ಕರಾವಳಿ

ಸುಳ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ| ಬೆಳ್ಳಾರೆಯ ಮುಸ್ಲಿಂ ‌ಮುಖಂಡ ವಿರುದ್ಧ ಫೋಕ್ಸೊ ಪ್ರಕರಣ ದಾಖಲು

ಸಮಗ್ರ ನ್ಯೂಸ್: ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿದ್ದಾಗ ವ್ಯಕ್ತಿಯೊಬ್ಬ ವಿದ್ಯಾರ್ಥಿನಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಲ್ಲಿ ಬೆಳ್ಳಾರೆಯ ಮುಸ್ಲಿಂ ಮುಖಂಡನೋರ್ವನ ವಿರುದ್ಧ ಫೋಕ್ಸೋ ಪ್ರಕರಣ ದಾಖಲಾಗಿದೆ. ಆರೋಪಿಯು ರಾತ್ರಿ ಸಮಯ ತಾಯಿ ಮೊಬೈಲಿನಿಂದ ಕರೆ ಮಾಡಿ ಮಾತನಾಡುವಂತೆ ಒತ್ತಾಯ ಮಾಡಿದ್ದು, ಇದರಿಂದ ಭಯಗೊಂಡ ಬಾಲಕಿ ಶಾಲೆಗೆ ಹೋಗುವುದಿಲ್ಲ ಎಂದು ಹೇಳುತ್ತಿರುದಾಗಿ ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿಯನ್ನು ಅಶ್ರಫ್ ಯಾನೆ ಅಚ್ಚಚ್ಚಪ್ಪನು ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಯು ಶಾಲೆ ಬಿಟ್ಟು ಮನೆಗೆ ನಡೆದುಕೊಂಡು ಬರುತ್ತಿರುವ ಸಮಯ ಆರೋಪಿಯು

ಸುಳ್ಯ: ಅಪ್ರಾಪ್ತ ವಿದ್ಯಾರ್ಥಿನಿಯೊಂದಿಗೆ ಅನುಚಿತ ವರ್ತನೆ| ಬೆಳ್ಳಾರೆಯ ಮುಸ್ಲಿಂ ‌ಮುಖಂಡ ವಿರುದ್ಧ ಫೋಕ್ಸೊ ಪ್ರಕರಣ ದಾಖಲು Read More »

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅಭಿಮಾನಿಗಳು ಆಯೋಜಿಸಿದ್ದ ಕಬಡ್ಡಿ ಕೂಟದಲ್ಲಿ ಭರ್ಜರಿ ಹೊಡೆದಾಟ

ಸಮಗ್ರ‌ ನ್ಯೂಸ್: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅಭಿಮಾನಿಗಳು ಅಯೋಜಿಸಿದ್ದ ಕಬಡ್ಡಿ ಪಂದ್ಯಾವಳಿಯಲ್ಲಿ ಹೊಡೆದಾಟ ಸಂಭವಿಸಿದ್ದು, ಅದರ ವಿಡಿಯೊಗಳು ವೈರಲ್‌ ಆಗಿವೆ. ಅಂಪೈರ್ ತೀರ್ಪಿನ ವಿರುದ್ಧ ರೊಚ್ಚಿಗೆದ್ದ ಆಟಗಾರರು ಮೈದಾನದಲ್ಲಿ ಹೊಡೆದಾಡಿಕೊಂಡಿದ್ದಾರೆ. ಹರೀಶ್ ಪೂಂಜ ಅಭಿಮಾನಿ ಬಳಗ ಮುಂಡಾಜೆ ಇದರ ವತಿಯಿಂದ ಕಬಡ್ಡಿ ಪಂದ್ಯಾಟ ನಡೆದಿತ್ತು. ಇದರಲ್ಲಿ ಅಂಪೈರ್‌ ಕೊಟ್ಟ ತೀರ್ಪಿನ ವಿರುದ್ಧ ಆಟಗಾರರು ಸಿಟ್ಟುಗೊಂಡು ಹೊಡೆದಾಟ ನಡೆಸಲಾಗಿದೆ. ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಸೋಮಂತಡ್ಕದ ಆಡೂರು ಮೈದಾನದಲ್ಲಿ ಫೆ. 19ರಂದು ನಡೆದ ಘಟನೆ ನಡೆದಿದೆ ಎನ್ನಲಾಗಿದೆ.

ಬೆಳ್ತಂಗಡಿ: ಶಾಸಕ ಹರೀಶ್ ಪೂಂಜಾ ಅಭಿಮಾನಿಗಳು ಆಯೋಜಿಸಿದ್ದ ಕಬಡ್ಡಿ ಕೂಟದಲ್ಲಿ ಭರ್ಜರಿ ಹೊಡೆದಾಟ Read More »

ಬೆಳ್ತಂಗಡಿ: ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ

ಸಮಗ್ರ ನ್ಯೂಸ್: ಬೈಕ್ ಮತ್ತು ಪಿಕಪ್ ವಾಹನದ ಮಧ್ಯೆ ನಡೆದ ಅಪಘಾತದಲ್ಲಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲ್ಲೂಕಿನ ಕೊಕ್ರಾಡಿಯಲ್ಲಿ ನಡೆದಿದೆ. ಕೊಕ್ರಾಡಿಯ ನಿವಾಸಿ ಉಜ್ವಲ್ ಹೆಗ್ಡೆ (18) ಮೃತ ವಿದ್ಯಾರ್ಥಿ. ಫೆ.21ರ ಬೆಳಿಗ್ಗೆ ಉಜ್ವಲ್ ಬೈಕ್ ನಲ್ಲಿ ಮೂಡಬಿದ್ರೆಯ ಕಾಲೇಜಿಗೆ ಹೋಗುತ್ತಿದ್ದಾಗ ಪಿಕಪ್ ವಾಹನ ಡಿಕ್ಕಿ ಹೊಡೆದಿದೆ. ವಾಹನ ಡಿಕ್ಕಿ ಹೊಡೆದ ರಭಸಕ್ಕೆ ಉಜ್ವಲ್ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ.

ಬೆಳ್ತಂಗಡಿ: ಅಪಘಾತಕ್ಕೆ ಕಾಲೇಜು ವಿದ್ಯಾರ್ಥಿ ಬಲಿ Read More »

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ|ಬೈಕ್ ಸವಾರ ಮೃತ್ಯು

ಸಮಗ್ರ ನ್ಯೂಸ್: ಬೈಕ್ ಮೇಲೆ ಬೊಲೆರೋ ಪಲ್ಟಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆ ಬಜತ್ತೂರು ಗ್ರಾಮದ ಕೆಮ್ಮಾರದ ಓಡ್ಲ ಬಳಿ ಸೋಮವಾರ ಸಂಭವಿಸಿದೆ. ಕೊಯಿಲ ಗ್ರಾಮದ ಕಡೆಂಬ್ಯಾಲು ನಿವಾಸಿ, ಎಲೆಕ್ಟ್ರಿಷಿಯನ್ ಆಗಿ ವೃತ್ತಿ ನಿರ್ವಹಿಸುತ್ತಿದ್ದ ಕೊರಗಪ್ಪ ಗೌಡ (58) ಮೃತಪಟ್ಟವರು. ಬೆಳಗ್ಗೆ 11:30ರ ಸುಮಾರಿಗೆ ಹಳೆಗೇಟು- ಮರ್ದಾಳ ರಾಜ್ಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಕಡಬ ಕಡೆಯಿಂದ ಕೃಷ್ಣಪ್ಪ ನಾಯ್ಕ ಎಂಬವರು ಚಲಾಯಿಸಿಕೊಂಡು ಬರುತ್ತಿದ್ದ ಬೊಲೆರೋ ಓಡ್ಲ ಎಂಬಲ್ಲಿ ಸ್ಕಿಡ್ ಆಗಿ ಪಲ್ಟಿ ಹೊಡೆದಿದೆ. ಈ ಸಂದರ್ಭ

ಉಪ್ಪಿನಂಗಡಿ: ಬೈಕ್ ಮೇಲೆ ಬೊಲೆರೋ ಪಲ್ಟಿ|ಬೈಕ್ ಸವಾರ ಮೃತ್ಯು Read More »

ಕಡಬ: ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ| ಇಂದಿನಿಂದ ಕಾಡಾನೆಗಳ ಸೆರೆಗೆ ಸಾಕಾನೆಗಳಿಂದ ಕಾರ್ಯಾಚರಣೆ

ಸಮಗ್ರ ನ್ಯೂಸ್: ಕಾಡಾನೆ ದಾಳಿಯಿಂದ ಕಡಬ ತಾಲೂಕಿನ ‌ಕುಟ್ರುಪ್ಪಾಡಿ ಗ್ರಾಮದ ರೆಂಜಿಲಾಡಿಯ ನೈಲ ಎಂಬಲ್ಲಿ ಇಬ್ಬರು ಬಲಿಯಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಅರಣ್ಯ ಇಲಾಖೆಯು ಕಾಡಾನೆಯನ್ನು ಸೆರೆಹಿಡಿಯಲು ಮುಂದಾಗಿದೆ. ಸೋಮವಾರ(ಫೆ.20) ಮುಂಜಾನೆ ದುರ್ಘಟನೆ ಸಂಭವಿಸಿದ್ದು, ಅಂದು ರಾತ್ರಿಯೇ ಬೃಹತ್ ಲಾರಿಗಳ ಮೂಲಕ ಮೈಸೂರು ಹಾಗೂ ದುಬಾರೆಯಿಂದ ಐದು ಆನೆಗಳು ಆಗಮಿಸಿದ್ದು, ಇಂದು(ಫೆ.21) ಬೆಳಗ್ಗಿನಿಂದ ಕಾಡಾನೆಗಳನ್ನು ಸೆರೆ ಹಿಡಿಯುವ ಕಾರ್ಯಾಚರಣೆ ನಡೆಯಲಿದೆ. ಅರಣ್ಯ ಇಲಾಖೆಯು ಕಾಡಾನೆಯ ಚಲನವಲನ ಪತ್ತೆ ಹಚ್ಚಲು ಡ್ರೋನ್ ಬಳಸಿ ಮಾಹಿತಿ ಕಲೆ ಹಾಕಿತ್ತು. ಪೂರ್ವ ಸಿದ್ದತೆಯೊಂದಿಗೆ

ಕಡಬ: ಕೊನೆಗೂ ಎಚ್ಚೆತ್ತ ಅರಣ್ಯ ಇಲಾಖೆ| ಇಂದಿನಿಂದ ಕಾಡಾನೆಗಳ ಸೆರೆಗೆ ಸಾಕಾನೆಗಳಿಂದ ಕಾರ್ಯಾಚರಣೆ Read More »

ದ.ಕ: ಮುಸ್ಲಿಂ ಮುಖಂಡರಿಂದ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಸಭೆ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಂ ಮುಖಂಡರಿಂದ ಮಂಗಳೂರು ಉತ್ತರ ವಿಧಾನ ಕ್ಷೇತ್ರದ ಅಭ್ಯರ್ಥಿಗಳ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಸೇರಿದ್ದ ಬಹಳಷ್ಟು ಮುಸ್ಲಿಂ ಮುಖಂಡರು ಹಾಗೂ ನಾಯಕರು ಮಾಜಿ ಶಾಸಕ ಮೊಹಿಯುದ್ದೀನ್ ಬಾವ ಪರ ಒಲವು ವ್ಯಕ್ತಪಡಿಸಿದ್ದು ಇನಾಯತ್ ಅಲಿಯವರನ್ನು ಮನವೊಲಿಸುವ ಪ್ರಯತ್ನ ಮಾಡಿದ್ದರು. ಸಭೆಯಲ್ಲಿ ಮೊಹಿಯುದ್ದೀನ್ ಬಾವ ಸೇರಿದ್ದ ಮುಖಂಡರಲ್ಲಿ ಕ್ಷೇತ್ರದಲ್ಲಿ ಆಂತರಿಕ ಸಮೀಕ್ಷೆ ನಡೆಸುವಂತೆ ಮನವಿ ಮಾಡಿದ್ದು ಸಮೀಕ್ಷೆಯಲ್ಲಿ ಮತದಾರರು ಯಾರ ಪರ ಒಲವು ವ್ಯಕ್ತ

ದ.ಕ: ಮುಸ್ಲಿಂ ಮುಖಂಡರಿಂದ ಖಾಸಗಿ ಹೋಟೆಲ್ ನಲ್ಲಿ ಮಹತ್ವದ ಸಭೆ Read More »

ಕಾರ್ಕಳ: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರ| ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಫೆ.18ರಂದು ನಡೆದಿದೆ. ಮುಂಡ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಸಂದರ್ಭ ರಾತ್ರಿ ನಡೆದ ಬ್ರಹ್ಮರಥೋತ್ಸವದ ಸಂದರ್ಭ ಸಿಡಿಮದ್ದು ಪ್ರದರ್ಶನ ನಡೆದಿದ್ದು, ಈ ವೇಳೆ ದಾಸ್ತಾನು ಇರಿಸಿದ್ದ ಪಟಾಕಿ ರಾಶಿಗೆ ಏಕಾಏಕಿ ಬೆಂಕಿ ಬಿದ್ದ ಪರಿಣಾಮ ಓರ್ವ ವೃದ್ಧ ಸಹಿತ ಮೂವರು ಬಾಲಕರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ವೇಳೆ ಗಾಯಗೊಂಡ ಬಾಲಕರು ಸುಮಾರು ಅರ್ಧ ತಾಸಿಗಿಂತಲೂ

ಕಾರ್ಕಳ: ಜಾತ್ರೆಯಲ್ಲಿ ಪಟಾಕಿ ಸಿಡಿದು ಹಲವರು ಗಂಭೀರ| ಆಡಳಿತ ಮಂಡಳಿಯ ವಿರುದ್ಧ ಆಕ್ರೋಶ Read More »

ಕಡಬ: ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ: ಡಿ.ಸಿ

ಸಮಗ್ರ ನ್ಯೂಸ್: ಕಡಬದ ರೆಂಜಿಲಾಡಿ ಗ್ರಾಮದ ಮೀನಾಡಿಯ ನೈಲ ಎಂಬಲ್ಲಿ ಕಾಡಾನೆ ದಾಳಿಗೊಳಗಾಗಿ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಕಾಡಾನೆ ದಾಳಿಯಿಂದ ಮೃತಪಟ್ಟ ಇಬ್ಬರ ಮೃತದೇಹವನ್ನು ಡಿಸಿ ಹಾಗೂ ಡಿಎಫ್ಒ ಬರದೆ ತೆಗೆಯಲು ಬಿಡುವುದಿಲ್ಲ ಎಂದು ಸ್ಥಳೀಯರು ಪಟ್ಟು ಹಿಡಿದಿದ್ದರು. ಈ ಹಿನ್ನಲೆ ಘಟನಾ ಸ್ಥಳಕ್ಕೆ ಡಿಎಫ್ಒ ಡಾ‌.ವೈ.ಕೆ.ದಿನೇಶ್, ಡಿಸಿ ರವಿಕುಮಾರ್ ಭೇಟಿನೀಡಿ ಘಟನೆಯ ಬಗ್ಗೆ ಮಾಹಿತಿ ಪಡೆದರು. ಆ ಬಳಿಕ ಮೃತ ಯುವತಿಯ ಮನೆಗೆ

ಕಡಬ: ಕಾಡಾನೆ ದಾಳಿಯಿಂದ ಮೃತಪಟ್ಟ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ: ಡಿ.ಸಿ Read More »

ಸುಳ್ಯ: ಸಾಲದ‌ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಹಚ್ಚಿ ಆತ್ಮಹತ್ಯೆಗೆ ಯತ್ನ| ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಸಮಗ್ರ ನ್ಯೂಸ್: ಸಾಲದ ಕಂತು ಕಟ್ಟಲಾಗದೆ ಸಹಕಾರ‌ ಸಂಘದ ಕಚೇರಿಯೊಳಗೆ ನುಗ್ಗಿದ ಗ್ರಾಹಕರೋರ್ವರು ಪೆಟ್ರೊಲ್ ಚೆಲ್ಲಿ ಬ್ಯಾಂಕ್ ಗೆ ಬೆಂಕಿಹಚ್ಚಲು ಯತ್ನಿಸಿದಲ್ಲದೆ ತಾನೂ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ಸುಳ್ಯದಿಂದ ವರದಿಯಾಗಿದೆ. ಸುಳ್ಯದ ರಥಬೀದಿಯಲ್ಲಿರುವ ಸರಸ್ವತಿ ಸೌಹಾರ್ದ ಸಂಘದ ಶಾಖೆಗೆ ನುಗ್ಗಿದ ಶಿವಣ್ಣಗೌಡ ಎಂಬವರು ಈ ರೀತಿ ಮಾಡಲು ಯತ್ನಿಸಿರುವ ವ್ಯಕ್ತಿ. ಅವರು ಫೆ.20 ರಂದು ರಥಭೀದಿಯ ಸರಸ್ವತಿ ಸೌಹಾರ್ದ ಸಂಘದ ಶಾಖೆಗೆ 10 ಗಂಟೆ ಸುಮಾರಿಗೆ ನುಗ್ಗಿದ್ದು ತಾನು ಪಡೆದಿರುವ ಸಾಲದ ಕಂತಿನ ವಿವರದಲ್ಲಿ ಮಾತುಕಥೆ

ಸುಳ್ಯ: ಸಾಲದ‌ ಕಂತು ಕಟ್ಟಲಾಗದೆ ಬ್ಯಾಂಕ್ ಗೆ ಬೆಂಕಿಹಚ್ಚಿ ಆತ್ಮಹತ್ಯೆಗೆ ಯತ್ನ| ಸಿಬ್ಬಂದಿ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ Read More »

ಕಡಬ: ಬೆಳ್ಳಂಬೆಳಗ್ಗೆ ಆನೆದಾಳಿಗೆ ಯುವತಿ ಸೇರಿ ಇಬ್ಬರು ಬಲಿ

ಸಮಗ್ರ ನ್ಯೂಸ್: ಬೆಳ್ಳಂಬೆಳಗ್ಗೆ ಆನೆ ದಾಳಿ ನಡೆಸಿದ್ದು, ಯುವತಿ ಸಹಿತ ಇಬ್ಬರು ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರುಪಾಡಿ ಗ್ರಾಮದ ಮೀನಾಡಿ ಸಮೀಪ ನಡೆದಿದೆ. ಮೃತರನ್ನು ರಮೇಶ್ ರೈ (50) ಮತ್ತು ರಂಜಿತಾ (23) ಎಂದು ಗುರುತಿಸಲಾಗಿದೆ. ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾಗಿರುವ ರಂಜಿತಾ ಎಂಬವರು ಮನೆಯಿಂದ ಸೊಸೈಟಿಗೆ ತೆರಳುತ್ತಿದ್ದ ವೇಳೆ ಆನೆ ದಾಳಿ ನಡೆಸಿದೆ. ಇದೇ ವೇಳೆ ಸ್ಥಳದಲ್ಲಿದ್ದ ಸ್ಥಳೀಯ ನಿವಾಸಿ ರಮೇಶ್ ರೈ ಎಂಬವರ ಮೇಲೂ ಆನೆ ದಾಳಿ ನಡೆಸಿದ್ದು, ಆನೆಯ ಅಟ್ಟಹಾಸಕ್ಕೆ ರಮೇಶ್

ಕಡಬ: ಬೆಳ್ಳಂಬೆಳಗ್ಗೆ ಆನೆದಾಳಿಗೆ ಯುವತಿ ಸೇರಿ ಇಬ್ಬರು ಬಲಿ Read More »