ಕರಾವಳಿ

ಕಡಬ: ಆಪರೇಷನ್ ಕಾಡಾನೆ ಯಶಸ್ವಿ| ನರಹಂತಕನ ಸೆರೆಹಿಡಿದ ಅಭಿಮನ್ಯು ಪಡೆ

ಸಮಗ್ರ ನ್ಯೂಸ್: ಕಡಬ ತಾಲೂಕಿನ ರೆಂಜಿಲಾಡಿ ಗ್ರಾಮದ ನೈಲ ಎಂಬಲ್ಲಿ ಇಬ್ಬರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಸೆರೆ ಹಿಡಿಯಲು ಕಳೆದ ಮೂರು ದಿನಗಳಿಂದ ನಡೆದ ಕಾರ್ಯಾಚರಣೆ ಕೊನೆಗೂ ಯಶಸ್ಸು ಕಂಡಿದೆ. ಕಡಬ ಬಳಿಯ ಮೂಜೂರು ರಕ್ಷಿತಾರಣ್ಯದ ಕೊಂಬಾರು(ಮಂಡೆಕರ) ಎಂಬಲ್ಲಿ ಆನೆಯನ್ನು ಪತ್ತೆ ಹಚ್ಚಿ ಗನ್ ಮೂಲಕ ಆನೆಗೆ ಅರಿವಳಿಕೆ ನೀಡಲಾಗಿದೆ. ಫೆ.20 ಬೆಳಿಗ್ಗೆ ಕಾಡಾನೆ ದಾಳಿಯಿಂದ ಸ್ಥಳೀಯ ನಿವಾಸಿಗಳಾದ ರಂಜಿತಾ (21) ಮತ್ತು ರಮೇಶ್ ರೈ (52 ವ) ಮೃತಪಟ್ಟಿದ್ದರು. ಅಂದು ರಾತ್ರಿಯೇಮೈಸೂರು ದುಬಾರೆಯಿಂದ ಅಭಿಮನ್ಯು

ಕಡಬ: ಆಪರೇಷನ್ ಕಾಡಾನೆ ಯಶಸ್ವಿ| ನರಹಂತಕನ ಸೆರೆಹಿಡಿದ ಅಭಿಮನ್ಯು ಪಡೆ Read More »

ಮಂಗಳೂರು ನಗರ ಪೊಲೀಸ್ ಆಯುಕ್ತ‌ ಎನ್.ಶಶಿಕುಮಾರ್ ವರ್ಗಾವಣೆ

ಸಮಗ್ರ ನ್ಯೂಸ್: ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಎನ್.ಶಶಿಕುಮಾರ್ ಅವರನ್ನು ರೈಲ್ವೆ ಡಿಐಜಿಯಾಗಿ ತಕ್ಷಣಕ್ಕೆ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಲಾಗಿದ್ದು, ನೂತನ ಪೊಲೀಸ್ ಆಯುಕ್ತರ ಹುದ್ದೆಗೆ ಕುಲದೀಪ್ ಕುಮಾರ್ ಆರ್.ಜೈನ್ ಅವರನ್ನು ನೇಮಕ ಮಾಡಲಾಗಿದೆ. ಕುಲದೀಪ್ ಸದ್ಯ ಬೆಂಗಳೂರು ಪಶ್ಚಿಮ ಸಂಚಾರ ವಿಭಾಗದ ಡಿಸಿಪಿಯಾಗಿದ್ದಾರೆ.

ಮಂಗಳೂರು ನಗರ ಪೊಲೀಸ್ ಆಯುಕ್ತ‌ ಎನ್.ಶಶಿಕುಮಾರ್ ವರ್ಗಾವಣೆ Read More »

ಪುತ್ತೂರು: ದೇಶವಿರೋಧಿ ಚಟುವಟಿಕೆಗಳ ತಾಣವಾಗಿದ್ದ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿದ ಎನ್ಐಎ

ಸಮಗ್ರ ನ್ಯೂಸ್: ದೇಶವಿರೋಧಿ ಚಟುವಟಿಕೆ ನಡೆಸುತ್ತಿರುವ ಹಿನ್ನೆಲೆಯಲ್ಲಿ ದೇಶಾದ್ಯಂತ ಪಿಎಫ್‌ಐ ಮತ್ತು ಅದರ ಅಂಗಸಂಸ್ಥೆಗಳನ್ನು ಕೇಂದ್ರ ಸರಕಾರ ನಿಷೇಧಿಸಿದ ಬಳಿಕ ರಾಷ್ಟ್ರೀಯ ತನಿಖಾ ದಳದ ಕರಾವಳಿಯಲ್ಲಿ ನಡೆಯುತ್ತಿರುವ ಭಯೋತ್ಪಾದನಾ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಟ್ಟಿತ್ತು. ಆ ಮೂಲಕ ದೇಶ ವಿರೋಧ ಕೃತ್ಯ ನಡೆಯುವ ತಾಣಗಳಿಗೆ ಎನ್‌ಐಎ ತಂಡ ದಾಳಿ ನಡೆಸಿ ಬಿಗ್ ಶಾಕ್ ನೀಡಿತ್ತು. ಈ ಹಿನ್ನೆಲೆಯಲ್ಲಿ ಪುತ್ತೂರು ತಾಲೂಕಿನ ಕಬಕ ಸಮೀಪದ ಮಿತ್ತೂರಿನಲ್ಲಿರುವ ಫ್ರೀಡಂ ಹಾಲ್ ನಲ್ಲಿ ಉಗ್ರಗಾಮಿ ಚಟುವಟಿಕೆಗಳು ನಡೆಯುತ್ತಿದ್ದವು ಎಂಬ ಅಂಶ ಬಯಲಾಗಿದ್ದು

ಪುತ್ತೂರು: ದೇಶವಿರೋಧಿ ಚಟುವಟಿಕೆಗಳ ತಾಣವಾಗಿದ್ದ ಫ್ರೀಡಂ ಕಮ್ಯೂನಿಟಿ ಹಾಲ್ ಗೆ ಬೀಗ ಜಡಿದ ಎನ್ಐಎ Read More »

ನಾಳೆ(ಫೆ.24 )ಯಿಂದ ಕರಾವಳಿಯಾದ್ಯಂತ “ಪಿಲಿ” ಅಬ್ಬರ

ಸಮಗ್ರ ನ್ಯೂಸ್: ಫೆ. 10 ರಂದು ಬಿಡುಗಡೆಯಾಗಬೇಕಿದ್ದ ತುಳು ಚಲನಚಿತ್ರ ”ಪಿಲಿ” ಸಿನಿಮಾಕ್ಕೆ ತಡೆಯುಂಟಾಗಿದ್ದು ಇದೀಗ ಫೆ.24 ರಂದು ಮತ್ತೆ ಸಿನಿಮಾ ಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಎನ್. ಎನ್. ಎಂ.ಪ್ರೊಡಕ್ಷನ್ ಲಾಂಛನದಲ್ಲಿ ಆತ್ಮಾನಂದ ರೈ ನಿರ್ಮಾಣದ ಪಿಲಿ ತುಳು ಚಿತ್ರ ಬಿಡುಗಡೆಗೆ ತಡೆಯುಂಟಾಗಿತ್ತು. ಇದಕ್ಕೆ ತುಳುನಾಡ ರಕ್ಷಣಾ ವೇದಿಕೆ ಸ್ಥಾಪಕ ಅದ್ಯಕ್ಷ ಯೋಗಿಶ್ ಶೆಟ್ಟಿ ಜಪ್ಪು , ಸೇರಿದಂತೆ ಹಲವಾರು ತುಳುನಾಡಿನ ಗಣ್ಯರು ಕಾನೂನಾತ್ಮಕ ಹೋರಾಟ‌ ನಡೆಸಿದ್ದರ ಪರಿಣಾಮ ಪಿಲಿ ಚಿತ್ರ ಬಿಡುಗಡೆಗೆ ಎದುರಾಗಿದ್ದ ಆತಂಕ ಈಗ ನಿವಾರಣೆಯಾಗಿದೆ.‌

ನಾಳೆ(ಫೆ.24 )ಯಿಂದ ಕರಾವಳಿಯಾದ್ಯಂತ “ಪಿಲಿ” ಅಬ್ಬರ Read More »

ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ| ರಸ್ತೆ ಮದ್ಯೆ ಬೆತ್ತಲಾಗಿ ನಿಂತು ಪ್ರತಿಭಟಿಸಿದ‌ ನರ್ಸ್

ಸಮಗ್ರ ನ್ಯೂಸ್: ತಮ್ಮ ಮರು ನೇಮಕದ ಪ್ರಕ್ರಿಯೆಯಲ್ಲಿ ವಿಳಂಬ ಧೋರಣೆಯನ್ನು ಖಂಡಿಸಿ ರಾಜಸ್ಥಾನದ ರಾಜಧಾನಿ ಜೈಪುರದಲ್ಲಿ ಮಹಿಳಾ ನರ್ಸ್​ ನಡುರಸ್ತೆಯಲ್ಲೇ ನಗ್ನವಾಗಿ ಪ್ರತಿಭಟನೆ ನಡೆಸಿದ್ದಾರೆ. ಇಲ್ಲಿನ ಜೆಎಲ್‌ಎನ್ ರಸ್ತೆಯಲ್ಲಿರುವ ಎಸ್‌ಎಂಎಸ್ ವೈದ್ಯಕೀಯ ಕಾಲೇಜು ಮುಂಭಾಗದ ಬುಧವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ಈ ನರ್ಸ್​ ವಿವಸ್ತ್ರವಾಗಿ ಪ್ರತಿಭಟನೆ ನಡೆಸುತ್ತಿದ್ದರು. ಇದನ್ನು ಕಂಡ ದಾರಿಹೋಕರು ಬೆಚ್ಚಿ ಬಿದ್ದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಮಹಿಳಾ ಪೊಲೀಸರ ತಂಡ ಸ್ಥಳಕ್ಕೆ ಧಾವಿಸಿದೆ. ಮಹಿಳೆಗೆ ಬಟ್ಟೆ ಧರಿಸಿ ತನ್ನ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುವಂತೆ

ನೇಮಕಾತಿ ಪ್ರಕ್ರಿಯೆಯಲ್ಲಿ ವಿಳಂಬ| ರಸ್ತೆ ಮದ್ಯೆ ಬೆತ್ತಲಾಗಿ ನಿಂತು ಪ್ರತಿಭಟಿಸಿದ‌ ನರ್ಸ್ Read More »

ಸವಣೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು|

ಸಮಗ್ರ ನ್ಯೂಸ್: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನಲ್ಲಿ ನಡೆದಿದೆ. ಇಲ್ಲಿನ ತೊಂಡೂರು ಗ್ರಾಮದ ಹನುಮಂತಗೌಡ (55), ಲಲಿತಾ ಪಾಟೀಲ್ (50), ಮಗಳು ನೇತ್ರಾ ಪಾಟೀಲ (22) ಆತ್ಮಹತ್ಯೆಗೆ ಶರಣಾಗಿದ್ದಾರೆ. ಮೃತ ದುರ್ದೈವಿಗಳು ನಿನ್ನೆಯೇ (ಫೆ.22) ಆತ್ಮಹತ್ಯೆ ಮಾಡಿಕೊಳ್ಳಲು ನಿರ್ಧರಿಸಿದ್ದರು. ಅದಕ್ಕಾಗಿ ಮೂವರು ಮನೆಯನ್ನು ಸಹ ತೊರೆದಿದ್ದರು ಎಂಬ ಮಾಹಿತಿ ಇದೀಗ ಲಭ್ಯವಾಗಿದೆ. ಈ ವಿಷಯ ರಾಣೇಬೆನ್ನೂರು ಗ್ರಾಮೀಣ ಠಾಣೆಯ ಪಿಎಸ್‌ಐ ಮಹಾಂತೇಶ ಅವರಿಗೆ ಈ ಬಗ್ಗೆ ತಲುಪಿತ್ತು. ಸುದ್ದಿ

ಸವಣೂರು: ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು| Read More »

ಮಂಗಳೂರು: ‌ಹಿರಿಯ ಪೊಲೀಸ್ ಅಧಿಕಾರಿಯೇ ನನ್ನನ್ನು ಸೆಕ್ಸ್ ಗೆ ಆಹ್ವಾನಿಸಿದ್ದರು!| ಜಡ್ಜ್ ಮುಂದೆ ಅಳಲು ತೋಡಿಕೊಂಡ ಮಂಗಳಮುಖಿ

ಸಮಗ್ರ ನ್ಯೂಸ್: ಮಂಗಳೂರು ನಗರದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ರಾತ್ರಿ ನನ್ನನ್ನು ಲೈಂಗಿಕ ಕ್ರಿಯೆಗೆ ಆಹ್ವಾನಿಸಿದ್ದಾರೆ ಎಂದು ಮಂಗಳಮುಖಿಯೊಬ್ಬರು ನ್ಯಾಯಾಧೀಶರಿಗೆ ದೂರು ನೀಡಿದರು. ಲೈಂಗಿಕ ಅಲ್ಪಸಂಖ್ಯಾತರ ಬಗ್ಗೆ ಜಾಗೃತಿ ಮತ್ತು ಅರಿವು ಕಾರ್ಯಾಗಾರದಲ್ಲಿ ಪಾಲ್ಗೊಂಡು ಮಾತನಾಡಿದ ಮಂಗಳಮುಖಿ, “ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ನನ್ನನ್ನು ಸೆಕ್ಸ್‌ಗೆ ಆಹ್ವಾನಿಸಿದ್ದಾರೆ. ಅವರೇ ಹೀಗೆ ಮಾಡಿದರೆ, ನಾವು ಯಾರಿಗೆ ದೂರು ನೀಡುವುದು?” ಎಂದರು. ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ದ‌.ಕ.ಜಿಲ್ಲೆಯ ಸದಸ್ಯ ಕಾರ್ಯದರ್ಶಿ ಶೋಭಾ ಬಿ.ಜೆ. ಪ್ರತಿಕ್ರಿಯಿಸಿ,

ಮಂಗಳೂರು: ‌ಹಿರಿಯ ಪೊಲೀಸ್ ಅಧಿಕಾರಿಯೇ ನನ್ನನ್ನು ಸೆಕ್ಸ್ ಗೆ ಆಹ್ವಾನಿಸಿದ್ದರು!| ಜಡ್ಜ್ ಮುಂದೆ ಅಳಲು ತೋಡಿಕೊಂಡ ಮಂಗಳಮುಖಿ Read More »

ಸೋಷಿಯಲ್ ಮೀಡಿಯಾದಲ್ಲಿನ ಉದ್ಯೋಗ ಜಾಹೀರಾತು ನಂಬಿದವನಿಗೆ ದೋಖಾ| ಬಂಟ್ವಾಳದ ಯುವಕನಿಗೆ 9.79 ಲಕ್ಷ ಉಂಡೆನಾಮ

ಸಮಗ್ರ ನ್ಯೂಸ್: ಸೋಷಿಯಲ್‌ ಮೀಡಿಯಾದಲ್ಲಿ ಬರುವ ಜಾಹಿರಾತುಗಳನ್ನು ನಂಬಿ ಕೆಲಸಕ್ಕೆ ಅರ್ಜಿ ಹಾಕುವ ಹುಷಾರ್‌ ಆಗಿರುವುದು ಮುಖ್ಯವಾಗಿದೆ. ಕರಾವಳಿಯ ಯುವಕನೊಬ್ಬ ಇಂತಹ ಜಾಲಕ್ಕೆ ಬಲಿಯಾಗಿ ಲಕ್ಷಾಂತರ ಹಣವನ್ನು ಕಳೆದುಕೊಂಡ ಘಟನೆ ಬೆಳಕಿಗೆ ಬಂದಿದೆ. ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಿವಾಸಿ ಯುವನೊಬ್ಬ ವರ್ಕಫ್ರಮ್‌ ಹೋಂನಲ್ಲಿ ಕಂಪನಿಯ ಉದ್ಯೋಗದಲ್ಲಿದ್ದು, ಮತ್ತೊಂದು ಹೊಸ ಉದ್ಯೋಗ ಪಡೆಯುವ ಆಸೆಯಲ್ಲಿ ಆತ ಫೇಸ್​​ಬುಕ್ ಕಂಡ ​ ಜಾಹಿರಾತು ನಂಬಿ ಅದಕ್ಕೆ ವಾಟ್ಸ್‌ಆಪ್‌ ಮೂಲಕ ಸಂಪರ್ಕಿಸಿದ್ದಾನೆ. ಆರೋಪಿ ಕೆಲಸದ ಫಾರ್ಮ್​​ನ್ನು ತುಂಬುವಂತೆ

ಸೋಷಿಯಲ್ ಮೀಡಿಯಾದಲ್ಲಿನ ಉದ್ಯೋಗ ಜಾಹೀರಾತು ನಂಬಿದವನಿಗೆ ದೋಖಾ| ಬಂಟ್ವಾಳದ ಯುವಕನಿಗೆ 9.79 ಲಕ್ಷ ಉಂಡೆನಾಮ Read More »

ಬೆಳ್ತಂಗಡಿ: ಬಿಲ್ಲವರ ತೀವ್ರ ವಿರೋಧ| ವೇಣೂರು ಬ್ರಹ್ಮಕಲಶೋತ್ಸವದಲ್ಲಿ ರೋಹಿತ್ ಚಕ್ರತೀರ್ಥ‌ರ ಉಪನ್ಯಾಸ ರದ್ದು

ಸಮಗ್ರ ನ್ಯೂಸ್: ಬಿಲ್ಲವರ ತೀವ್ರ ವಿರೋಧದ‌ ಹಿನ್ನಲೆಯಲ್ಲಿ ಬೆಳ್ತಂಗಡಿಯ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮ ಕಲಶೋತ್ಸವ ಕಾರ್ಯಕ್ರಮಕ್ಕೆ ರೋಹಿತ್ ಚಕ್ರತೀರ್ಥರನ್ನು ಆಹ್ವಾನಿಸುವ ವಿಚಾರ ಕೈಬಿಟ್ಟಿರುವುದಾಗಿ ಅಳದಂಗಡಿ ಅರಮನೆಯ ಅರಸ ಡಾ.ಪದ್ಮಪ್ರಸಾದ ಅಜಿಲ ಅವರು ಬೆಳ್ತಂಗಡಿ ತಾಲೂಕು ಬಿಲ್ಲವ ಸಮುದಾಯದ ಮುಖಂಡರುಗಳಿಗೆ ಮಾಹಿತಿ ನೀಡಿದ್ದಾರೆನ್ನಲಾಗಿದೆ. ವಿವಾದಿತ ವ್ಯಕ್ತಿಯನ್ನು ದೇವಸ್ಥಾನದ ಬ್ರಹ್ಮಕಲಶೋತ್ಸವ ಕಾರ್ಯಕ್ರಮಕ್ಕೆ ಆಹ್ವಾನಿಸುವುದರಿಂದ ಹಿಂದೆ ಸರಿಯಲು ನಿರ್ಧರಿಸಿದ ಡಾ.ಪದ್ಮಪ್ರಸಾದ ಅಜಿಲರಿಗೆ ಕೃತಜ್ಞತೆ ಸಲ್ಲಿಸುವುದಾಗಿ ಬಿಲ್ಲವ ಸಂಘಟನೆಗಳ ಮುಖಂಡರು ತಿಳಿಸಿದ್ದಾರೆ. ಅಜಿಲ ಸೀಮೆಯ ಪಟ್ಟದ ದೇವರಾದ ವೇಣೂರು ಶ್ರೀ

ಬೆಳ್ತಂಗಡಿ: ಬಿಲ್ಲವರ ತೀವ್ರ ವಿರೋಧ| ವೇಣೂರು ಬ್ರಹ್ಮಕಲಶೋತ್ಸವದಲ್ಲಿ ರೋಹಿತ್ ಚಕ್ರತೀರ್ಥ‌ರ ಉಪನ್ಯಾಸ ರದ್ದು Read More »

ಕಾಣಿಯೂರು: ಕೌಟುಂಬಿಕ ಗಲಭೆ; ಇಬ್ಬರು ಆಸ್ಪತ್ರೆಗೆ ದಾಖಲು

ಸಮಗ್ರ ನ್ಯೂಸ್: ಪುತ್ತೂರು ತಾಲೂಕಿನ ಕಾಣಿಯೂರು ಸಮೀಪದ ಬೆಳಂದೂರಿನ ಅಮೈ ಎಂಬಲ್ಲಿ ಕುಟುಂಬದೊಳಗೆ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಇತ್ತಂಡಗಳಿಂದ ದೂರು ದಾಖಲಾಗಿದೆ. ಅಮೈ ನಿವಾಸಿ ಧರ್ಮಪಾಲ ಎಂಬವರಿಗೆ ಅವರ ಅಣ್ಣನ ಪತ್ನಿ ಹಾಗೂ ಮಗಳು ದೊಣ್ಣೆಯಿಂದ ತಲೆಗೆ ಹೊಡೆದು ನೋವುಂಟು ಮಾಡಿ ದೂಡಿ ಹಾಕಿ ನೆಲದಲ್ಲಿದ್ದ ಕಲ್ಲು ಮುಖಕ್ಕೆ ತಾಗಿ ಗುದ್ದಿರುವುದಾಗಿ ಆರೋಸಲಾಗಿದೆ. ಗಾಯಾಳು ಚಿಕಿತ್ಸೆಯ ಬಗ್ಗೆ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಾಗಿದ್ದಾರೆ. ಯಶೋದಾ ಅವರು ದೂರು ನೀಡಿ ಬೆಳಂದೂರು

ಕಾಣಿಯೂರು: ಕೌಟುಂಬಿಕ ಗಲಭೆ; ಇಬ್ಬರು ಆಸ್ಪತ್ರೆಗೆ ದಾಖಲು Read More »