ಕರಾವಳಿ

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ

ಸಮಗ್ರ ನ್ಯೂಸ್: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ ಹೊಡೆದು ಚಾಲಕ ಅದೃಷ್ಟವಶಾತ್‌ ಪಾರಾಗಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪ ಪರ್ತಿಪ್ಪಾಡಿ ಬಳಿ ನಡೆದಿದೆ. ವಿದ್ಯುತ್‌ ಕಂಬಕ್ಕೆ ಗುದ್ದಿದ ರಭಸಕ್ಕೆ ವಿದ್ಯುತ್ ಕಂಬವೇ ಕಿತ್ತು ಬಂದಿದೆ.ಕಾರಿನ ಮೇಲೆಯೇ ವಿದ್ಯುತ್‌ ಕಂಬ ಮುರಿದು ಬಿದ್ದಿದ್ದು ಅದೃಷ್ಟವಶಾತ್‌ ಚಾಲಕ ಯಾವುದೇ ಅಪಾಯವಿಲ್ಲದೇ ಪಾರಾಗಿದ್ದಾರೆ.

ವಿಟ್ಲ: ವಿದ್ಯುತ್‌ ಕಂಬಕ್ಕೆ ಕಾರು ಡಿಕ್ಕಿ| ಮುರಿದು ಬಿದ್ದ ಕಂಬ Read More »

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ

ಸಮಗ್ರ ನ್ಯೂಸ್: ವಿದ್ಯಾರ್ಥಿ ವಿರುದ್ಧ ಸುಳ್ಳು ಕೇಸ್‌ ದಾಖಲಿಸಿದ್ದಾರೆಂಬ ಕಾರಣಕ್ಕೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿರುವ ಘಟನೆ ಪೆರುವಾಜೆ ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ನಡೆದಿದೆ. ಸಂಸ್ಥೆಯ ಎಚ್‌ಒಡಿ ದೀಕ್ಷಿತ್ ಎಂಬ ವಿದ್ಯಾರ್ಥಿಯ ಮೇಲೆ ಸುಳ್ಳು ಕೇಸ್ ದಾಖಲಿಸಿದ್ದಾರೆಂದು ಆರೋಪಿಸಿ ಪ್ರತಿಭಟನೆ ನಡೆಸಲಾಗುತ್ತದೆ. ನೂರಾರು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಕೂಡ ಆಗಮಿಸಿದ್ದಾರೆ ಎಂದು ತಿಳಿದು ಬಂದಿದೆ.

ಪೆರುವಾಜೆ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ಉಪನ್ಯಾಸಕಿ ವಿರುದ್ಧ ಪ್ರತಿಭಟನೆ Read More »

ಮೈಸೂರು ಕರಾಮುವಿ ಘಟಿಕೋತ್ಸವ| ಸುಳ್ಯ ಠಾಣೆ ಪೊಲೀಸ್ ಸಿಬ್ಬಂದಿ ಮಧುಗೆ ಪ್ರಥಮ ರ‍್ಯಾಂಕ್

ಸಮಗ್ರ ನ್ಯೂಸ್: ಸುಳ್ಯ ಪೊಲೀಸ್ ಠಾಣೆಯಲ್ಲಿ ಕಳೆದ 5 ವರ್ಷಗಳಿಂದ ಪೊಲೀಸ್ ಕಾನ್ಸ್ಟೇಬಲ್ ಆಗಿ ಸೇವೆ ಸಲ್ಲಿಸುತ್ತಿರುವ ಮಧು ಜಿ.ಡಿ. ಅವರು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2021-22 ನೇ ಸಾಲಿನ ಜುಲೈ ಆವೃತ್ತಿಯ ಎಂಎ ರಾಜ್ಯಶಾಸ್ತ್ರ ವಿಭಾಗದಲ್ಲಿ 774 ಅಂಕ ಪಡೆದು ಪ್ರಥಮ ರ‍್ಯಾಂಕ್ ಪಡೆದು, ಚಿನ್ನದ ಪದಕ ಪಡೆದುಕೊಂಡಿದ್ದಾರೆ. ಮೈಸೂರಿನ ಕರಾಮುವಿಯ ಘಟಿಕೋತ್ಸವ ಭವನದಲ್ಲಿ ನಡೆದ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹಲೋಟ್ ಅವರು ಮಧು ಅವರಿಗೆ ಪದಕ ಮತ್ತು

ಮೈಸೂರು ಕರಾಮುವಿ ಘಟಿಕೋತ್ಸವ| ಸುಳ್ಯ ಠಾಣೆ ಪೊಲೀಸ್ ಸಿಬ್ಬಂದಿ ಮಧುಗೆ ಪ್ರಥಮ ರ‍್ಯಾಂಕ್ Read More »

ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ|ತಾಯಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಗ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ ಬೆನ್ನಲ್ಲೇ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಫುರುಷರಕಟ್ಟೆಯ ಇಂದಿರಾನಗರದಲ್ಲಿ ಬೆಳಕಿಗೆ ಬಂದಿದೆ. ಇಂದಿರಾನಗರದ ದಿ.ಪ್ರವೀಣ್‌ ಅವರ ಪತ್ನಿ ಕಾವ್ಯಾ(38) ಆತ್ಮಹತ್ಯೆ ಮಾಡಿಕೊಂಡವರು. 7ವರ್ಷದ ಹಿಂದೆ ಕಾವ್ಯಾ ಅವರ ಪತಿ ಪ್ರವೀಣ್‌ ಕೂಡ ಯಾವುದೋ ಕಾರಣಕ್ಕೆ ಅತ್ಮಹತ್ಯೆ ಮಾಡಿಕೊಂಡಿದ್ದು, ಅದೇ ಸ್ಥಳದಲ್ಲಿ ಕಾವ್ಯಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನು ಕಾವ್ಯಾ ಅವರು ಮಾನಸಿಕವಾಗಿ ನೊಂದಿದ್ದರು ಎನ್ನಲಾಗಿದ್ದು, ಅವರ ಪುತ್ರ ಪ್ರತೀಕ್‌ ಜೂ 30 ರಂದು ಬೆದ್ರಾಳ ಸಮೀಷ ಸಂಭವಿಸಿದ

ಪುತ್ತೂರು: ಅಪಘಾತದಲ್ಲಿ ಪುತ್ರ ಗಂಭೀರ|ತಾಯಿ ಆತ್ಮಹತ್ಯೆ Read More »

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್

ಸಮಗ್ರ ನ್ಯೂಸ್: ಸೂಪರ್ ಹಿಟ್ ಟೀಸರ್, ಸಾಂಗ್ ಮೂಲಕವೇ ಪ್ರೇಕ್ಷಕರ ಕುತೂಹಲ ಹೆಚ್ಚಿಸಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಜುಲೈ 21ಕ್ಕೆ ರಾಜ್ಯಾದ್ಯಂತ ತೆರೆಯಪ್ಪಲಿಸಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಈ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಗಳು ಸಾಥ್ ನೀಡಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಎಂಟ್ರಿಗೆ ಮುಹೂರ್ತ ಫಿಕ್ಸ್ Read More »

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 3.5 ಲಕ್ಷ ಬೆಲೆಯ ಚಿನ್ನ ದರೋಡೆ

ಸಮಗ್ರ ನ್ಯೂಸ್: ಎಡಿಜಿಪಿ ಅಲೋಕ್ ಕುಮಾರ್,ಮಂಡ್ಯ ಬಳಿಯ ಹೆದ್ದಾರಿಗೆ ಭೇಟಿ ನೀಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಅವರಿಗೆ ಹೆದ್ದಾರಿ ಗಸ್ತು ಹೆಚ್ಚಿಸಿ ಕಳ್ಳತನ , ಅಪರಾಧ ಘಟನೆಗಳಿಗೆ ಕಡಿವಾಣ ಹಾಕಲು ಆದೇಶಿಸಿದ್ದರು ಇದರ ಬೆನ್ನಲ್ಲೇ ದುಷ್ಕರ್ಮಿಗಳು ಕೊಡಗು ಮೂಲದ ವ್ಯಕ್ತಿಯ ಚಿನ್ನದ ಸರವನ್ನು ದರೋಡೆ ಮಾಡಿರುವ ಘಟನೆ ನಡೆದಿದೆ. ಮಡಿಕೇರಿ ಸಮೀಪದ ಅರಪಟ್ಟು ಗ್ರಾಮದ ಇಂಟೀರಿಯರ್‌ ಡಿಸೈನರ್‌ ಮುತ್ತಪ್ಪ ಎಂಬ ಯುವಕ ಬೆಂಗಳೂರಿನಿಂದ ಮಡಿಕೇರಿಗೆ ತೆರಳುತ್ತಿದ್ದಾಗ ಮದ್ದೂರಿನ ಸರ್ವೀಸ್ ರಸ್ತೆಯಲ್ಲಿ ವಿರಾಮ ತೆಗೆದುಕೊಳ್ಳಲು ಕಾರನ್ನು ನಿಲ್ಲಿಸಿದ್ದಾಗ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ಹೆದ್ದಾರಿಯಲ್ಲಿ 3.5 ಲಕ್ಷ ಬೆಲೆಯ ಚಿನ್ನ ದರೋಡೆ Read More »

ತಿರುಪತಿಯಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಮಾದ| ಜಲಪಾತದಲ್ಲಿ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಸಾವು!!

ಸಮಗ್ರ ನ್ಯೂಸ್: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿಯೊಬ್ಬ ತನ್ನ ಜೀವವನ್ನೇ ಕಳೆದುಕೊಂಡಿದ್ದಾನೆ. ಮೃತ ವಿದ್ಯಾರ್ಥಿ ಮಂಗಳೂರು ಮೂಲದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಸುಮಂತ್ ಎಂದು ಗುರುತಿಸಲಾಗಿದೆ. ಚೆನ್ನೈನ 22 ವರ್ಷದ ವಿದ್ಯಾರ್ಥಿ ತನ್ನ ಸ್ನೇಹಿತರೊಂದಿಗೆ ತಿರುಪತಿ ಬಳಿಯ ತಲಕೋನಾ ಜಲಪಾತಕ್ಕೆ ತೆರಳಿದ್ದ. ಸುಮಂತ್ ಈ ವೇಳೆ ನೀರಿಗೆ ಜಿಗಿಯಲು ಹೋಗಿದ್ದರು. ಈ ಸಮಯದಲ್ಲಿ, ಅವರು Instagram ರೀಲ್ಸ್‌ಗಾಗಿ ನೀರಿಗೆ ಹಾರಿ ವೀಡಿಯೊವನ್ನು ಶೂಟ್ ಮಾಡಲು ತಮ್ಮ ಸ್ನೇಹಿತರನ್ನು ಕೇಳಿದರು. ಅದರಂತೆ

ತಿರುಪತಿಯಲ್ಲಿ ರೀಲ್ಸ್ ಮಾಡಲು ಹೋಗಿ ಪ್ರಮಾದ| ಜಲಪಾತದಲ್ಲಿ ಬಿದ್ದು ಮಂಗಳೂರು ಮೂಲದ ವಿದ್ಯಾರ್ಥಿ ಸಾವು!! Read More »

ಗಾಯಕ ಎಚ್ ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಹಾಡು ಕೋಗಿಲೆ-2023 ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ ಸಮಾರಂಭ

ಸಮಗ್ರ ನ್ಯೂಸ್: ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗವು ಆಯೋಜಿಸಿದ್ದ ಹಾಡು ಕೋಗಿಲೆ ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆಯು ಇತ್ತೀಚಿಗೆ ಸುಳ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಭಾಂಗಣದಲ್ಲಿ ನೆರವೇರಿತು . ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ಅಧ್ಯಕ್ಷರು , ಗಾಯಕರು ಮತ್ತು ಖ್ಯಾತ ಜ್ಯೋತಿಷ್ಯರಾದ ಎಚ್ .ಭೀಮರಾವ್ ವಾಷ್ಠರ್ ರವರು ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು . ಗಾಯಕರು ಹಾಗೂ ಪೊಲೀಸ್ ಅಧಿಕಾರಿಯಾದ ಶ್ರೀ ಸುಬ್ರಾಯ ಕಲ್ಪನೆ ಯವರು ಕರೋಕೆ ಸಂಗೀತ ಸ್ಪರ್ಧೆಯನ್ನು ಉದ್ಘಾಟಿಸಿದರು. ವಿಶೇಷ

ಗಾಯಕ ಎಚ್ ಭೀಮರಾವ್ ವಾಷ್ಠರ್ ನೇತೃತ್ವದಲ್ಲಿ ಹಾಡು ಕೋಗಿಲೆ-2023 ಅಂತರ್ ಜಿಲ್ಲಾ ಸಂಗೀತ ಸ್ಪರ್ಧೆ ಸಮಾರಂಭ Read More »

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ನೇಮಕ| ಇಂದು ಸಂಜೆ ಪ್ರಮಾಣ ವಚನ

ಸಮಗ್ರ ನ್ಯೂಸ್: ಎನ್ಸಿಪಿಯ ಅಜಿತ್ ಪವಾರ್ ಮತ್ತು ಪಕ್ಷದ 29 ನಾಯಕರು ಮಹಾರಾಷ್ಟ್ರ ಸರ್ಕಾರವನ್ನು ಸೇರುವ ನಿರೀಕ್ಷೆಯಿದ್ದು, ಶರದ್ ಪವಾರ್ ಅವರು ಇಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ. ಈ ಮೂಲಕ ಪವಾರ್ ಬಿಜೆಪಿಯ ದೇವೇಂದ್ರ ಫಡ್ನವೀಸ್ ಅವರೊಂದಿಗೆ ಈ ಹುದ್ದೆಯನ್ನ ಹಂಚಿಕೊಳ್ಳಲಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನದಿಂದ ಕೆಳಗಿಳಿಯುವ ಬಯಕೆಯನ್ನ ಶರದ್ ಪವಾರ್ ಸಾರ್ವಜನಿಕವಾಗಿ ವ್ಯಕ್ತಪಡಿಸಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ. ಇದಕ್ಕೂ ಮುನ್ನ

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ನೇಮಕ| ಇಂದು ಸಂಜೆ ಪ್ರಮಾಣ ವಚನ Read More »

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಭಾರೀ ವಾಗ್ಯುದ್ಧಕ್ಕೆ ಸಾಕ್ಷಿಯಾಗಲಿದೆ ವಿಧಾನಸೌಧ

ಸಮಗ್ರ ನ್ಯೂಸ್: ನೂತನ ಕಾಂಗ್ರೆಸ್ ಸರ್ಕಾರದ ಮೊದಲ ಅಧಿವೇಶನ ಇಂದಿನಿಂದ ಆರಂಭವಾಗಲಿದೆ. 10 ದಿನಗಳ ಕಾಲ ಕಲಾಪ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ವಾಗ್ಯುದ್ಧ ನಡೆಯುವ ಸಾಧ್ಯತೆ ಇದೆ. ಹಿಂದಿನ ಸರ್ಕಾರದ ಹಗರಣ, ಗ್ಯಾರಂಟಿ ಯೋಜನೆ, ಅಕ್ಕಿ ಬದಲು ಹಣ, ಗ್ಯಾರಂಟಿ ಯೋಜನೆಗಳಿಗೆ ಷರತ್ತು, ವರ್ಗಾವಣೆ ದಂಧೆ, ಮತಾಂತರ ನಿಷೇಧ, ಗೋಹತ್ಯೆ ನಿಷೇಧ, ಎಪಿಎಂಸಿ ಕಾಯ್ದೆ ಮೊದಲಾದ ವಿಚಾರಗಳ ಬಗ್ಗೆ ಆಡಳಿತ, ಪ್ರತಿಪಕ್ಷಗಳ

ಇಂದಿನಿಂದ ರಾಜ್ಯ ವಿಧಾನಮಂಡಲ ಬಜೆಟ್ ಅಧಿವೇಶನ| ಭಾರೀ ವಾಗ್ಯುದ್ಧಕ್ಕೆ ಸಾಕ್ಷಿಯಾಗಲಿದೆ ವಿಧಾನಸೌಧ Read More »