ಕರಾವಳಿ

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು

ಸಮಗ್ರ ನ್ಯೂಸ್: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಪುಟ್ಟ ಕಂದಮ್ಮ ಆಸ್ಪತ್ರೆಯಲ್ಲಿ ಅಸು ನೀಗಿದ ಘಟನೆ ಮಾ.22ರ ರಾತ್ರಿ ಸಂಭವಿಸಿದೆ. ಮೃತಪಟ್ಟ ಕಂದಮ್ಮನನ್ನು ಸುಳ್ಯ ಬೋರುಗುಡ್ಡೆ ನಿವಾಸಿ ಮುನಾಫರ್ ಶಾ ರ ಮಗಳು ಆಯಿಷಾ ಮಿಝಾ(3) ಎಂದು ಗುರುತಿಸಲಾಗಿದೆ. ಹೃದಯ ಸಂಬಂಧಿತ ಅನಾರೋಗ್ಯದಿಂದ ಬೆಂಗಳೂರು ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ನಿನ್ನೆ ಶುಕ್ರವಾರ ರಾತ್ರಿ ಚಿಕಿತ್ಸೆಗೆ ಸ್ಪಂದಿಸದೇ ಮಗು ಮೃತಪಟ್ಟಿದೆ. ಪವಿತ್ರ ಈದುಲ್ ಫಿತ್ರ್ ಹಬ್ಬದ ಸಂಭ್ರಮದಲ್ಲಿದ್ದ ಕುಟುಂಬದಲ್ಲೀಗ ಶೋಕ ಆವರಿಸಿದೆ.

ಸುಳ್ಯ: ಅನಾರೋಗ್ಯ ಹಿನ್ನೆಲೆ ಮೂರು ವರ್ಷದ ಕಂದಮ್ಮ ಮೃತ್ಯು Read More »

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ

Samagra news: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ನವವಿವಾಹಿತೆಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿಯಿಂದ ವರದಿಯಾಗಿದೆ. ಇಂದಬೆಟ್ಟು ಗ್ರಾಮದ ಕೊಪ್ಪದಕೋಡಿ ನಿವಾಸಿ ದೇವಕಿಯವರ ಪುತ್ರಿ ಕೌಶಲ್ಯ ಮೃತಪಟ್ಟ ನವವಿವಾಹಿತೆ. ಇನ್ನು ಕೌಶಲ್ಯ ಅವರು ಇತ್ತೀಚೆಗಷ್ಟೇ ನೆರೆಯ ಸೂರ್ಯಬೆಟ್ಟು ನಿವಾಸಿ ಜೊತೆ ಪ್ರೀತಿಸಿ ಮದುವೆಯಾಗಿದ್ದರು. ಎರಡು ದಿನಗಳ ಹಿಂದೆ ವಿಷ ಸೇವಿಸಿದ್ದ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ. ಆತ್ಮ ಹತ್ಯೆಗೆ ನಿಖರ ಕಾರಣ

ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ Read More »

ಸುಳ್ಯ: ಪತ್ರಕರ್ತ ದಿ.ರವಿರಾಜ್ ವಳಲಂಬೆ ಪುತ್ರಿಯರಿಬ್ಬರಿಗೆ ಡಿಸ್ಟಿಂಕ್ಷನ್

ಸಮಗ್ರ ನ್ಯೂಸ್: ಖ್ಯಾತ ಪತ್ರಕರ್ತ ಹಾಗೂ ಅಂಕಣಕಾರರಾಗಿ ಹೆಸರುವಾಸಿಯಾಗಿದ್ದ ಸುಳ್ಯ ತಾ. ಗುತ್ತಿಗಾರಿನ ದಿ.ರವಿರಾಜ್ ವಳಲಂಬೆಯವರ ಅವಳಿ ಹೆಣ್ಣು ಮಕ್ಕಳಿಬ್ಬರು ವಿಶೇಷ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಖ್ಯಾತ ಪತ್ರಕರ್ತ ದಿ.ರವಿರಾಜ್ ವಳಲಂಬೆ ಅವರ ಅವಳಿ ಪುತ್ರಿಯರು ಉತ್ತಮ ಅಂಕಗಳನ್ನು ಪಡೆದು ಕೀರ್ತಿ ತಂದಿದ್ದಾರೆ. ಉಡುಪಿಯ ವಿದ್ಯೋದಯ ಪಿ.ಯು.ಕಾಲೇಜಿನ ವಿದ್ಯಾರ್ಥಿನಿಯರಾದ ಸಂಜನಾ ಎಂ.ಆರ್. 568 ಅಂಕ ( ಶೇ.94 ) ಹಾಗೂ ಸಿಂಚನಾ ಎಂ.ಆರ್. 571 ಅಂಕ ( ಶೇ.95 ) ಗಳಿಸಿ ಡಿಸ್ಟಿಂಕ್ಷನ್ ನಲ್ಲಿ

ಸುಳ್ಯ: ಪತ್ರಕರ್ತ ದಿ.ರವಿರಾಜ್ ವಳಲಂಬೆ ಪುತ್ರಿಯರಿಬ್ಬರಿಗೆ ಡಿಸ್ಟಿಂಕ್ಷನ್ Read More »

ಪುತ್ತೂರು: ಪಿಯು ಪರೀಕ್ಷೆ ಬರೆದ ಗ್ರಾಮ ಪಂಚಾಯತ್‌ ಅಧ್ಯಕ್ಷೆ|ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ

ಸಮಗ್ರ ನ್ಯೂಸ್: ಪುತ್ತೂರು ಪಾಣಾಜೆ ಗ್ರಾಮ ಪಂಚಾಯತ್‌ ಅಧ್ಯಕ್ಷೆ ದ್ವಿತೀಯ ಪಿಯು ಪರೀಕ್ಷೆಯನ್ನು ಖಾಸಗಿಯಾಗಿ ಬರೆದು 421 ಅಂಕಗಳೊಂದಿಗೆ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಗ್ರಾ. ಪಂ. ಅಧ್ಯಕ್ಷೆಯಾದ ಭಾರತಿ ಭಟ್‌ 24 ವರ್ಷಗಳ ಬಳಿಕ ದ್ವಿತೀಯ ಪಿಯು ಪರೀಕ್ಷೆಯನ್ನು ಬರೆದಿದ್ದಾರೆ ಇನ್ನೂ ಇವರು ಕಳೆದ ಬಾರಿ ಎಸೆಸೆಲ್ಸಿ ಪರೀಕ್ಷೆಯನ್ನು ಖಾಸಗಿಯಾಗಿ ಬರೆದು ದ್ವಿತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದರು. ಬಡ ಕುಟುಂಬದಲ್ಲಿ ಜನಿಸಿದ್ದ ಭಾರತಿ 1997-98ರಲ್ಲಿ 8ನೇ ತರಗತಿ ತೇರ್ಗಡೆ ಹೊಂದಿದ್ದು, ತಂದೆಯ ವಿಯೋಗದಿಂದಾಗಿ ವಿದ್ಯಾಭ್ಯಾಸ ಮುಂದುವರಿಸಲಾಗಲಿಲ್ಲ. ಅನಂತರ ವೆಂಕಟ್ರಮಣ

ಪುತ್ತೂರು: ಪಿಯು ಪರೀಕ್ಷೆ ಬರೆದ ಗ್ರಾಮ ಪಂಚಾಯತ್‌ ಅಧ್ಯಕ್ಷೆ|ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣ Read More »

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವಿದ್ಯಾರ್ಥಿನಿ ಅನನ್ಯಾ ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ಆಳ್ವಾಸ್ ಕಾಲೇಜಿನ ಅನನ್ಯಾ 600 ಕ್ಕೆ 600 ಅಂಕ ಪಡೆದುಕೊಂಡಿದ್ದು, ಅವರಿಗೆ ಆಳ್ವಾಸ್ ಶಿಕ್ಷಣ ಸಂಸ್ಥೆಯಿಂದ ಮೂರು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು. ಅವರ ಮುಂದಿನ ಶಿಕ್ಷಣವನ್ನು ಸಂಸ್ಥೆಯಿಂದ ಉಚಿತವಾಗಿ ನೀಡಲಾಗುವುದು ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ತಿಳಿಸಿದ್ದಾರೆ. ಕೊಡಗಿನ ಕುಶಾಲನಗರದ

ರಾಜ್ಯದ ಟಾಪರ್ ಅನನ್ಯಾಗೆ ಮೂರು ಲಕ್ಷ ನಗದು ಹಾಗೂ ಉಚಿತ ಶಿಕ್ಷಣ – ಮೋಹನ್ ಆಳ್ವಾ Read More »

ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ| ಓರ್ವ ಸಾವು; ಈದ್ ಸಂಭ್ರಮದ ಮನೆಯಲ್ಲಿ ಸೂತಕ

ಸಮಗ್ರ ನ್ಯೂಸ್: ಭೀಕರ ರಸ್ತೆ ಅಪಘಾತಕ್ಕೆ ವ್ಯಕ್ತಿಯೋರ್ವರು ಬಲಿಯಾದ ಘಟನೆ ಉಪ್ಪಿನಂಗಡಿ ಸಮೀಪದ ಕಲ್ಲೇರಿಯಲ್ಲಿ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಇಲ್ಲಿನ ಕಳಂಜಿಬೈಲ್ ನಿವಾಸಿ ಜಾಫರ್ (35) ಎಂದು ಗುರುತಿಸಲಾಗಿದೆ. ಈದುಲ್ ಫಿತರ್ ಸಂಭ್ರಮದಲ್ಲಿ ನೆಂಟರಿಷ್ಟರ ಮನೆಗೆ ತನ್ನೆರೆಡು ಮಕ್ಕಳ ಜತೆ ತೆರಳುತ್ತಿದ್ದ ಜಾಫರ್ ರವರ ಸ್ಕ್ಯೂಟರ್ ಗೆ ಎದುರಿನಿಂದ ಬಂದ ಕಾರೊಂದು ಢಿಕ್ಕಿ ಹೊಡೆದಿದ್ದು ಅಪಘಾತದ ರಭಸಕ್ಕೆ ಜಾಫರ್ ರವರ ಸ್ಕೂಟರ್ ಪೊದೆಗೆ ಹೋಗಿ ಬಿದ್ದಿದ್ದು ಜಾಫರ್ ರವರು ಸ್ಥಳದಲ್ಲೇ ಅಸು ನೀಗಿದ್ದಾರೆ. ಮಕ್ಕಳಿಗೆ ಗಂಭೀರ

ಉಪ್ಪಿನಂಗಡಿ‌ ಬಳಿಯ ಕಲ್ಲೇರಿಯಲ್ಲಿ ಭೀಕರ ರಸ್ತೆ ಅಪಘಾತ| ಓರ್ವ ಸಾವು; ಈದ್ ಸಂಭ್ರಮದ ಮನೆಯಲ್ಲಿ ಸೂತಕ Read More »

ಹವಾಮಾನ ವರದಿ: ರಾಜ್ಯಾದ್ಯಂತ ಎರಡು ದಿನ ಗುಡುಗು ಸಹಿತ ಮಳೆ‌ ಸಂಭವ

ಸಮಗ್ರ ನ್ಯೂಸ್: ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಇಂದು ಮತ್ತು ನಾಳೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಧಾರವಾಡ, ಹಾವೇರಿಯಲ್ಲಿ ಸಾಧಾರಣ ಮಳೆ ಇರಲಿದೆ. ಗದಗ, ಕೊಪ್ಪಳ, ವಿಜಯಪುರದಲ್ಲಿ ಒಣಹವೆ ಇರಲಿದೆ. ಕಲಬುರಗಿ, ರಾಯಚೂರು, ಯಾದಗಿರಿಗಳಲ್ಲಿ ಹಗುರಮಳೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಳ್ಳಾರಿಯಲ್ಲಿ ಗುಡುಗು ಮಿಂಚು ಸಹಿತ ಹಗುರ ಸಾಧಾರಣ ಮಳೆ ಇರಲಿದೆ. ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರದಲ್ಲಿ ಸಾಮಾನ್ಯ ಮಳೆ, ಚಾಮರಾಜನಗರದಲ್ಲಿ ಹಗುರ ಸಾಧಾರಣ ಮಳೆ

ಹವಾಮಾನ ವರದಿ: ರಾಜ್ಯಾದ್ಯಂತ ಎರಡು ದಿನ ಗುಡುಗು ಸಹಿತ ಮಳೆ‌ ಸಂಭವ Read More »

ಬೆಳ್ತಂಗಡಿ: ಪಿಯುಸಿ ಅಂಕದಲ್ಲೂ ಸಮಾನತೆ ಕಾಯ್ದುಕೊಂಡ ಅವಳಿ ಸಹೋದರಿಯರು!!

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನ ನೆರಿಯ ಗ್ರಾಮದ ಪುಣ್ಕೆದಡಿಯ ಅವಳಿ ಸಹೋದರಿಯರು ಸಮಾನ (ಶೇಕಡಾ 99%)ಅಂಕ ಪಡೆದು ವಿಶೇಷ ಸಾಧನೆ ಮಾಡಿ ರಾಜ್ಯದ ಗಮನ ಸೆಳೆದಿದ್ದಾರೆ. ಇಲ್ಲಿನ ಉಮೇಶ್ ಗೌಡ ಪಿ ಹೆಚ್ ‌ಮತ್ತು ಗೀತಾ ದಂಪತಿಗಳ ಅವಳಿ ಮಕ್ಕಳಾದ ಸ್ಪಂದನಾ ಮತ್ತು ಸ್ಪರ್ಷಾ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ (ವಾಣಿಜ್ಯ ವಿಭಾಗದಲ್ಲಿ ) ಇಬ್ಬರೂ 600 ರಲ್ಲಿ 594 ಸಮಾನ (ಶೇಕಡಾ 99%)ಅಂಕ ಪಡೆದಿದ್ದಾರೆ. ಎಸ್ ಡಿ ಎಂ‌ ಕಾಲೇಜಿನ‌ ವಿದ್ಯಾರ್ಥಿಗಳಾಗಿರುವ ಇವರ ಸಾಧನೆಗೆ ಪೋಷಕರು, ಕಾಲೇಜು

ಬೆಳ್ತಂಗಡಿ: ಪಿಯುಸಿ ಅಂಕದಲ್ಲೂ ಸಮಾನತೆ ಕಾಯ್ದುಕೊಂಡ ಅವಳಿ ಸಹೋದರಿಯರು!! Read More »

ಪಿಯುಸಿ ಪರೀಕ್ಷಾ ಇತಿಹಾಸದಲ್ಲೇ ದಾಖಲೆ ಬರೆದ ಆಳ್ವಾಸ್ ಕಾಲೇಜು| ರಾಜ್ಯದ ಟಾಪ್ 10 ಸ್ಥಾನದಲ್ಲಿ 47 ವಿಧ್ಯಾರ್ಥಿಗಳು

ಸಮಗ್ರ ನ್ಯೂಸ್: ರಾಜ್ಯ ಪದವಿ ಪೂರ್ವ ಶಿಕ್ಷಣದ ಇತಿಹಾಸದಲ್ಲೇ ಆಳ್ವಾಸ್ ಪದವಿ ಪೂರ್ವ ಕಾಲೇಜು ದಾಖಲೆ ಸೃಷ್ಟಿಸಿದ್ದು, ಕಾಲೇಜಿನ ದ್ವಿತೀಯ ಪಿಯುಸಿಯ ವಾಣಿಜ್ಯ ವಿಭಾಗದ ಅನನ್ಯಾ ಕೆ. ಎ. 600ಕ್ಕೆ 600 ಅಂಕ ಪಡೆದಿದ್ದಾಳೆ. ಪರೀಕ್ಷೆಗೆ ಹಾಜರಾದ 2658 ವಿದ್ಯಾರ್ಥಿಗಳಲ್ಲಿ 2651 ವಿದ್ಯಾರ್ಥಿಗಳು ಉತ್ತೀರ್ಣರಾಗಿ, ವಿಜ್ಞಾನ ವಿಭಾಗದಲ್ಲಿ 11 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 35 ವಿದ್ಯಾರ್ಥಿಗಳು ಕಲಾ ವಿಭಾಗದಲ್ಲಿ ಓರ್ವ ವಿದ್ಯಾರ್ಥಿನಿ ಸೇರಿದಂತೆ ಕಾಲೇಜಿನ ಒಟ್ಟು 47 ವಿದ್ಯಾರ್ಥಿಗಳು ರಾಜ್ಯದ ಟಾಪ್ 10ರ ಒಳಗೆ ಸ್ಥಾನಗಳನ್ನು ಪಡೆಯುವ

ಪಿಯುಸಿ ಪರೀಕ್ಷಾ ಇತಿಹಾಸದಲ್ಲೇ ದಾಖಲೆ ಬರೆದ ಆಳ್ವಾಸ್ ಕಾಲೇಜು| ರಾಜ್ಯದ ಟಾಪ್ 10 ಸ್ಥಾನದಲ್ಲಿ 47 ವಿಧ್ಯಾರ್ಥಿಗಳು Read More »

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಜಿ.ಕೃಷ್ಣಪ್ಪ ಅವರ ಪರವಾಗಿ ಭರ್ಜರಿ ಚುನಾವಣಾ ಪ್ರಚಾರಕ್ಕೆ ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಚುನಾವಾ ಪ್ರಚಾರ ಸಮಿತಿ ಸಿದ್ಧತೆ ನಡೆಸಿದೆ. ಚುನಾವಣಾ ಪ್ರಚಾರಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದು ಬಂದಿದೆ. ಮಲ್ಲಿಕಾರ್ಜುನ ಖರ್ಗೆ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವ ಜಿ.ಕೃಷ್ಣಪ್ಪ ಅವರ ಚುನಾವಣಾ ಪ್ರಚಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ತಾರಾ ಪ್ರಚಾರಕರನ್ನು ಕರೆ ತರುವ ಬಗ್ಗೆ ಚರ್ಚೆ

ಸುಳ್ಯ ಕಾಂಗ್ರೆಸ್ ಗೆ ಹೈಕಮಾಂಡ್ ಬಲ| ಪ್ರಚಾರಕ್ಕೆ ಬರಲಿದ್ದಾರೆ‌ ಎಐಸಿಸಿ ಅಧ್ಯಕ್ಷ ಖರ್ಗೆ Read More »