ಕರಾವಳಿ

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿಬಂದ ಆನೆಯ ಮೃತದೇಹ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರ ನದಿಯ ನೆರೆ ನೀರಿನಲ್ಲಿ ಆನೆ ಮೃತದೇಹ ತೇಲಿಬಂದ ಘಟನೆ ಸೋಮವಾರ ತಡರಾತ್ರಿ ವರದಿಯಾಗಿದೆ. ನಿರಂತರ ಮಳೆಯಿಂದ ತುಂಬಿ ಹರಿಯುತ್ತಿರುವ ನೀರಿನ ಮಟ್ಟವನ್ನು ವೀಕ್ಷಣೆಗೆ ಸೋಮವಾರ ತಡ ರಾತ್ರಿ ಮನ್ಮಥ ಬಟ್ಟೋಡಿ ಮತ್ತಿತರರು ತೆರಳಿದ್ದ ವೇಳೆ ನೆರೆ ನೀರಿನಲ್ಲಿ ತೇಲಿಬರುತ್ತಿರುವುದು ಕಂಡುಬಂದಿದ್ದು ಸೂಕ್ಷ್ಮವಾಗಿ ಗಮನಿಸಿದಾಗ ಆನೆ ಮೃತದೇಹ ಎಂಬುದು ಗೊತ್ತಾಗಿದೆ. ಆನೆ ಕೆಲದಿನಗಳ ಹಿಂದೆಯೇ ಎಲ್ಲೋ ಸತ್ತು ಈ ಭಾಗಕ್ಕೆ ತೇಲಿ ಬಂದಿರುವ ಶಂಕೆ ವ್ಯಕ್ತವಾಗಿದೆ. ಆನೆ ಮೃತದೇಹ ನೀರಿನಲ್ಲಿ ಕೊಚ್ಚಿ […]

ಕುಕ್ಕೆ ಸುಬ್ರಹ್ಮಣ್ಯ: ಕುಮಾರಧಾರ ನದಿಯಲ್ಲಿ ತೇಲಿಬಂದ ಆನೆಯ ಮೃತದೇಹ Read More »

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸ್ಥಳಾಂತರಗೊಂಡು ಶುಭಾರಂಭ

ಸಮಗ್ರ ನ್ಯೂಸ್:ಅಂಜಲಿ ಮೊಂಟೆಸ್ಸರಿ ಸ್ಕೂಲ್ ನಗರ ಮಾದರಿಯ ಉತ್ತಮ ಶಿಕ್ಷಣ ಪದ್ಧತಿ ಸ್ಥಳಾಂತರಗೊಂಡು ಅಂಬೆಟಡ್ಕ ಆರ್ಯುವೇದ ಕಾಲೇಜು ಮುಂಭಾಗ ಅಡ್ಕಾರ್ ಆರ್ಕೆಡ್ ನಲ್ಲಿ ಶುಭಾರಂಭಗೊಂಡಿದೆ. ಮೊಂಟೆಸ್ಸರಿ ಪದ್ಧತಿಗೆ ಅನುಗುಣವಾದ ಕಲಿಕೆಗೆ ಪೂಕರವಾದ ಕಲಿಕಾ ಸಾಮಾಗ್ರಿಗಳೊಂದಿಗೆ ಸುಸಜ್ಜಿತವಾದ ಪತ್ಯೇಕ ತರಗತಿ ಕೊಠಡಿಯಿರುವ ಸಂಸ್ಥೆ Play group, Pre kg, Lkg, Ukg, 1 ರಿಂದ 10 ತರಗತಿವರೆಗೆ ಕೋಚಿಂಗ್ ಕ್ಲಾಸ್, ಡ್ರಾಯಿಂಗ್ ಸಂಗೀತ, ಸ್ಪೋಕನ್ ಇಂಗ್ಲಿಷ್ ತರಗತಿ ನೀಡಲು ಸುಸಜ್ಜಿತವಾದ ಅವಕಾಶ ಕಲ್ಪಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: +91

ಸುಳ್ಯ: ಅಂಜಲಿ ಮೊಂಟೆಸ್ಸರಿ ಸ್ಕೂಲ್ ಸ್ಥಳಾಂತರಗೊಂಡು ಶುಭಾರಂಭ Read More »

ಭಾರೀ ಮಳೆ ಹಿನ್ನಲೆ|ಉಡುಪಿ ಜಿಲ್ಲೆಯಲ್ಲಿನಾಳೆ(ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ

ಸಮಗ್ರ ನ್ಯೂಸ್: ಉಡುಪಿ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು ಮುಂದುವರೆಸಿ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ.

ಭಾರೀ ಮಳೆ ಹಿನ್ನಲೆ|ಉಡುಪಿ ಜಿಲ್ಲೆಯಲ್ಲಿನಾಳೆ(ಜು.16) ಶಾಲೆ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Read More »

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ‌ ಮುಂದುವರೆದಿದೆ. ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 16-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ , ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ , ಪದವಿ ಪೂರ್ವ ಕಾಲೇಜುಗಳಿಗೆ ಜು.16ರಂದು ರಜೆಯನ್ನು

ಕರಾವಳಿಯಲ್ಲಿ ಮುಂದುವರಿದ ವರ್ಷಧಾರೆ| ದ.ಕ ಜಿಲ್ಲೆಯಲ್ಲಿ ನಾಳೆ(ಜು.16) ಕೂಡಾ ಶಾಲೆ, ಪಿಯು ಕಾಲೇಜುಗಳಿಗೆ ರಜೆ ಮುಂದುವರಿಕೆ Read More »

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಯುವಕ‌ ಬಲಿ

ಸಮಗ್ರ ನ್ಯೂಸ್: ವಿದ್ಯುತ್ ಶಾಕ್ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದಲ್ಲಿ ಜು.15ರ ಸೋಮವಾರ ನಡೆದಿದೆ. ಇಳಂತಿಲ ಗ್ರಾಮದ ಗೋಳಿದಡಿ ತಿಮ್ಮಪ್ಪಗೌಡ ಎಂಬವರ ಪುತ್ರ ಹರೀಶ್ ಗೌಡ(35) ಎಂಬಾತ ಸಾವನ್ನಪ್ಪಿದ ಯುವಕ. ತಮ್ಮ ಮನೆಯ ಸಮೀಪವೇ ವಿದ್ಯುತ್ ಆಘಾತಕ್ಕೆ ಒಳಗಾಗಿದ್ದು ಇವರನ್ನು ಕೂಡಲೇ ಆಸ್ಪತ್ರೆಗೆ ಕೊಂಡೊಯ್ದರೂ ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರು ಎನ್ನಲಾಗಿದೆ. ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಈ ದುರ್ಘಟನೆಯಿಂದ ತಾಲೂಕಿನಲ್ಲಿ ಈ ಮಳೆ‌ಗಾಲ

ಬೆಳ್ತಂಗಡಿ: ವಿದ್ಯುತ್ ಶಾಕ್ ಗೆ ಯುವಕ‌ ಬಲಿ Read More »

ಭಾರತೀಯ ಸೇನೆಯಿಂದ ಮಹಿಳೆಯರಿಗೆ ಬೈಕ್ ರ್‍ಯಾಲಿ| ಸುಳ್ಯದ ವೃಷ್ಟಿ ಮಲ್ಕಜೆ ಆಯ್ಕೆ

ಸಮಗ್ರ ವಾರ್ತೆ: ಕಾರ್ಗಿಲ್‌ ವಿಜಯ ದಿನದ ಗೌರವಾರ್ಥ ಭಾರತೀಯ ಸೇನೆಯು 25 ಮಹಿಳೆಯರ ಆಲ್‌ವುಮೆನ್‌ ಬೈಕ್‌ ರ್‍ಯಾಲಿ ಆಯೋಜಿಸಿದ್ದು, 2000 ಕಿ.ಮೀ. ಮಾರ್ಗದ ಈ ರ್‍ಯಾಲಿಯಲ್ಲಿ ಕರ್ನಾಟಕದಿಂದ ಪಾಲ್ಗೊಂಡಿದ್ದ ಇಬ್ಬರಲ್ಲಿ ಸುಳ್ಯ ತಾಲೂಕಿನ ಪಂಜ ಸಮೀಪದ ವೃಷ್ಟಿ ಮಲ್ಕಜೆ ಕೂಡ ಸೇರಿದ್ದಾರೆ. ಇವರು ಪುತ್ತೂರು ಹಾಗೂ ಸುಳ್ಯದಲ್ಲಿ ನ್ಯಾಯವಾದಿಯಾಗಿರುವ ಪುರುಷೋತ್ತಮ ಮಲ್ಕಜೆ ಹಾಗೂ ಉಷಾ ಮಲ್ಕಜೆ ದಂಪತಿಯ ಪುತ್ರಿ. ಜು.4ರಂದು ಹಿಮಾಚಲ ಪ್ರದೇಶದ ಲೇಹ್‌ನಿಂದ ಆರಂಭಗೊಂಡ ರ್‍ಯಾಲಿ ಲಡಾಕ್‌ನ ವಿವಿಧ ಸ್ಥಳಗಳ ಮೂಲಕ ಕಾರ್ಗಿಲ್‌ ಹುತಾತ್ಮರ ಸ್ಮಾರಕಕ್ಕೆ

ಭಾರತೀಯ ಸೇನೆಯಿಂದ ಮಹಿಳೆಯರಿಗೆ ಬೈಕ್ ರ್‍ಯಾಲಿ| ಸುಳ್ಯದ ವೃಷ್ಟಿ ಮಲ್ಕಜೆ ಆಯ್ಕೆ Read More »

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ‌ ಘೋಷಣೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಿನಾಂಕ 15-7-2024 ರಂದು ರೆಡ್ ಅಲರ್ಟ್ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ ,ಸರಕಾರಿ ಅನುದಾನಿತ ಮತ್ತು ಖಾಸಗಿ ,ಪ್ರಾಥಮಿಕ ಪ್ರೌಢಶಾಲೆ ,ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ

ಭಾರೀ ಮಳೆ ಹಿನ್ನೆಲೆ| ದ.ಕ ಜಿಲ್ಲೆಯಾದ್ಯಂತ ಶಾಲೆ, ಪಿಯು ಕಾಲೇಜುಗಳಿಗೆ ಇಂದು (ಜು.15) ರಜೆ‌ ಘೋಷಣೆ Read More »

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿಯೊಬ್ಬರು ಶನಿವಾರ ಮೃತಪಟ್ಟಿದ್ದಾರೆ. ಇದರಿಂದ ಡೆಂಗ್ಯೂಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಂದು ಸಾವಾಗಿದೆ. ಪುತ್ತೂರು ತಾಲೂಕು ಪಡ್ನೂರಿನ ಯತೀಶ್ (50) ಮೃತರು. ಮೂಲತಃ ಬಂಟ್ವಾಳ ತಾಲೂಕಿನ ಶಂಭೂರು ನಿವಾಸಿಯಾದ ಯತೀಶ್ ಅವರಿಗೆ ಜುಲೈ 10ರಂದು ಜ್ವರ ಕಾಣಿಸಿಕೊಂಡಿತು. ವಿಪರೀತ ಜ್ವರದ ಹಿನ್ನೆಲೆಯಲ್ಲಿ ಅವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮಂಗಳೂರಿನ ಖಾಸಗಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಂಕಿತ ಡೆಂಗ್ಯೂಗೆ ವ್ಯಕ್ತಿ ಬಲಿ Read More »

ಕರಾವಳಿಯಲ್ಲಿ ಭಾರೀ ಮಳೆ‌ ಹಿನ್ನೆಲೆ|ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ

ಸಮಗ್ರ ನ್ಯೂಸ್: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮುಂದಿನ 2 ದಿನಗಳ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು, ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ ಜುಲೈ 14 ಹಾಗೂ 15ರಂದು ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಇದೇ ಜಿಲ್ಲೆಗಳಿಗೆ ಜುಲೈ 16, 17ರಂದು ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಧಾರವಾಡ, ಕಲಬುರಗಿ, ಯಾದಗಿರಿ ಜಿಲ್ಲೆಗಳಲ್ಲಿ ಜುಲೈ17ರ ವರೆಗೆ ಭಾರಿ ಮಳೆಯಾಗುವ ಸಾಧ್ಯತೆಗಳಿದ್ದು,

ಕರಾವಳಿಯಲ್ಲಿ ಭಾರೀ ಮಳೆ‌ ಹಿನ್ನೆಲೆ|ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಣೆ Read More »

ಉಪ್ಪಿನಂಗಡಿ: ಕೇರಳ‌ ಲಾಟರಿಯಲ್ಲಿ ಕೋಟಿ ಬಹುಮಾನ ವದಂತಿ| ಫೋನ್ ಕರೆಗಳಿಂದ ಟೈಲರ್ ಸುಸ್ತೋಸುಸ್ತು

ಸಮಗ್ರ ನ್ಯೂಸ್: ಕೇರಳ ರಾಜ್ಯ ಲಾಟರಿಯ ಒಂದು ಕೋಟಿ ರೂಪಾಯಿ ಬಹುಮಾನವು ಇಲ್ಲಿನ ಟೈಲರ್‌ ಒಬ್ಬರಿಗೆ ಒಲಿದಿದೆ ಎಂಬ ಸುದ್ದಿ ಹರಡಿ ಅಭಿನಂದನೆಯ ಕರೆ, ಸಹಾಯ ಯಾಚನೆಯ ಕರೆಗೆ ಟೈಲರ್‌ ಹೈರಾಣಾಗುವಂತಾಗಿದೆ. ಪುತ್ತೂರು ತಾಲೂಕು ಉಪ್ಪಿನಂಗಡಿಯ ರಥಬೀದಿಯಲ್ಲಿರುವ ಗಣಪತಿ ಮಠದ ಬಳಿಯಲ್ಲಿ ಟೈಲರ್‌ ವೃತ್ತಿ ಮಾಡಿಕೊಂಡಿರುವ ಕೂಸಪ್ಪ ಅವರಿಗೆ ಒಂದು ಕೋಟಿ ರೂಪಾಯಿ ಒಲಿದಿದೆ ಎಂಬ ಸುದ್ದಿ ಕೆಲವು ದಿನಗಳಿಂದ ಹರಿದಾಡುತ್ತಿತ್ತು. ಮಾತ್ರವಲ್ಲದೆ ಅದರಲ್ಲಿ 30 ಲಕ್ಷ ರೂಪಾಯಿ ತೆರಿಗೆ ನೆಲೆಯಲ್ಲಿ ಕಡಿತಗೊಂಡು 70 ಲಕ್ಷ ರೂಪಾಯಿ

ಉಪ್ಪಿನಂಗಡಿ: ಕೇರಳ‌ ಲಾಟರಿಯಲ್ಲಿ ಕೋಟಿ ಬಹುಮಾನ ವದಂತಿ| ಫೋನ್ ಕರೆಗಳಿಂದ ಟೈಲರ್ ಸುಸ್ತೋಸುಸ್ತು Read More »