ಕರಾವಳಿ

ಕಾಂಗ್ರೆಸ್ ಮುಖಂಡ ಮಿಥುನ್ ರೈ ಗೆ ಕೊಲೆ ಬೆದರಿಕೆ; ದೂರು ದಾಖಲು

ಸಮಗ್ರ ನ್ಯೂಸ್: ಕಾಂಗ್ರೆಸ್ ಮುಖಂಡ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಮುಲ್ಕಿ -ಮೂಡುಬಿದಿರೆ ಕ್ಷೇತ್ರದ ಚುನಾವಣೆ ಉಸ್ತುವಾರಿಯಾಗಿರುವ ಮಿಥುನ್ ರೈಯವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೊಲೆ ಬೆದರಿಕೆ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ದೂರು ದಾಖಲಿಸಿದೆ. ಜೈ ಶ್ರೀ ರಾಮ್ ಎಂಬ ಹೆಸರಿನ ವಾಟ್ಸ್ ಆ್ಯಪ್ ಗ್ರೂಪ್ ನಲ್ಲಿ ಹನಿ ಹಿಂದೂಸ್ತಾನಿ ಮುಂಬೈ ಎಂಬ ಹೆಸರಿನಲ್ಲಿ “ಮಿಥುನ್ ರೈಯವರಿಗೆ ಗುಂಡಿನೂಟ ಮಾಡಿಸುತ್ತೇನೆ” ಎಂಬ ಸಂದೇಶದೊಂದಿಗೆ ಕೊಲೆ ಬೆದರಿಕೆ ಪೋಸ್ಟ್ ಒಂದನ್ನು ಹಾಕಲಾಗಿದೆ

ಕಾಂಗ್ರೆಸ್ ಮುಖಂಡ ಮಿಥುನ್ ರೈ ಗೆ ಕೊಲೆ ಬೆದರಿಕೆ; ದೂರು ದಾಖಲು Read More »

ಮೂಡುಬಿದಿರೆ: ಶಂಕಿತ ಡೆಂಗ್ಯೂಗೆ ಪಿಯುಸಿ ವಿದ್ಯಾರ್ಥಿನಿ ಬಲಿ

ಸಮಗ್ರ ನ್ಯೂಸ್: ಶಂಕಿತ ಡೆಂಗ್ಯೂ ಜ್ವರಕ್ಕೆ ಪ್ರಥಮ ಪಿಯುಸಿ ಓದುತ್ತಿರುವ ವಿಧ್ಯಾರ್ಥಿನಿ ಸಾವನಪ್ಪಿರುವ ಘಟನೆ ಮೂಡಬಿದಿರೆಯಿಂದ ವರದಿಯಾಗಿದೆ. ಪುರಸಭೆ ವ್ಯಾಪ್ತಿಯ ಜ್ಯೋತಿನಗರ ನಿವಾಸಿ, ಪ್ರಥಮ ಪಿಯುಸಿ ವಿದ್ಯಾರ್ಥಿನಿ ಮಿಸ್ರಿಯಾ (17) ಮೃತ ವಿದ್ಯಾರ್ಥಿನಿ.ಇವರಿಗೆ ಬಿಳಿ ರಕ್ತ ಕಣಗಳ ಕುಸಿತ ಕಂಡುಬಂದಿರುವುದರಿಂದ ಸಾವು ಸಂಭವಿಸಿದ್ದು, ಇದು ಡೆಂಗ್ಯೂ ಪ್ರಕರಣ ಎಂದು ಶಂಕಿಸಲಾಗಿದೆ. ಜ್ಯೋತಿನಗರದ ಮಯ್ಯದ್ದಿ -ರಮ್ಲಾತ್‌ ದಂಪತಿಯ ದ್ವಿತೀಯ ಪುತ್ರಿ ಮಿಸ್ರಿಯಾ ಆಳ್ವಾಸ್‌ ಪ.ಪೂ. ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದರು. ಇನ್ನು ವಿದ್ಯಾರ್ಥಿನಿಗೆ ಕೆಲವು ದಿನಗಳಿಂದ

ಮೂಡುಬಿದಿರೆ: ಶಂಕಿತ ಡೆಂಗ್ಯೂಗೆ ಪಿಯುಸಿ ವಿದ್ಯಾರ್ಥಿನಿ ಬಲಿ Read More »

ಉಪ್ಪಿನಂಗಡಿ: ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್

ಸಮಗ್ರ ನ್ಯೂಸ್: ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯೋರ್ವಳನ್ನು ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಉಪ್ಫಿನಂಗಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ಕಡಬ ತಾಲೂಕಿನ ಕೊಯಿಲ ಗ್ರಾಮದ ನಿವಾಸಿಗಳಾದ ಹಸೈನಾರ್ (24) ಹಾಗೂ ಅಬ್ಬಾಸ್ (30) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಅವರು ಕಳೆದ ಮೂರು ದಿನಗಳಿಂದ ಮರ ತುಂಡರಿಸುವ ಕೆಲಸದ ನಿಮಿತ್ತ ಕರಾಯ ಗ್ರಾಮದಲ್ಲಿ ಕಾರ್ಯ ನಿರ್ವಹಿಸಿದ್ದು, ಈ ಸಂದರ್ಭ ನೀರು ಕೇಳುವ ನೆಪದಲ್ಲಿ

ಉಪ್ಪಿನಂಗಡಿ: ಮನೆಗೆ ನುಗ್ಗಿ ಅಪ್ರಾಪ್ತ ಬಾಲಕಿಯ ಅತ್ಯಾಚಾರಕ್ಕೆ ಯತ್ನ| ಇಬ್ಬರು ಆರೋಪಿಗಳು ಅರೆಸ್ಟ್ Read More »

ಹವಾಮಾನ ವರದಿ| ಇಂದಿನಿಂದ ಐದು ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಸಿಲಿನಿಂದ ರಾಜ್ಯದ ಜನತೆ ತತ್ತರಿಸಿರುವ ಕರ್ನಾಟಕದ ಹಲವೆಡೆ, ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಕಾಣಿಸಿಕೊಂಡಿರುವ ಪರಿಣಾಮ ಮಳೆ ಆಗಲಿದೆ ಎನ್ನಲಾಗಿದ್ದು, ಮಾರ್ಚ್ 14 ರಿಂದ 18 ರ ವರೆಗೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಕೆಲವೆಡೆ, ಮಾರ್ಚ್ 16 ರಿಂದ 18 ರವರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ ಆಗಲಿದೆ ಎಂದು ತಿಳಿಸಲಾಗಿದೆ.

ಹವಾಮಾನ ವರದಿ| ಇಂದಿನಿಂದ ಐದು ದಿನ ರಾಜ್ಯದ ಹಲವೆಡೆ ಮಳೆ ಸಾಧ್ಯತೆ Read More »

ದ.ಕ ಜಿಲ್ಲಾ ಇಂಟಕ್ ಸಾರಥ್ಯವಹಿಸಿದ
ಮನೋಹರ್ ಶೆಟ್ಟಿ

ಸಮಗ್ರ ನ್ಯೂಸ್: ದ.ಕ ಜಿಲ್ಲಾ ಇಂಟಕ್ ಕಟ್ಟಿ ಬೆಳೆಸುವಲ್ಲಿ ರಾಷ್ಟ್ರೀಯ ಕಾರ್ಯದರ್ಶಿ ರಾಕೇಶ್ ಮಲ್ಲಿ ಅವರ ಜತೆ ಪ್ರಮುಖ ಪಾತ್ರ ವಹಿಸಿದ ಮನೋಹರ್ ಶೆಟ್ಟಿ ಅವರುಜಿಲ್ಲಾ ಇಂಟಕ್ ಸಾರಥ್ಯವನ್ನು ವಹಿಕೊಂಡಿದ್ದಾರೆ. ಕಳೆದ ಒಂದೆರಡು ವಾರಗಳಲ್ಲಿ ನಡೆದ ಗೊಂದಲದ ಬೆಳವಣಿಗೆಯಿಂದ ತಾತ್ಕಾಲಿಕ ಸಮಿತಿಯು ಇಂಟಕ್ಮುಖಂಡರೊಡನೆ ಚರ್ಚಿಸದೆ ಏಕಾಏಕಿ ಬದಲಾವಣೆ ಮಾಡಿತ್ತು.ಆದರೆ ರಾಕೇಶ್ ಮಲ್ಲಿ ಅವರ ತೀವ್ರ ವಿರೋಧ ಎಚ್ಚರಿಕೆಯ ಬಳಿಕ ರಾಜ್ಯ ಇಂಟಕ್ ಹಂಗಾಮಿ ಅಧ್ಯಕ್ಷಡಿ.ಲಕ್ಷ್ಮೀ ವೆಂಕಟೇಶ್ ನೇಮಕ ಆದೇಶ ನೀಡಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಸಂಜೀವರೆಡ್ಡಿ , ರಾಜ್ಯ

ದ.ಕ ಜಿಲ್ಲಾ ಇಂಟಕ್ ಸಾರಥ್ಯವಹಿಸಿದ
ಮನೋಹರ್ ಶೆಟ್ಟಿ
Read More »

ಸಂಪಾಜೆ:ವ್ಯಕ್ತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಸಂಪಾಜೆ ಗ್ರಾಮದ ಕಡೆಪಾಲ ಎಂಬಲ್ಲಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾ.13ರ ಮಧ್ಯಾಹ್ನ ವರದಿಯಾಗಿದೆ. ಕಡಪಾಲದ ಕೊರಗರವರ ಪುತ್ರ ರಾಜು(45) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಕಲ್ಲುಗುಂಡಿ ಹೊರಠಾಣಾ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಸಂಪಾಜೆ:ವ್ಯಕ್ತಿ ಆತ್ಮಹತ್ಯೆ Read More »

ಕಲ್ಲಡ್ಕ: ಕಾರಿನೊಳಗೆ ಯುವಕನ ಮೃತದೇಹ ಪತ್ತೆ

ಸಮಗ್ರ ನ್ಯೂಸ್: ಕಾರಿನೊಳಗೆ ಯುವಕನೋರ್ವ ಕುಳಿತ ಸ್ಥಿತಿಯಲ್ಲಿ ಮೃತಪಟ್ಟ ಘಟನೆ ಕಲ್ಲಡ್ಕದಲ್ಲಿ ನಡೆದಿದೆ. ಗೋಳ್ತಮಜಲು ಗ್ರಾಮದ ನಿವಾಸಿ ಜಗದೀಶ್ ಮೃತಪಟ್ಟ ಯುವಕ. ಜಗದೀಶ್ ನಿನ್ನೆ ಬೆಳಿಗ್ಗೆ ತರವಾಡು ಮನೆಗೆ ಮಕ್ಕಳ ಜೊತೆ ದೈವದ ಕಾರ್ಯಕ್ಕೆ ಹೋಗಿದ್ದರು.ವಾಪಾಸು ಮನೆಗೆ ಬರುವ ವೇಳೆ ಕಲ್ಲಡ್ಕ ಬಳಿ 2 ಗಂಟೆ ಸುಮಾರಿಗೆ ಕಾರು ಚಲಾಯಿಸಲು ಕಷ್ಟವಾಗುತ್ತಿದೆ ಎಂದು ಭಾವನಲ್ಲಿ ಹೇಳಿದ್ದು ನಾನು ಮತ್ತೆ ಮನೆಗೆ ಬರುತ್ತೇನೆ ನೀವು ‌‌ಮಕ್ಕಳ ಜೊತೆ ಮನೆಗೆ ಹೋಗಿ ಎಂದು ‌ಕಳುಹಿಸಿ ಕಾರಿನ ಸೀಟಿನಲ್ಲಿಯೇ ಮಲಗಿದ್ದರು. ಆದರೆ

ಕಲ್ಲಡ್ಕ: ಕಾರಿನೊಳಗೆ ಯುವಕನ ಮೃತದೇಹ ಪತ್ತೆ Read More »

ಮಂಗಳೂರು: ಸ್ಕೇಟಿಂಗ್ ಚಾಂಪಿಯನ್ ಆರ್ನಾ ರಾಜೇಶ್ ಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ

ಸಮಗ್ರ ನ್ಯೂಸ್:ಕಿರಿಯ ವಯಸ್ಸಿನಲ್ಲೇ ಸ್ಕೇಟಿಂಗ್ ಕ್ರೀಡೆಯಲ್ಲಿ ಅಸಾಧಾರಣ ಸಾಧನೆ ಮಾಡಿದ ಕುಮಾರಿ‌ ಆರ್ನಾ ರಾಜೇಶ್ ಗೆ ಈ ವರ್ಷದ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಕರ್ನಾಟಕ ರಾಜ್ಯ ಮಹಿಳಾ ಆಯೋಗ ಬೆಂಗಳೂರು,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ದಕ್ಷಿಣ ಕನ್ನಡ ಇದರ ವತಿಯಿಂದ 2023 ರ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಜಿಲ್ಲಾ ಮಟ್ಟದ ಮಕ್ಕಳ ಅಸಾಧಾರಣ ಪ್ರತಿಭೆ ಪ್ರಶಸ್ತಿಯನ್ನು ಸ್ಕೇಟಿಂಗ್ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಸಾಧನೆ

ಮಂಗಳೂರು: ಸ್ಕೇಟಿಂಗ್ ಚಾಂಪಿಯನ್ ಆರ್ನಾ ರಾಜೇಶ್ ಗೆ ಹೊಯ್ಸಳ, ಕೆಳದಿ ಚೆನ್ನಮ್ಮ ಪ್ರಶಸ್ತಿ Read More »

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ

ಸಮಗ್ರ ನ್ಯೂಸ್: ಸೇವಾಶಿಖರ್ ಫೌಂಡೇಶನ್ ಮಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಹಾಗೂ ಮಂಗಳೂರು ತಾಲೂಕು ಕಬಡ್ಡಿ ಅಸೋಸಿಯೇಷನ್ ಇದರ ಸಹಯೋಗದಲ್ಲಿ “ಕುಡ್ಲ ಕಬಡ್ಡಿ-2023” ಇದರ ಉದ್ಘಾಟನಾ ಸಮಾರಂಭ ಆದಿತ್ಯವಾರ ಬೆಳಗ್ಗೆ ಪಣಂಬೂರಿನ ಎನ್ಎಂಪಿಎ ಮೈದಾನದಲ್ಲಿ ಜರುಗಿತು. ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಶಾಸಕ ಡಾ. ಭರತ್ ಶೆಟ್ಟಿ ವೈ. ಅವರು ಮಾತಾಡುತ್ತಾ, “ಕಬಡ್ಡಿಯಂತಹ ದೇಶೀಯ ಕ್ರೀಡೆ ಇಂದು ಅಳಿವಿನ ಅಂಚಿನಲ್ಲಿದೆ. ಆದರೆ ಯುವಕರು ಇಂತಹ ಕ್ರೀಡೆಗಳತ್ತ ಅಕರ್ಷಿತರಗುತ್ತಿರುವುದು ಒಳ್ಳೆಯ ಬೆಳವಣಿಗೆ. ಕಬಡ್ಡಿ

“ಕಬಡ್ಡಿಯಂತಹ ದೇಶೀಯ ಕ್ರೀಡೆ ಉಳಿಸಿ ಬೆಳೆಸುವ ಹೊಣೆ ಯುವಜನರದ್ದು” -ಡಾ.ಭರತ್ ಶೆಟ್ಟಿ Read More »

ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬಿಸಿಲಿನ ತಾಪ ಮುಂದುವರೆದಿದ್ದು, ಕರಾವಳಿಯ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಉಷ್ಣ ಅಲೆ ಭೀತಿ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನಗಳಿಂದ ನಿರಂತರವಾಗಿ ರಾಜ್ಯದ ಅತಿಹೆಚ್ಚು ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಹೀಗಾಗಿ ಕಳೆದ ಗುರುವಾರ ಮತ್ತು ಶುಕ್ರವಾರ ಉಷ್ಣ ಅಲೆಯ ಎಚ್ಚರಿಕೆ ನೀಡಲಾಗಿತ್ತು. ಈ ಎಚ್ಚರಿಕೆಯನ್ನು ಶನಿವಾರಕ್ಕೂ ಮುಂದುವರಿಸಲಾಗಿದೆ. ನಿನ್ನೆ ಹೊನ್ನಾವರದಲ್ಲಿ 37.6,

ಹವಾಮಾನ ಸಮಾಚಾರ| ಇಂದೂ ಕರಾವಳಿ ಜಿಲ್ಲೆಗಳಲ್ಲಿ ಉಷ್ಣ ಅಲೆ ಭೀತಿ Read More »