ಕರಾವಳಿ

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು

ಸಮಗ್ರ ನ್ಯೂಸ್: ಬುದ್ದಿಮಾಂದ್ಯ ಯುವತಿಯ ಮೇಲೆ ತನ್ನ ಸಹೋದರನೋರ್ವ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿ ಮಾಡಿದ ಘಟನೆಯೊಂದು ಸುಳ್ಯ ತಾಲೂಕಿನ ಮುಪ್ಪೇರ್ಯ ಗ್ರಾಮದಿಂದ ವರದಿಯಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಯುವತಿಯ ತಾಯಿ ದೂರು ನೀಡಿದ್ದು ಅತ್ಯಾಚಾರವೆಸಗಿದ ಆರೋಪಿ ಸಹೋದರನನ್ನು ಪೊಲೀಸರು ಬಂಧಿಸಿ ಕೇಸು ದಾಖಲಿಸಿದ್ದಾರೆ. ಮುಪ್ಪೇರ್ಯ ಗ್ರಾಮದ ಬುದ್ದಿಮಾಂದ್ಯ ಯುವತಿಯೊಬ್ಬಳು ಗರ್ಭವತಿಯಾಗಿದ್ದು, ವಿಚಾರಣೆ ಸಂದರ್ಭ ಸಹೋದರನೇ ಈ ಕೃತ್ಯಕ್ಕೆ ಕಾರಣ ಎಂಬ ವಿಷಯ ಬೆಳಕಿಗೆ ಬಂದಿದೆ. ಆರೋಪಿಯನ್ನು ಬಂಧಿಸಿದ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದಾರೆ.

ಸುಳ್ಯ: ಬುದ್ದಿಮಾಂದ್ಯ ಸಹೋದರಿಯನ್ನೇ ಗರ್ಭಿಣಿಯನ್ನಾಗಿಸಿದ ಅಣ್ಣ!! ವಿಕೃತಕಾಮಿಯನ್ನು ಬಂಧಿಸಿದ ಪೊಲೀಸರು Read More »

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿಯೊಬ್ಬರು ತನ್ನ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶನಿವಾರ ರಾತ್ರಿ ಮಿಯ್ಯಾರು ಎಂಬಲ್ಲಿ ನಡೆದಿರುವುದು ವರದಿಯಾಗಿದೆ. ಮೃತರನ್ನು ಕಾರ್ಕಳ ನಗರ ಠಾಣೆಯ ಪೊಲೀಸ್ ಸಿಬ್ಬಂದಿ ಎಚ್.ಸಿ.ಪ್ರಶಾಂತ್ ಎಂದು ಗುರುತಿಸಲಾಗಿದೆ. ರಜೆಯಲ್ಲಿದ್ದ ಇವರು ಕಾರ್ಕಳದ ಮಿಯ್ಯಾರಿನ ತನ್ನ ಮನೆಯ ಹಿಂಭಾಗದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಈ ಘಟನೆ ರವಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ.

ಕಾರ್ಕಳ: ಠಾಣೆಯ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ Read More »

ಮಂಗಳೂರು: ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಧಿಕಾರಿ ಕರೆ

ಸಮಗ್ರ ನ್ಯೂಸ್‌: ದ.ಕ ಜಿಲ್ಲೆಯನ್ನು ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಡಳಿತದೊಂದಿಗೆ ಶಿಕ್ಷಕರು, ಪೋಷಕರು ಕೈಜೋಡಿಸುವಂತೆ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಜು.15ರಂದು ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ವಿಭಾಗ, ಜಿಲ್ಲಾ ಪೊಲೀಸ್‌ ಇಲಾಖೆ ಹಾಗೂ ಸಂತ ಅಲೋಶಿಯಸ್ ಕಾಲೇಜಿನ ಸಂಯುಕ್ತಾಶ್ರಯದಲ್ಲಿ ಕಾಲೇಜಿನ ಎರಿಕ್ ಮಥಾಯಸ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಯಿತ್ತು. ಮಾದಕ ವ್ಯಸನ ಮುಕ್ತ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು ಅವರು, ಡ್ರಗ್ಸ್ ಬಳಕೆ ರೋಗವಿದ್ದಂತೆ.

ಮಂಗಳೂರು: ಡ್ರಗ್ಸ್ ಮುಕ್ತ ಜಿಲ್ಲೆಯನ್ನಾಗಿಸಲು ಜಿಲ್ಲಾಧಿಕಾರಿ ಕರೆ Read More »

ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಟಾನೆ

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡದ ಉದ್ಘಾಟನೆ ಮತ್ತು ಜಲಜೀವನ್ ಮಿಷನ್ – ಹರ್ ಘರ್ ಜಲ್ ಘೋಷಣಾ ಕಾರ್ಯಕ್ರಮ ಸಮಾರಂಭ ಜು.15 ರಂದು ನಡೆಯಿತು. ಸುಳ್ಯ ವಿಧಾನಸಭಾ ಕ್ಷೇತ್ರದ ಶಾಸಕಿ ಕು.ಭಾಗೀರಥಿ ಮುರುಳ್ಯ ಜಲಜೀವನ್ ಮಿಷನ್ – ಹರ್ ಘರ್ ಜಲ್ ನೀರಿನ ಟ್ಯಾಂಕನ್ನು ಮತ್ತು ಪಂಚಾಯತ್ ನೂತನ ಕಟ್ಟಡವನ್ನು ಉದ್ಘಾಟಿಸಿ ಬಳಿಕ ಮಾತನಾಡಿದರು. ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿದರು. ದ.ಕ.

ಮುರುಳ್ಯ ಗ್ರಾಮ ಪಂಚಾಯತ್ ನ ನೂತನ ಕಟ್ಟಡ ಉದ್ಘಟಾನೆ Read More »

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ

ಸಮಗ್ರ ನ್ಯೂಸ್:‌ ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿಹಬ್ಬ ಆಚರಣೆ ಜುಲೈ19 ರಂದು ಸುಳ್ಯ ಕೇರ್ಪಳದ ಭಂಟರ ಭವನದಲ್ಲಿ ನಡೆಯಲಿದೆ. ಉದ್ಘಾಟನಾ ಸಮಾರಂಭ, ಮಾಧ್ಯಮ ವಿಚಾರ ಸಂಕಿರಣ, ಪತ್ರಕರ್ತರ ಸಮ್ಮಿಲನ, ಸಮಾರೋಪ ಸಮಾರಂಭ ಹಾಗೂ ಸನ್ಮಾನ, ಸಾಂಸ್ಕೃತಿಕ ಸಂಭ್ರಮ‌ ನಡೆಯಲಿದೆ ಎಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ‌ ಕೊರತ್ತೋಡಿ ತಿಳಿಸಿದ್ದಾರೆ‌. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕಾರ್ಯಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಎ.ಎಸ್.ಪೊನ್ನಣ್ಣ ಉದ್ಘಾಟಿಸುವರು. ಕನ್ನಡ ಪ್ರಭ ಹಾಗೂ

ಜುಲೈ 19 ರಂದು ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಬೆಳ್ಳಿ ಹಬ್ಬ ಆಚರಣೆ| ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ Read More »

ಸುಳ್ಯ: ಪದೋನ್ನತಿಗೊಂಡು ವರ್ಗಾವಣೆಯಾದ ಸಿಡಿಪಿಒ ರಶ್ಮಿಗೆ ಬೀಳ್ಕೊಡುಗೆ

ಸಮಗ್ರ ನ್ಯೂಸ್: ಸುಳ್ಯದಲ್ಲಿ ಸಿಡಿಪಿಒ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇದೀಗ ಹಿರಿಯ ಸಹಾಯಕ ನಿರ್ದೇಶಕರಾಗಿ ಪದೋನ್ನತಿಗೊಂಡ ರಶ್ಮಿ ಅಶೋಕ್ ‌ನೆಕ್ರಾಜೆಯವರಿಗೆ ಬೀಳ್ಕೊಡುಗೆ ಸಮಾರಂಭ ಜು.15 ರಂದು ಸುಳ್ಯದ ಸ್ತ್ರೀ ಶಕ್ತಿ ಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆ ಸಿಡಿಪಿಒ ಶೈಲಜಾ ದಿನೇಶ್ ವಹಿಸಿದ್ದರು. ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ರವರು ರಶ್ಮಿ ಅಶೋಕ್ ‌ನೆಕ್ರಾಜೆಯವರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಿಡಿಪಿಒ ‌ಕಚೇರಿ‌ ವತಿಯಿಂದ ಸಹೋದ್ಯೋಗಿಗಳು ಮಡಿಲು ತುಂಬಿಸಿ ಬೀಳ್ಕೊಟ್ಟರು. ರಶ್ಮಿಯವರ‌ ಪತಿ ಅಶೋಕ್‌ ನೆಕ್ರಾಜೆಯವರ ಹುಟ್ಟುಹಬ್ಬವನ್ನು‌ ಕೂಡಾ

ಸುಳ್ಯ: ಪದೋನ್ನತಿಗೊಂಡು ವರ್ಗಾವಣೆಯಾದ ಸಿಡಿಪಿಒ ರಶ್ಮಿಗೆ ಬೀಳ್ಕೊಡುಗೆ Read More »

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ

ಸಮಗ್ರ ನ್ಯೂಸ್: ಸುಳ್ಯದ ಕೆವಿಜಿ ಇಂಟರ್ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜು.15ರಂದು ‘ಅಬಾಕಸ್ ‘ ಗಣಿತ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶಾಲಾ ಆಡಿಟೋರಿಯಮ್ ನಲ್ಲಿ ದೀಪವನ್ನು ಬೆಳಗಿಸುವುದರ ಮೂಲಕ ‘ಅಬಾಕಸ್ ‘ ತರಬೇತಿ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು. ಈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಶಾಲಾ ಪ್ರಾಂಶುಪಾಲ ಅರುಣ್ ಕುಮಾರ್ ‘ಅಬಾಕಸ್ ‘ ತರಗತಿಯನ್ನು ವಿದ್ಯಾರ್ಥಿಗಳಿಗೆ ನೀಡುವುದರಿಂದ ವಿದ್ಯಾರ್ಥಿಗಳು ಗಣಿತದಲ್ಲಿ ಬರುವ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುತ್ತಾರೆ ಜೊತೆಗೆ ಅವರ ಬೌದ್ಧಿಕ ಸಾಮರ್ಥ್ಯ ವೃದ್ಧಿಗೊಳ್ಳುತ್ತದೆ ಎಂದು ತಿಳಿಸಿದರು. ‘ಅಬಾಕಸ್ ‘ ತರಗತಿಯ ಬಗ್ಗೆ

ಕೆವಿಜಿ ಐಪಿಎಸ್ ನಲ್ಲಿ ಐ.ಆರ್.ಸಿ.ಎಂ.ಡಿ ಶಿಕ್ಷಣ ಸಂಸ್ಥೆಯಿಂದ ‘ಅಬಾಕಸ್’ ಗಣಿತ ತರಗತಿ ಉದ್ಘಾಟನೆ Read More »

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಜರ್ನಲಿಸ್ಟ್ ಯೂನಿಯನ್ ಖಂಡನೆ| ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ

ಸಮಗ್ರ ನ್ಯೂಸ್: ವಿಜಯವಾಣಿ ಮತ್ತು ದಿಗ್ವಿಜಯ ವಾಹಿನಿಯ ಪುತ್ತೂರು ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿರುವ ನಿಶಾಂತ್ ಬಿಲ್ಲಂಪದವು ಅವರ ಮೇಲೆ ಜುಲೈ 15ರಂದು ಪುತ್ತೂರಿನ ಬಪ್ಪಳಿಗೆಯಲ್ಲಿ ನಡೆದಿರುವ ದೌರ್ಜನ್ಯವನ್ನು ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು‌ ಘಟಕ ಖಂಡಿಸುತ್ತದೆ. ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಾಗಿರುವ ನಿಶಾಂತ್ ಬಿಲ್ಲಂಪದವು ಅವರು ಕಾರ್ಯ ನಿರತರಾಗಿದ್ದ ವೇಳೆ ಅಮಾನವೀಯವಾಗಿ ವರ್ತಿಸಿ ಅವರಿಗೆ ಹಲ್ಲೆ ನಡೆಸಿ ಮೊಬೈಲ್ ಫೋನ್‌ ಹುಡಿ ಮಾಡಿ ಜೀವ ಬೆದರಿಕೆ‌ ಒಡ್ಡಿರುವ ಘಟನೆಯನ್ನು‌ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಘಟಕ ಗಂಭೀರವಾಗಿ

ಪತ್ರಕರ್ತ‌ ನಿಶಾಂತ್ ಬಿಲ್ಲಂಪದವು ಮೇಲಿನ ದೌರ್ಜನ್ಯಕ್ಕೆ ಜರ್ನಲಿಸ್ಟ್ ಯೂನಿಯನ್ ಖಂಡನೆ| ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ: ಪ್ರತಿಭಟನೆಯ ಎಚ್ಚರಿಕೆ Read More »

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ

ಸಮಗ್ರ ನ್ಯಸ್:ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ವರ್ಷದ ಪುಣ್ಯಸ್ಮರಣೆ, ಪ್ರಶಸ್ತಿ ಪ್ರಧಾನ ಮತ್ತು 50 ಕಾರ್ಯಕ್ರಮಗಳಿಗೆ ಚಾಲನಾ ಕಾರ್ಯಕ್ರಮ ಜು.23 ರಂದು ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷರಾದ ಟಿ.ಎಮ್. ಶಹೀದ್ ಕಳೆದ ನೂರು ವರ್ಷಗಳಿಂದ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ಪೇರಡ್ಕ ಗೂನಡ್ಕ, ಅರಂತೋಡು ಸಹಿತ ಕರ್ನಾಟಕ ಕೇರಳ ಮತ್ತು ಇತರ ವಿವಿಧ ಭಾಗಳಲ್ಲಿ ಸಾಮಾಜಿಕ, ಶೈಕ್ಷಣಿಕ, ಧಾರ್ಮಿಕ ಮತ್ತು

ತೆಕ್ಕಿಲ್ ಪ್ರತಿಷ್ಠಾನದ ವತಿಯಿಂದ ಮೊಹಮ್ಮದ್ ಹಾಜಿ ಅವರ 50ನೇ ಪುಣ್ಯಸ್ಮರಣೆ Read More »

ಸುಳ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ|ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ:ಹರೀಶ್ ಕಂಜಿಪಿಲಿ|ಕಾಂಗ್ರೆಸ್ ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ:ಎಸ್.ಎನ್.ಮನ್ಮಥ

ಸಮಗ್ರ ನ್ಯೂಸ್: ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರ ರಾಜ್ಯದಲ್ಲಿ ಅರಾಜಕತೆ ಮತ್ತು ದುರಾಡಳಿತ ನಡೆಸುತ್ತಿದೆ ಎಂದು ಆರೋಪಿಸಿ ಸುಳ್ಯದ ಮಿನಿ ವಿಧಾನ ಸೌಧದ ಎದುರು ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಶನಿವಾರ ಪ್ರತಿಭಟನಾ ಸಭೆ ನಡೆಸಲಾಯಿತು. ಎಸ್.ಎನ್.ಮನ್ಮಥ ಮಾತನಾಡಿ, ಕಾಂಗ್ರೆಸ್ ನೀಡಿದ ಭರವಸೆಯನ್ನು ಮೊದಲು ಈಡೇರಿಸಬೇಕು. ಸಿದ್ದರಾಮಯ್ಯ ನೇತೃತ್ವದ ಸರಕಾರ ಕರ್ನಾಟಕವನ್ನು ದಿವಾಳಿ ಮಾಡುವ ಚಿಂತನೆ ಅವರಲ್ಲಿದೆ. ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.ಬಿಜೆಪಿ ನಾಯಕರಾದ ವಿನಯಕುಮಾರ್ ಕಂದಡ್ಕ, ಎ.ವಿ.ತೀರ್ಥರಾಮ, ವೆಂಕಟ ವಳಲಂಬೆ, ಡಾ.ರಾಮಯ್ಯ

ಸುಳ್ಯದಲ್ಲಿ ಕಾಂಗ್ರೆಸ್ ವಿರುದ್ಧ ಬಿಜೆಪಿ ವತಿಯಿಂದ ಪ್ರತಿಭಟನೆ|ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನು ವ್ಯವಸ್ಥೆ ಹದಗೆಟ್ಟಿದೆ:ಹರೀಶ್ ಕಂಜಿಪಿಲಿ|ಕಾಂಗ್ರೆಸ್ ದೂರದೃಷ್ಟಿ ಇಲ್ಲದೆ ಆಡಳಿತ ನಡೆಸುತ್ತಿದೆ:ಎಸ್.ಎನ್.ಮನ್ಮಥ Read More »