ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ
ಸಮಗ್ರ ನ್ಯೂಸ್: ಮಂಗಳೂರು ನಗರದ ಹೊರವಲಯದ ಅಡ್ಯಾರ್ ಸಹ್ಯಾದ್ರಿ ಕಾಲೇಜ್ ಬಳಿ ಬಿಎಂಡಬ್ಲ್ಯೂ ಕಾರೊಂದು ಹೊತ್ತಿ ಉರಿದು ಸಂಪೂರ್ಣ ಭಸ್ಮವಾದ ಘಟನೆ ಇಂದು(ಸೆ.28) ಮಧ್ಯಾಹ್ನ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಕಾರಿಗೆ ಬೆಂಕಿ ಹೊತ್ತಿಕೊಂಡಿದೆ ಎನ್ನಲಾಗುತ್ತಿದ್ದು, ಕಾರಿನಲ್ಲಿ ಹೊಗೆ ಕಾಣಿಸಿಕೊಂಡ ಕೂಡಲೇ ಚಾಲಕ ಕಾರಿನಿಂದ ಕೆಳಗಿಳಿದಿದ್ದಾರೆ ಎಂದು ತಿಳಿದು ಬಂದಿದೆ. ದೆಹಲಿ ನೋಂದಾಯಿತ ಬಿಎಂಡಬ್ಲ್ಯೂ ಕಾರು ಅರ್ಧಗಂಟೆಯಿಂದ ಹೊತ್ತಿ ಉರಿಯುತ್ತಿದ್ದು, ಸಂಪೂರ್ಣ ಭಸ್ಮವಾಗಿದೆ.
ಮಂಗಳೂರು: ಸಹ್ಯಾದ್ರಿ ಕಾಲೇಜು ಬಳಿ ಹೊತ್ತಿ ಉರಿದ ಬಿಎಂಡಬ್ಲ್ಯೂ Read More »









