂಬಂಧಿಸಿದಂತೆ ಸರ್ಕಾರ ಹಾಗು ತನಿಖಾ ಸಂಸ್ಥೆ ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ ಹಾಗು ಈ ವಿಚಾರವಾಗಿ ಕ್ಷೇತ್ರದ ಬಗ್ಗೆ ಅವಹೇಳನಕಾರಿ, ಸುಳ್ಳು ಹೇಳಿಕೆ

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ| ಸೂಕ್ತ ನ್ಯಾಯ ಒದಗಿಸಿ ಕೊಡಬೇಕು ಎಂದು ಒತ್ತಾಯಿಸುತ್ತೇನೆ :ಡಾ.ವೀರೇಂದ್ರ ಹೆಗ್ಗಡೆ Read More »