ಕರಾವಳಿ

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ

ಸಮಗ್ರ ನ್ಯೂಸ್: ರಾಜ್ಯ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಪಕ್ಷವು ಈಗಾಗಲೇ ಅಭ್ಯರ್ಥಿಗಳ ಎರಡು ಪಟ್ಟಿ ಬಿಡುಗಡೆ ಮಾಡಿದೆ. ದಕ್ಷಿಣ ಕನ್ನಡ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಿಗೆ ಇನ್ನು ಹೆಸರು ಘೋಷಣೆಯಾಗಿಲ್ಲ. ಆದರೆ ಇದೀಗ ಪುತ್ತೂರು ಕ್ಷೇತ್ರದ ಟಿಕೆಟ್ ಹಂಚಿಕೆ ಫೈನಲ್ ಆಗಿದೆ ಎಂದು ವರದಿಯಾಗಿದೆ. ಪುತ್ತೂರಿನಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೆಸರು ಅಧಿಕೃತವಾಗಿದೆ ಎಂದು ವರದಿಯಾಗಿದೆ. ಈ ಬಗ್ಗೆ ಪಕ್ಷದ ಮೂಲಗಳು ಖಚಿತಪಡಿಸಿವೆ. ಕಾಂಗ್ರೆಸ್ ನಿಂದ ಹಲವಾರು ಮಂದಿ ಟಿಕೆಟ್

ಪುತ್ತೂರು ಕಾಂಗ್ರೆಸ್ ಅಭ್ಯರ್ಥಿಯಾಗಿ ಅಶೋಕ್ ಕುಮಾರ್ ರೈ| ಅಧಿಕೃತ ಘೋಷಣೆ‌ ಮಾತ್ರ ಬಾಕಿ Read More »

ಸುಳ್ಯ: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು

ಸಮಗ್ರ ನ್ಯೂಸ್: ತೆಂಗಿನ ಮರದಿಂದ ತೆಂಗಿನಕಾಯಿ ಕೀಳುವ ಸಂದರ್ಭದಲ್ಲಿ ಕಾರ್ಮಿಕನೋರ್ವ ಮರದಿಂದ ಬಿದ್ದು ಸಾವನ್ನಪ್ಪಿದ ಘಟನೆ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ‌ ಬೊಳ್ಳಾಜೆ‌ ಎಂಬಲ್ಲಿ ನಡೆದಿದೆ. ಇಲ್ಲಿನ ನಾರ್ಣಕಜೆ ದಿ|ಕುಂಞ ಎಂಬವರ ಪುತ್ರ ಹರೀಶ (29 ವರ್ಷ) ಎಂಬವರೇ ಮೃತ ವ್ಯಕ್ತಿ. ಹರೀಶ್ ಇಂದು ಬೆಳಿಗ್ಗೆ ನೆಲ್ಲೂರು ಕೆಮ್ರಾಜೆಯ ಬೊಳ್ಳಾಜೆ ಬಳಿಯ ಕಂದೂರು ಸಚಿನ್‌ ಕೆ ಎಸ್ ಎಂಬವರ ಜಾಗದಲ್ಲಿ ತೆಂಗಿನ ತೆಗೆಯಲು ಈ ಜಾಗವನ್ನು ನೋಡಿಕೊಳ್ಳುತ್ತಿದ್ದ ಮನಮೋಹನ ಕೆ ಎಂಬವರು ತೆಂಗಿನ ಕಾಯಿ ತೆಗೆಯಲು

ಸುಳ್ಯ: ತೆಂಗಿನ ಮರದಿಂದ ಬಿದ್ದು ಕಾರ್ಮಿಕ ಸಾವು Read More »

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್

Samagra news: ಪುತ್ತೂರಿನ ಶಾಸಕರ ಜೊತೆ ಪೋಟೋ ವೈರಲ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಹಿಳೆಯೊಬ್ಬರು ಬೆದರಿಕೆ ಹಾಕಿದ ಧ್ವನಿಯೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಉಪ್ಪಿನಂಗಡಿಯ ವಾಟ್ಸಾಪ್ ಗ್ರೂಪ್ ನಲ್ಲಿ ಈ ಆಡಿಯೋ ವೈರಲ್ ಆಗಿದ್ದು ಪೋಟೋ ಶೇರ್ ಮಾಡಿದ್ದಕ್ಕೆ ಗರಂಗೊಂಡ ಮಹಿಳೆ ಅದೇ ಗ್ರೂಪ್ ನಲ್ಲಿ ಆಡಿಯೋ ಬಿಟ್ಟಿದ್ದಾರೆ ಎನ್ನಲಾಗಿದೆ. ಇವನು ಹಾಗೂ ಇವನ ಹೆಂಡತಿ ಮದುವೆ ಆಗುವ ಮುಂಚೆನೇ ಒಂದು ಲಾಡ್ಚ್ ನಲ್ಲಿ ಊರಿನವರ ಕೈಗೆ ಸಿಕ್ಕಿ ಬಿದ್ದಿದಾರೆ. ಅದು ಎಲ್ಲರ ಗಮನಕ್ಕೂ ಬಂದಿದೆ. ಈಡೀ

ಪುತ್ತೂರು: ಶಾಸಕರ ಜೊತೆ ಪೋಟೋ ವೈರಲ್ ಬೆನ್ನಲ್ಲೇ ಮಹಿಳೆಯ ಬೆದರಿಕೆ ಧ್ವನಿ ವೈರಲ್ Read More »

ಮಂಗಳೂರು: ಸ್ವಂತ ಅಂಗಡಿಯೊಳಗೆ ಟೈಲರ್ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಂಗಳೂರಿನ ತೊಕ್ಕೊಟ್ಟು ಜಂಕ್ಷನ್‌ನಲ್ಲಿರುವ ಥ್ರೆಡ್ ಹೌಸ್ ಮಳಿಗೆಯ ಮಾಲಕ ಅಂಗಡಿಯೊಳಗೆ ನೇಣು ಬಿಗಿದು ಆತ್ಮಹತ್ಯೆ ಘಟನೆ ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಮೂಲತ ಸೇವಂತಿಗುಡ್ಡೆ ನಿವಾಸಿಯಾಗಿದ್ದ ಪ್ರಸ್ತುತ ಕನೀರುತೋಟದಲ್ಲಿ ವಾಸಿಸುತ್ತಿರುವ ಪ್ರವೀಣ್ ಆಳ್ವ (45) ಆತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ತೊಕ್ಕೊಟ್ಟು ಜಂಕ್ಷನ್ ಬಳಿ ಹೊಲಿಗೆ ನೂಲು ಸೇರಿದಂತೆ ಟೈಲರ್ ಅಂಗಡಿಗಳಿಗೆ ಹೊಲಿಗೆ ಸಂಬಂಧಿಸಿದ ಕಚ್ಚಾ ವಸ್ತುಗಳನ್ನು ಪೂರೈಸುವ ಥ್ರೆಡ್ ಹೌಸ್ ಅಂಗಡಿಯನ್ಬು ಕಳೆದ ಏಳೆಂಟು ವರ್ಷಗಳಿಂದ ನಡೆಸುತ್ತಿದ್ದರು. ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಅವರು‌ ಬೆಳಗ್ಗೆ 6.30ಕ್ಕೆ

ಮಂಗಳೂರು: ಸ್ವಂತ ಅಂಗಡಿಯೊಳಗೆ ಟೈಲರ್ ಆತ್ಮಹತ್ಯೆ Read More »

Sullia:10 ವರ್ಷಗಳನ್ನು ಪೂರೈಸಿದ ಕುಂಕುಂ… ಫ್ಯಾಶನ್

Samagra news: ಸುಳ್ಯದ ಹೆಸರಾಂತ ವಸ್ತ್ರ ಮಳಿಗೆ ಕುಂಕುಂ… ಫ್ಯಾಶನ್(Kumkum fashion sullia) ಸುಳ್ಯದಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಇದೀಗ 10 ವರ್ಷಗಳನ್ನು ಪೂರೈಸಿ ಸಂಸ್ಥೆ ನವೀಕರಣಗೊಂಡಿದ್ದು, ಇದರ ಶುಭಾರಂಭ ಕಾರ್ಯಕ್ರಮ ಮಾ.10ರಂದು ನಡೆಯಿತು. ಈ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಗಿರೀಶ್ ಭಾರದ್ವಾಜ್ ಸಂಸ್ಥೆಯನ್ನು ಉದ್ಘಾಟಿಸಿ ಶುಭಹಾರೈಸಿ, ಕುಂಕುಂ ಫ್ಯಾಷನ್ ಇಂದು ತಾಲೂಕಿನಲ್ಲಿ ಎಲ್ಲರ ಅಚ್ಚು ಮೆಚ್ಚಿನ ಮಳಿಗೆಯಾಗಿದೆ ಎಂದರು. ಕುಂಕುಂ ಫ್ಯಾಷನ್ ವಸ್ತ್ರ ಮಳಿಗೆಯು ದಶಕಗಳಿಂದಗ್ರಾಹಕರ ಅಚ್ಚುಮೆಚ್ಚಿನ ವಸ್ತ್ರ ಮಳಿಗೆಯಾಗಿ ಹೆಸರು ಪಡೆದುಕೊಂಡಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ

Sullia:10 ವರ್ಷಗಳನ್ನು ಪೂರೈಸಿದ ಕುಂಕುಂ… ಫ್ಯಾಶನ್ Read More »

ಸುಳ್ಯ: ಕಾಂಗ್ರೆಸ್ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಂದಕುಮಾರ್ ಕಣಕ್ಕೆ| ಸ್ವಾಭಿಮಾನಿ ಕಾಂಗ್ರೆಸ್ ಸಮಾವೇಶದಲ್ಲಿ ನಿರ್ಧಾರ

ಸಮಗ್ರ ನ್ಯೂಸ್: ಸುಳ್ಯ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೇಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದ್ದ ಬೆನ್ನಲ್ಲೇ ಅಸಮಾದಾನಿತ ಗೊಂಡಿರುವ ಕಾರ್ಯಕರ್ತರು, ಕೆಪಿಸಿಸಿ ಸದಸ್ಯ, ಹಾಗೂ ಕಡಬ ಬ್ಲಾಕ್ ಉಸ್ತುವಾರಿಯಾಗಿದ್ದ ಹೆಚ್.ಎಂ.ನಂದಕುಮಾರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಬೇಕು ಎಂದು ಒತ್ತಾಯಿಸಿ ನಂದಕುಮಾರ್ ಅಭಿಮಾನಿ ಕಾಂಗ್ರೆಸ್ ಕಾರ್ಯಕರ್ತರು ಬಾರೀ ವಿರೋಧ ಹೊರಹಾಕಿದ್ದಾರೆ. ಇದರ ಮುಂದುವರಿದ ಭಾಗವಾಗಿ ಇಂದು ನಿಂತಿಕಲ್ಲಿನಲ್ಲಿ ನಡೆದ ಸ್ವಾಭಿಮಾನಿ ಸಮಾವೇಶದಲ್ಲಿ ನಂದಕುಮಾರ್ ಗೆ ಬಿ ಫಾರಂ ನೀಡದಿದ್ದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ನಿರ್ಧರಿಸಲಾಗಿದೆ. ರಾಜ್ಯದ ಪ್ರಮುಖ ಕಾಂಗ್ರೇಸ್

ಸುಳ್ಯ: ಕಾಂಗ್ರೆಸ್ ಬಿ ಫಾರಂ ನೀಡದಿದ್ದರೆ ಪಕ್ಷೇತರ ಅಭ್ಯರ್ಥಿಯಾಗಿ ನಂದಕುಮಾರ್ ಕಣಕ್ಕೆ| ಸ್ವಾಭಿಮಾನಿ ಕಾಂಗ್ರೆಸ್ ಸಮಾವೇಶದಲ್ಲಿ ನಿರ್ಧಾರ Read More »

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ

ಸಮಗ್ರ ನ್ಯೂಸ್: ಶನಿವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದ ಬಿ.ಸಿ.ರೋಡ್ ಸಮೀಪದ ಮಿತ್ತಬೈಲಿನ ಬಾಲಕನ ಮೃತದೇಹ ಶನಿವಾರ ತಡರಾತ್ರಿ ಕಳ್ಳಿಗೆ ಗ್ರಾಮದ ಕುಪ್ಪಿಲ ಎಂಬಲ್ಲಿ ಕೆರೆಯಲ್ಲಿ ಪತ್ತೆಯಾಗಿದೆ. ಸ್ಥಳೀಯ ನಿವಾಸಿ ಅಬ್ದುಲ್ ರಝಾಕ್ ಎಂಬವರ ಪುತ್ರ, ಬಿ.ಸಿ.ರೋಡಿನ ಖಾಸಗಿ ಆಂಗ್ಲ ಮಾಧ್ಯಮ ಶಾಲಾ 8ನೇ ತರಗತಿ ವಿದ್ಯಾರ್ಥಿ ಅಝೀಂ (13) ಮೃತ ಬಾಲಕ. ಬಾಲಕ ಶನಿವಾರ ಮಧ್ಯಾಹ್ನ ಪಾಣೆಮಂಗಳೂರಿನಲ್ಲಿರುವ ಅಜ್ಜಿ ಮನೆಗೆ ಬಂದಿದ್ದ. ಅಲ್ಲಿ ತನ್ನ ಸ್ನೇಹಿತರೊಂದಿಗೆ ಇದ್ದ ಬಾಲಕನನ್ನು ಸ್ಥಳೀಯರು ಗಮನಿಸಿದ್ದರು ಎನ್ನಲಾಗಿದೆ. ಆದರೆ ಮಧ್ಯಾಹ್ನದ ಬಳಿಕ ಬಾಲಕ

ಬಂಟ್ವಾಳ: ನಾಪತ್ತೆಯಾಗಿದ್ದ ಬಾಲಕ ಶವವಾಗಿ ಪತ್ತೆ Read More »

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿಪ್ರಿಯಾ-ವಸಿಷ್ಟ ಸಿಂಹ ದಂಪತಿ ಭೇಟಿ

ಸಮಗ್ರ ನ್ಯೂಸ್: ಇತ್ತೀಚೆಗಷ್ಟೇ ವೈವಾಹಿಕ ಜೀವನಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನ ವಸಿಷ್ಠ ಸಿಂಹ ಹಾಗೂ ಹರಿಪ್ರಿಯಾ ಜೋಡಿ ಕುಕ್ಕೆ ಸುಬ್ರಮಣ್ಯಕ್ಕೆ ಭೇಟಿ ನೀಡಿದರು. ಕ್ಷೇತ್ರಕ್ಕೆ ಭೇಟಿ ನೀಡಿದ ಅವರು ಸುಬ್ರಮಣ್ಯ ದೇವರ ದರ್ಶನ ಪಡೆದ ದಂಪತಿ ಬಳಿಕ ತುಲಾಭಾರ ಸೇವೆ ಮಾಡಿಸಿದರು. ಈ ವೇಳೆ ದೇಗುಲದ ಆಡಳಿತ ಮಂಡಳಿ ವತಿಯಿಂದ ದಂಪತಿಯನ್ನು ಸನ್ಮಾನಿಸಲಾಯಿತು.

ಕುಕ್ಕೆ ಸುಬ್ರಹ್ಮಣ್ಯಕ್ಕೆ ಹರಿಪ್ರಿಯಾ-ವಸಿಷ್ಟ ಸಿಂಹ ದಂಪತಿ ಭೇಟಿ Read More »

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು

ಸಮಗ್ರ ನ್ಯೂಸ್: ಸುಳ್ಯ ತಾಲೂಕಿನ ಅರಂತೋಡು ಗ್ರಾಮದ ಅಡ್ತಲೆ ಎಂಬಲ್ಲಿ ಹಲವು ವರ್ಷಗಳಿಂದ ನೀರಿನ ಸಮಸ್ಯೆ ಉಂಟಾಗುತ್ತಿದ್ದು ಈ ಬಗ್ಗೆ ಸ್ಥಳೀಯ ಗ್ರಾಮ ಪಂಚಾಯತ್ ಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ಪ್ರಯೋಜನ ವಾಗಿಲ್ಲ, ಈ ಕಾರಣ ಗ್ರಾಮಸ್ಥರು ಜಿಲ್ಲಾಧಿಕಾರಿಯ ಸಹಾಯ ಪಡೆಯಲು ಮುಂದಾಗಿದ್ದಾರೆ. ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ್ದು, ಅಡ್ತಲೆಯಲ್ಲಿ ಸುಮಾರು 15 ವರ್ಷಗಳ ಹಿಂದೆ ಟ್ಯಾಂಕ್ ನಿರ್ಮಾಣ ಆಗಿದ್ದು, ಇದಕ್ಕೆ ಸಾಕಷ್ಟು ನೀರು ಇರುವ ಬೋರ್ ನಿರ್ಮಾಣ ಆಗಿ ಪೈಪ್ ಲೈನ್

ಸುಳ್ಯ: ನೀರಿಗಾಗಿ ರಾತ್ರಿ ಹಗಲು ಪರದಾಟ|ಸಹಕರಿಸದ ಪಂಚಾಯತ್, ಡಿ.ಸಿ ಸಹಾಯ ಪಡೆಯಲು ಮುಂದಾದ ಅಡ್ತಲೆ ಗ್ರಾಮಸ್ಥರು Read More »

ಎ.09: ಗೆಲ್ಲುವ ಅಭ್ಯರ್ಥಿಗಾಗಿ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಸಮಾವೇಶ| ನಿಂತಿಕಲ್ಲಿನಲ್ಲಿ‌ ನಂದಕುಮಾರ್ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಸುಳ್ಯ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೇಟ್ ಆಕಾಂಕ್ಷಿಯಾಗಿದ್ದ ನಂದ ಕುಮಾರ್ ಅವರಿಗೆ ಟಿಕೇಟ್ ಕೈ ತಪ್ಪಿರುವ ಹಿನ್ನಲೆಯಲ್ಲಿ ನಂದಕುಮಾರ್ ಅಭಿಮಾನಿ ಬಳಗದ ವತಿಯಿಂದ ಎ.9ರಂದು ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುಳ್ಯ ವಿಧಾನ ಸಭಾ ಕ್ಷೇತ್ರದ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶ ನಿಂತಿಕಲ್ಲು ಧರ್ಮಶ್ರೀ ಆರ್ಕೇಡ್ ನಲ್ಲಿ ಎ.9ರ ಸಂಜೆ 3 ಗಂಟೆಗೆ ನಡೆಯಲಿದೆ. ಸುಳ್ಯದಲ್ಲಿ ಕಾಂಗ್ರೆಸ್ ಗೆಲುವಿಗಾಗಿ ಪ್ರಾಮಾಣಿಕ ಕಾರ್ಯಕರ್ತರ ಧ್ವನಿಯನ್ನು, ಭಾವನೆಯನ್ನು ರಾಜ್ಯ ಮತ್ತು ಕೇಂದ್ರ ವರಿಷ್ಠರಿಗೆ ತಲುಪಿಸಲು ಕಾರ್ಯಕ್ರಮ

ಎ.09: ಗೆಲ್ಲುವ ಅಭ್ಯರ್ಥಿಗಾಗಿ ಪ್ರಾಮಾಣಿಕ ಕಾಂಗ್ರೆಸ್ ಕಾರ್ಯಕರ್ತರಿಂದ ಬೃಹತ್ ಸಮಾವೇಶ| ನಿಂತಿಕಲ್ಲಿನಲ್ಲಿ‌ ನಂದಕುಮಾರ್ ಪರ ಶಕ್ತಿ ಪ್ರದರ್ಶನಕ್ಕೆ ಸಿದ್ದತೆ Read More »