ಕರಾವಳಿ

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್

ಸಮಗ್ರ ನ್ಯೂಸ್: 2020 ರ ಗೋಹತ್ಯೆ ವಿರೋಧಿ ಕಾಯ್ದೆಯನ್ನು ರದ್ದುಗೊಳಿಸುವ ಯಾವುದೇ ಪ್ರಸ್ತಾಪವಿಲ್ಲ ಎಂದು ಕರ್ನಾಟಕ ಸರ್ಕಾರ ಹೇಳಿದ್ದರೂ, ಪ್ರತಿಪಕ್ಷ ಬಿಜೆಪಿ ರಾಜ್ಯ ಸರ್ಕಾರದಿಂದ ಸ್ಪಷ್ಟವಾದ ಹೇಳಿಕೆಯನ್ನು ಪದೇ ಪದೇ ಬಯಸುತ್ತಿದೆ. ಜೊತೆಗೆ ಕಲಾಪದಲ್ಲಿ ಈ ಬಗ್ಗೆ ಗದ್ದಲ ಎಬ್ಬಿಸುತ್ತಿದ್ದಾರೆ ಎಂದು ಪಶುಸಂಗೋಪನಾ ಸಚಿವ ಕೆ. ವೆಂಕಟೇಶ್ ಹೇಳಿದ್ದಾರೆ. ಕರ್ನಾಟಕದಲ್ಲಿ ಅಕ್ರಮ ಗೋಹತ್ಯೆಗೆ ಸರ್ಕಾರ ಅನುಮತಿ ನೀಡುತ್ತಿದೆ ಎಂದು ಆರೋಪಿಸಿ ಜುಲೈ 5 ರಂದು ವಿಧಾನ ಮಂಡಲದ ಕಲಾಪವನ್ನು ಸ್ಥಗಿತಗೊಳಿಸಿದ್ದಾರೆ. ಮೈಸೂರಿನಲ್ಲಿ ಪಶುಸಂಗೋಪನಾ ಸಚಿವ ಕೆ.ವೆಂಕಟೇಶ್ ಅವರ […]

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಪ್ರಸ್ತಾವನೆ ಇಲ್ಲ – ಸಚಿವ ಕೆ. ವೆಂಕಟೇಶ್ Read More »

ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆ ಸೇರಿದಂತೆ ಕರಾವಳಿಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಾಳೆ (ಜು. 6) ಕೂಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳಿಗೆ ಜು.6ರಂದು ರಜೆ ಘೋಷಿಸಲಾಗಿದೆ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.

ಮುಂದುವರಿದ ರಣ ಮಳೆ| ಉಡುಪಿ ಜಿಲ್ಲೆಯ ಶಾಲೆ, ಪಿಯು ಕಾಲೇಜುಗಳಿಗೆ ನಾಳೆ(ಜು.6) ರಜೆ ಘೋಷಣೆ Read More »

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಪರಿಣಾಮ ಅಂಗನವಾಡಿ, ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಜು.6ರ ಗುರುವಾರ ರಜೆ ಘೋಷಿಸಿ ಆದೇಶಿಸಲಾಗಿದೆ. ದ.ಕ‌ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಈ ಕುರಿತಂತೆ ಆದೇಶಿಸಿದ್ದು, ಮಳೆ ವಿಪರೀತವಾಗಿ ಸುರಿಯುತ್ತಿರುವ ಪರಿಣಾಮ ಎಚ್ಚರಿಕೆ ವಹಿಸಲು ಪ್ರಾಕೃತಿಕ ವಿಕೋಪ ಪಡೆ ಹಾಗೂ ಆಡಳಿತಕ್ಕೆ ಸೂಚಿಸಿದ್ದಾರೆ. ನೀರು ಇರುವ ತಗ್ಗು ಪ್ರದೇಶ ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ

ಮುಂದುವರಿದ ಧಾರಾಕಾರ ಮಳೆ| ನಾಳೆ(ಜು.6) ಕೂಡಾ ದ.ಕ ಜಿಲ್ಲೆಯಲ್ಲಿ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ರಜೆ Read More »

ಸುಳ್ಯ: ಪರ್ಮಿಟ್ ಇಲ್ಲದ ಖಾಸಗಿ ಬಸ್ ಗಳಿಗೆ ಮುಟ್ಟುಗೋಲು ಹಾಕಿದ ಸಾರಿಗೆ ಅಧಿಕಾರಿಗಳು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ – ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು – ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್

ಸುಳ್ಯ: ಪರ್ಮಿಟ್ ಇಲ್ಲದ ಖಾಸಗಿ ಬಸ್ ಗಳಿಗೆ ಮುಟ್ಟುಗೋಲು ಹಾಕಿದ ಸಾರಿಗೆ ಅಧಿಕಾರಿಗಳು Read More »

ಸುಳ್ಯ: ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್| ಶೇ.30%ರಷ್ಟು ದರ ಕಡಿತ ಮಾರಾಟ

ಸಮಗ್ರ ನ್ಯೂಸ್: ಸುಳ್ಯದ ಶ್ರೀರಾಮ್ ಪೇಟೆಯ ಶುಭಲಕ್ಷ್ಮೀ ಬಿಲ್ಡ್ಂಗ್ ನಲ್ಲಿ ಕಾರ್ಯಾಚರಿಸುತ್ತಿರುವ ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್ ಆರಂಭಗೊಂಡಿದೆ. ಸುಳ್ಯದ ಕುಮ್ ಕುಮ್… ಫ್ಯಾಶನ್ ನಲ್ಲಿ ಗ್ರಾಹಕರ ಅಭಿರುಚಿಗೆ ತಕ್ಕಂತೆ ವಿವಿಧ ಕಂಪೆನಿಗಳ ರೈಟ್ ಕೋಟ್ ಇದೆ.‌ ಝೀಲ್, ಬಾಸ್, ರಿಯಲ್ ಸಹಿತ ವಿವಿಧ ಕಂಪೆನಿಗಳ ರೈನ್ ಕೋಟ್ ಗಳು ಶೇ.30 ರ ವರೆಗೆ ರಿಯಾಯಿತಿ ದರದಲ್ಲಿ ಗ್ರಾಹಕರಿಗೆ ನೀಡಲಾಗುತ್ತದೆ. ಕೆಲಸಕ್ಕೆ ಬಳಸಲು ರೈನ್ ಕೋಟ್ ಅತೀ ಕಡಿಮೆ

ಸುಳ್ಯ: ಕುಮ್ ಕುಮ್ ಫ್ಯಾಷನ್ ನಲ್ಲಿ ಮಾನ್ಸೂನ್ ಆಫರ್| ಶೇ.30%ರಷ್ಟು ದರ ಕಡಿತ ಮಾರಾಟ Read More »

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ

ಸಮಗ್ರ ನ್ಯೂಸ್: ಮಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರದ ಹೊರವಲಯದಲ್ಲಿ ಮಳೆಯಿಂದಾಗಿ ಗುಡ್ಡ ಕುಸಿದಿರುವ ಘಟನೆ ನಡೆದಿದೆ. ಮಂಗಳೂರಿನ ಕೆ.ಎಸ್. ರಾವ್ ರಸ್ತೆಯಲ್ಲಿರುವ ಗುಡ್ಡ ಭಾರೀ ಮಳೆಯಿಂದಾಗಿ ಕುಸಿದಿದ್ದು, ಮತ್ತಷ್ಟು ಕುಸಿಯುವ ಭೀತಿ ಎದುರಾಗಿದ್ದು, ಸ್ಥಳೀಯ ಜನರಲ್ಲಿ ಆತಂಕ ಶುರುವಾಗಿದೆ. ಸದ್ಯ ಗುಡ್ಡ ಕುಸಿದ ಸ್ಥಳದಲ್ಲಿ ಜಿಲ್ಲಾಡಳಿತ ಟಾರ್ಪಲ್ ಹೊದಿಸಲಾಗಿದೆ. ಸದ್ಯ ಪಿವಿಎಸ್-ಕೆ.ಎಸ್. ರಾವ್ ರಸ್ತೆಯಲ್ಲಿ ಸಂಚಾರಕ್ಕೆ ನಿರ್ಬಂಧಿಸಲಾಗಿದೆ. ಇನ್ನು ಮಂಗಳೂರು ನಗರದ ಹೊರವಲಯ‌ ಮಂಜನಾಡಿ ಗ್ರಾಮದ ನಾಟೆಕಲ್ ಸಮೀಪದ ಜೊಹರಾ ಎಂಬವರ ಮನೆಗೆ

ಭಾರೀ ಮಳೆಗೆ ಮಂಗಳೂರಿನಲ್ಲಿ ಗುಡ್ಡ ಕುಸಿತ| ಆತಂಕದಲ್ಲಿ ಜನತೆ Read More »

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್

ಸಮಗ್ರ ನ್ಯೂಸ್ : ಮಧ್ಯವಯಸ್ಸಿನ ಜೋಡಿಯ ರಾಸಕ್ರೀಡೆಯ ವಿಡಿಯೋ ವೈರಲ್ ಬಳಿಕ ವಿಡಿಯೋದಲ್ಲಿದ್ದ ವ್ಯಕ್ತಿಯ ಪುತ್ರ ಆತ್ಮಹತ್ಯೆಗೆ ಶರಣಾಗಿರುವ ಬೆನ್ನಲ್ಲೇ ವಿಡಿಯೋ ಮಾಡಿ ಬಳಿಕ ವಿಡಿಯೋ ವೈರಲ್ ಮಾಡಿದ್ದ ಆರೋಪಿಯನ್ನು ಮೂಡಬಿದ್ರಿ ಪೋಲಿಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಜಯಕುಮಾರ್ ಎಂದು ಗುರುತಿಸಲಾಗಿದೆ. ಕೆಲ ಸಮಯದ ಹಿಂದೆಯೇ ಘಟನೆಯ ವಿಡಿಯೋ ಚಿತ್ರೀಕರಣವಾಗಿದೆ ಎನ್ನಲಾಗುತ್ತಿದ್ದು, ವಿಡಿಯೋ ಚಿತ್ರೀಕರಿಸಿದ ಆರೋಪಿ ವಿಡಿಯೋದಲ್ಲಿ ಸಿಕ್ಕಿಬಿದ್ದ ವ್ಯಕ್ತಿಯನ್ನು ಬ್ಲ್ಯಾಕ್ ಮೇಲ್ ಮಾಡಿ ಲಕ್ಷಾಂತರ ರೂಪಾಯಿ ಹಣ ಕೂಡ ಸುಲಿಗೆ ಮಾಡಿದ್ದ ಎಂಬ ಆರೋಪ ಸಾಮಾಜಿಕ

ಮೂಡಬಿದ್ರೆ: ಪರಸ್ತ್ರೀ ಜೊತೆ ಸರಸವಾಡಿದ ವಿಡಿಯೋ ವೈರಲ್ ಬೆನ್ನಲ್ಲೇ ಪುತ್ರ ಆತ್ಮಹತ್ಯೆ| ರಾಸಕ್ರೀಡೆಯ ವಿಡಿಯೋ ವೈರಲ್ ಮಾಡಿದಾತ ಅರೆಸ್ಟ್ Read More »

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಕೇರಳದಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮುಂದಿನ ಕೆಲ ದಿನಗಳ ಕಾಲ ವ್ಯಾಪಕ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೇರಳದಾದ್ಯಂತ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ರೀತಿ ಕರ್ನಾಟಕದ ಕರಾವಳಿಯಲ್ಲಿಯೂ ರೆಡ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ. ಭಾರೀ ಮಳೆ ಸುರಿಯುವ ಮನ್ಸೂಚನೆ ಇರುವ ಹಿನ್ನೆಲೆಯಲ್ಲಿ ಕಾಸರಗೋಡು, ಕಣ್ಣೂರು, ಇಡುಕ್ಕಿ, ತ್ರಿಶೂರ್ ಮತ್ತು ಎರ್ನಾಕುಲಂ ಜಿಲ್ಲಾಧಿಕಾರಿಗಳು ಬುಧವಾರ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ರೆಡ್‌ ಅಲರ್ಟ್‌ಗಳನ್ನು ಹೊರಡಿಸಿದ್ದು, ಬುಧವಾರ ಈ

ಕೇರಳದಲ್ಲಿ ಮಳೆ ಅವಾಂತರ| ರಾಜ್ಯದಾದ್ಯಂತ ರೆಡ್ ಅಲರ್ಟ್| ಐದು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್

ಸಮಗ್ರ ನ್ಯೂಸ್: ಕರಾವಳಿ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಎಚ್ಚರವಹಿಸುವಂತೆ ಸೂಚಿಸಲಾಗಿದೆ. ಜುಲೈ 4 ರಿಂದ ಜುಲೈ 8 ರವರೆಗೆ ಕರ್ನಾಟಕ ಕರಾವಳಿಯಲ್ಲಿ ಗಂಟೆಗೆ 45-55 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಮಳೆಯಿಂದಾಗಿ ಕಾರವಾರದ ಹಬ್ಬುವಾಡದಲ್ಲಿರುವ ಸರಕಾರಿ ಬಸ್ ನಿಲ್ದಾಣ ಡಿಪೋ ಕಚೇರಿಯೊಳಗೆ ಮಳೆ‌ ನೀರು ನುಗ್ಗಿತ್ತು. ಡಿಪೋ ಕಚೇರಿಯ ಎಲೆಕ್ಟ್ರಾನಿಕ್

ಕರಾವಳಿಯಲ್ಲಿ ವರುಣಾರ್ಭಟ| ಮೂರು ಜಿಲ್ಲೆಗಳಿಗೆ ರೆಡ್ ಅಲರ್ಟ್ Read More »

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ

ಸಮಗ್ರ ವಾರ್ತೆ: ಉತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದ್ದು, ದಕ್ಷಿಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ತ್ತರ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಹೆಚ್ಚು ಮಳೆಯಾಗುತ್ತಿರುವ ಕಾರಣ ಶಾಲಾ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಗೂ ದಕ್ಷಣ ಕನ್ನಡದಲ್ಲಿ ಇಂದು ಕೂಡ ರಜೆ ವಿಸ್ತರಿಸಲಾಗಿದೆ. ಉಡುಪಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಜಿಲ್ಲೆಯ ಎಲ್ಲಾ ಶಾಲೆಗಳು, ಪಿಯು ಕಾಲೇಜಿಗೆ ಇಂದು ರಜೆ ನೀಡಿ ಉಡುಪಿ ಡಿಸಿ

ಭಾರೀ ಮಳೆ ಮುನ್ಸೂಚನೆ| ಕರಾವಳಿಯ ಮೂರು ಜಿಲ್ಲೆಗಳ ಶಾಲೆ ಹಾಗೂ ಪಿಯು ಕಾಲೇಜುಗಳಿಗೆ ಇಂದು ರಜೆ ಘೋಷಣೆ Read More »