ಕರಾವಳಿ

ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ

ಖಾಸಗಿ ಬಸ್ಸೊಂದು ರಸ್ತೆ ಬದಿಯ ಬರೆಗೆ ಢಿಕ್ಕಿ ಹೊಡೆದ ಪರಿಣಾಮ ಓರ್ವ ಮಹಿಳೆ ಮೃತಪಟ್ಟು, ಐವರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ನಾವೂರು ಬಳಿ ನಡೆದಿದೆ. ಮೃತರನ್ನು ಇಂದಬೆಟ್ಟು ಗ್ರಾಮದ ಸುಂದರಿ (60) ಎಂದು ಗುರುತಿಸಲಾಗಿದೆ. ಗಾಯಗೊಂಡಿರುವ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬೆಳ್ತಂಗಡಿ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಬೆಳ್ತಂಗಡಿ: ರಸ್ತೆ ಬಿಟ್ಟು ಗುಡ್ಡಕ್ಕೆ ಡಿಕ್ಕಿ ಹೊಡೆದ ಬಸ್| ಮಹಿಳೆ ಸಾವು, ಐದು ಮಂದಿ‌ ಜಖಂ Read More »

‌ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಾರ್ಯಕರ್ತನಿಂದ ಹಲ್ಲೆ| ಆರೋಪಿಯ ಬಂಧನ

ಸಮಗ್ರ ನ್ಯೂಸ್: ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಕಾರ್ಯಕರ್ತನನ್ನು ಪೊಲೀಸರು ಬಂಧಿಸಿದ್ದಾರೆ. ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯ ನಾಟೆಕಲ್ನಲ್ಲಿ ಎಸ್ಡಿಪಿಐ ವಾಹನ ಮತ್ತು ಕಾಂಗ್ರೆಸ್ನ ಪ್ರಚಾರ ವಾಹನ ಮುಖಾಮುಖಿಯಾದ ವೇಳೆ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಎಸ್ಡಿಪಿಐ ಕಾರ್ಯಕರ್ತರು ಆಯೋಜಿಸಿದ್ದ ಬೈಕ್ ಮತ್ತು ರಿಕ್ಷಾ ರ್ಯಾಲಿಯಿಂದ ರಸ್ತೆ ಸಂಚಾರಕ್ಕೆ ಅಡ್ಡಿ ಉಂಟಾದ ಕಾರಣ

‌ಮಂಗಳೂರು: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಎಸ್ಡಿಪಿಐ ಕಾರ್ಯಕರ್ತನಿಂದ ಹಲ್ಲೆ| ಆರೋಪಿಯ ಬಂಧನ Read More »

SSLC ಫಲಿತಾಂಶ ಪ್ರಕಟ| ಈ ಬಾರಿ 83.89 ರಷ್ಟು ವಿದ್ಯಾರ್ಥಿಗಳು ಪಾಸ್

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭಾ ಚುನಾವಣಾ ಭರದಲ್ಲಿಯೇ ಪ್ರೌಢ ಶಿಕ್ಷಣ ಪರೀಕ್ಷಾ ಮಂಗಳ ಎಸ್ಎಸ್ಎಲ್ಸಿ ಪರೀಕ್ಷೆ ಫಲಿತಾಂಶ ಪ್ರಕಟಿಸಿದ್ದು ಈ ಬಾರಿ ಶೇ.83.89 ರಷ್ಟು ಫಲಿತಾಂಶ ಲಭ್ಯವಾಗಿದೆ. SSLC ಪರೀಕ್ಷೆಗಳನ್ನು 2023 ಮಾರ್ಚ್ 31 ರಿಂದ ಏಪ್ರಿಲ್ 15ರವರೆಗೆ ಕೈಗೊಳ್ಳಲಾಗಿದ್ದು ಒಟ್ಟು ರಾಜ್ಯದ 15,498 ಪ್ರೌಢಶಾಲೆಗಳ 8.42 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿಯಾಗಿದ್ದರು. ರಾಜ್ಯಾದ್ಯಂತ ಒಟ್ಟು 3,305 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆದಿದ್ದವು. ಪರೀಕ್ಷೆ ಬರೆದವರಲ್ಲಿ 700619 ವಿದ್ಯಾರ್ಥಿಗಳು ಪಾಸಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದು, ನಾಲ್ಕು

SSLC ಫಲಿತಾಂಶ ಪ್ರಕಟ| ಈ ಬಾರಿ 83.89 ರಷ್ಟು ವಿದ್ಯಾರ್ಥಿಗಳು ಪಾಸ್ Read More »

ಮದ್ಯಪ್ರಿಯರಿಗೆ ಬಿಗ್ ಶಾಕ್| ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಎಣ್ಣೆ ಸಿಗಲ್ಲ

ಸಮಗ್ರ ನ್ಯೂಸ್: ವಿಧಾನಸಭೆ ಚುನಾವಣೆ ಮತ್ತು ಮತ ಎಣಿಕೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 3 ದಿನ ಮದ್ಯ ಮಾರಾಟ ಬಂದ್ ಆಗಲಿದೆ. ಎಲ್ಲೆಡೆ ಮದ್ಯಕ್ಕೆ ಭಾರಿ ಬೇಡಿಕೆ ಕಂಡು ಬಂದಿದೆ. ಮದ್ಯ ಮಾರಾಟ ಮಳಿಗೆಗಳಲ್ಲಿ ಭಾನುವಾರ ಖರೀದಿ ಭರಾಟೆ ಜೋರಾಗಿತ್ತು. ಸೋಮವಾರ ಸಂಜೆ 5 ಗಂಟೆಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಗೆ ನಿಷೇಧ ಹೇರಲಾಗಿದೆ. ಮೇ 9, 10, 13 ರಂದು ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ಮತದಾನ ಮುಕ್ತಾಯಕ್ಕೆ ನಿಗದಿಪಡಿಸಿದ ದಿನಾಂಕದ 48 ಗಂಟೆಗಳ ಮೊದಲ

ಮದ್ಯಪ್ರಿಯರಿಗೆ ಬಿಗ್ ಶಾಕ್| ರಾಜ್ಯದಲ್ಲಿ ಇಂದಿನಿಂದ ಮೂರು ದಿನ ಎಣ್ಣೆ ಸಿಗಲ್ಲ Read More »

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ

ಸಮಗ್ರ ನ್ಯೂಸ್: ‘ರಾಜ್ಯದಲ್ಲಿ ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಕೇಂದ್ರದ ಯೋಜನೆಗಳು ಮುಂದುವರಿಯುತ್ತವೆ. ಒಂದು ವೇಳೆ ಸಿದ್ದರಾಮಯ್ಯನವರ ಸರ್ಕಾರ ಬಂದರೆ ಅವುಗಳಿಗೆ ಬ್ರೇಕ್‌ ಬೀಳುತ್ತದೆ’ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಹೇಳಿದರು. ಹರಪನಹಳ್ಳಿ ಹಾಗೂ ಕೂಡ್ಲಿಗಿ ವಿಧಾನಸಭಾ ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳ ಪರ ಭಾನುವಾರ ಮತಯಾಚಿಸಿ ಮಾತನಾಡಿದ ಅವರು, ‘ಡಬಲ್‌ ಎಂಜಿನ್‌ ಸರ್ಕಾರ ಮುಂದುವರಿದರೆ ಪ್ರಧಾನ ಮಂತ್ರಿ ಆವಾಸ್‌ ಯೋಜನೆ, ಪ್ರಧಾನ ಮಂತ್ರಿ ಗರೀಬ್‌ ಅನ್ನ ಕಲ್ಯಾಣ ಯೋಜನೆ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ

ಬಿಜೆಪಿಗೆ ಮತ ಹಾಕದಿದ್ದರೆ ಕೇಂದ್ರದ ಯೋಜನೆಗಳಿಗೆ ಬ್ರೇಕ್| ಜೆ.ಪಿ ನಡ್ಡಾ ಹೇಳಿಕೆಗೆ ಕಾಂಗ್ರೆಸ್ ನಿಂದ ತೀವ್ರ ಆಕ್ಷೇಪ Read More »

ಮಂಗಳೂರು ಆರ್ ಎಸ್ಎಸ್ ನ ಬಹುದೊಡ್ಡ ವಿಕೆಟ್ ಪತನ| ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ ಸತೀಶ್ ಪ್ರಭು

ಸಮಗ್ರ ನ್ಯೂಸ್: ಬಿಜೆಪಿಯ ಹಿರಿಯ ಮುಖಂಡ ಮಾಜಿ ನಗರಾಧ್ಯಕ್ಷ ಸತೀಶ್‌ ಪ್ರಭು ಇಂದು ಕಾಂಗ್ರೆಸ್‌ ಸೇರ್ಪಡೆಯಾಗಿದ್ದಾರೆ. ಈ ಹಿಂದೆ ಬಿಜೆಪಿಯಲ್ಲಿ ಹಲವು ಹುದ್ದೆಗಳನ್ನು ನಿಭಾಯಿಸಿದ ಸಂಘಟನಾ ಚತುರ ಇಂದು ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಹರೀಶ್‌ ಕುಮಾರ್‌, ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಜೆ.ಆರ್‌ ಲೋಬೋ, ಮಾಜಿ ಮೇಯರ್‌ ಶಶಿಧರ್‌ ಹೆಗ್ಡೆ ಸೇರಿದಂತೆ ಹಲವು ಹಿರಿಯ ನಾಯಕರ ಸಮ್ಮುಖದಲ್ಲಿ ಕಾಂಗ್ರೆಸ್‌ ಪಕ್ಷವನ್ನು ಸೇರ್ಪಡೆಯಾದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗೆ ಬಿಜೆಪಿ ಜನಹಿತ ಸಾಧನೆ ಅಸಾಧ್ಯ ಎಂಬುವುದನ್ನು ಮನಗಂಡಿದ್ದೇನೆ.

ಮಂಗಳೂರು ಆರ್ ಎಸ್ಎಸ್ ನ ಬಹುದೊಡ್ಡ ವಿಕೆಟ್ ಪತನ| ಬಿಜೆಪಿ ತೊರೆದು ಕಾಂಗ್ರೆಸ್ ಕೈ ಹಿಡಿದ ಸತೀಶ್ ಪ್ರಭು Read More »

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ

ಸಮಗ್ರ ನ್ಯೂಸ್: ಮೇ. 10 ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆ ಬಹಿರಂಗ ಪ್ರಚಾರಕ್ಕೆ ಮೇ.8ರ ಸಂಜೆ ತೆರೆ ಬೀಳಲಿದೆ. ಬಹಿರಂಗ ಪ್ರಚಾರ ಅಂತ್ಯಗೊಂಡ ನಂತರ ಮತದಾರರಲ್ಲದವರು ಆ ಕ್ಷೇತ್ರಗಳನ್ನು ಬಿಟ್ಟು ತೆರಳಬೇಕಿದ್ದು, ಸ್ಟಾರ್ ಪ್ರಚಾರಕರು ಕ್ಷೇತ್ರಗಳಲ್ಲಿ ಉಳಿಯುವಂತಿಲ್ಲ. ಆಯಾ ಕ್ಷೇತ್ರಗಳ ಮಟ್ಟಪಟ್ಟಿಯಲ್ಲಿ ಹೆಸರಿಲ್ಲದ ರಾಜಕೀಯ ನಾಯಕರುಗಳೂ ಸೇರಿದಂತೆ ಎಲ್ಲಾ ಮುಖಂಡರು ಜಾಗ ಖಾಲಿ ಮಾಡಬೇಕು ಎಂದು ಚುನಾವಣಾ ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿದೆ. ಮತದಾನ ಮುಕ್ತಾಯದ 48 ಗಂಟೆಗೂ ಮುನ್ನ ಬಹಿರಂಗ ಪ್ರಚಾರ ಅಂತ್ಯವಾಗಲಿದೆ. ಅದರಂತೆ

ಕರ್ನಾಟಕ ವಿಧಾನಸಭಾ ಚುನಾವಣೆ| ಇಂದು(ಮೇ.8) ಸಂಜೆ ಬಹಿರಂಗ ಪ್ರಚಾರಕ್ಕೆ ತೆರೆ Read More »

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ

ಸಮಗ್ರ ನ್ಯೂಸ್: ಕರ್ನಾಟಕ ವಿಧಾನಸಭೆ ಚುನಾವಣೆಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಉಳಿದಿದ್ದು, ರಾಜಕೀಯ ಪಕ್ಷಗಳು ಬಿರುಸಿನ ಪ್ರಚಾರದಲ್ಲಿ ತೊಡಗಿವೆ. ಈ ಬಾರಿ ಯಾವ ಪಕ್ಷ ಅಧಿಕಾರದ ಗದ್ದುಗೆಗೆ ಏರಬಹುದು ಎಂಬ ಕುತೂಹಲ ಮತದಾರರಲ್ಲಿಯೇ ಮನೆಮಾಡಿದೆ. ಹೀಗಿರುವಾಗ, ಮತ್ತೊಂದು ಚುನಾವಣಾ ಪೂರ್ವ ಸಮೀಕ್ಷೆಯ ವರದಿ ಪ್ರಕಟವಾಗಿದ್ದು, ಕಾಂಗ್ರೆಸ್ ಪಾಲಿಗೆ ಸುವರ್ಣಾವಕಾಶ ಎನ್ನುವಂತಾಗಿದೆ. ರಾಷ್ಟ್ರೀಯ ಸಮೀಕ್ಷಾ ಸಂಸ್ಥೆಯಾದ ಲೋಕ್ ಪೋಲ್ ಎಂಬ ಸಂಸ್ಥೆ ನಡೆಸಿದ ಸಮೀಕ್ಷೆ ಪ್ರಕಾರ, ಈ ಭಾರಿ ರಾಜ್ಯದಲ್ಲಿ ಕಾಂಗ್ರೆಸ್ ಭರ್ಜರಿ ಮುನ್ನಡೆ ಸಾಧಿಸಿ ಅಧಿಕಾರದ

ಕರ್ನಾಟಕ ಚುನಾವಣಾ ಪೂರ್ವ ಸಮೀಕ್ಷೆ| ಅತಿದೊಡ್ಡ ಪಕ್ಷವಾಗಿ ಕಾಂಗ್ರೆಸ್ ಮೇಲುಗೈ| ಕುಸಿತ ಕಂಡ ಬಿಜೆಪಿ Read More »

ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ‘ಬಲರಾಮ’ ಇನ್ನಿಲ್ಲ

ಸಮಗ್ರ ನ್ಯೂಸ್: ನಾಡಹಬ್ಬ ದಸರಾ ಜಂಬೂ ಸವಾರಿಯಲ್ಲಿ 13 ಬಾರಿ ಚಿನ್ನದ ಅಂಬಾರಿಯನ್ನು ಹೊತ್ತಿದ್ದ ಹೆಗ್ಗಳಿಕೆಯ ‘ಬಲರಾಮ’ ಆನೆ (67) ಅನಾರೋಗ್ಯದಿಂದ ಭಾನುವಾರ ಮೃತಪಟ್ಟಿದೆ. ‘ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಭೀಮನಕಟ್ಟೆ ಆನೆ ಶಿಬಿರದಲ್ಲಿರುವ ಕೆಲವು ದಿನಗಳಿಂದ ಆಹಾರ ಸೇವಿಸುತ್ತಿರಲಿಲ್ಲ. ಆನೆಯ ಗಂಟಲಿನಲ್ಲಿ ಹುಣ್ಣಾಗಿದ್ದು, ಆಹಾರ ನಿರಾಕರಿಸುತ್ತಿರುವುದರಿಂದ ನಿತ್ರಾಣಗೊಂಡಿದೆ. ಎಂಡೋಸ್ಕೋಪಿ ಮಾಡಿ ರಕ್ತ ಹಾಗೂ ಅಂಗಾಂಗದ ಮಾದರಿಯನ್ನು ಪರೀಕ್ಷೆಗಾಗಿ ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿತ್ತು. ತಜ್ಞ ವೈದ್ಯರಿಂದ ಎಲ್ಲ ರೀತಿಯಿಂದಲೂ ಚಿಕಿತ್ಸೆ ನೀಡಲಾಗಿತ್ತು. ಉತ್ತಮವಾಗಿ ಸ್ಪಂದಿಸುತ್ತಿತ್ತು. ಆದರೆ, ಭಾನುವಾರ ಸಂಜೆ

ಮೈಸೂರು ದಸರಾದಲ್ಲಿ ಚಿನ್ನದ ಅಂಬಾರಿ ಹೊತ್ತಿದ್ದ ‘ಬಲರಾಮ’ ಇನ್ನಿಲ್ಲ Read More »

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ

ಸಮಗ್ರ ನ್ಯೂಸ್: ಮೇ 8 ರಂದು ಆಮ್ ಆದ್ಮಿ ಪಾರ್ಟಿಯ ವತಿಯಿಂದ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿಬೃಹತ್ ವಾಹನ ಜಾಥಾ ಹಾಗೂ ರೋಡ್ ಶೋ ನಡೆಯಲಿದೆ. ಸಂಪಾಜೆ ಯಿಂದ ಜಾಥಾ ಪ್ರಾರಂಭವಾಗಿ ಕಲ್ಲುಗುಂಡಿ, ಅರಂತೋಡು, ಸುಳ್ಯ, ಪೈಚಾರು,ಸೋಣಂಗೇರಿ, ಗುತ್ತಿಗಾರು, ಸುಬ್ರಹ್ಮಣ್ಯ, ಕಡಬ, ಆಲಂಕಾರು,ಕಡಬ, ಪಂಜ, ನಿಂತಿಕಲ್ಲು, ಕಾಣಿಯೂರು, ಬೆಳಂದೂರು,ಸವಣೂರು, ಪೆರುವಾಜೆ, ಬೆಳ್ತಾರೆ, ಐವರ್ನಾಡು ಸೋಣಂಗೇರಿ, ಜಾಲ್ಸೂರು ನಿಂದ ಸುಳ್ಯಕ್ಕೆ ತೆರಳಲಿದೆ ಎಂದು ತಿಳಿಸಿದ್ದಾರೆ.

ಸುಳ್ಯ: ಆಮ್ ಆದ್ಮಿ ಪಾರ್ಟಿ ವತಿಯಿಂದ ನಾಳೆ (ಮೇ.8) ಬೃಹತ್ ರೋಡ್ ಶೋ Read More »