ಮಂಗಳೂರು: ತಡೆಗೋಡೆಗಳು ಬಿದ್ದು ಜೀವಹಾನಿಯಾಗುತ್ತಿದ್ದರೂ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಜಿಲ್ಲಾಡಳಿತ ವಿಫಲ: ಎಸ್‌ಡಿಪಿಐ
ಸಮಗ್ರ ನ್ಯೂಸ್: ದ.ಕ ಜಿಲ್ಲೆಯಲ್ಲಿ ನಿರಂತರವಾಗಿ ತಡೆಗೋಡೆಗಳು ಕುಸಿದು ಬಿದ್ದು ಜೀವಹಾನಿಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಮಾಲ್ ಜೋಕಟ್ಟೆ ಹೇಳಿದ್ದಾರೆ. ಕೆಲವು ದಿನಗಳ ಹಿಂದೆ ಮಂಗಳೂರಿನ ಉಳ್ಳಾಲ ತಾಲೂಕಿನ ಕುತ್ತಾರು ಸಮೀಪ ತಡೆಗೋಡೆ ಬಿದ್ದು ಒಂದೇ ಕುಟುಂಬದ ನಾಲ್ಕು ಸದಸ್ಯರು ಮೃತಪಟ್ಟ ಬಳಿಕವೂ ಜಿಲ್ಲಾಡಳಿತ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ವಿಫಲವಾಗಿದೆ. ಅದರ ನಂತರ […]