ಪುತ್ತೂರು ಟೌನ್ ಕೋ-ಆಪರೇಟಿವ್ ಬ್ಯಾಂಕ್ ನಲ್ಲಿ ಭಾರೀ ಅವ್ಯವಹಾರ| ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪ
ಸಮಗ್ರ ನ್ಯೂಸ್: ಪುತ್ತೂರನ್ನು ಕೇಂದ್ರವಾಗಿರಿಸಿಕೊಂಡು ಕಾರ್ಯಾಚರಿಸುತ್ತಿರುವ ಟೌನ್ ಕೋ ಅಪರೇಟೀವ್ ಬ್ಯಾಂಕ್ ನ ಕಾರ್ಯಚಟುವಟಿಕೆಗಳಲ್ಲಿ ಅವ್ಯವಹಾರ ನಡೆದಿದೆ ಎಂದು ಬ್ಯಾಂಕ್ ನ ಸದಸ್ಯ ಮತ್ತು ಆರ್.ಟಿ.ಐ ಕಾರ್ಯಕರ್ತ ಸುದರ್ಶನ್ ಪುತ್ತೂರು ಆರೋಪಿಸಿದ್ದಾರೆ. ಪುತ್ತೂರು ಪ್ರೆಸ್ ಕ್ಲಬ್ ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು 100 ವರ್ಷಕ್ಕೂ ಹಳೆಯದಾದ ಈ ಟೌನ್ ಬ್ಯಾಂಕ್ ಕೋಟಿಗೂ ಮಿಕ್ಕಿದ ವ್ಯವಹಾರವನ್ನು ಮಾಡುತ್ತಿದೆ. ಆದರೆ ಈವರೆಗೆ ಈ ಬ್ಯಾಂಕ್ ತನ್ನ ಶಾಖೆಯನ್ನು ವಿಸ್ತರಿಸಿಕೊಂಡಿಲ್ಲ. ಬ್ಯಾಂಕ್ ನ ಸಿಬ್ಬಂದಿಗಳ ಆಯ್ಕೆ ಮತ್ತು ಇತರ ಆಯ್ಕೆಗಳಿಗೆ









