ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ
ಸಮಗ್ರ ನ್ಯೂಸ್:ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆಯಾಗುತ್ತಿದ್ದು, ಇದರ ಪರಿಣಾಮ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ನಲ್ಲಿ ಗುಡ್ಡ ಕುಸಿತವಾಗಿದೆ. ಮತ್ತೊಂದೆಡೆ ಮಳೆ ನೀರು ರಸ್ತೆಯ ಮೇಲೆ ನದಿಯಂತೆ ಹರಿಯುತ್ತಿದೆ. ಆಗಾಗ ಸುರಿಯುತ್ತಿರುವ ಮಳೆಯ ಮಧ್ಯೆ ಎರಡು ಜೆಸಿಬಿ ಇಂದ ಮಣ್ಣಿನ ತೆರವಿಕೆ ಮಾಡಲಾಗಿದೆ.ರಸ್ತೆ ಬದಿ ಗುಂಡಿಗಳ ನಿರ್ಮಾಣ ತಾತ್ಕಾಲಿಕವಾಗಿ ಮಣ್ಣಿನಿಂದ ಮುಚ್ಚಲ್ಪಟ್ಟಿತ್ತು. ಅಧಿಕಾರಿಗಳು ಪ್ರಯಾಣಿಕರು ಎಚ್ಚರಿಕೆಯಿಂದ ವಾಹನ ಚಲಾಯಿಸುವಂತೆ ಮನವಿ ನೀಡಿದ್ದಾರೆ.
ಚಾರ್ಮಾಡಿ ಘಾಟ್ ನಲ್ಲಿ ಭಾರಿ ಮಳೆ ಹಿನ್ನೆಲೆ ಗುಡ್ಡ ಕುಸಿತ Read More »










