ಕರಾವಳಿ

ಮಂಗಳೂರು ವಿವಿ ಸಂಧ್ಯಾ ಕಾಲೇಜು ಸ್ಥಗಿತಗೊಳಿಸದಂತೆ NSUI ಮನವಿ

ಸಮಗ್ರ ನ್ಯೂಸ್: ಎನ್.ಎಸ್.ಯು.ಐ ಮಂಗಳೂರು ವಿಧಾನಸಭಾ ಕ್ಷೇತ್ರದ ವತಿಂದ ಮಂಗಳೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳನ್ನು ಭೇಟಿ ಮಾಡಿ ಸಂಜೆ ಕಾಲೇಜು ಸ್ಥಗಿತಗೊಳಿಸಿರುವ ಕುರಿತು ಮಾತನಾಡಿ, ಅದನ್ನು ಸ್ಥಗಿತಗೊಳಿಸದಂತೆ ಮನವಿ ಮಾಡಿದರು. ಕಾಲೇಜು ನಿಲ್ಲಿಸಿದರೆ ಪ್ರದೇಶದ ವಿದ್ಯಾಭ್ಯಾಸ ಮಾಡಲಿಚ್ಛಿಸುವ ಅನೇಕ ಬಡ ವಿದ್ಯಾರ್ಥಿಗಳು ಸಂಕಷ್ಟಕ್ಕೊಳಗಾಗುವ ಸಾಧ್ಯತೆಯಿದೆ. ಇದನ್ನು ಗಂಭೀರವಾಗಿ ಪರಿಗಣಿಸಿ NSUI ಮಂಗಳೂರು ವಿಧಾನಸಭಾ ಕ್ಷೇತ್ರರ ಅಧ್ಯಕ್ಷರಾದ ಶಾಹಿಲ್ ಮಂಚಿಲ ಅವರ ನೇತೃತ್ವದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಪಿ.ಎಲ್ ಧರ್ಮ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ NSUI ಮಂಗಳೂರು […]

ಮಂಗಳೂರು ವಿವಿ ಸಂಧ್ಯಾ ಕಾಲೇಜು ಸ್ಥಗಿತಗೊಳಿಸದಂತೆ NSUI ಮನವಿ Read More »

ಉಪ್ಪಿನಂಗಡಿ: 5 ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ

ಸಮಗ್ರ ನ್ಯೂಸ್: ಸತತ ಮಳೆಯಿಂದಾಗಿ ನೇತ್ರಾವತಿ ಹಾಗೂ ಕುಮಾರಧಾರಾ ನದಿಗಳೆರಡು ಉಕ್ಕಿ ಹರಿದು ಮಂಗಳವಾರ ಇಲ್ಲಿನ ಶ್ರೀ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗದಲ್ಲಿ ನದಿಗಳೆರಡು ಸಂಗಮಿಸಿ ಬಾಗಿನ ಸಮರ್ಪಣ, ಗಂಗಾ ಪೂಜಾ ಹಾಗೂ ಪವಿತ್ರ ಸಂಗಮ ತೀರ್ಥ ಸ್ನಾನ ಜರಗಿತು. 2019ರ ಬಳಿಕ ಇದೇ ಮೊದಲ ಬಾರಿ ಇಲ್ಲಿ ಸಂಗಮ ನೆರವೇರಿದೆ. ಮಂಗಳವಾರ ಮಧ್ಯಾಹ್ನದಿಂದ ಅಪಾಯದ ಮಟ್ಟವನ್ನು ಮೀರಿ ಹರಿದ ನೇತ್ರಾವತಿ ದೇವಾಲಯದ ಮಹಾಕಾಳಿ ಅಮ್ಮನವರ ಗುಡಿಯನ್ನು ಆವರಿಸಿ ಹರಿಯತೊಡಗಿತು. ಆ ಬಳಿಕ ಸಹಸ್ರಲಿಂಗೇಶ್ವರ ದೇವಾಲಯದ ಮುಂಭಾಗಕ್ಕೆ ವಿಸ್ತರಿಸಿ

ಉಪ್ಪಿನಂಗಡಿ: 5 ವರ್ಷಗಳ ಬಳಿಕ ನೇತ್ರಾವತಿ-ಕುಮಾರಧಾರ ನದಿಗಳ ಸಂಗಮ Read More »

ಉಜಿರೆ: ಎಸ್.ಡಿ‌.ಎಂ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಕುಸಿತ| ಹಲವು ವಾಹನಗಳು ಜಖಂ

ಸಮಗ್ರ ನ್ಯೂಸ್: ಮಹಾಮಳೆಗೆ ಕ್ಷಣಕ್ಕೊಂದು ದುರಂತ ನಡೆಯುತ್ತಿದ್ದು ಉಜಿರೆಯ ಎಸ್.ಡಿ.ಎಂ ಆಸ್ಪತ್ರೆಯ ಪಾರ್ಕಿಂಗ್ ನಲ್ಲಿ ತಡೆಗೋಡೆ ಕುಸಿತವಾಗಿ ಹಲವು ವಾಹನಗಳು ಜಖಂ ಆಗಿದೆ. ಭಾರಿ ಮಳೆ ಸುರಿಯುತ್ತಿರುವುದರಿಂದ ತಡೆಗೋಡೆ ಕುಸಿತವಾಗಿದೆ. ಅಂದಾಜು 25ಕ್ಕೂ ಹೆಚ್ಚು ದ್ವಿಚಕ್ರ ವಾಹನಗಳು ಆಸ್ಪತ್ರೆ ಪಾರ್ಕಿಂಗ್ ನಲ್ಲಿ ನಿಲ್ಲಿಸಲಾಗಿತ್ತು.ತಡೆಗೋಡೆ ದ್ವಿಚಕ್ರ ವಾಹನಗಳ ಮೇಲೆ ಕುಸಿದು ಬಿದ್ದಿದ್ದು, ತಡೆಗೋಡೆ ಅಡಿ ನಿಲ್ಲಿಸಲಾಗಿದ್ದ ಎಲ್ಲಾ ವಾಹನಗಳು ಜಖಂ ಆಗಿದೆ.

ಉಜಿರೆ: ಎಸ್.ಡಿ‌.ಎಂ ಆಸ್ಪತ್ರೆಯ ಪಾರ್ಕಿಂಗ್ ಏರಿಯಾ ಕುಸಿತ| ಹಲವು ವಾಹನಗಳು ಜಖಂ Read More »

ಉಪ್ಪಿನಂಗಡಿ: ಅಪಾಯದ ಮಟ್ಟ ಮೀರಿ‌ ಹರಿಯುತ್ತಿರುವ ನೇತ್ರಾವತಿ| ಕುಮಾರಧಾರ – ನೇತ್ರಾವತಿ ಸಂಗಮ ಪುಣ್ಯಸ್ನಾನಕ್ಕೆ ಕ್ಷಣಗಣನೆ| ಇತ್ತ‌ ರಾ.ಹೆದ್ದಾರಿಯತ್ತ ಆವರಿಸಿದ ನೆರೆನೀರು

ಸಮಗ್ರ ನ್ಯೂಸ್: ದ.ಕ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನೇತ್ರಾವತಿ, ಕುಮಾರಧಾರ ನದಿ ಉಕ್ಕಿ ಹರಿಯುತ್ತಿದೆ. ನೇತ್ರಾವತಿ ಮತ್ತು ಕುಮಾರದಾರ ನದಿಗಳ ನೀರಿನ ಮಟ್ಟ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಸದ್ಯ 29.09 ಮೀಟರ್ ನಷ್ಟು ನದಿ ನೀರಿನ ಹರಿವು ಇದ್ದು ಅಪಾಯದ ಮಟ್ಟ 31.05 ಆಗಿದೆ. ಪಂಜಳ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನಗಳು ಸಂಚರಿಸುತ್ತಿದೆ. ಮತ್ತೊಮ್ಮೆ ಪ್ರವಾಹದ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ

ಉಪ್ಪಿನಂಗಡಿ: ಅಪಾಯದ ಮಟ್ಟ ಮೀರಿ‌ ಹರಿಯುತ್ತಿರುವ ನೇತ್ರಾವತಿ| ಕುಮಾರಧಾರ – ನೇತ್ರಾವತಿ ಸಂಗಮ ಪುಣ್ಯಸ್ನಾನಕ್ಕೆ ಕ್ಷಣಗಣನೆ| ಇತ್ತ‌ ರಾ.ಹೆದ್ದಾರಿಯತ್ತ ಆವರಿಸಿದ ನೆರೆನೀರು Read More »

ಬೆಳ್ಳಾರೆ:ಭಾರೀ ಮಳೆಗೆ ಉಕ್ಕಿ ಹರಿದ ಗೌರಿ ಹೊಳೆ| ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ

ಸಮಗ್ರ ನ್ಯೂಸ್: ಮಲೆನಾಡು‌ ಹಾಗೂ ಕರಾವಳಿಯಲ್ಲಿ ಭಾರಿ ಮಳೆ‌ ಸುರಿಯುತ್ತಿದ್ದು ಬೆಳ್ಳಾರೆ ಸಮೀಪದ ಪೆರುವಾಜೆಯಲ್ಲಿ ಗೌರಿಹೊಳೆ‌ ಉಕ್ಕಿ ಹರಿದಿದೆ. ಪರಿಣಾಮವಾಗಿ ಪೆರುವಾಜೆಯ ಜಲದುರ್ಗಾ ದೇವಿ ಸನ್ನಿದಾನ ಜಲಾವೃತವಾಗಿದ್ದು, ತಗ್ಗು ಪ್ರದೇಶಗಳು ನೆರೆ ನೀರಿನಿಂದ ಆವೃತವಾಗಿವೆ.

ಬೆಳ್ಳಾರೆ:ಭಾರೀ ಮಳೆಗೆ ಉಕ್ಕಿ ಹರಿದ ಗೌರಿ ಹೊಳೆ| ಪೆರುವಾಜೆ ಜಲದುರ್ಗಾ ದೇವಸ್ಥಾನ ಜಲಾವೃತ Read More »

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್

ಸಮಗ್ರ ನ್ಯೂಸ್: ಮಾಣಿ-ಮೈಸೂರು ಹೆದ್ದಾರಿಯ ಪುತ್ತೂರು – ಸುಳ್ಯ ರಸ್ತೆಯ ಶೇಖಮಲೆ ಎಂಬಲ್ಲಿ ಬಳಿ ಗುಡ್ಡ ಕುಸಿತ ಸಂಭವಿಸಿದೆ. ಪರಿಣಾಮವಾಗಿಬಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ಬಿದ್ದು ರಸ್ತೆ ಸಂಚಾರಕ್ಕೆ ತೊಂದರೆ ಉಂಟಾಗಿದೆ. ಗುಡ್ಡ ಕುಸಿತದಿಂದಾಗಿ ಈಗಾಗಲೇ 4 ವಿದ್ಯುತ್‌ ಕಂಬಗಳು ನೆಲಕ್ಕುರುಳಿದೆ. ಗುಡ್ಡ ಕುಸಿತ ಮುಂದುವರಿದಿದ್ದು 2 ಬದಿಗಳಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಸಂಬಂಧಪಟ್ಟವರ ಕಾರ್ಯಾಚರಣೆಗೆ ಪ್ರಯಾಣಿಕರು ಕಾಯುತ್ತಿದ್ದಾರೆ. ಸದ್ಯ ಪುತ್ತೂರು ಸುಳ್ಯ ರಸ್ತೆ ಸಂಚಾರ ಬಂದ್‌ ಆಗಿದೆ ಎಂದು ತಿಳಿದುಬಂದಿದೆ.

ಪುತ್ತೂರು ಸಮೀಪದ ಶೇಖಮಲೆ ಬಳಿ ಗುಡ್ಡ ಕುಸಿತ| ಮಾಣಿ -ಮೈಸೂರು ರಾ.ಹೆದ್ದಾರಿ ಸಂಚಾರ ಬಂದ್ Read More »

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟಿ ಸವಾರ ದುರ್ಮರಣ

ಸಮಗ್ರ ನ್ಯೂಸ್: ಟ್ಯಾಂಕರ್ ಹರಿದು ದ್ವಿಚಕ್ರ ವಾಹನ ಸವಾರ ಸಾವಿಗೀಡಾದ ಘಟನೆ ಇಂದು ಬೆಳಿಗ್ಗೆ ನಗರದ ನಂತೂರು ಪದವು ಎಂಬಲ್ಲಿ ನಡೆದಿದೆ. ಮೃತಪಟ್ಟ ಸವಾರ ಅಡ್ಯಾರ್ ಕಣ್ಣೂರು ನಿವಾಸಿ ಎಂದು ಹೇಳಲಾಗುತ್ತಿದೆ. ನಂತೂರು ಪದವು ರಸ್ತೆಯಾಗಿ ಹೋಗುತ್ತಿದ್ದ ದ್ವಿಚಕ್ರ ವಾಹನವು ಸವಾರನ ನಿಯಂತ್ರಣ ತಪ್ಪಿ ಉರುಳಿದ್ದು, ಹಿಂದಿನಿಂದ ಚಲಿಸುತ್ತಿದ್ದ ಟ್ಯಾಂಕರ್ ಸವಾರನ ಮೇಲೆ ಹರಿಯಿತು ಎನ್ನಲಾಗಿದೆ. ಇದರಿಂದ ಸವಾರ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಸಂಚಾರ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಮಂಗಳೂರು: ಟ್ಯಾಂಕರ್ ಹರಿದು ಸ್ಕೂಟಿ ಸವಾರ ದುರ್ಮರಣ Read More »

ಕಡಬ: ನಿಫಾ ಪೀಡಿತನ ಆರೈಕೆ ಮಾಡಿದ್ದ ಯುವಕನಿಗೆ ಅಂಟಿದ ಸೋಂಕು| ಮಹಾಮಾರಿ ಎಫೆಕ್ಟ್ ನಿಂದ ಕೋಮಾಗೆ ಜಾರಿದ ನರ್ಸ್

ಸಮಗ್ರ ನ್ಯೂಸ್: ನಿಫಾ ವೈರಸ್ ಬಾಧಿಸಿದ್ದ ರೋಗಿಗೆ ಆರೈಕೆ ನೀಡಿದ್ದ ಕಡಬದ ನರ್ಸ್ ಓರ್ವರು ನಿಫಾ ವೈರಸ್ ಗೆ ತುತ್ತಾಗಿ ಕಳೆದ ಎಂಟು ತಿಂಗಳಿನಿಂದ ಕೋಮಾದಲ್ಲಿ ದಿನ ದೂಡುತ್ತಿರುವ ಹೃದಯ ವಿದ್ರಾವಕ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಡಬ ತಾಲೂಕಿನ ಐತ್ತೂರು ಗ್ರಾಮದ ಮರ್ಧಾಳ ಸಮೀಪದ ತುಂಬ್ಯ ನಿವಾಸಿ ತೋಮಸ್ ಟಿ.ಸಿ. ಎಂಬವರ ಪುತ್ರ ಟಿಟ್ಟೋ ತೋಮಸ್(24) ಇದೀಗ ಜೀವನ್ಮರಣ ಸ್ಥಿತಿಯಲ್ಲಿ ದಿನದೂಡುತ್ತಿರುವ ಯುವಕ. ಬಿಎಸ್ಸಿ ನರ್ಸಿಂಗ್ ಪದವೀಧರನಾಗಿರುವ ಟಿಟ್ಟೋ ತೋಮಸ್ ಕೇರಳದ ಕ್ಯಾಲಿಕಟ್ ನಲ್ಲಿರುವ ಇಕ್ರಾ

ಕಡಬ: ನಿಫಾ ಪೀಡಿತನ ಆರೈಕೆ ಮಾಡಿದ್ದ ಯುವಕನಿಗೆ ಅಂಟಿದ ಸೋಂಕು| ಮಹಾಮಾರಿ ಎಫೆಕ್ಟ್ ನಿಂದ ಕೋಮಾಗೆ ಜಾರಿದ ನರ್ಸ್ Read More »

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು

ಸಮಗ್ರ ನ್ಯೂಸ್: ಸ್ನಾನಕ್ಕೆಂದು ಬಾತ್ ರೂಮ್ ಒಳಗೆ ತೆರಳಿದ್ದ ಯುವಕ ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆಯಾಗಿ ಉಸಿರುಗಟ್ಟಿ ಮೃತಪಟ್ಟ ದಾರುಣ ಘಟನೆ ರವಿವಾರ ರಾತ್ರಿ ಮೂಡಬಿದಿರೆ ತಾಲೂಕಿನ ಕೋಟೆಬಾಗಿಲಿನಲ್ಲಿ ಸಂಭವಿಸಿದೆ. ಕೋಟೆಬಾಗಿಲಿನ ಫ್ಲ್ಯಾಟ್ ಒಂದರಲ್ಲಿ ವಾಸವಾಗಿರುವ ದಿ. ಅನ್ಸಾರ್ ಎಂಬವರ ಪುತ್ರ ಶಾರಿಕ್ (18) ಮೃತಪಟ್ಟ ಯುವಕ. ಶಾರಿಕ್ ಸ್ನಾನಕ್ಕೆಂದು ಬಾತ್ ರೂಮ್ ಗೆ ತೆರಳಿದ್ದರು. ತುಂಬಾ ಹೊತ್ತಾದರೂ ಶಾರಿಕ್ ಹೊರಬಾರದ ಕಾರಣ ಅವರ ಬಾತ್ ರೂಮ್ ಬಾಗಿಲು ಒಡೆದು ನೋಡಿದಾಗ ಈ ದುರ್ಘಟನೆ ಬೆಳಕಿಗೆ ಬಂದಿದೆ.

ಮೂಡುಬಿದಿರೆ: ಗೀಸರ್ ನಿಂದ ಗ್ಯಾಸ್ ಸೋರಿಕೆ| ಬಾತ್ ರೂಂ ಒಳಗೆ ಯುವಕ ದಾರುಣ ಸಾವು Read More »

ವಿಟ್ಲ : ಅನಾರೋಗ್ಯದಿಂದ ಬಾಲಕಿ ಸಾವು

ಸಮಗ್ರ ನ್ಯೂಸ್: ಅನಾರೋಗ್ಯದಿಂದ 14 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ಘಟನೆ ಇಲ್ಲಿನ ಪರ್ತಿಪ್ಪಾಡಿ ಎಂಬಲ್ಲಿ ನಡೆದಿದೆ. ಗ್ಲೀನಾ ಡಿಸೋಜಾ(14) ಮೃತ ಬಾಲಕಿ. ಪರ್ತಿಪ್ಪಾಡಿ ನಿವಾಸಿಯಾಗಿರುವ ಈಕೆ ಖಾಸಗಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯಾಗಿದ್ದರು. ಕೆಲ ದಿನಗಳಿಂದ ಅನಾರೋಗ್ಯದಿಂದ ಗ್ಲೀನಾ ಬಳಲುತ್ತಿದ್ದರು ಎನ್ನಲಾಗಿದೆ.ಮೃತಳು ತಂದೆ, ತಾಯಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾಳೆ.

ವಿಟ್ಲ : ಅನಾರೋಗ್ಯದಿಂದ ಬಾಲಕಿ ಸಾವು Read More »