ಕರಾವಳಿ

ಸುಳ್ಯ: ಕೊನೆಗೂ ಐಸಿಯುನಿಂದ ಹೊರಬಂದ ಅಂಬ್ಯುಲೆನ್ಸ್!

ಸಮಗ್ರ ನ್ಯೂಸ್: ಸರಿಯಾದ ನಿರ್ವಹಣೆ ಇಲ್ಲದೆ ‌ಸಾರ್ವಜನಿಕ ಸೇವೆಗೆಂದು ಮೀಸಲಿರಿಸಿದ್ದ ಅಂಬ್ಯುಲೆನ್ಸ್ ಶಿಥಿಲಾವಸ್ಥೆಗೊಂಡಿದ್ದು, ಸದ್ಯ ಅದನ್ನು ನವೀಕರಣಗೊಳಿಸಿ ಸಾರ್ವಜನಿಕ ಉಪಯೋಗಕ್ಕೆ ಲಭ್ಯವಾಗಿದೆ. ತಾಲೂಕಿನ ಐವರ್ನಾಡು ಜನಸ್ಪಂದನಾ ಟ್ರಸ್ಟ್ ವತಿಯಿಂದ ನೀಡಲ್ಪಟ್ಟಿದ್ದ ಅಂಬ್ಯುಲೆನ್ಸ್ ಸರಿಯಾದ ನಿರ್ವಹಣೆ ಇಲ್ಲದೆ ಪಾಳುಬಿದ್ದಿತ್ತು. ಈ ಕುರಿತಂತೆ ನಿಮ್ಮ ‘ಸಮಗ್ರ ಸಮಾಚಾರ’ ವರದಿ ಬಿತ್ತರಿಸಿದ ಬಳಿಕ ಮಾಧ್ಯಮಗಳೂ ವರದಿ ಮಾಡಿದ್ದವು. ವರದಿ ಬಳಿಕ ಎಚ್ಚೆತ್ತುಕೊಂಡ ಸ್ಥಳೀಯ ಮುಖಂಡರು ಅಂಬ್ಯುಲೆನ್ಸ್ ಅನ್ನು ದುರಸ್ತಿಗೊಳಿಸಿದ್ದು, ಮತ್ತೆ ಸಾರ್ವಜನಿಕ ಸೇವೆಗೆ ಲಭಿಸುವಂತಾಗಿದೆ. ತುರ್ತು ಸಂದರ್ಭದಲ್ಲಿ ಸಾರ್ವಜನಿಕರಿಗೆ ಉಪಯೋಗಕ್ಕೆ ಲಭಿಸಲೆಂದು

ಸುಳ್ಯ: ಕೊನೆಗೂ ಐಸಿಯುನಿಂದ ಹೊರಬಂದ ಅಂಬ್ಯುಲೆನ್ಸ್! Read More »

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಯಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್‌, ಗದಗ, ಹಾವೇರಿ, ವಿಜಯಪುರ, ಧಾರವಾಡ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಜೋರು ಮಳೆಯಾಗುವ ಸಾಧ್ಯತೆಯಿದೆ. ಶುಕ್ರವಾರ ಸಂಜೆ ವೇಳೆಗೆ ಉತ್ತರ ಒಳನಾಡು, ಕರಾವಳಿ, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಿದೆ. ಕಲಬುರಗಿ ಜಿಲ್ಲೆಯ ಕಮಲಾಪುರ, ಯಡ್ರಾಮಿ, ಬಾಗಲಕೋಟೆ ಜಿಲ್ಲೆಯ

ಹವಾಮಾ‌ನ ವರದಿ| ಕರಾವಳಿ ಮತ್ತು ಮಲೆನಾಡಿನ ಹಲವೆಡೆ ವ್ಯಾಪಕ ಮಳೆ ಸಾಧ್ಯತೆ Read More »

ಬಂಟ್ವಾಳ: ಬಹುಮುಖ ಪ್ರತಿಭೆಯ ಯಕ್ಷಗಾನ ಕಲಾವಿದ ನಿಧನ

ಸಮಗ್ರ ನ್ಯೂಸ್: ಸಸಿಹಿತ್ಲು ಮೇಳದ ಬಹುಮುಖ ಪ್ರತಿಭೆಯ ಪದವೀಧರ ಕಲಾವಿದ ನಲ್ಕ ಜಗದೀಶ(56) ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಕಳೆದ 21 ವರುಷಗಳಿಂದ ಸಸಿಹಿತ್ಲು ಮೇಳದಲ್ಲಿ ಕಥಾನಾಯಕನ ಪಾತ್ರ ನಿರ್ವಹಿಸುತಿದ್ದರು. ಪೋಷಕ ಪಾತ್ರದಲ್ಲೂ ಸೈ ಎನಿಸಿಕೊಂಡವರು ಭಗವತಿ ಮಹಾತ್ಮೆಯಲ್ಲಿ ಈಶ್ವರನ ಪಾತ್ರ ದೇವಿ ಮಹಾತ್ಮೆಯಲ್ಲಿ ವಿಷ್ಣು, ರಕ್ತಬೀಜ ಪಾತ್ರನಿರ್ವಹಿಸುತಿದ್ದರು. ಪತ್ನಿ ಹವ್ಯಾಸಿ ಯಕ್ಷಗಾನ ಕಲಾವಿದೆ ಹೇಮಾ, ಒಂದು ಹೆಣ್ಣು, ಒಂದು ಗಂಡು ಮಗುವನ್ನು ಅಗಲಿದ್ದಾರೆ. ಸಸಿಹಿತ್ಲು ಮೇಳದ ಸಂಚಾಲಕ ದಯಾನಂದ ಗುಜರನ್ ಮತ್ತು ರಾಜೇಶ್ ಗುಜರನ್, ಕಲೆ

ಬಂಟ್ವಾಳ: ಬಹುಮುಖ ಪ್ರತಿಭೆಯ ಯಕ್ಷಗಾನ ಕಲಾವಿದ ನಿಧನ Read More »

ಮಂಗಳೂರು: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ

ಸಮಗ್ರ ನ್ಯೂಸ್: ಮುಸ್ಲಿಂ ಯುವತಿ ಹಿಂದೂ ಹುಡುಗನನ್ನು ಪ್ರೀತಿಸಿ ಮದುವೆಯಾದ ಘಟನೆ ಕರಾವಳಿಯಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಧರ್ಮಕ್ಕೆ ಸೇರಿದ ಕೇರಳದ ಮಣಪ್ಪುರಂ ಮೂಲದ ಯುವತಿ ಫಿದಾ ಫಾತಿಮ ಹಿಂದೂ ಯುವಕನನ್ನು ಮದುವೆಯಾಗಿದ್ದಾಳೆ. ಹಿಂದೂ ಜಾಗರಣ ವೇದಿಕೆ ವಿಟ್ಲ ತಾಲೂಕು ಹಾಗೂ ಕಾಸರಗೋಡು ಸಂಘ ಪರಿವಾರದ ಕಾರ್ಯಕರ್ತರ ಸಹಾಯದಿಂದ ಅಂತರ್ ಧರ್ಮದ ಜೋಡಿ ಮದುವೆಯಾಗಳು ಸಹಕರಿಸಿದ್ದಾರೆ ಎನ್ನಲಾಗಿದೆ. ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಪ್ರೇಮ ಜೋಡಿ ಧರ್ಮದ ಗೋಡೆ ಒಡೆದು ತಮ್ಮ ಪ್ರೀತಿಯನ್ನು ಪರಿಪೂರ್ಣಗೊಳಿಸಿದ್ದಾರೆ. ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದಾರೆ.

ಮಂಗಳೂರು: ಹಿಂದೂ ಯುವಕನನ್ನು ಮದುವೆಯಾದ ಮುಸ್ಲಿಂ ಯುವತಿ Read More »

ಕಾಣಿಯೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್

ಸಮಗ್ರ ನ್ಯೂಸ್: ಪುತ್ತೂರು ವಿಭಾಗದ ಕೆ.ಎಸ್.ಆರ್.ಟಿ.ಸಿ ಡ್ರೈವರ್ ಮೃತದೇಹ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಪತ್ತೆಯಾದ ಘಟನೆ ಎ.7 ರಂದು ನಡೆದಿದೆ. ರಾತ್ರಿ ಕರ್ತವ್ಯದಿಂದ ಇಳಿದ ಕೆಎಸ್ಆರ್ ಟಿಸಿ ಕಂಡಕ್ಟರ್ ಕಮ್ ಡ್ರೈವರ್ ಆಗಿರುವ ಕುಸುಮಾಧರ ಗೌಡ ಅಭೀರ (34 ವ.) ಮೃತಪಟ್ಟವರು. ಸುಮಾರು 8 ವರ್ಷಗಳಿಂದ ಕೆಎಸ್ಆರ್ ಟಿಸಿ ಉದ್ಯೋಗಿಯಾಗಿದ್ದ ಮೃತರು 1 ವರ್ಷದ ಹಿಂದೆ ಮದುವೆಯಾಗಿದ್ದರು. ದುರ್ಘಟನೆ ಕಾಣಿಯೂರು ರೈಲ್ವೇ ಟ್ರ್ಯಾಕ್ ನಲ್ಲಿ ಮಧ್ಯರಾತ್ರಿ ನಡೆದಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಕಾಣಿಯೂರು: ರೈಲ್ವೆ ಟ್ರಾಕ್ ನಲ್ಲಿ ಶವವಾಗಿ ಪತ್ತೆಯಾದ ಕೆಎಸ್ಆರ್ ಟಿಸಿ‌ ಡ್ರೈವರ್ Read More »

ಮೂಲ್ಕಿ ಮೂಡಬಿದ್ರಿ ಕ್ಷೇತ್ರಕ್ಕೆ ಬಿಜೆಪಿ ಹೊಸಮುಖ?|ಸುನಿಲ್ ಆಳ್ವರಿಗೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ

ಸಮಗ್ರ ನ್ಯೂಸ್: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ಎರಡೂ ಪಕ್ಷಗಳಿಂದ ಹೊಸಮುಖಗಳನ್ನು ಕಣಕ್ಕಿಳಿಸುವ ಮೂಲಕ ವಿನೂತನ ಪ್ರಯೋಗಕ್ಕೆ ರಾಜ್ಯ ಮುಖಂಡರು ಮುಂದಾಗಿದ್ದಾರೆ. ಮೂಲ್ಕಿ ಮೂಡಬಿದ್ರೆ ಕ್ಷೇತ್ರದಲ್ಲೂ ಬಿಜೆಪಿ ಹೈಕಮಾಂಡ್ ಹೊಸಮುಖವನ್ನು ಕಣಕ್ಕಿಳಿಸಲು ಮುಂದಾಗಿದೆ ಎಂಬ ಮಾಹಿತಿ ಈ ಭಾಗದ ಕಾರ್ಯಕರ್ತರಲ್ಲಿ ಹರ್ಷಕ್ಕೆ ಕಾರಣವಾಗಿದೆ. ಹಾಲಿ ಶಾಸಕ ಉಮಾನಾಥ್ ಕೋಟ್ಯಾನ್ ಅವರು ಕಳೆದ ಅವಧಿಯಲ್ಲಿ ನಿಷ್ಠಾವಂತ ಕಾರ್ಯಕರ್ತರಿಂದ ಅಂತರ ಕಾಯ್ದುಕೊಂಡಿದ್ದಾರೆ ಎಂಬ ಆರೋಪದ ಮಧ್ಯೆ ಅರೆಸ್ಸೆಸ್ ನಿಂದ ರಾಜಕೀಯ ಪ್ರವೇಶಿಸಿರುವ ಸುನಿಲ್ ಆಳ್ವರ ಹೆಸರು ಪ್ರಬಲವಾಗಿ

ಮೂಲ್ಕಿ ಮೂಡಬಿದ್ರಿ ಕ್ಷೇತ್ರಕ್ಕೆ ಬಿಜೆಪಿ ಹೊಸಮುಖ?|ಸುನಿಲ್ ಆಳ್ವರಿಗೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಾಯ Read More »

“ಬಂಟರು ನಾಯಕತ್ವ ಗುಣದಿಂದಲೇ ಸಮಾಜದಲ್ಲಿ ಗುರುತಿಸಲ್ಪಡುತ್ತಾರೆ”-ಒಡಿಯೂರು ಶ್ರೀ|ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿ ಮೂಲ್ಕಿಯಲ್ಲಿ ಉದ್ಘಾಟನೆ

ಸಮಗ್ರ ನ್ಯೂಸ್: ಜಾಗತಿಕ ಬಂಟರ ಸಂಘಗಳ ಒಕ್ಕೂಟಇದರ ಆಡಳಿತ ಕಚೇರಿಯ ಉದ್ಘಾಟನಾ ಕಾರ್ಯಕ್ರಮ ಮೂಲ್ಕಿಯ ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಆಶೀರ್ವಚನಗೈದು ಮಾತಾಡಿದ ಒಡಿಯೂರು ಗುರುದೇವ ದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮೀಜಿಯವರು, “ಬಂಟರು ಸಂಘಟನೆಯಾದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿಯಬಹುದು. ವ್ಯಕ್ತಿ ಯಾವತ್ತೂ ಮೇಲಲ್ಲ ಸಂಘಟನೆ ಮೇಲು. ಸಂಘಟನೆ ಗಟ್ಟಿಯಾದಲ್ಲಿ ವ್ಯಕ್ತಿ ಮತ್ತು ಸಮಾಜ ಎರಡೂ ಬೆಳೆಯುತ್ತದೆ. ಬಂಟರು ಎಲ್ಲಾ ಕ್ಷೇತ್ರದಲ್ಲೂ ಇಂದು ಬೆಳೆಯುತ್ತಿದ್ದಾರೆ. ಸಂಪತ್ತು ಮಾತ್ರವಲ್ಲ ಒಳ್ಳೆಯ

“ಬಂಟರು ನಾಯಕತ್ವ ಗುಣದಿಂದಲೇ ಸಮಾಜದಲ್ಲಿ ಗುರುತಿಸಲ್ಪಡುತ್ತಾರೆ”-ಒಡಿಯೂರು ಶ್ರೀ|ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಕಚೇರಿ ಮೂಲ್ಕಿಯಲ್ಲಿ ಉದ್ಘಾಟನೆ Read More »

ನಂದಿನಿಗೆ ಸೆಡ್ಡು ಹೊಡೆದು ಅಮುಲ್ ನಿಂದ ಹಾಲು ಮತ್ತು ಉತ್ಪನ್ನಗಳ ಮಾರಾಟ| ಕನ್ನಡಿಗರಿಂದ ಆಕ್ರೋಶ

ಸಮಗ್ರ ನ್ಯೂಸ್: ನಂದಿನಿ ಬ್ರಾಂಡ್ ಮೂಲಕ ಹಾಲು ಮತ್ತು ಹಾಲಿನ ಉತ್ಪನ್ನಗಳ ಮಾರಾಟ ಮಾಡುತ್ತಿರುವ ಕೆಎಂಎಫ್ ಗೆ ಸೆಡ್ಡು ಹೊಡೆಯಲು ಗುಜರಾತ್ ಮೂಲದ ಅಮುಲ್ ಮುಂದಾಗಿದೆ.ಆನ್ಲೈನ್ ಮೂಲಕ ಹಾಲು, ಮೊಸರು ವಿತರಣೆಗೆ ಗುಜಾರಾತ್ ನ ಅಮೂಲ್ ಸಜ್ಜಾಗಿದೆ. ಇದರ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸಿದ್ದು, ಸೇವ್ ನಂದಿನಿ ಅಭಿಯಾನ ಆರಂಭಿಸಿದ್ದಾರೆ. ಗೋ ಬ್ಯಾಕ್ ಅಮುಲ್ ಅಭಿಯಾನ ಆರಂಭಿಸಿರುವ ಕನ್ನಡಿಗರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಾಯ್ಕಾಟ್ ಅಮುಲ್ ಸೇವ್ ನಂದಿನಿ ಹ್ಯಾಶ್ ಟ್ಯಾಗ್ ನೊಂದಿಗೆ ಅಭಿಯಾನ ಆರಂಭಿಸಲಾಗಿದೆ. ಅಮುಲ್

ನಂದಿನಿಗೆ ಸೆಡ್ಡು ಹೊಡೆದು ಅಮುಲ್ ನಿಂದ ಹಾಲು ಮತ್ತು ಉತ್ಪನ್ನಗಳ ಮಾರಾಟ| ಕನ್ನಡಿಗರಿಂದ ಆಕ್ರೋಶ Read More »

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು

ಸಮಗ್ರ ನ್ಯೂಸ್: ದ್ವಿಚಕ್ರದಿಂದ ಬಿದ್ದು ಮಹಿಳೆಯೊಬ್ಬರು ಸಾವನಪ್ಪಿದ ಘಟನೆ ಕಟೀಲು ಸಮೀಪದ ಕಲ್ಲಕುಮೇರು ಬಳಿ ಸಂಭವಿಸಿದೆ. ಮೃತ ಮಹಿಳೆಯನ್ನು ಕಾರ್ಕಳದ ಈದು ಗ್ರಾಮದ ಮಮತಾ ಶೆಟ್ಟಿ (35) ಎಂದು ಗುರುತಿಸಲಾಗಿದೆ. ಕಾರ್ಕಳದಿಂದ ಕಟೀಲಿಗೆ ತನ್ನ ಪತಿಯ ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸಂದರ್ಭ ಕಲ್ಲಕುಮೇರು ಬಳಿ ಹಂಪ್ಸ್ ಗಮನಿಸದ ಪತಿ ಒಂದೇ ವೇಗದಲ್ಲಿ ಬರುತ್ತಿದ್ದರು ಎನ್ನಲಾಗಿದೆ. ಇನ್ನು ಅವೈಜ್ಞಾನಿಕ ಕಂಪ್ಸ್ ಬಗ್ಗೆ ಸಾರ್ವಜನಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮಂಗಳೂರು: ದ್ವಿಚಕ್ರ ವಾಹನದಿಂದ ಬಿದ್ದು ಮಹಿಳೆ ಸಾವು Read More »

ಪುತ್ತೂರು: ಶಾಸಕ ಮಠಂದೂರು ವಿರುದ್ದ ಮಾನಹಾನಿಕರ ಲೇಖನ ಪ್ರಕಟಿಸದಂತೆ ತಡೆಯಾಜ್ಞೆ

ಸಮಗ್ರ ನ್ಯೂಸ್ : ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮಗಳಲ್ಲಿ ತನ್ನ ಕುರಿತು ಯಾವುದೇ ಮಾನಹಾನಿಕರ ಲೇಖನಗಳನ್ನು ಪ್ರಕಟಿಸದಂತೆ ಶಾಸಕ ಸಂಜೀವ ಮಠಂದೂರು ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದಾರೆ. ಮುದ್ರಣ, ವಿದ್ಯುನ್ಮಾನ ಮತ್ತು ಡಿಜಿಟಲ್ ಮಾಧ್ಯಮದಲ್ಲಿ ತನ್ನ ಕುರಿತು ಮಾನಹಾನಿಕರ ವರದಿ ಪ್ರಸಾರ ಮಾಡುವುದು, ವೆಬ್ ಹೋಸ್ಟಿಂಗ್ ಮತ್ತು ಹಂಚಿಕೊಳ್ಳುವುದನ್ನು ನಿಷೇಧಿಸಲು ಶಾಶ್ವತ ತಡೆಯಾಜ್ಞೆ ನೀಡುವಂತೆ ಶಾಸಕ ಸಂಜೀವ ಮಠಂದೂರು ಅವರು ಬೆಂಗಳೂರು ಸಿಟಿ ಸಿವಿಲ್ ಕೋರ್ಟಿನಲ್ಲಿ ಮೊಕದ್ದಮೆ ದಾಖಲಿಸಿದ್ದರು. ನಾನು ವಿಧಾನಸಭಾ ಸದಸ್ಯನಾಗಿದ್ದೇನೆ ಮತ್ತು ಚುನಾವಣೆ ಹತ್ತಿರದಲ್ಲಿದೆ.

ಪುತ್ತೂರು: ಶಾಸಕ ಮಠಂದೂರು ವಿರುದ್ದ ಮಾನಹಾನಿಕರ ಲೇಖನ ಪ್ರಕಟಿಸದಂತೆ ತಡೆಯಾಜ್ಞೆ Read More »